ಪೆಟ್ರೋಲ್ ಬೆಲೆ ಗಗನಕ್ಕೆ.. 11 ಲಕ್ಷದೊಳಗೆ ಸಿಗುವ ಜನಪ್ರಿಯ ಎಲೆಕ್ಟ್ರಿಕ್ ಕಾರುಗಳಿವು

ದೇಶದಲ್ಲಿ ಪೆಟ್ರೋಲ್ ಬೆಲೆ ಗಗನಕ್ಕೇರಿದೆ. ಪ್ರತಿ ಲೀಟರ್‌ಗೆ ರೂ.100ರ ಆಸುಪಾಸಿನಲ್ಲಿ ದರವಿದ್ದು, ವಾಹನ ಮಾಲೀಕರಿಗೆ ಬಿಸಿ ತುಪ್ಪವಾಗಿದೆ. ಇಲ್ಲಿ ಕಡಿಮೆ ನಿರ್ವಹಣಾ ವೆಚ್ಚವನ್ನು ಹೊಂದಿರುವುದರೊಂದಿಗೆ ಬಜೆಟ್ ಬೆಲೆಗೆ ಸಿಗುವ ಟಾಟಾ ಟಿಯಾಗೊ ಇವಿ, ಪಂಚ್ ಇವಿ ಮತ್ತು ಎಂಜಿ ಕಾಮೆಟ್ ಇವಿಗಳ ಬಗ್ಗೆ ವಿವರಿಸಿದ್ದೇವೆ.

ಮೊದಲಿಗೆ ಟಾಟಾ ಟಿಯಾಗೊ ಇವಿ (Tata Tiago EV) ಕುರಿತು ಮಾತನಾಡೋಣ. ಇದು ರೂ.7.99 ಲಕ್ಷದಿಂದ ರೂ.11.89 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. ಈ ಕಾರಿನಲ್ಲಿ 19.2 ಕೆಡಬ್ಲ್ಯೂಹೆಚ್ ಮತ್ತು 24 ಕೆಡಬ್ಲ್ಯೂಹೆಚ್ ಸಾಮರ್ಥ್ಯದ ಬ್ಯಾಟರಿಯನ್ನು ಉಪಯೋಗಿಸಲಾಗಿದ್ದು, ರೂಪಾಂತರಗಳಿಗೆ ಅನುಗುಣವಾಗಿ ಸಂಪೂರ್ಣ ಚಾರ್ಜ್ ನಲ್ಲಿ 250 ಕಿಲೋಮೀಟರ್ ರಿಂದ 315 ಕಿಲೋಮೀಟರ್ ರೇಂಜ್ (ಮೈಲೇಜ್) ಕೊಡುತ್ತದೆ.

Best Electric Cars In India Tata Tiago Ev Punch Ev MG Comet Ev

ಟಾಟಾ ಟಿಯಾಗೊ ಇವಿಯಲ್ಲಿ 5 ಮಂದಿ ಆರಾಮದಾಯಕವಾಗಿ ಕುಳಿತುಕೊಂಡು ಪ್ರಯಾಣಿಸಬಹುದು. 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ, 4-ಸ್ಪೀಕರ್ ಹರ್ಮನ್ ಸೌಂಡ್ ಸಿಸ್ಟಮ್, ಆಟೋ ಎಸಿ, ಪುಶ್-ಬಟನ್ ಸ್ಟಾರ್ಟ್/ ಸ್ಟಾಪ್, ಸ್ಟೀರಿಂಗ್-ಮೌಂಟೆಡ್ ಕಂಟ್ರೋಲ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಗಾಗಿ ಡುಯಲ್ ಫ್ರಂಟ್ ಏರ್‌ಬ್ಯಾಗ್ಸ್, TPMS (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಅನ್ನು ಹೊಂದಿದೆ.

ದೇಶೀಯ ಮಾರುಕಟ್ಟೆಯಲ್ಲಿ ಎಂಜಿ ಕಾಮೆಟ್ ಇವಿ (MG Comet EV) ರೂ.6.99 ಲಕ್ಷದಿಂದ ರೂ.9.24 ಲಕ್ಷ ಎಕ್ಷ್ ಶೋರೂಂ ದರದಲ್ಲಿ ಲಭ್ಯವಿದೆ. 2-ಡೋರ್ (ಬಾಗಿಲು) ಆಯ್ಕೆಯನ್ನು ಒಳಗೊಂಡಿದ್ದು, 4 ಮಂದಿ ಪ್ರಯಾಣಿಸಬಹುದು. ಇದರಲ್ಲಿ 17.3 ಕೆಡಬ್ಲ್ಯೂಹೆಚ್ ಬ್ಯಾಟರಿ ಪ್ಯಾಕ್ ಬಳಕೆ ಮಾಡಲಾಗಿದ್ದು, ಭರ್ತಿ ಚಾರ್ಜ್ ನಲ್ಲಿ 230 ಕಿ.ಮೀ ಓಡುತ್ತದೆ.

Best Electric Cars In India Tata Tiago Ev Punch Ev MG Comet Ev

ಎಂಜಿ ಕಾಮೆಟ್ ಇವಿ ಪುಟ್ಟ ಕಾರಾಗಿದ್ದರೂ ಸಾಕಷ್ಟು ಅತ್ಯಾಧುನಿಕ ವೈಶಿಷ್ಟ್ಯಗಳನ್ನು ಒಳಗೂಂಡಿದೆ. ಪ್ರಮುಖವಾಗಿ 10.25-ಇಂಚಿನ ಸ್ಕ್ರೀನ್ (ಇನ್ಫೋಟೈನ್‌ಮೆಂಟ್ ಸಿಸ್ಟಮ್‌ & ಇನ್ಸ್ಟ್ರುಮೆಂಟ್ ಕ್ಲಸ್ಟರ್), ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ, ಕೀಲೆಸ್ ಎಂಟ್ರಿಯಂತಹ ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಯ ದೃಷ್ಟಿಯಿಂದ ಡುಯಲ್ ಫ್ರಂಟ್ ಏರ್‌ಬ್ಯಾಗ್‌, ರಿವರ್ಸ್ ಪಾರ್ಕಿಂಗ್ ಕ್ಯಾಮೆರಾ, ರೇರ್ ಪಾರ್ಕಿಂಗ್ ಸೆನ್ಸರ್ಸ್ ಅನ್ನು ಪಡೆದಿದೆ.

ಟಾಟಾ ಪಂಚ್ ಇವಿ (Tata Punch EV) ರೂ.10.99 ಲಕ್ಷದಿಂದ ರೂ.15.49 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಪಡೆದಿದೆ. ಈ ಕಾರು 25 ಕೆಡಬ್ಲ್ಯೂಹೆಚ್ ಮತ್ತು 35 ಕೆಡಬ್ಲ್ಯೂಹೆಚ್ ಸಾಮರ್ಥ್ಯದ ಬ್ಯಾಟರಿ ಪ್ಯಾಕ್ ಅನ್ನು ಪಡೆದಿದ್ದು, ಪೂರ್ತಿ ಚಾರ್ಜ್ ನಲ್ಲಿ 315 ರಿಂದ 421 ಕಿಲೋಮೀಟರ್ ರೇಂಜ್ (ಮೈಲೇಜ್) ನೀಡುತ್ತದೆ.

ಈ ಪಂಚ್ ಇವಿ 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ವೈರ್‌ಲೆಸ್ ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ ಪ್ಲೇ, 10.25-ಇಂಚಿನ ಫುಲ್ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಏರ್ ಪ್ಯೂರಿಫೈಯರ್, ಸನ್‌ರೂಫ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಗಾಗಿ 6 ಏರ್‌ಬ್ಯಾಗ್‌, 360-ಡಿಗ್ರಿ ಕ್ಯಾಮೆರಾ ಮತ್ತು ESC (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್) ಅನ್ನು ಒಳಗೊಂಡಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ತಂಡ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ಒದಗಿಸುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ ಗಳನ್ನು ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Monday, April 22, 2024, 13:35 [IST]
English summary
Best electric cars in india tata tiago ev punch ev mg comet ev
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+