ಮಧ್ಯಮ ವರ್ಗದವರು ಈ ಜನಪ್ರಿಯ ಕಾರುಗಳನ್ನು ಮನೆಗೆ ತರಬಹುದು.. ರೂ.7 ಲಕ್ಷಕ್ಕೆ ಸಿಗುತ್ತವೆ!
ಮಧ್ಯಮ ವರ್ಗದ ಬಹುತೇಕ ಜನರಿಗೆ ತಮ್ಮ ಕುಟುಂಬದ ಬಳಕೆಗಾಗಿ ಹೊಸ ಕಾರನ್ನು ಖರೀದಿಸಬೇಕೆಂಬ ಆಸೆಯಿರುತ್ತದೆ. ಅದಕ್ಕಾಗಿ ಒಂದಷ್ಟು ಹಣವನ್ನು ಕೂಡಿಟ್ಟಿರುತ್ತಾರೆ. ಇಲ್ಲಿ ರೂ.7 ಲಕ್ಷಕ್ಕಿಂತ ಕಡಿಮೆ ಎಕ್ಸ್ ಶೋರೂಂ ಬೆಲೆಯಲ್ಲಿ ಲಭ್ಯವಿರುವ ಟಾಟಾ, ಮಾರುತಿ ಸುಜುಕಿ ಹಾಗೂ ಹ್ಯುಂಡೈ ಕಂಪನಿಯ ಜನಪ್ರಿಯ ಕಾರುಗಳ ಬಗ್ಗೆ ವಿವರಿಸಿದ್ದೇವೆ.
ಮೊದಲಿಗೆ ಟಾಟಾ ಪಂಚ್ (Tata Punch) ಮೈಕ್ರೋ ಎಸ್‌ಯುವಿ ಬಗ್ಗೆ ಮಾತನಾಡೋಣ. ಈ ಕಾರು ರೂ.6.13 -ಲಕ್ಷದಿಂದ ರೂ.10.20 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ದೊರೆಯುತ್ತದೆ. 1.2-ಲೀಟರ್ ಪೆಟ್ರೋಲ್ ಮತ್ತು ಸಿಎನ್‌ಜಿ ಎಂಜಿನ್ ಆಯ್ಕೆಯಲ್ಲಿ ಹೊಂದಿದ್ದು, ಪೆಟ್ರೋಲ್ ರೂಪಾಂತರ (ವೇರಿಯೆಂಟ್)ಗಳು 18.8 - 20.09 ಕೆಎಂಪಿಎಲ್ ಹಾಗೂ ಸಿಎನ್‌ಜಿ ಮಾದರಿಗಳು 26.99 ಕೆಎಂ/ಕೆಜಿವರೆಗೆ ಮೈಲೇಜ್ ನೀಡುತ್ತವೆ.

ಈ ಟಾಟಾ ಪಂಚ್ ಆಕರ್ಷಕವಾದ ವಿನ್ಯಾಸವನ್ನು ಪಡೆದಿದ್ದು, ಅಟಾಮಿಕ್ ಆರೆಂಜ್, ಟ್ರಾಪಿಕಲ್ ಮಿಸ್ಟ್, ಡೇಟೋನಾ ಗ್ರೇ, ಆರ್ಕಸ್ ವೈಟ್ ಒಳಗೊಂಡಂತೆ ಹಲವು ಆಕರ್ಷಕ ಬಣ್ಣಗಳೊಂದಿಗೂ ಲಭ್ಯವಿದೆ. ಇದರಲ್ಲಿ 5 ಮಂದಿ ಆರಾಮದಾಯಕವಾಗಿ ಪ್ರಯಾಣಿಸಹುದು. 7-ಇಂಚಿನ ಟಚ್‌ಸ್ಕ್ರೀನ್ ಡಿಸ್ಪ್ಲೇ, ಆಟೋಮೆಟಿಕ್ ಎಸಿ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಯ ದೃಷ್ಟಿಯಿಂದ ಡುಯಲ್ ಫ್ರಂಟ್ ಏರ್‌ಬ್ಯಾಗ್‌ನ್ನು ತನ್ನದಾಗಿಸಿಕೊಂಡಿದೆ.
ನೂತನ ನಾಲ್ಕನೇ ತಲೆಮಾರಿನ ಮಾರುತಿ ಸುಜುಕಿ ಸ್ವಿಫ್ಟ್ ((Maruti Suzuki Swift) ಹ್ಯಾಚ್‌ಬ್ಯಾಕ್ ಬಗ್ಗೆ ಹೇಳುವುದಾದರೆ, ಇದು ರೂ.6.49 ಲಕ್ಷದಿಂದ ರೂ.9.65 ಲಕ್ಷ ಎಕ್ಸ್ ಶೋರೂಂ ದರವನ್ನು ಹೊಂದಿದೆ. 1.2-ಲೀಟರ್ 3-ಸಿಲಿಂಡರ್ ಝಡ್ ಸೀರಿಯಸ್ ಪೆಟ್ರೋಲ್ ಎಂಜಿನ್ ಪಡೆದಿದ್ದು, 24.8 - 25.72 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಇದರಲ್ಲಿ 5 ಜನರು ಸುಲಭವಾಗಿ ಓಡಾಡಬಹುದು.

ಈ ಹೊಚ್ಚ ಹೊಸ ಸ್ವಿಫ್ಟ್ ಕಾರು, 9-ಇಂಚಿನ ಇನ್ಫೋಟೈನ್‌ಮೆಂಟ್ ಸ್ಕ್ರೀನ್, ಸೆಮಿ-ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಆಟೋ ಕ್ಲೇಮೇಟ್ ಕಂಟ್ರೋಲ್, ವೈರ್‌ಲೆಸ್ ಚಾರ್ಜರ್ ಒಳಗೊಂಡನಂತೆ ಹತ್ತಾರು ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಗಾಗಿ 6 ಏರ್‌ಬ್ಯಾಗ್, TCS (ಟ್ರಾಕ್ಷನ್ ಕಂಟ್ರೋಲ್ ಸಿಸ್ಟಮ್), ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), EBD (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್) ಮತ್ತು 3-ಪಾಯಿಂಟ್ ಸೀಟ್‌ಬೆಲ್ಟ್‌ಗಳನ್ನು ಹೊಂದಿದೆ.
ಹ್ಯುಂಡೈ ಎಕ್ಸ್‌ಟರ್ (Hyundai Exter) ಕುರಿತು ಮಾತನಾಡುವುದಾದರೆ, ಇದೊಂದು ಮೈಕ್ರೋ ಎಸ್‌ಯುವಿಯಾಗಿದೆ. ರೂ.6.13 ಲಕ್ಷದಿಂದ ರೂ.10.28 ಎಕ್ಸ್ ಶೋರೂಂ ಬೆಲೆಯಲ್ಲಿ ಗ್ರಾಹಕರಿಗೆ ಲಭ್ಯವಿದೆ. 1.2-ಲೀಟರ್ ನ್ಯಾಚುರಲ್ ಆಸ್ಪಿರೇಟೆಡ್ ಪೆಟ್ರೋಲ್ ಹಾಗೂ ಸಿಎನ್‌ಜಿ ಎಂಜಿನ್ ಆಯ್ಕೆಯನ್ನು ಒಳಗೊಂಡಿದೆ. ರೂಪಾಂತರಗಳಿಗೆ ಅನುಗುಣವಾಗಿ 5-ಸ್ಪೀಡ್ ಮ್ಯಾನುವಲ್ ಹಾಗೂ ಆಟೋಮೆಟಿಕ್ ಗೇರ್ ಬಾಕ್ಸ್‌ನ್ನು ಪಡೆದಿದೆ.

ಈ ಎಕ್ಸ್‌ಟರ್ ಪೆಟ್ರೋಲ್ ಮಾದರಿಗಳು 19.4 ರಿಂದ 19.2 ಕೆಎಂಪಿಎಲ್, ಸಿಎನ್‌ಜಿ ಆವೃತ್ತಿಗಳು 27.1 ಕೆಎಂ/ಕೆಜಿ ಮೈಲೇಜ್ ಕೊಡುತ್ತವೆ. 8-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಸೆಮಿ-ಡಿಜಿಟಲ್ ಡ್ರೈವರ್‌ಸ್ ಡಿಸ್ಪ್ಲೇ, ಕ್ರೂಸ್ ಕಂಟ್ರೋಲ್, ವೈರ್‌ಲೆಸ್ ಫೋನ್ ಚಾರ್ಜಿಂಗ್, ಆಟೋ ಎಸಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಯ ದೃಷ್ಟಿಯಿಂದ 6 ಏರ್‌ಬ್ಯಾಗ್‌ನ್ನು ಹೊಂದಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications