ದಿನಬಳಕೆಗೆ ಈ ಕಾರುಗಳು ಉತ್ತಮ ಆಯ್ಕೆಯಾಗಬಲ್ಲವು.. ಕೈಗೆಟುಕುವ ಬೆಲೆ, ಸಖತ್ ಮೈಲೇಜ್!
ಬೃಹತ್ ಮಹಾನಗರಗಳಲ್ಲಿ ಕಚೇರಿ ಕೆಲಸಕ್ಕೆ ತೆರಳಲು ಕಾರುಗಳು ಉತ್ತಮ ಆಯ್ಕೆಯಾಗಿವೆ. ದ್ವಿಚಕ್ರ ವಾಹನಗಳಿಗೆ ಹೋಲಿಸಿದರೆ ಬೇಸಿಗೆಕಾಲ, ಮಳೆಗಾಲ ಹಾಗೂ ಚಳಿಗಾಲದಲ್ಲಿ ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆಯನ್ನು ಒದಗಿಸಬಲ್ಲವು. ಇಲ್ಲಿ ಕೈಗೆಟುಕುವ ಬೆಲೆಯಲ್ಲಿ ಖರೀದಿಗೆ ದೊರೆಯುವುದರೊಂದಿಗೆ ಉತ್ತಮ ಮೈಲೇಜ್ ನೀಡುವ ಜನಪ್ರಿಯ ಕಂಪನಿಯ ಕಾರುಗಳ ಬಗ್ಗೆ ವಿವರಿಸಿದ್ದೇವೆ.
ಮೊದಲಿಗೆ ಮಾರುತಿ ಸುಜುಕಿ (Maruti Suzuki)ಯ ಪ್ರಮುಖ ಹ್ಯಾಚ್‌ಬ್ಯಾಕ್ ಸೆಲರಿಯೊ (Celerio) ಬಗ್ಗೆ ಮಾತನಾಡೋಣ. ಈ ಕಾರು ರೂ.5.37 ಲಕ್ಷದಿಂದ ರೂ.7.09 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. 1-ಲೀಟರ್ ಪೆಟ್ರೋಲ್ ಹಾಗೂ ಸಿಎನ್‌ಜಿ ಎಂಜಿನ್ ಆಯ್ಕೆಯನ್ನು ಪಡೆದಿದೆ. ಪೆಟ್ರೋಲ್ ರೂಪಾಂತರಗಳು 25.24 ರಿಂದ 26.68 ಕೆಎಂಪಿಎಲ್, ಸಿಎನ್‌ಜಿ ಮಾದರಿ 34.43 ಕೆಎಂ/ಕೆಜಿ ಮೈಲೇಜ್ ನೀಡುತ್ತದೆ.

ಈ ಸೆಲರಿಯೊ ಕಾರಿನಲ್ಲಿ 5 ಮಂದಿ ಆರಾಮದಾಯಕವಾಗಿ ಕುಳಿತುಕೊಂಡು ಪ್ರಯಾಣಿಸಬಹುದು. 7-ಇಂಚಿನ ಟಚ್‌ಸ್ಕ್ರೀನ್, ಪುಶ್ ಬಟನ್ ಸ್ಟಾರ್ಟ್ & ಸ್ಟಾಪ್, ಕೀಲೆಸ್ ಎಂಟ್ರಿ, ಮ್ಯಾನುವಲ್ ಎಸಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಯ ದೃಷ್ಟಿಯಿಂದ ಡುಯಲ್ ಫ್ರಂಟ್ ಏರ್‌ಬ್ಯಾಗ್, ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), EBD (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ರೇರ್ ಪಾರ್ಕಿಂಗ್ ಸೇನಾರ್ಸ್ ಮತ್ತು ಹಿಲ್ ಹೋಲ್ಡ್ ಅಸಿಸ್ಟ್‌ನ್ನು ಹೊಂದಿದೆ.
ಟಾಟಾ ಟಿಯಾಗೊ (Tata Tiago) ಹ್ಯಾಚ್‌ಬ್ಯಾಕ್ ಕುರಿತು ಹೇಳುವುದಾದರೆ, ರೂ.5.65 ಲಕ್ಷದಿಂದ ರೂ.8.90 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಪಡೆದಿದೆ. ಪೆಟ್ರೋಲ್ ಹಾಗೂ ಸಿಎನ್‌ಜಿ ಪವರ್‌ಟ್ರೇನ್‌ನೊಂದಿಗೆ ಲಭ್ಯವಿದ್ದು, ರೂಪಾಂತರಗಳಿಗೆ ಅನುಗುಣವಾಗಿ 5-ಸ್ಪೀಡ್ ಮ್ಯಾನುವಲ್/ ಆಟೋಮೆಟೆಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. ಪೆಟ್ರೋಲ್ ಮಾದರಿಗಳು 19.43 ರಿಂದ 20.01 ಕೆಎಂಪಿಎಲ್, ಸಿಎನ್‌ಜಿ ರೂಪಾಂತರಗಳು 26.49 - 28.06 ಕೆಎಂ/ಕೆಜಿ ಮೈಲೇಜ್ ಕೊಡುತ್ತವೆ.

ಈ ಟಿಯಾಗೊ ಕಾರು 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ, 8-ಸ್ಪೀಕರ್ ಸೌಂಡ್ ಸಿಸ್ಟಮ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್ ಒಳಗೊಂಡಂತೆ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಗಾಗಿ ಡುಯಲ್ ಫ್ರಂಟ್ ಏರ್‌ಬ್ಯಾಗ್, ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), EBD (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್)ಯನ್ನು ಕೂಡ ಪಡೆದಿದೆ.
ರೆನಾಲ್ಟ್ ಕಿಗರ್ (Renault Kiger) ಎಸ್‌ಯುವಿ ಬಗ್ಗೆ ಮಾತನಾಡುವುದಾದರೆ, ಇದು ರೂ.6 ಲಕ್ಷದಿಂದ ರೂ.11.23 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿಗೆ ದೊರೆಯುತ್ತದೆ. 1-ಲೀಟರ್ ನ್ಯಾಚುರಲ್ ಆಸ್ಪಿರೇಟೆಡ್ ಪೆಟ್ರೋಲ್ ಮತ್ತು 1-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್‌ನ್ನು ಒಳಗೊಂಡಿದೆ. ನಾರ್ಮಲ್, ಇಕೋ & ಸ್ಪೋರ್ಟ್ಸ್ ಎಂಬ ಡ್ರೈವಿಂಗ್ ಆಯ್ಕೆಯನ್ನು ಹೊಂದಿದ್ದು, 18.24 - 20.5 ಕೆಎಂಪಿಎಲ್ ಮೈಲೇಜ್ ನೀಡುತ್ತದೆ.

ಈ ಕಿಗರ್ ಕಾರು 8-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 7-ಇಂಚಿನ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಪುಶ್-ಬಟನ್ ಸ್ಟಾರ್ಟ್/ ಸ್ಟಾಪ್, ವೈರ್‌ಲೆಸ್ ಫೋನ್ ಚಾರ್ಜರ್ ಒಳಗೊಂಡಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಯ ದೃಷ್ಟಿಯಿಂದ 4 ಏರ್‌ಬ್ಯಾಗ್, 4 ಏರ್‌ಬ್ಯಾಗ್, ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), EBD (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್) ಅನ್ನು ಒಳಗೊಂಡಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋ ಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








