ಫ್ಯಾಮಿಲಿ ಜೊತೆ ಟೂರ್ ಮಾಡಲು ಬೆಸ್ಟ್ ಕಾರುಗಳಿವು.. 7 ಜನ ಹೋಗಬಹುದು.. ಒಳ್ಳೆ ಮೈಲೇಜ್!

ಬಿಡುವಿಲ್ಲದ ಕಚೇರಿ ಕೆಲಸದಲ್ಲಿ ತೊಡಗಿಕೊಂಡವರಿಗೆ ಪ್ರವಾಸವೆಂಬುದು ಒಂದು ರೀತಿಯ ಆನಂದವನ್ನು ತರುತ್ತದೆ. ಹಲವರು ತಮ್ಮ ಇಡೀ ಕುಟುಂಬವನ್ನು ಪ್ರವಾಸಕ್ಕೆ ಕರೆದುಕೊಂಡು ಹೋಗಲು ಹೊಸ ಕಾರೊಂದನ್ನು ಖರೀಸಬೇಕೆಂಬ ಉತ್ಸಾಹದಲ್ಲಿರುತ್ತಾರೆ. ಆದಾಗ್ಯೂ ಯಾವ ಕಾರನ್ನು ತೆಗೆದುಕೊಂಡರೆ ಒಳಿತು ಎಂಬ ಗೊಂದಲವಿರುತ್ತದೆ. ನಾವು ಬಜೆಟ್ ಬೆಲೆಯಲ್ಲಿ ಲಭ್ಯವಿರುವ ರೆನಾಲ್ಟ್ ಟ್ರೈಬರ್ (Renault Triber) ಹಾಗೂ ಮಾರುತಿ ಸುಜುಕಿ ಎರ್ಟಿಗಾ (Maruti Suzuki Ertiga) ಎಂಪಿವಿ ಬಗ್ಗೆ ವಿವರಿಸಿದ್ದೇವೆ.

ರೆನಾಲ್ಟ್ ಟ್ರೈಬರ್: ದೇಶೀಯ ಮಾರುಕಟ್ಟೆಯಲ್ಲಿ ಖರೀದಿಗೆ ದೊರೆಯುವ 'ರೆನಾಲ್ಟ್ ಟ್ರೈಬರ್' ಪ್ರಖ್ಯಾತ ಎಂಪಿವಿಯಾಗಿ ಗುರುತಿಸಿಕೊಂಡಿದೆ. ರೂ.6 ಲಕ್ಷದಿಂದ ರೂ.8.97 ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. ಆರ್‌ಎಕ್ಸ್ಇ ಹಾಗೂ ಆರ್‌ಎಕ್ಸ್ಎಲ್ ಸೇರಿದಂತೆ ವಿವಿಧ ರೂಪಾಂತರ (ವೇರಿಯೆಂಟ್)ಗಳ ಆಯ್ಕೆಯಲ್ಲಿ ಕೂಡ ಸಿಗುತ್ತದೆ. ಈ ಕಾರು 7 ಆಸನ ವ್ಯವಸ್ಥೆಯನ್ನು ಪಡೆದಿದೆ.

auto news india best family cars best family cars for going tour Renault Triber Maruti Suzuki Ertiga Best Family Cars For Going Tour Renault Triber Maruti Suzuki Ertiga 7

ಈ ಟ್ರೈಬರ್ 1-ಲೀಟರ್ ಪೆಟ್ರೋಲ್ ಎಂಜಿನ್‌ನ್ನು ಹೊಂದಿದೆ. 72 ಪಿಎಸ್ ಗರಿಷ್ಠ ಶಕ್ತಿ (ಪವರ್) ಮತ್ತು 96 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಪಡೆದಿದೆ. ರೂಪಾಂತರಗಳಿಗೆ ಅನುಗುಣವಾಗಿ 5-ಸ್ಪೀಡ್ ಮ್ಯಾನುವಲ್/ 5-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ ಆಯ್ಕೆಯನ್ನು ಒಳಗೊಂಡಿದೆ. 18.2 ರಿಂದ 20 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ.

ನೂತನ ರೆನಾಲ್ಟ್ ಟ್ರೈಬರ್ ಎಂಪಿವಿ 8-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ, 7-ಇಂಚಿನ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ವೈರ್‌ಲೆಸ್ ಚಾರ್ಜರ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಪ್ರಯಾಣಿಕರಿಗೆ ಸೂಕ್ತ ರಕ್ಷಣೆ ಒದಗಿಸಲು 4 ಏರ್‌ಬ್ಯಾಗ್‌, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್) ಮತ್ತು ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್)ಯನ್ನು ಪಡೆದಿದೆ.

auto news india best family cars best family cars for going tour Renault Triber Maruti Suzuki Ertiga Best Family Cars For Going Tour Renault Triber Maruti Suzuki Ertiga 7

ಮಾರುತಿ ಸುಜುಕಿ ಎರ್ಟಿಗಾ: ಜನಪ್ರಿಯ ಎಂಪಿವಿಯೆಂದೇ 'ಮಾರುತಿ ಸುಜುಕಿ ಎರ್ಟಿಗಾ' ಹೆಸರುವಾಸಿಯಾಗಿದೆ. ರೂ.8.69 ಲಕ್ಷದಿಂದ ರೂ.13.03 ಲಕ್ಷ ಎಕ್ಸ್ ಶೋರೂಂ ದರದಲ್ಲಿ ಖರೀದಿಗೆ ಸಿಗುತ್ತದೆ. ಎಲ್ಎಕ್ಸ್ಐ ಮತ್ತು ವಿಎಕ್ಸ್ಐ ಸೇರಿದಂತೆ ಹಲವು ರೂಪಾಂತರಗಳನ್ನು ಹೊಂದಿದೆ. 7 ಆಸನ ಆಯ್ಕೆ ವ್ಯವಸ್ಥೆಯಲ್ಲಿ ಕೂಡ ಗ್ರಾಹಕರಿಗೆ ಲಭ್ಯವಿದೆ.

ಹೊಸ ಎರ್ಟಿಗಾ ಕಾರು 1.5-ಲೀಟರ್ ಪೆಟ್ರೋಲ್ ಮತ್ತು ಸಿಎನ್‌ಜಿ ಎಂಜಿನ್‌ನ್ನು ಹೊಂದಿದೆ. 5-ಸ್ಪೀಡ್ ಮ್ಯಾನುವಲ್ ಅಥವಾ 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಪಡೆದಿದೆ. ಪೆಟ್ರೋಲ್ ಮಾದರಿಗಳು 20.3 ರಿಂದ 20.51 ಕೆಎಂಪಿಎಲ್ ಹಾಗೂ ಸಿಎನ್‌ಜಿ ಮಾದರಿಗಳು 26.11 ಕೆಎಂ/ಕೆಜಿವರೆಗೆ ಮೈಲೇಜ್ ಕೊಡುತ್ತವೆ. ಪ್ರವಾಸದ ವೇಳೆ ಹೆಚ್ಚಿನ ಲಗೇಜ್ ಸಾಗಿಸಲು 209 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ.

ಈ ಮಾರುತಿ ಸುಜುಕಿ ಎರ್ಟಿಗಾ ಎಂಪಿವಿ 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ವೈರ್‌ಲೆಸ್ ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ ಪ್ಲೇ, ಪ್ಯಾಡಲ್ ಶಿಫ್ಟರ್‌ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಯ ದೃಷ್ಟಿಯಿಂದ 4 ಏರ್‌ಬ್ಯಾಗ್‌, ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ರೇರ್ ಪಾರ್ಕಿಂಗ್ ಸೇನಾರ್ಸ್ ಹಾಗೂ ಹಿಲ್-ಹೋಲ್ಡ್ ಅಸಿಸ್ಟ್ ಅನ್ನು ಹೊಂದಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Sunday, July 21, 2024, 13:00 [IST]
English summary
Best family cars for going tour renault triber maruti suzuki ertiga
Read more on auto news india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+