ವರಮಹಾಲಕ್ಷ್ಮಿಗೆ ಹೊಸ ಎಲೆಕ್ಟ್ರಿಕ್ ಕಾರು ಮನೆಗೆ ತರಬೇಕೇ.. ಇವು ಬೆಸ್ಟ್, ರೂ.6.99 ಲಕ್ಷ ಬೆಲೆ.. ಭಾರಿ ರೇಂಜ್!
ಪ್ರತಿವರ್ಷ ಶ್ರಾವಣ ಮಾಸದಲ್ಲಿ ವರಮಹಾಲಕ್ಷ್ಮಿ (Varamahalakshmi) ಹಬ್ಬವನ್ನು ಸಂಭ್ರಮ - ಸಡಗರದಿಂದ ಆಚರಿಸಲಾಗುತ್ತದೆ. ಈ ವರ್ಷ ಆಗಸ್ಟ್ 16 ಶುಕ್ರವಾರದಂದು ಹಬ್ಬ ಬಂದಿದೆ. ಅಂದು ಸಂಪತ್ತನ್ನು ಕರುಣಿಸುವ ಲಕ್ಷ್ಮಿಯನ್ನು ಶ್ರದ್ಧಾ ಭಕ್ತಿಯಿಂದ ಪೂಜಿಸಲಾಗುತ್ತದೆ. ನೀವು ಹಬ್ಬಕ್ಕೆ ಹೊಚ್ಚ ಹೊಸ ಎಲೆಕ್ಟ್ರಿಕ್ ಕಾರನ್ನು ತೆಗೆದುಕೊಳ್ಳಲು ಆಲೋಚಿಸಿದ್ದೀರಾ.. ಹಾಗಾದರೆ, ಸಿಟ್ರನ್ ಇಸಿ3, ಎಂಜಿ ಕಾಮೆಟ್ ಇವಿ ಹಾಗೂ ಟಾಟಾ ಟಿಯಾಗೊ ಇವಿಗಳು ಉತ್ತಮ ಆಯ್ಕೆಯಾಗಲಿವೆ. ಬನ್ನಿ.. ಈ ಕಾರುಗಳ ಬೆಲೆ ಹಾಗೂ ವಿಶೇಷತೆ ಕುರಿತಂತೆ ಸಂಕ್ಷಿಪ್ತವಾಗಿ ತಿಳಿಯೋಣ.
ಮೊದಲಿಗೆ ಸಿಟ್ರನ್ ಇಸಿ3 (Citroen eC3) ಬಗ್ಗೆ ಮಾತನಾಡೋಣ. ಇದೊಂದು ಎಲೆಕ್ಟ್ರಿಕ್ ಹ್ಯಾಚ್‌ಬ್ಯಾಕ್ ಆಗಿದ್ದು, ರೂ.11.61 ಲಕ್ಷದಿಂದ ರೂ.13.41 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿಗೆ ದೊರೆಯುತ್ತದೆ. 29.2 ಕೆಡಬ್ಲ್ಯೂಹೆಚ್ ಸಾಮರ್ಥ್ಯದ ಬ್ಯಾಟರಿ ಪ್ಯಾಕ್ ಹೊಂದಿದ್ದು, ಭರ್ತಿ ಚಾರ್ಜ್‌ನಲ್ಲಿ 320 ಕಿಲೋಮೀಟರ್ ರೇಂಜ್ (ಮೈಲೇಜ್) ಕೊಡುತ್ತದೆ. ಇದರಲ್ಲಿ 5 ಮಂದಿ ಪ್ರಯಾಣಿಸಬಹುದು.

ನೂತನ ಸಿಟ್ರನ್ ಇಸಿ3 ಕಾರಿನ ಬ್ಯಾಟರಿಯು ಡಿಸಿ ಪಾಸ್ಟ್ ಚಾರ್ಜರ್ ಆಯ್ಕೆಯಲ್ಲಿ ಶೇಕಡ 10-80% ಚಾರ್ಜ್ ಆಗಲು 57 ನಿಮಿಷ ಬೇಕಾಗುತ್ತದೆ. 10.2-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಸೆಮಿ-ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಮ್ಯಾನುವಲ್ ಎಸಿ ಹಾಗೂ ಕೀಲೆಸ್ ಎಂಟ್ರಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಪ್ರಯಾಣಿಕರಿಗೆ ಗರಿಷ್ಠ ಸುರಕ್ಷತೆ ಒದಗಿಸಲು ಡುಯಲ್ ಫ್ರಂಟ್ ಏರ್‌ಬ್ಯಾಗ್, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್) ಹಾಗೂ ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್)ಯನ್ನು ಹೊಂದಿದೆ.
ಎಂಜಿ ಕಾಮೆಟ್ ಇವಿ (MG Comet EV) ಕುರಿತಂತೆ ಹೇಳುವುದಾದರೆ, ಈ ಕಾರು ರೂ.6.99 ಲಕ್ಷದಿಂದ ರೂ.9.53 ಲಕ್ಷ ಎಕ್ಸ್ ಶೋರೂಂ ದರವನ್ನು ಪಡೆದಿದೆ. 17.3 ಕೆಡಬ್ಲ್ಯೂಹೆಚ್ ಸಾಮರ್ಥ್ಯದ ಬ್ಯಾಟರಿ ಪ್ಯಾಕ್ ಒಳಗೊಂಡಿದ್ದು, ಸಂಪೂರ್ಣ ಚಾರ್ಜ್‌ನಲ್ಲಿ 230 ಕಿಲೋಮೀಟರ್ ಓಡುತ್ತದೆ. 2-ಡೋರ್ (ಬಾಗಿಲು) ಆಯ್ಕೆಯನ್ನು ಪಡೆದಿದೆ. 4 ಜನರು ಓಡಾಡಬಹುದು.

ಈ ಕಾಮೆಟ್ ಇವಿ ಡುಯಲ್ 10.25-ಇಂಚಿನ ಸ್ಕ್ರೀನ್ (ಇನ್ಫೋಟೈನ್‌ಮೆಂಟ್ ಸಿಸ್ಟಮ್ & ಇನ್ಸ್ಟ್ರುಮೆಂಟ್ ಕ್ಲಸ್ಟರ್), ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ, 55ಕ್ಕೂ ಹೆಚ್ಚು ಕನೆಕ್ಟ್ದ್ ಕಾರ್ ಟೆಕ್ ಮತ್ತು ಕೀಲೆಸ್ ಎಂಟ್ರಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಯ ದೃಷ್ಟಿಯಿಂದ ಡುಯಲ್ ಫ್ರಂಟ್ ಏರ್‌ಬ್ಯಾಗ್, ರಿವರ್ಸ್ ಪಾರ್ಕಿಂಗ್ ಕ್ಯಾಮೆರಾ, ರೇರ್ ಪಾರ್ಕಿಂಗ್ ಸೆನ್ಸರ್ಸ್ ಮತ್ತು ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್)ಯನ್ನು ಹೊಂದಿದೆ.
ಟಾಟಾ ಟಿಯಾಗೊ ಇವಿ (Tata Tiago EV) ಕೂಡ ಜನಪ್ರಿಯ ಎಲೆಕ್ಟ್ರಿಕ್ ಹ್ಯಾಚ್‌ಬ್ಯಾಕ್ ಆಗಿದೆ. ರೂ.7.99 ಲಕ್ಷದಿಂದ ರೂ.11.89 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. 19.2 ಮತ್ತು 24 ಕೆಡಬ್ಲ್ಯೂಹೆಚ್ ಬ್ಯಾಟರಿಯನ್ನು ಒಳಗೊಂಡಿದ್ದು, ಪೂರ್ತಿ ಚಾರ್ಜ್‌ನಲ್ಲಿ 250 ರಿಂದ 315 ಕಿಲೋಮೀಟರ್ ಓಡುತ್ತದೆ. ಈ ಕಾರಿನಲ್ಲಿ 5 ಮಂದಿ ಸಂಚರಿಸಬಹುದು.

ಹೊಸ ಟಿಯಾಗೊ ಇವಿ 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ, 4-ಸ್ಪೀಕರ್ ಹರ್ಮನ್ ಸೌಂಡ್ ಸಿಸ್ಟಮ್, ಆಟೋ ಎಸಿ, ಪುಶ್-ಬಟನ್ ಸ್ಟಾರ್ಟ್/ಸ್ಟಾಪ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳಿವೆ. ಸುರಕ್ಷತೆಗಾಗಿ ಡುಯಲ್ ಫ್ರಂಟ್ ಏರ್‌ಬ್ಯಾಗ್, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್) ಮತ್ತು ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಇದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications