ಪ್ರತಿಯೊಬ್ಬರ ನೆಚ್ಚಿನ ಐರಾವತಗಳಿವು..! ಕೈಗೆಟುಕುವ ಬೆಲೆ.. ಸಖತ್ ಮೈಲೇಜ್, 5-ಸೀಟರ್
ವಿಶ್ವದಲ್ಲಿಯೇ ಭಾರತ ಅತಿದೊಡ್ಡ ಕಾರು ಮಾರುಕಟ್ಟೆಯನ್ನು ಹೊಂದಿದೆ. ಕೆಲವೊಂದು ಕಾರುಗಳು (Cars) ಮಾತ್ರ ಹೆಚ್ಚಿನ ಸಂಖ್ಯೆಯಲ್ಲಿ ಮಾರಾಟವಾಗುತ್ತವೆ. ಇವುಗಳನ್ನು ಖರೀದಿಸಲು ಗ್ರಾಹಕರು ಕೂಡ ತುದಿಗಾಲಿನಲ್ಲಿ ನಿಂತಿರುತ್ತಾರೆ. ಹ್ಯುಂಡೈ ಕ್ರೆಟಾ, ಟಾಟಾ ಪಂಚ್, ಮಾರುತಿ ಸುಜುಕಿ ವ್ಯಾಗನ್ ಆರ್, ಮಾರುತಿ ಸುಜುಕಿ ಸ್ವಿಫ್ಟ್ ಹಾಗೂ ಮಾರುತಿ ಸುಜುಕಿ ಎರ್ಟಿಗಾ ಕಾರುಗಳು ಎಲ್ಲ ಕಾಲದಲ್ಲೂ ಉತ್ತಮವಾಗಿ ಮಾರಾಟವಾಗುತ್ತವೆ. ಈ ಕಾರುಗಳು ಆಕರ್ಷಕ ವಿನ್ಯಾಸ ಮತ್ತು ವೈಶಿಷ್ಟ್ಯಗಳ ಆಯ್ಕೆಯಲ್ಲಿಯೂ ಖರೀದಿಗೆ ಲಭ್ಯವಿವೆ. ನಾವಿಲ್ಲಿ ಈ ನೂತನ ಕಾರುಗಳ ಬೆಲೆ ಹಾಗೂ ವಿಶೇಷತೆಗಳ ಕುರಿತಂತೆ ಸಂಕ್ಷಿಪ್ತವಾಗಿ ತಿಳಿಸಿಕೊಟ್ಟಿದ್ದೇವೆ.
ಮೊದಲಿಗೆ ಹ್ಯುಂಡೈ ಕ್ರೆಟಾ (Hyundai Creta) ಬಗ್ಗೆ ಮಾತನಾಡೋಣ. ಇದೊಂದು ಪ್ರಖ್ಯಾತ ಎಸ್‌ಯುವಿಯಾಗಿದೆ. ರೂ.11 ಲಕ್ಷದಿಂದ ರೂ.20.15 ಲಕ್ಷ (ಎಕ್ಸ್ ಶೋರೂಂ) ಬೆಲೆಯನ್ನು ಹೊಂದಿದೆ. 1.5-ಲೀಟರ್ ನ್ಯಾಚುರಲ್ ಆಸ್ಪಿರೇಟೆಡ್ ಪೆಟ್ರೋಲ್, 1.5-ಲೀಟರ್ ಟರ್ಬೊ ಪೆಟ್ರೋಲ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್‌ನ್ನು ಒಳಗೊಂಡಿದೆ. ರೂಪಾಂತರಗಳಿಗೆ (ವೇರಿಯೆಂಟ್) ಅನುಗುಣವಾಗಿ 17.4 ರಿಂದ 21.8 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ.

ಈ ಹ್ಯುಂಡೈ ಕ್ರೆಟಾ ಕಾರಿನಲ್ಲಿ 5 ಮಂದಿ ಸುಲಭವಾಗಿ ಓಡಾಟ ನಡೆಸಬಹುದು. 10.25-ಇಂಚಿನ ಡುಯಲ್ ಡಿಸ್ಪ್ಲೇ 8-ಸ್ಪೀಕರ್ ಬೋಸ್ ಸೌಂಡ್ ಸಿಸ್ಟಮ್, ಸನ್‌ರೂಫ್, ವೈರ್‌ಲೆಸ್ ಫೋನ್ ಚಾರ್ಜಿಂಗ್, ಡುಯಲ್ ಝೋನ್ ಎಸಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆ ಒದಗಿಸಲು 6 ಏರ್‌ಬ್ಯಾಗ್, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್) ಮತ್ತು ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್) ಅನ್ನು ಒಳಗೊಂಡಿದೆ.
ಟಾಟಾ ಪಂಚ್ (Tata Punch) ಕಾರಿನ ಕುರಿತಂತೆ ಹೇಳುವುದಾದರೆ, ಈ ಮೆಕ್ರೋ ಎಸ್‌ಯುವಿ ರೂ.6.13 ಲಕ್ಷದಿಂದ ರೂ.10.20 ಲಕ್ಷ ಎಕ್ಸ್ ಶೋರೂಂ ದರವನ್ನು ಪಡೆದಿದೆ. ಪೆಟ್ರೋಲ್ ಮತ್ತು ಸಿಎನ್‌ಜಿ ಎಂಜಿನ್‌ನ್ನು ಹೊಂದಿದ್ದು, 18.8 ರಿಂದ 26.99 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. 7-ಇಂಚಿನ ಟಚ್‌ಸ್ಕ್ರೀನ್ ಡಿಸ್ಪ್ಲೇನಂತಹ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಇದರಲ್ಲಿಯೂ 5 ಜನರು ಸಂಚರಿಸಬಹುದು.

ಮಾರುತಿ ಸುಜುಕಿ ವ್ಯಾಗನ್ ಆರ್ (Maruti Suzuki Wagon R) ಜನಪ್ರಿಯ ಹ್ಯಾಚ್‌ಬ್ಯಾಕ್ ಆಗಿದ್ದು, ರೂ.5.54 ಲಕ್ಷದಿಂದ ರೂ.7.33 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಪಡೆದಿದೆ. 5 ಮಂದಿ ಓಡಾಡಬಹುದಾದ ಈ ಕಾರು, ಪೆಟ್ರೋಲ್ ಮತ್ತು ಸಿಎನ್‌ಜಿ ಎಂಜಿನ್‌ನ್ನು ಹೊಂದಿದೆ. 24.35 ರಿಂದ 33.47 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. 7-ಇಂಚಿನ ಟಚ್‌ಸ್ಕ್ರೀನ್ ಡಿಸ್ಪ್ಲೇ ಒಳಗೊಂಡಂತೆ ವಿವಿಧ ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ.
ಮಾರುತಿ ಸುಜುಕಿ ಸ್ವಿಫ್ಟ್ (Maruti Suzuki Swift) ಹ್ಯಾಚ್‌ಬ್ಯಾಕ್ ಬಗ್ಗೆ ಹೇಳುವುದಾದರೆ, ಇದು ರೂ.6.49 ಲಕ್ಷದಿಂದ ರೂ.9.60 ಲಕ್ಷ (ಎಕ್ಸ್ ಶೋರೂಂ) ದರವನ್ನು ಪಡೆದಿದೆ. 1.2-ಲೀಟರ್ 3-ಸಿಲಿಂಡರ್ ಝಡ್ ಸೀರಿಯಸ್ ಪೆಟ್ರೋಲ್ ಎಂಜಿನ್‌ನ್ನು ಒಳಗೊಂಡಿದ್ದು, 24.8 ರಿಂದ 25.72 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. 9-ಇಂಚಿನ ಇನ್ಫೋಟೈನ್‌ಮೆಂಟ್ ಸ್ಕ್ರೀನ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಪಡೆದಿದೆ.

ಮಾರುತಿ ಸುಜುಕಿ ಎರ್ಟಿಗಾ (Maruti Suzuki Ertiga) ಪ್ರಮುಖ ಎಂಪಿವಿಯಾಗಿದೆ. ಗ್ರಾಹಕರಿಗೆ ರೂ.8.69 ಲಕ್ಷದಿಂದ ರೂ.13.03 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿಗೆ ದೊರೆಯುತ್ತದೆ. ಪೆಟ್ರೋಲ್ ಹಾಗೂ ಸಿಎನ್‌ಜಿ ಎಂಜಿನ್‌ನ್ನು ಹೊಂದಿದೆ. 20.3 ರಿಂದ 26.11 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಇದರಲ್ಲಿ 7 ಜನರು ಆರಾಮದಾಯಕವಾಗಿ ಪ್ರಯಾಣಿಸಬಹುದು.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications