ಪೆಟ್ರೋಲ್ ಹಾಕಿಸಲು ಬೇಸರವೇ.. ಬಜೆಟ್ ಬೆಲೆಗೆ ಸಿಗುವ ಎಲೆಕ್ಟ್ರಿಕ್ ಕಾರುಗಳಿವು.. ಊರಿಂದ ಊರಿಗೆ ಹೋಗಬಹುದು!
ಭಾರತದಲ್ಲಿ ಕಳೆದ ಕೆಲವು ವರ್ಷಗಳಿಂದ ಎಲೆಕ್ಟ್ರಿಕ್ ಕಾರುಗಳನ್ನು ಖರೀದಿಸುವವರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಈಗಾಗಲೇ, ಪ್ರಮುಖ ಜನಪ್ರಿಯ ವಾಹನ ತಯಾರಕ ಕಂಪನಿಗಳು ಹಲವು ಎಲೆಕ್ಟ್ರಿಕ್ ಕಾರುಗಳನ್ನು ಬಿಡುಗಡೆಗೊಳಿಸಿದ್ದು, ಅವುಗಳು ಯಶಸ್ವಿಯಾಗಿ ಮಾರಾಟವಾಗುತ್ತಿವೆ. ನೀವು ಹೊಚ್ಚ ಹೊಸ ಎಲೆಕ್ಟ್ರಿಕ್ ಕಾರನ್ನು ಖರೀದಿಸಲು ಯೋಚಿಸಿದ್ದರೆ, ರೂ.11 ಲಕ್ಷದೊಳಗಿನ ಎಂಜಿ ವಿಂಡ್ಸರ್ ಇವಿ, ಟಾಟಾ ಟಿಯಾಗೊ ಇವಿ, ಟಾಟಾ ಪಂಚ್ ಇವಿ ಹಾಗೂ ಎಂಜಿ ಕಾಮೆಟ್ ಇವಿಗಳು ಉತ್ತಮ ಆಯ್ಕೆಯಾಗಲಿವೆ. ಬನ್ನಿ.. ಈ ನೂತನ ಕಾರುಗಳ ಕುರಿತಂತೆ ಸಂಕ್ಷಿಪ್ತ ವಿವರವನ್ನು ತಿಳಿಯೋಣ.
ಮೊದಲಿಗೆ ಎಂಜಿ ವಿಂಡ್ಸರ್ ಇವಿ (MG Windsor EV) ಬಗ್ಗೆ ಮಾತನಾಡೋಣ. ಈ ಕಾರು ಕೈಗೆಟುಕುವ ಬೆಲೆಯಲ್ಲಿ ಖರೀದಿಗೆ ದೊರೆಯುತ್ತದೆ. ರೂ.9.99 ಲಕ್ಷ ಎಕ್ಸ್ ಶೋರೂಂ ದರವನ್ನು ಹೊಂದಿದೆ. 38 ಕೆಡಬ್ಲ್ಯೂಹೆಚ್ ಸಾಮರ್ಥ್ಯದ ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಒಳಗೊಂಡಿದೆ. ಭರ್ತಿ ಚಾರ್ಜ್‌ನಲ್ಲಿ 331 ಕಿಲೋಮೀಟರ್ ರೇಂಜ್ (ಮೈಲೇಜ್) ಕೊಡುತ್ತದೆ. ಜೊತೆಗೆ ಈ ಕಾರಿನಲ್ಲಿ 5 ಜನರು ಆರಾಮದಾಯಕವಾಗಿ ಕುಳಿತುಕೊಂಡು ಪ್ರಯಾಣಿಸಬಹುದು.

ಈ ಎಂಜಿ ವಿಂಡ್ಸರ್ ಇವಿ 15.6-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಆಂಬಿಯೆಂಟ್ ಲೈಟಿಂಗ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಆಂಬಿಯೆಂಟ್ ಲೈಟಿಂಗ್ ಹಾಗೂ ವೈರ್‌ಲೆಸ್ ಫೋನ್ ಚಾರ್ಜಿಂಗ್ ಪೋರ್ಟ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆ ದೃಷ್ಟಿಯಿಂದ 6-ಏರ್‌ಬ್ಯಾಗ್‌ಗಳು ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಪಡೆದಿದೆ.
ಟಾಟಾ ಟಿಯಾಗೊ ಇವಿ (Tata Tiago EV) ಕುರಿತಂತೆ ಹೇಳುವುದಾದರೆ, ಈ ಎಲೆಕ್ಟ್ರಿಕ್ ಕಾರು ರೂ.7.99 ಲಕ್ಷದಿಂದ ರೂ.11.89 ಲಕ್ಷ (ಎಕ್ಸ್ ಶೋರೂಂ) ಬೆಲೆಯಲ್ಲಿ ಪಡೆದಿದೆ. 19.2 ಕೆಡಬ್ಲ್ಯೂಹೆಚ್ ಮತ್ತು 24 ಕೆಡಬ್ಲ್ಯೂಹೆಚ್ ಬ್ಯಾಟರಿಯನ್ನು ಹೊಂದಿದೆ. ಸಂಪೂರ್ಣ ಚಾರ್ಜ್‌ನಲ್ಲಿ 221 ರಿಂದ 225 ಕಿಲೋಮೀಟರ್ ಓಡುತ್ತದೆ. ಇದರಲ್ಲಿಯೂ 5 ಮಂದಿ ಓಡಾಟ ನಡೆಸಬಹುದು.

ನೂತನ ಟಾಟಾ ಟಿಯಾಗೊ ಇವಿ 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 4-ಸ್ಪೀಕರ್ ಹರ್ಮನ್ ಸೌಂಡ್ ಸಿಸ್ಟಮ್, ಆಟೋ ಎಸಿ, ಪುಶ್-ಬಟನ್ ಸ್ಟಾರ್ಟ್/ಸ್ಟಾಪ್, ಕ್ರೂಸ್ ಕಂಟ್ರೋಲ್ ಮತ್ತು ಸ್ಟೀರಿಂಗ್-ಮೌಂಟೆಡ್ ಕಂಟ್ರೋಲ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ. ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆ ಒದಗಿಸಲು ಡುಯಲ್ ಫ್ರಂಟ್ ಏರ್‌ಬ್ಯಾಗ್, ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಒಳಗೊಂಡಂತೆ ವಿವಿಧ ಸುರಕ್ಷತಾ ವೈಶಿಷ್ಟ್ಯಗಳನ್ನು ಪಡೆದಿದೆ.
ಟಾಟಾ ಪಂಚ್ ಇವಿ (Tata Punch EV) ಜನಪ್ರಿಯ ಎಲೆಕ್ಟ್ರಿಕ್ ಎಸ್‌ಯುವಿಯಾಗಿದೆ. ಇದು ರೂ.9.99 ಲಕ್ಷದಿಂದ ರೂ.14.29 ಲಕ್ಷ ಎಕ್ಸ್ ಶೋರೂಂ ದರವನ್ನು ಹೊಂದಿದೆ. ಇದು 25 ಕೆಡಬ್ಲ್ಯೂಹೆಚ್ ಮತ್ತು 35 ಸಾಮರ್ಥ್ಯದ ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಹೊಂದಿದೆ. ಪೂರ್ತಿ ಚಾರ್ಜ್‌ನಲ್ಲಿ 265 ರಿಂದ 365 ಕಿಲೋಮೀಟರ್ ಓಡುತ್ತದೆ.

ಈ ಪಂಚ್ ಇವಿಯಲ್ಲಿಯೂ 5 ಜನರು ಪ್ರಯಾಣಿಸಬಹುದು. 10.25-ಇಂಚಿನ ಡುಯಲ್ ಡಿಸ್ಪ್ಲೇ, ಆಂಡ್ರಾಯ್ಡ್ ಆಟೋ ಮತ್ತು ಆಪಲ್ ಕಾರ್ ಪ್ಲೇ, ಏರ್ ಪ್ಯೂರಿಫೈಯರ್, ಸನ್‌ರೂಫ್, ಆಂಬಿಯೆಂಟ್ ಲೈಟಿಂಗ್, ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳು ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. 6 ಏರ್‌ಬ್ಯಾಗ್‌ಗಳು ಮತ್ತು 360-ಡಿಗ್ರಿ ಕ್ಯಾಮೆರಾದಂತಹ ಸುರಕ್ಷತಾ ವೈಶಿಷ್ಟ್ಯಗಳು ಕೂಡ ಇವೆ.
ಎಂಜಿ ಕಾಮೆಟ್ ಇವಿ (MG Comet EV) ಬಗ್ಗೆ ಮಾತನಾಡುವುದಾದರೆ, ಈ ಎಲೆಕ್ಟ್ರಿಕ್ ಕಾರು ರೂ.6.99 ಲಕ್ಷದಿಂದ ರೂ.9.53 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಲಭ್ಯವಿದೆ. 17.3 ಕೆಡಬ್ಲ್ಯೂಹೆಚ್ ಸಾಮರ್ಥ್ಯದ ಬ್ಯಾಟರಿಯನ್ನು ಪಡೆದಿದೆ. ಸಂಪೂರ್ಣ ಚಾರ್ಜ್‌ನಲ್ಲಿ 230 ಕಿಲೋಮೀಟರ್ ರೇಂಜ್ (ಮೈಲೇಜ್) ನೀಡುತ್ತದೆ. ಈ ಕಾರಿನ ಬ್ಯಾಟರಿ ಪ್ಯಾಕ್ 7.4 ಕೆಡಬ್ಲ್ಯೂ ಸಾಮರ್ಥ್ಯದ ಚಾರ್ಜರ್ ಬಳಕೆಯಲ್ಲಿ 0-100% ಚಾರ್ಜ್ ಆಗುವುದಕ್ಕೆ ಕೇವಲ 3.5 ಗಂಟೆ ತೆಗೆದುಕೊಳ್ಳುತ್ತದೆ.
ಹೊಸ ಎಂಜಿ ಕಾಮೆಟ್ ಇವಿಯಲ್ಲಿ 4 ಮಂದಿ ಓಡಾಟ ನಡೆಸಬಹುದು. 10.25-ಇಂಚಿನ ಡುಯಲ್ ಸ್ಕ್ರೀನ್ (ಇನ್ಫೋಟೈನ್‌ಮೆಂಟ್ ಸಿಸ್ಟಮ್ & ಇನ್ಸ್ಟ್ರುಮೆಂಟ್ ಕ್ಲಸ್ಟರ್), ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ ಮತ್ತು ಕೀಲೆಸ್ ಎಂಟ್ರಿ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ. ಪ್ರಯಾಣಿಕರ ಸುರಕ್ಷತೆಗಾಗಿ ಡುಯಲ್ ಫ್ರಂಟ್ ಏರ್‌ಬ್ಯಾಗ್, ರಿವರ್ಸ್ ಪಾರ್ಕಿಂಗ್ ಕ್ಯಾಮೆರಾವನ್ನು ಹೊಂದಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications