ಪೆಟ್ರೋಲ್‌ಗೆ ಹೇಳಿ ಗುಡ್‌ಬೈ.. ವಿಶ್ವಾಸಾರ್ಹ ಸಿಎನ್‌ಜಿ ಕಾರುಗಳಿವು, ಭಾರೀ ಮೈಲೇಜ್.. ವರ್ಷಗಟ್ಟಲೇ ಬಾಳಿಕೆ!

ದೇಶದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಗಗನಕ್ಕೇರಿದೆ. ಸಿಎನ್‌ಜಿ (CNG) ಚಾಲಿತ ವಾಹನಗಳಿಗೆ ದಿನದಿಂದ ದಿನಕ್ಕೆ ಬೇಡಿಕೆ ಹೆಚ್ಚಾಗುತ್ತಿದ್ದು, ಇವುಗಳನ್ನು ಕೊಂಡುಕೊಳ್ಳಲು ಗ್ರಾಹಕರು ಕೂಡ ಮನಸ್ಸು ಮಾಡುತ್ತಿದ್ದಾರೆ. ಖರೀದಿದಾರರ ಆಶೋತ್ತರಗಳನ್ನು ಪೂರೈಸಲು ಪ್ರಮುಖ ವಾಹನ ತಯಾರಕ ಸಂಸ್ಥೆಗಳು ಸಿಎನ್‌ಜಿ ಕಾರುಗಳ ಉತ್ಪಾದನೆಯಲ್ಲಿ ತೊಡಗಿಕೊಂಡಿವೆ. ಇಲ್ಲಿ ವರ್ಷಗಟ್ಟಲೇ ಬಾಳಿಕೆ ಬರುವ ಹಾಗೂ ಗರಿಷ್ಠ ಮೈಲೇಜ್ ನೀಡಬಲ್ಲ ಜನಪ್ರಿಯ ಮಾರುತಿ ಸುಜುಕಿ (Maruti Suzuki) ಹಾಗೂ ಟಾಟಾ ಮೋಟಾರ್ಸ್ (Tata Motors) ಕಂಪನಿಯ 5 ಕಾರುಗಳ ಬಗ್ಗೆ ತಿಳಿಸಿಕೊಟ್ಟಿದ್ದೇವೆ.

ಮೊದಲಿಗೆ ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ (Maruti Suzuki Grand Vitara) ಎಸ್‌ಯುವಿ ಬಗ್ಗೆ ಮಾತನಾಡೋಣ. ಈ ಕಾರಿನ ಆರಂಭಿಕ ಸಿಎನ್‌ಜಿ ರೂಪಾಂತರ (ವೇರಿಯೆಂಟ್) ರೂ.13.15 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದ್ದು, 26.6 ಕೆಎಂ/ಕೆಜಿ ಮೈಲೇಜ್ ನೀಡುತ್ತದೆ. ಇದರಲ್ಲಿ 5 ಮಂದಿ ಆರಾಮದಾಯಕ ಕುಳಿತುಕೊಂಡು ದೂರದ ಊರುಗಳಿಗೆ ಪ್ರಯಾಣಿಸಬಹುದು.

Best Cng Cars For long term use Grand Vitara Brezza Tiago Altroz Punch

ಈ ಗ್ರ್ಯಾಂಡ್ ವಿಟಾರಾದ ಸಿಎನ್‌ಜಿ ಚಾಲಿತ ಮಾದರಿ (ಮಾಡೆಲ್)ಯು 1.5-ಲೀಟರ್ ಎಂಜಿನ್ ಹೊಂದಿದ್ದು, 88 ಪಿಎಸ್ ಗರಿಷ್ಠ ಶಕ್ತಿ (ಪವರ್) ಹಾಗೂ 122 ಎನ್ಎಂ ಪೀಕ್ ಟಾರ್ಕ್ ಹೊರಹಾಕುವ ಸಾಮರ್ಥ್ಯವನ್ನು ಪಡೆದಿದೆ. 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಆಯ್ಕೆಯಲ್ಲಿಯೂ ಸಿಗುತ್ತದೆ. ಟಚ್‌ಸ್ಕ್ರೀನ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಎಂಜಿನ್ ಸ್ಟಾರ್ಟ್/ ಸ್ಟಾಪ್ ಬಟನ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಟಾಟಾ ಟಿಯಾಗೊ (Tata Tiago) ಕೂಡ ಜನಪ್ರಿಯ ಹ್ಯಾಚ್‌ಬ್ಯಾಕ್ ಆಗಿದೆ. ಇದರ ಸಿಎನ್‌ಜಿ ಚಾಲಿತ ರೂಪಾಂತರದ ಬೆಲೆ ರೂ.6.60 ಲಕ್ಷದಿಂದ (ಎಕ್ಸ್ ಶೋರೂಂ) ಶುರುವಾಗುತ್ತದೆ. 1.2-ಲೀಟರ್ ಎಂಜಿನ್ ಪಡೆದಿದ್ದು, 73.5 ಪಿಎಸ್ ಶಕ್ತಿ ಮತ್ತು 95 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತದೆ. ಜೊತೆಗೆ 5-ಸ್ಪೀಡ್ ಮ್ಯಾನುವಲ್/ ಆಟೋಮೆಟಿಕ್ ಗೇರ್‌ಬಾಕ್ಸ್ ಆಯ್ಕೆಯಲ್ಲಿಯೂ ಲಭ್ಯವಿದೆ. 26.49 ರಿಂದ 28.06 ಕೆಎಂ/ಕೆಜಿ ವರೆಗೆ ಮೈಲೇಜ್ ಕೊಡುತ್ತದೆ.

Best Cng Cars For long term use Grand Vitara Brezza Tiago Altroz Punch

ಟಾಟಾ ಆಲ್ಟ್ರೋಜ್ (Tata Altroz) ಪ್ರೀಮಿಯಂ ಹ್ಯಾಚ್‌ಬ್ಯಾಕ್ ಎಂದೇ ಹೆಸರುವಾಸಿಯಾಗಿದೆ. ಈ ಕಾರಿನ ಆರಂಭಿಕ ಸಿಎನ್‌ಜಿ ರೂಪಾಂತರ ರೂ.7.60 ಲಕ್ಷ ಎಕ್ಸ್ ಶೋರೂಂ ದರವನ್ನು ಪಡೆದಿದೆ. 1.2-ಲೀಟರ್ ನ್ಯಾಚುರಲ್ ಆಸ್ಪಿರೇಟೆಡ್ ಎಂಜಿನ್ ಹೊಂದಿದ್ದು, 73.5 ಪಿಎಸ್ ಗರಿಷ್ಠ ಶಕ್ತಿ (ಪವರ್) ಹಾಗೂ 103 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 5-ಮ್ಯಾನುವಲ್ ಗೇರ್‌ಬಾಕ್ಸ್‌ನ್ನು ಮಾತ್ರ ಒಳಗೊಂಡಿದ್ದು, 26.20 ಕೆಎಂ/ಕೆಜಿ ಮೈಲೇಜ್ ನೀಡುತ್ತದೆ.

ಟಾಟಾ ಪಂಚ್ (Tata Punch) ಪ್ರಖ್ಯಾತ ಮೈಕ್ರೋ ಎಸ್‌ಯುವಿಯಾಗಿದೆ. ಇದರ ಸಿಎನ್‌ಜಿ ರೂಪಾಂತರದ ಬೆಲೆ ರೂ.7.23 ಲಕ್ಷದಿಂದ (ಎಕ್ಸ್ ಶೋರೂಂ) ಪ್ರಾರಂಭವಾಗುತ್ತದೆ. 1.2-ಲೀಟರ್ ಎಂಜಿನ್ ಹೊಂದಿದ್ದು, 73.5 ಪಿಎಸ್ ಶಕ್ತಿ ಮತ್ತು 103 ಎನ್ಎಂ ಪೀಕ್ ಟಾರ್ಕ್ ಹೊರಹಾಕುತ್ತದೆ. 5-ಮ್ಯಾನುವಲ್ ಗೇರ್‌ಬಾಕ್ಸ್‌ ಆಯ್ಕೆಯನ್ನು ಪಡೆದಿದ್ದು, 26.20 ರಿಂದ 26.99 ಕೆಎಂ/ಕೆಜಿ ಮೈಲೇಜ್ ಕೊಡುತ್ತದೆ.

Best Cng Cars For long term use Grand Vitara Brezza Tiago Altroz Punch

ಕಡೆಯದಾಗಿ ಮಾರುತಿ ಸುಜುಕಿ ಬ್ರೆಝಾ (Maruti Suzuki Brezza) ಬಗ್ಗೆ ಹೇಳುವುದಾದರೆ, ಇದು ಅತಿಹೆಚ್ಚಿನ ಸಂಖ್ಯೆಯಲ್ಲಿ ಮಾರಾಟವಾಗುವ ಕಾಂಪ್ಯಾಕ್ಟ್ ಎಸ್‌ಯುವಿಯಾಗಿದೆ. ಈ ಕಾರಿನ ಆರಂಭಿಕ ಸಿಎನ್‌ಜಿ ಮಾದರಿಯು ರೂ.9.29 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. 1.5-ಲೀಟರ್ ಎಂಜಿನ್ ಹಾಗೂ 5-ಮ್ಯಾನುವಲ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 25.51 ಕೆಎಂ/ಕೆಜಿ ಮೈಲೇಜ್ ನೀಡುತ್ತದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Monday, July 8, 2024, 17:31 [IST]
English summary
Best cng cars for long term use grand vitara brezza tiago altroz punch
Read more on auto news india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+