ಬೆಸ್ಟ್ ಕೂಪೆ ಎಸ್‌ಯುವಿಗಳಿವು.. 5-ಸೀಟರ್, 20 Km ಮೈಲೇಜ್.. ಆನ್-ರೋಡ್ ಬೆಲೆ ಎಷ್ಟು, EMI ಏನು?

ಪ್ರಪಂಚದಲ್ಲಿಯೇ ಭಾರತ ಅತಿದೊಡ್ಡ ಕಾರು ಮಾರುಕಟ್ಟೆಯನ್ನು ಹೊಂದಿದೆ. ಪ್ರತಿ ತಿಂಗಳು ಹತ್ತಾರು ಕಾರುಗಳು ಮಾರಾಟಕ್ಕೆ ಬರುತ್ತವೆ. ಅದರಲ್ಲೂ 'ಎಸ್‌ಯುವಿ' ವಿಭಾಗವು ವಿಶಾಲವಾದ ಮಾರುಕಟ್ಟೆಯನ್ನು ಹೊಂದಿದೆ. ಫುಲ್-ಸೈಜ್, ಮಿಡ್-ಸೈಜ್, ಕಾಂಪ್ಯಾಕ್ಟ್, ಕೂಪೆ ಹಾಗೂ ಮೈಕ್ರೋ ಎಸ್‌ಯುವಿಗಳು ಖರೀದಿಗೆ ಲಭ್ಯವಿವೆ. ದುಬಾರಿ ಕಾರುಗಳಿಂದ ಕೂಪೆ ಎಸ್‌ಯುವಿ ವಿಭಾಗ ತುಂಬಿ ತುಳುಕುತ್ತಿತ್ತು. ಇತ್ತೀಚೆಗೆ ಮಧ್ಯಮ ವರ್ಗದ ಜನರಿಗೆ ಹೆಚ್ಚಿನ ಅನುಕೂಲವಾಗಿಸುವ ನಿಟ್ಟಿನಲ್ಲಿ ಸಿಟ್ರನ್ ಬಸಾಲ್ಟ್ (Citroen Basalt) ಹಾಗೂ ಟಾಟಾ ಕರ್ವ್ (Tata Curvv) ಕೂಪೆ ಎಸ್‌ಯುವಿಗಳನ್ನು ಬಿಡುಗಡೆಗೊಳಿಸಲಾಗಿತ್ತು. ಬನ್ನಿ.. ಈ ಕಾರುಗಳ ಆನ್-ರೋಡ್ ಬೆಲೆ, ಇಎಂಐ ಆಯ್ಕೆ ಹಾಗೂ ವಿಶೇಷತೆಗಳ ಬಗ್ಗೆ ಒಂದಷ್ಟು ಮಾಹಿತಿ ತಿಳಿಯೋಣ.

ಮೊದಲಿಗೆ ಸಿಟ್ರನ್ ಬಸಾಲ್ಟ್ ಕೂಪೆ ಎಸ್‌ಯುವಿ ಕುರಿತಂತೆ ಮಾತನಾಡೋಣ. ಬೆಂಗಳೂರಿನಲ್ಲಿ ಈ ಕಾರಿನ ಆರಂಭಿಕ ಶ್ರೇಣಿ ರೂಪಾಂತರ (ಎಂಟ್ರಿ ಲೆವೆಲ್ ವೇರಿಯೆಂಟ್) ರೂ.9.65 ಲಕ್ಷ ಆನ್-ರೋಡ್ ಬೆಲೆಯನ್ನು ಹೊಂದಿದೆ. ನೀವು ರೂ.1 ಲಕ್ಷ ಡೌನ್-ಪೇಮೆಂಟ್ ಪಾವತಿಸಿ, ಈ ಕಾರನ್ನು ಖರೀದಿಸಿದರೆ, ಉಳಿದ ರೂ.8.65 ಲಕ್ಷ ಸಾಲದ ಮೊತ್ತಕ್ಕೆ ಶೇಕಡ 9.8% ಬಡ್ಡಿ ದರದಲ್ಲಿ 5 ವರ್ಷದ ಅವಧಿಗೆ ಮಾಸಿಕ ರೂ.18,301 ಇಎಂಐ ಪಾವತಿಸಬೇಕು.

Best Coupe Suvs Citroen Basalt Tata Curvv On-Road Price Emi And Features Details

ಹೊಸ ಸಿಟ್ರನ್ ಬಸಾಲ್ಟ್ ಕಾರಿನ ಗರಿಷ್ಠ ಶ್ರೇಣಿ ರೂಪಾಂತರ (ಎಂಟ್ರಿ ಲೆವೆಲ್ ವೇರಿಯೆಂಟ್) ರೂ.17.21 ಲಕ್ಷ ಆನ್-ರೋಡ್ ದರವನ್ನು ಪಡೆದಿದೆ. ರೂ.1 ಲಕ್ಷ ಡೌನ್-ಪೇಮೆಂಟ್ ಕಟ್ಟಿ ಈ ಕಾರನ್ನು ತೆಗೆದುಕೊಂಡರೆ, ರೂ.16 ಲಕ್ಷದಷ್ಟು ಸಾಲವಿರುತ್ತದೆ. ಅದಕ್ಕೆ ಶೇಕಡ 9.8% ಬಡ್ಡಿಯನ್ನು ಹಾಕಿ, 5 ವರ್ಷಗಳಿಗೆ ಪ್ರತಿ ತಿಂಗಳು ರೂ.34,292 ಇಎಂಐ ಕಟ್ಟಬೇಕು.

ಈ ಸಿಟ್ರನ್ ಬಸಾಲ್ಟ್ ಕೂಪೆ ಎಸ್‌ಯುವಿ, 1.2-ಲೀಟರ್ ನ್ಯಾಚುರಲ್ ಆಸ್ಪಿರೇಟೆಡ್ ಪೆಟ್ರೋಲ್ ಮತ್ತು 1.2-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್‌ನ್ನು ಒಳಗೊಂಡಿದೆ. 18 ರಿಂದ 19.5 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಇದರಲ್ಲಿ 5-ಮಂದಿ ಆರಾಮದಾಯಕವಾಗಿ ಪ್ರಯಾಣಿಸಬಹುದು. 470 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಹೊಂದಿದೆ.

Best Coupe Suvs Citroen Basalt Tata Curvv On-Road Price Emi And Features Details

ನೂತನ ಸಿಟ್ರನ್ ಬಸಾಲ್ಟ್ ಕಾರು, ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ (10.2- ಇಂಚು), ಡಿಜಿಟಲ್ ಡ್ರೈವರ್ಸ್ ಡಿಸ್‌ಪ್ಲೇ, ವೈರ್‌ಲೆಸ್ ಫೋನ್ ಚಾರ್ಜರ್, ಪುಶ್ ಬಟನ್ ಸ್ಟಾರ್ಟ್ ಮತ್ತು ಸ್ಟೀರಿಂಗ್ ಮೌಂಟೆಡ್ ಆಡಿಯೋ ಕಂಟ್ರೋಲ್ಸ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಗಾಗಿ 6-ಏರ್‌ಬ್ಯಾಗ್‌, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್) ಮತ್ತು ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್) ಅನ್ನು ಪಡೆದಿದೆ.

ಟಾಟಾ ಕರ್ವ್ ಕೂಪೆ ಎಸ್‌ಯುವಿಯ ಆರಂಭಿಕ ಶ್ರೇಣಿ ರೂಪಾಂತರ (ಎಂಟ್ರಿ ಲೆವೆಲ್ ವೇರಿಯೆಂಟ್) ರೂ.11.97 ಲಕ್ಷ ಆನ್-ರೋಡ್ ದರವನ್ನು ಪಡೆದಿದೆ. ರೂ.1 ಲಕ್ಷ ಡೌನ್-ಪೇಮೆಂಟ್ ಪಾವತಿಸಿ ಈ ಕಾರನ್ನು ತೆಗೆದುಕೊಂಡಿದರೆ, ರೂ.10.97 ಲಕ್ಷ ಸಾಲದ ಹಣಕ್ಕೆ ಶೇಕಡ 8% ಬಡ್ಡಿಯನ್ನು ಹಾಕಿ, 5 ವರ್ಷಗಳಿಗೆ ಮಾಸಿಕ ರೂ.22,256 ಇಎಂಎಂ ಕಟ್ಟಬೇಕು.

ಈ ಟಾಟಾ ಕರ್ವ್ ಕಾರಿನ ಗರಿಷ್ಠ ಶ್ರೇಣಿ ರೂಪಾಂತರ (ಎಂಟ್ರಿ ಲೆವೆಲ್ ವೇರಿಯೆಂಟ್) ರೂ.23 ಲಕ್ಷ ಆನ್-ರೋಡ್ ದರವನ್ನು ಒಳಗೊಂಡಿದೆ. ರೂ.1 ಲಕ್ಷ ಡೌನ್-ಪೇಮೆಂಟ್ ಕಟ್ಟಿ ಈ ಕಾರನ್ನು ಮನೆಗೆ ತಂದರೆ, ರೂ.22 ಲಕ್ಷ ಸಾಲವಿರುತ್ತದೆ. ಶೇಕಡ 8% ಬಡ್ಡಿಯನ್ನು ಹಾಕಿ, 5 ವರ್ಷಗಳಿಗೆ ಪ್ರತಿ ತಿಂಗಳು ರೂ.45,358 ಇಎಂಐ ಕಟ್ಟಬೇಕು.

ನೂತನ ಟಾಟಾ ಕರ್ವ್ ಕಾರು, 1.2 ಲೀಟರ್ ಟರ್ಬೊ ಪೆಟ್ರೋಲ್, 1.2 ಲೀಟರ್ ಜಿಡಿಐ ಟರ್ಬೊ ಪೆಟ್ರೋಲ್ ಮತ್ತು 1.5 ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯನ್ನು ಹೊಂದಿದೆ. 12 ರಿಂದ 17 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ ಎಂದು ತಿಳಿದುಬಂದಿದೆ. ಇದರಲ್ಲಿಯೂ 5 ಜನರು ಓಡಾಟವನ್ನು ನಡೆಸಬಹುದು.

ಈ ಟಾಟಾ ಕರ್ವ್ ಕೂಪೆ ಎಸ್‌ಯುವಿ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ (12.3-ಇಂಚು), 4-ಸ್ಪೋಕ್ ಮಲ್ಟಿ ಫಂಕ್ಷನ್ ಸ್ಟೀರಿಂಗ್ ವೀಲ್, ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, 9-ಸ್ಪೀಕರ್ ಜೆಬಿಎಲ್ ಸೌಂಡ್ ಸಿಸ್ಟಮ್ ಮತ್ತು ಪನೊರೊಮಿಕ್ ಸನ್‌ರೂಫ್ ಒಳಗೊಂಡಂತೆ ಹತ್ತಾರು ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಗಾಗಿ 6-ಏರ್‌ಬ್ಯಾಗ್‌ಗಳು ಹಾಗೂ ಲೆವೆಲ್-2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್) ಕೂಡ ಇದೆ.

ನಿಮ್ಮ ಗಮನಕ್ಕೆ.. ಈ ಕಾರುಗಳ ಆನ್-ರೋಡ್ ಬೆಲೆ ಹಾಗೂ ಸಾಲದ ಆಯ್ಕೆಗಳು ರಾಜ್ಯದಿಂದ ರಾಜ್ಯಕ್ಕೆ ರೂಪಾಂತರಗಳನ್ನು (ವೇರಿಯೆಂಟ್) ಅವಲಂಭಿಸಿ ಬೇರೆಯಿರಲಿದೆ. ಹೆಚ್ಚಿನ ಮಾಹಿತಿಗೆ ನಿಮ್ಮ ಹತ್ತಿರದ ಶೋರೂಂಗೆ ಭೇಟಿ ನೀಡಿರಿ.

Article Published On: Sunday, October 6, 2024, 9:00 [IST]
English summary
Best coupe suvs citroen basalt tata curvv on road price emi features details
Read more on auto news india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+