ಕಡಿಮೆ ಖರ್ಚಿಗೆ ಕುಟುಂಬದ ಜೊತೆ ಅನ್‌ಲಿಮಿಟೆಡ್ ಪಿಕ್‌ನಿಕ್ ಹೋಗಬೇಕೆ?: ಈ ಕಾರುಗಳೇ ಬೆಸ್ಟ್!
ನಮ್ಮಲ್ಲಿ ಹಲವರು ತಮ್ಮ ಕುಟುಂಬದ ಜೊತೆ ಒಂದು ದಿನ ಹೊರಗೆ ಹೋಗಿ ಬರಬೇಕು ಎಂಬ ಆಸೆ ಇರುತ್ತದೆ. ಇಂದಿನ ದಿನಗಳಲ್ಲಿ ಹಲವರು ತಮ್ಮ ಕುಟುಂಬದ ಜೊತೆ ಸಮಯ ಕಳೆಯಲಿಉ ಸಾಧ್ಯವಾಗದೇ ಜಿಗುಪ್ಸೆಯಲ್ಲಿರುವುದು ಸರ್ವೇ ಸಾಮಾನ್ಯವಾಗಿದೆ. ಇದೇ ಕಾರಣಕ್ಕಾಗಿ ಇಂದು ನಾವು ನಿಮ್ಮ ಕುಟುಂಬದ ಜೊತೆ ಪಿಕ್‌ನಿಕ್ ಹೋಗಲು ಸಾಧ್ಯವಾಗುವ, ಕಡಿಮೆ ಖರ್ಚಿನಲ್ಲಿ ಸುತ್ತಾಡಲು ಸಹಾಯ ಮಾಡುವ ಪ್ರಮುಖ ಕಾರುಗಳ ಕುರಿತಾಗಿ ನೋಡಲಿದ್ದು, ಈ ಕುರಿತಾಗಿನ ಸಂಪೂರ್ಣ ಮಾಹಿತಿಗಾಗಿ ನೀವು ಈ ಲೇಖನವನ್ನು ಕೊನೆಯವರೆಗೆ ಓದಿ ಮತ್ತು ಸ್ನೇಹಿತರೊಂದಿಗೆ ಹಂಚಿಕೊಳ್ಳಿ.
ಮಾರುತಿ ಸುಜುಕಿ ಸ್ವಿಫ್ಟ್: ನಿಮ್ಮ ಕುಟುಂಬದೊಂದಿಗೆ ಒಂದು ದಿನ ಹೊರಗೆ ಅಥವಾ ಪಿಕ್‌ನಿಕ್ ಹೋಗಲು ಈ ಕಾರು ಹೇಳಿ ಮಾಡಿಸಿದ್ದಾಗಿದೆ. ಈ ಮಾರುತಿ ಸುಜುಕಿ ಸ್ವಿಫ್ಟ್ 1.2-ಲೀಟರ್ 3-ಸಿಲಿಂಡರ್ ಝಡ್ ಸೀರಿಯಸ್ ಪೆಟ್ರೋಲ್ ಎಂಜಿನ್ ಹೊಂದಿದ್ದು, 80 ಪಿಎಸ್ ಗರಿಷ್ಠ ಪವರ್ (ಶಕ್ತಿ) ಹಾಗೂ 112 ಎನ್ಎಂ ಪೀಕ್ ಟಾರ್ಕ್ ಹೊರಹಾಕುತ್ತದೆ. ಜೊತೆಗೆ 5-ಸ್ಪೀಡ್ ಮ್ಯಾನುವಲ್/ 5-ಸ್ಪೀಡ್ ಆಟೋಮೆಟಿಕ್ ಗೇರ್ ಬಾಕ್ಸ್ ಆಯ್ಕೆಯನ್ನು ಪಡೆದಿದೆ. 24.8 ರಿಂದ 25.72 ಕೆಎಂಪಿಎಲ್ ವರೆಗೆ ಮೈಲೇಜ್ ನೀಡುತ್ತದೆ.

ಈ ಮಾರುತಿ ಸುಜುಕಿ ಸ್ವಿಫ್ಟ್ (Maruti Swift) ಸುರಕ್ಷತೆಗೂ ಹೆಸರುವಾಸಿಯಾಗಿದೆ. ಎಲ್ಲ ಮಾದರಿಗಳು 6 ಏರ್‌ಬ್ಯಾಗ್, ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), EBD (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), TCS (ಟ್ರಾಕ್ಷನ್ ಕಂಟ್ರೋಲ್ ಸಿಸ್ಟಮ್), 3-ಪಾಯಿಂಟ್ ಸೀಟ್‌ಬೆಲ್ಟ್‌ಗಳು, ಸೀಟ್ ಬೆಲ್ಟ್ ರಿಮೈಂಡರ್ ಒಳಗೊಂಡಂತೆ ವಿವಿಧ ರಕ್ಷಣಾತ್ಮಕ ವೈಶಿಷ್ಟ್ಯಗಳನ್ನು ಪಡೆದಿದೆ. ಶೀಘ್ರದಲ್ಲಿಯೇ ಭಾರತ್ ಎನ್‌ಸಿಎಪಿ ಕ್ರ್ಯಾಶ್ ಟೆಸ್ಟ್‌ಗೂ ಒಳಪಡುವ ಸಾಧ್ಯತೆಯಿದೆ.
ಹ್ಯುಂಡೈ ಗ್ರ್ಯಾಂಡ್ ಐ10 ನಿಯೋಸ್: ಈ ಗ್ರ್ಯಾಂಡ್ ಐ10 ನಿಯೋಸ್ 2 ಪವರ್‌ಟ್ರೇನ್ ಆಯ್ಕೆಯಲ್ಲಿ ಲಭ್ಯವಿದೆ. ಇದರ 1.2-ಲೀಟರ್ ಪೆಟ್ರೋಲ್ ಎಂಜಿನ್ 83 ಪಿಎಸ್ ಗರಿಷ್ಠ ಪವರ್ (ಶಕ್ತಿ) ಹಾಗೂ 114 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತದೆ. ಸಿಎನ್‌ಜಿ ಚಾಲಿತ ಕಾರು ಕೂಡ ಇದೇ ಎಂಜಿನ್ ಪಡೆದಿದೆ. ಆದರೆ, 69 ಪಿಎಸ್ ಪವರ್, 95 ಎನ್ಎಂ ಪೀಕ್ ಟಾರ್ಕ್ ಹೊರಹಾಕಲಷ್ಟೇ ಶಕ್ತವಾಗಿದೆ.

ಹ್ಯುಂಡೈ ಗ್ರ್ಯಾಂಡ್ ಐ10 ನಿಯೋಸ್ (Hyundai Grand i10 Nios) ರೂಪಾಂತರಗಳಿಗೆ ಅನುಗುಣವಾಗಿ 5-ಸ್ವೀಡ್ ಮ್ಯಾನುವಲ್/ 5-ಸ್ವೀಡ್ ಆಟೋಮೆಟಿಕ್ ಗೇರ್‌ಬಾಕ್ಸ್ ನೊಂದಿಗೆ ಲಭ್ಯವಿದೆ.16 ರಿಂದ 27 ಕೆಎಂಪಿಎಲ್ ಮೈಲೇಜ್ ನೀಡುತ್ತದೆ. ವಿನ್ಯಾಸದ ದೃಷ್ಟಿಯಿಂದಲೂ ಈ ಕಾರು ಅತ್ಯುತ್ತಮವಾಗಿದ್ದು, 5 ಮಂದಿ ಆರಾಮದಾಯಕವಾಗಿ ಕುಳಿತುಕೊಂಡು ಪ್ರಯಾಣಿಸಬಹುದು.
ವಾಗನಾರ್: ಮಾರುತಿ ವ್ಯಾಗನ್-ಆರ್ ಪ್ರಯಾಣಿಕರ ಅನುಕೂಲಕ್ಕಾಗಿ ಅಗತ್ಯವಿರುವ ಎಲ್ಲಾ ವೈಶಿಷ್ಟ್ಯಗಳನ್ನು ಹೊಂದಿದೆ. 7 ಇಂಚಿನ ಟಚ್ ಸ್ಕ್ರೀನ್ ಡಿಸ್‌ಪ್ಲೇ, 4-ಸ್ಪೀಕರ್ ಮ್ಯೂಸಿಕ್ ಸಿಸ್ಟಮ್, ಸ್ಟೀರಿಂಗ್-ಮೌಂಟೆಡ್ ಆಡಿಯೊ ಕಂಟ್ರೋಲ್‌ಗಳು ಮತ್ತು ಸ್ಮಾರ್ಟ್ ಫೋನ್ ನ್ಯಾವಿಗೇಷನ್ ನಂತಹ ವೈಶಿಷ್ಟ್ಯಗಳನ್ನು ಹೊಂದಿದೆ. ಡ್ಯುಯಲ್ ಫ್ರಂಟ್ ಏರ್ ಬ್ಯಾಗ್‌ಗಳು, ಇಬಿಡಿಯೊಂದಿಗೆ ಎಬಿಎಸ್, ರಿಯರ್ ಪಾರ್ಕಿಂಗ್ ಸೆನ್ಸಾರ್, ಹಿಲ್-ಹೋಲ್ಡ್ ಅಸಿಸ್ಟ್ (ಎಎಂಟಿ ರೂಪಾಂತರ ಮಾತ್ರ) ಇವೆ.
ಬೇಸ್ ಮಾದರಿಯಲ್ಲಿ 1.0 - ಲೀಟರ್ ಕೆ-ಸೀರಿಸ್ ಎಂಜಿನ್ ಅನ್ನು ನೀಡುತ್ತದೆ. ಉನ್ನತ ಮಾದರಿಯನ್ನು 1.2 - ಲೀಟರ್ ಎಂಜಿನ್ ನೊಂದಿಗೆ ನೀಡಲಾಗುತ್ತದೆ. ಈ ಕಾರು 1.0 - ಲೀಟರ್ ಎಂಜಿನ್‌ನಲ್ಲಿ ಸಿಎನ್‌ಜಿ ಆಯ್ಕೆಯೊಂದಿಗೆ ಲಭ್ಯವಿದೆ. 1.2 ಲೀಟರಿನ ಪೆಟ್ರೋಲ್ ಎಂಜಿನ್ 88.5 ಬಿಹೆಚ್‌ಪಿ ಪವರ್ ಹಾಗೂ 113 ಎನ್‌ಎಂ ಟಾರ್ಕ್ ಉತ್ಪಾದಿಸುತ್ತದೆ. ಪೆಟ್ರೋಲ್‌ನಲ್ಲಿ 25 ಕಿ.ಮೀ ಮತ್ತು ಸಿಎನ್‌ಜಿಯಲ್ಲಿ 35 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications