ದಿನಬಳಕೆಗೆ ಉತ್ತಮ ಕಾರುಗಳಿವು.. ರೂ.6.16 ಲಕ್ಷ ಆರಂಭಿಕ ಬೆಲೆ, ವಿಶೇಷತೆಗಳೇನು?
ಫ್ರೆಂಚ್ ಮೂಲದ ಸಿಟ್ರನ್ (Citroen) ಜನಪ್ರಿಯ ಕಾರು ತಯಾರಕ ಸಂಸ್ಥೆಯಾಗಿ ಗುರುತಿಸಿಕೊಂಡಿದೆ. ದೇಶೀಯ ಮಾರುಕಟ್ಟೆಯಲ್ಲಿ ನವೀನ ವಿನ್ಯಾಸ ಹಾಗೂ ಆಕರ್ಷಕ ವೈಶಿಷ್ಟ್ಯವನ್ನು ಹೊಂದಿರುವ ಹಲವು ಕಾರುಗಳನ್ನು ಮಾರಾಟ ಮಾಡುತ್ತಿದೆ. ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿಸುತ್ತಿದ್ದಾರೆ. ಸದ್ಯ ಇಂಧನ ಚಾಲಿತ ಸಿಟ್ರನ್ ಸಿ3 (Citroen C3) ಮತ್ತು ಸಿಟ್ರನ್ ಇಸಿ3 (Citroen eC3) ಎಲೆಕ್ಟ್ರಿಕ್ ಕಾರುಗಳಿಗೆ ಉತ್ತಮ ಬೇಡಿಕೆಯಿದೆ. ನೀವು ದಿನಬಳಕೆಗೆ ಹೊಸ ಕಾರನ್ನು ಹುಡುಕುತ್ತಿದ್ದರೆ, ಇವು ಉತ್ತಮ ಆಯ್ಕೆಯಾಗಲಿವೆ. ಇಲ್ಲಿ ನೂತನ ಹ್ಯಾಚ್‌ಬ್ಯಾಕ್‌ಗಳ ಬೆಲೆ ಹಾಗೂ ವಿಶೇಷತೆಗಳ ಬಗ್ಗೆ ಸಂಪೂರ್ಣವಾಗಿ ವಿವರಿಸಿದ್ದೇವೆ.
ಮೊದಲಿಗೆ ಇಂಧನ ಚಾಲಿತ ಸಿಟ್ರನ್ ಸಿ3 ಕಾರಿಗೆ ಬಗ್ಗೆ ಮಾತನಾಡೋಣ. ಈ ಹ್ಯಾಚ್‌ಬ್ಯಾಕ್ ರೂ.6.16 ಲಕ್ಷದಿಂದ ರೂ.9 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಸಿಗುತ್ತದೆ. ನೋಡುಗರ ಕಣ್ಣು ಕುಕ್ಕುವಂತಹ ಅತ್ಯಾಧುನಿಕ ವಿನ್ಯಾಸವನ್ನು ಪಡೆದಿದೆ. ಸ್ಟೀಲ್ ಗ್ರೇ, ಝೆಸ್ಟಿ ಆರೆಂಜ್, ಪ್ಲಾಟಿನಂ ಗ್ರೇ, ಪೋಲಾರ್ ವೈಟ್ ಸೇರಿದಂತೆ ಹಲವು ಬಣ್ಣಗಳ ಆಯ್ಕೆಯನ್ನು ಪಡೆದಿದೆ. ಇದರಲ್ಲಿ 5 ಜನರು ಓಡಾಟವನ್ನು ನಡೆಸಬಹುದು.

ಈ ಕಾರು 1.2-ಲೀಟರ್ ನ್ಯಾಚುರಲ್ ಆಸ್ಪಿರೇಟೆಡ್ ಪೆಟ್ರೋಲ್ ಮತ್ತು 1.2-ಲೀಟರ್ ಟರ್ಬೋ ಚಾರ್ಜ್ಡ್ ಪೆಟ್ರೋಲ್ ಎಂಜಿನ್‌ನ್ನು ಒಳಗೊಂಡಿದೆ. 5-ಸ್ಪೀಡ್ ಮ್ಯಾನುವಲ್ ಅಥವಾ 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನ್ನು ಪಡೆದಿದೆ. ಜೊತೆಗೆ 19.3 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಪ್ರವಾಸದ ವೇಳೆಯಲ್ಲಿ ಹೆಚ್ಚಿನ ಲಗೇಜ್ ಸಾಗಿಸಲು 315 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಹೊಂದಿದೆ.
ನೂತನ ಸಿಟ್ರನ್ ಸಿ3 ಹ್ಯಾಚ್‌ಬ್ಯಾಕ್ 10.2-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ, ಸೆಮಿ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಯ ದೃಷ್ಟಿಯಿಂದ ಡುಯಲ್ ಫ್ರಂಟ್ ಏರ್‌ಬ್ಯಾಗ್, ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ESP (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ) ಅನ್ನು ಒಳಗೊಂಡಿದೆ.

ಸಿಟ್ರನ್ ಇಸಿ3 ಎಲೆಕ್ಟ್ರಿಕ್ ಕಾರಿನ ಕುರಿತಂತೆ ಹೇಳುವುದಾದರೆ, ಇದು ರೂ.11.61 ಲಕ್ಷದಿಂದ ರೂ.13.41 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿಗೆ ದೊರೆಯುತ್ತದೆ. ಫೀಲ್ ಹಾಗೂ ಶೈನ್ ಎಂಬ ರೂಪಾಂತರ (ವೇರಿಯೆಂಟ್)ಗಳನ್ನು ಹೊಂದಿದೆ. ಕಾಸ್ಮೋ ಬ್ಲೂ, ಪ್ಲಾಟಿನಂ ಗ್ರೇ, ಪೋಲಾರ್ ವೈಟ್, ಕಾಸ್ಮೋ ಬ್ಲೂ ಒಳಗೊಂಡಂತೆ ಹಲವು ಬಣ್ಣಗಳೊಂದಿಗೂ ಸಿಗುತ್ತದೆ.
ಈ ಎಲೆಕ್ಟ್ರಿಕ್ ಹ್ಯಾಚ್‌ಬ್ಯಾಕ್‌ನಲ್ಲಿ 29.2 ಕೆಡಬ್ಲ್ಯೂಹೆಚ್ ಬ್ಯಾಟರಿಯನ್ನು ಉಪಯೋಗ ಮಾಡಲಾಗಿದೆ. ಇದರಲ್ಲಿರುವ ಎಲೆಕ್ಟ್ರಿಕ್ ಮೋಟಾರ್ 57 ಪಿಎಸ್ ಗರಿಷ್ಠ ಶಕ್ತಿ (ಪವರ್) ಮತ್ತು 143 ಎನ್ಎಂ ಪೀಕ್ ಟಾರ್ಕ್ ಹೊರಹಾಕುತ್ತದೆ. ಸಂಪೂರ್ಣ ಚಾರ್ಜ್‌ನಲ್ಲಿ 320 ಕಿ.ಮೀ ಓಡುತ್ತದೆ. ಜೊತೆಗೆ ಈ ಕಾರಿನಲ್ಲಿ 5 ಮಂದಿ ಆರಾಮದಾಯಕವಾಗಿ ಪ್ರಯಾಣಿಸಬಹುದು.
ಸಿಟ್ರನ್ ಇಸಿ3 ಬ್ಯಾಟರಿ ಪ್ಯಾಕ್ 10-80% ಚಾರ್ಜ್ ಆಗಲು 57 ನಿಮಿಷ ತೆಗೆದುಕೊಳ್ಳುತ್ತದೆ. 10.2-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ, ಸೆಮಿ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಮ್ಯಾನುವಲ್ ಎಸಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಪ್ರಯಾಣಿಕರಿಗೆ ರಕ್ಷಣೆ ಒದಗಿಸಲು ಡುಯಲ್ ಫ್ರಂಟ್ ಏರ್‌ಬ್ಯಾಗ್, ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್) ಅನ್ನು ಪಡೆದಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








