10 ಲಕ್ಷ ಬೆಲೆ.. ಅತ್ಯುತ್ತಮ ಫ್ಯಾಮಿಲಿ ಕಾರುಗಳಿವು.. ನಿಮ್ಮ ಆಯ್ಕೆ ಯಾವುದು?

ಭಾರತದಲ್ಲಿ ಮಧ್ಯಮ ವರ್ಗದ ಜನರು ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುತ್ತಿದ್ದಾರೆ. ಬಹುತೇಕರು ತಮ್ಮ ಪುಟ್ಟ ಕುಟುಂಬಕ್ಕಾಗಿ ಹೊಚ್ಚ ಹೊಸ ಕಾರನ್ನು ಖರೀದಿಸಬೇಕು ಎಂಬ ಆಸೆಯನ್ನು ಹೊಂದಿರುತ್ತಾರೆ. ಆದರೆ, ಯಾವ ಕಾರು ಕೈಗೆಟುಕುವ ಬೆಲೆಯಲ್ಲಿ ದೊರೆಯುತ್ತದೆ.. ವೈಶಿಷ್ಟ್ಯಗಳೇನು ಸೇರಿದಂತೆ ಒಂದಷ್ಟು ಗೊಂದಲ ಹಲವರಲ್ಲಿ ಇರುತ್ತದೆ. ಇಲ್ಲಿ ಜನಪ್ರಿಯ ಮಾರುತಿ ಸುಜುಕಿ ಬಲೆನೊ, ಟಾಟಾ ನೆಕ್ಸಾನ್‌, ಮಾರುತಿ ಸುಜುಕಿ ಸ್ವಿಫ್ಟ್, ಹ್ಯುಂಡೈ ಐ20, ಹ್ಯುಂಡೈ ವೆನ್ಯೂ ಹಾಗೂ ಕಿಯಾ ಸೋನೆಟ್ ಕಾರುಗಳ ಬಗ್ಗೆ ಸಂಕ್ಷಿಪ್ತವಾಗಿ ವಿವರಿಸಿದ್ದೇವೆ.

ಮೊದಲಿಗೆ ಪ್ರೀಮಿಯಂ ಹ್ಯಾಚ್‌ಬ್ಯಾಕ್ ಮಾರುತಿ ಸುಜುಕಿ ಬಲೆನೊ (Maruti Suzuki Baleno) ಕುರಿತಂತೆ ಮಾತನಾಡೋಣ. ಈ ಕಾರು ರೂ.6.66 ಲಕ್ಷದಿಂದ ರೂ.9.88 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. ಪೆಟ್ರೋಲ್ ಹಾಗೂ ಸಿಎನ್‌ಜಿ ಎಂಜಿನ್ ಆಯ್ಕೆಯನ್ನು ಪಡೆದಿದ್ದು, ರೂಪಾಂತರ (ವೇರಿಯೆಂಟ್)ಗಳಿಗೆ ಅನುಗುಣವಾಗಿ 22.35 ರಿಂದ 30.61 ಕಿ.ಮೀ ವರೆಗೆ ಮೈಲೇಜ್ ನೀಡುತ್ತದೆ. 9-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಒಳಗೊಂಡಿದೆ.

Best Family Cars In India under Rs 10 lakh Baleno Swift i20 Venue Sonet

ಟಾಟಾ ನೆಕ್ಸಾನ್‌ (Tata Nexon) ಪ್ರಖ್ಯಾತ ಎಸ್‌ಯುವಿಯಾಗಿದೆ. ರೂ.8 ಲಕ್ಷದಿಂದ ರೂ.15.80 ಲಕ್ಷ (ಎಕ್ಸ್ ಶೋರೂಂ) ದರವನ್ನು ಪಡೆದಿದೆ. 1.2-ಲೀಟರ್ ಟರ್ಬೊ ಪೆಟ್ರೋಲ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯಲ್ಲಿ ಸಿಗಲಿದ್ದು, 17.44 ರಿಂದ 24.08 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. 10.25-ಇಂಚಿನ ಡುಯಲ್ ಡಿಸ್ಪ್ಲೇಗಳು, ರೇರ್ ಎಸಿ ವೆಂಟ್‌ಗಳು ಒಳಗೊಂಡಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ.

ಮಾರುತಿ ಸುಜುಕಿ ಸ್ವಿಫ್ಟ್‌ (Maruti Suzuki Swift) ಅತ್ಯಾಧುನಿಕ ಹ್ಯಾಚ್‌ಬ್ಯಾಕ್ ಎಂದೇ ಹೆಸರುವಾಸಿಯಾಗಿದೆ. ರೂ.6.49 ಲಕ್ಷದಿಂದ ರೂ.9.65 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. 1.2-ಲೀಟರ್ 3-ಸಿಲಿಂಡರ್ ಝಡ್ ಸೀರಿಯಸ್ ಪೆಟ್ರೋಲ್ ಎಂಜಿನ್ ಹೊಂದಿದ್ದು, 24.8 ರಿಂದ 25.72 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. 9-ಇಂಚಿನ ಇನ್ಫೋಟೈನ್‌ಮೆಂಟ್ ಸ್ಕ್ರೀನ್‌ನಂತಹ ಹಲವು ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ.

Best Family Cars In India under Rs 10 lakh Baleno Swift i20 Venue Sonet

ಹ್ಯುಂಡೈ ಐ20 (Hyundai i20) ಕೂಡ ಜನಪ್ರಿಯ ಹ್ಯಾಚ್‌ಬ್ಯಾಕ್ ಆಗಿದೆ. ರೂ.7.04 ಲಕ್ಷದಿಂದ ರೂ.11.21 ಲಕ್ಷ ಎಕ್ಸ್ ಶೋರೂಂ ದರದಲ್ಲಿ ಖರೀದಿಗೆ ಸಿಗುತ್ತದೆ. 1.2-ಲೀಟರ್ ಪೆಟ್ರೋಲ್ ಎಂಜಿನ್ ಒಳಗೊಂಡಿದ್ದು, 16 ರಿಂದ 20 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಸೆಮಿ-ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಒಳಗೊಂಡಂತೆ ಹತ್ತಾರು ವೈಶಿಷ್ಟ್ಯಗಳನ್ನು ಪಡೆದಿದೆ.

ಹ್ಯುಂಡೈ ವೆನ್ಯೂ (Hyundai Venue) ಅತ್ಯುತ್ತಮ ಎಸ್‌ಯುವಿಯಾಗಿದೆ. ರೂ.7.94 ಲಕ್ಷದಿಂದ ರೂ.13.48 ಲಕ್ಷ (ಎಕ್ಸ್ ಶೋರೂಂ) ದರವನ್ನು ಪಡೆದಿದೆ. 1.2-ಲೀಟರ್ ಪೆಟ್ರೋಲ್, 1-ಲೀಟರ್ ಟರ್ಬೊ ಪೆಟ್ರೋಲ್ ಹಾಗೂ 1.5-ಲೀಟರ್ ಡೀಸೆಲ್ ಎಂಜಿನ್‌ನ್ನು ಒಳಗೊಂಡಿದೆ. 24.2 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. 8-ಇಂಚಿನ ಟಚ್‌ಸ್ಕ್ರೀನ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.

Best Family Cars In India under Rs 10 lakh Baleno Swift i20 Venue Sonet

ಕಿಯಾ ಸೋನೆಟ್ (Kia Sonet) ಸಹ ಉತ್ತಮ ಎಸ್‌ಯುವಿಯಾಗಿ ಮನೆ ಮಾತಾಗಿದೆ. ರೂ.7.99 ಲಕ್ಷದಿಂದ ರೂ.15.75 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. 1.2-ಲೀಟರ್ ನ್ಯಾಚುರಲ್ ಆಸ್ಪಿರೇಟೆಡ್ ಪೆಟ್ರೋಲ್, 1-ಲೀಟರ್ ಟರ್ಬೊ ಪೆಟ್ರೋಲ್ ಹಾಗೂ 1.5-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯನ್ನು ಪಡೆದಿದೆ. 18.7 ರಿಂದ 22.3 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಇದರಲ್ಲಿ 10.25-ಇಂಚಿನ ಡುಯಲ್ ಡಿಸ್ಪ್ಲೇಗಳು ಒಳಗೊಂಡಂತೆ ಹಲವು ವೈಶಿಷ್ಟ್ಯಗಳಿವೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Monday, July 22, 2024, 17:34 [IST]
English summary
Best family cars india under rs 10 lakh baleno swift i20 venue sonet details
Read more on auto news india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+