ಎರಡು ಕುಟುಂಬ ಪ್ರಯಾಣಿಸಬಹುದಾದ ಕಾರುಗಳಿವು.. ಅತಿಕಡಿಮೆ ಬೆಲೆ, ಗರಿಷ್ಠ ಮೈಲೇಜ್!

ಬಹುತೇಕರಿಗೆ ದೀಪಾವಳಿ ಹಬ್ಬಕ್ಕೆ ಹೊಸ ಕಾರು ಖರೀದಿಸಬೇಕು ಎಂಬ ಆಸೆಯಿರುತ್ತದೆ. ಆದರೆ, ಕೈಗೆಟುಕುವ ಬೆಲೆಗೆ ತಮ್ಮ ಕುಟುಂಬಕ್ಕೆ ಯಾವ ಕಾರನ್ನು ತೆಗೆದುಕೊಂಡರೆ ಒಳಿತು ಎಂಬ ಗೊಂದಲದಲ್ಲಿರುತ್ತಾರೆ. ಇಲ್ಲಿ ಅತಿ ಕಡಿಮೆ ಬೆಲೆ ಮತ್ತು ಆಕರ್ಷಕ ವೈಶಿಷ್ಟ್ಯದೊಂದಿಗೆ ಖರೀದಿಗೆ ಲಭ್ಯವಿರುವ ಟೊಯೊಟಾ ರೂಮಿಯನ್ (Toyota Rumion), ರೆನಾಲ್ಟ್ ಟ್ರೈಬರ್ (Renault Triber) ಹಾಗೂ ಮಾರುತಿ ಸುಜುಕಿ ಎರ್ಟಿಗಾ (Maruti Suzuki Ertiga) ಎಂಪಿವಿಗಳ ಕುರಿತಂತೆ ಸಂಕ್ಷಿಪ್ತವಾಗಿ ತಿಳಿಸಿಕೊಟ್ಟಿದ್ದೇವೆ.

ಮೊದಲಿಗೆ ಟೊಯೊಟಾ ರೂಮಿಯನ್ ಎಂಪಿವಿ ಬಗ್ಗೆ ಮಾತನಾಡೋಣ. ಇದು ರೂ.10.44 ರಿಂದ ರೂ.13.73 ಲಕ್ಷ (ಎಕ್ಸ್ ಶೋರೂಂ) ದರವನ್ನು ಪಡೆದಿದೆ. ಎಸ್, ಜಿ ಮತ್ತು ವಿ ಎಂಬ ರೂಪಾಂತರಗಳನ್ನು (ವೇರಿಯೆಂಟ್) ಹೊಂದಿದೆ. 1.5-ಲೀಟರ್ ಪೆಟ್ರೋಲ್ ಮತ್ತು ಸಿಎನ್‌ಜಿ ಎಂಜಿನ್ ಆಯ್ಕೆಯಲ್ಲಿಯೂ ಸಿಗುತ್ತದೆ. 5-ಸ್ಪೀಡ್ ಮ್ಯಾನುವಲ್/ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದ್ದು, 20.11 ರಿಂದ 26.11 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ.

Best Family Cars Toyota Rumion Renault Triber And Maruti Ertiga 7-Seater Low Price

ಈ ಟೊಯೊಟಾ ರೂಮಿಯನ್ ಎಂಪಿವಿಯಲ್ಲಿ 7 ಜನರು ಸುಲಭವಾಗಿ ಓಡಾಟ ನಡೆಸಬಹುದು. ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್, 6-ಸ್ಪೀಕರ್ ಸೌಂಡ್ ಸಿಸ್ಟಮ್, ಆಟೋಮೆಟಿಕ್ ಎಸಿ, ಕ್ರೂಸ್ ಕಂಟ್ರೋಲ್ ಹಾಗೂ ಪುಶ್-ಬಟನ್ ಎಂಜಿನ್ ಸ್ಟಾರ್ಟ್/ಸ್ಟಾಪ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಗಾಗಿ 4 ಏರ್‌ಬ್ಯಾಗ್‌ಗಳನ್ನು ಪಡೆದಿದೆ.

ರೆನಾಲ್ಟ್ ಟ್ರೈಬರ್ ಬಗ್ಗೆ ಹೇಳುವುದಾದರೆ, ಈ ಎಂಪಿವಿ ಕನಿಷ್ಠ ರೂ.6 ಲಕ್ಷ ಹಾಗೂ ಗರಿಷ್ಠ ರೂ.8.97 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಒಳಗೊಂಡಿದೆ. ಐಸ್ ಕೂಲ್ ವೈಟ್, ಸೀಡರ್ ಬ್ರೌನ್ ಮತ್ತು ಮೂನ್‌ಲೈಟ್ ಸಿಲ್ವರ್ ಸೇರಿದಂತೆ ವಿವಿಧ ಬಣ್ಣಗಳಿಂದಿಗೂ ಸಿಗುತ್ತದೆ. 1-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್‌ನ್ನು ಒಳಗೊಂಡಿದ್ದು, 20 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ.

Best Family Cars Toyota Rumion Renault Triber And Maruti Ertiga 7-Seater Low Price

ನೂತನ ರೆನಾಲ್ಟ್ ಟ್ರೈಬರ್ ಎಂಪಿವಿಯಲ್ಲಿ 7 ಮಂದಿ ಆರಾಮದಾಯಕವಾಗಿ ಕುಳಿತುಕೊಂಡು ದೂರದ ಊರುಗಳಿಗೆ ಪ್ರಯಾಣಿಸಬಹುದು. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್-ಡ್ರೈವರ್ ಡಿಸ್‌ಪ್ಲೇ, ವೈರ್‌ಲೆಸ್ ಚಾರ್ಜರ್, ಸ್ಟೀರಿಂಗ್ ಮೌಂಟೆಡ್ ಕಂಟ್ರೋಲ್ ಒಳಗೊಂಡಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಪ್ರಯಾಣಿಕರ ರಕ್ಷಣೆಗಾಗಿ 4 ಏರ್‌ಬ್ಯಾಗ್‌ಗಳನ್ನು ಹೊಂದಿದೆ.

ಮಾರುತಿ ಸುಜುಕಿ ಎರ್ಟಿಗಾ ಜನಪ್ರಿಯ ಎಂಪಿವಿಯಾಗಿದ್ದು, ರೂ.8.69 ಲಕ್ಷದಿಂದ ರೂ.13.03 ಲಕ್ಷ (ಎಕ್ಸ್ ಶೋರೂಂ - ಬೆಂಗಳೂರು) ದರವನ್ನು ಹೊಂದಿದೆ. 1.5-ಲೀಟರ್ ಪೆಟ್ರೋಲ್ & ಸಿಎನ್‌ಜಿ ಎಂಜಿನ್ ಆಯ್ಕೆಯನ್ನು ಒಳಗೊಂಡಿದೆ. 20.3 ರಿಂದ 26.11 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಮೆಟಾಲಿಕ್ ಮ್ಯಾಗ್ಮಾ ಗ್ರೇ, ಮತ್ತು ಪರ್ಲ್ ಆರ್ಕ್ಟಿಕ್ ವೈಟ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ.

Best Family Cars Toyota Rumion Renault Triber And Maruti Ertiga 7-Seater Low Price

ಈ ಎರ್ಟಿಗಾ ಎಂಪಿವಿಯಲ್ಲಿ 7 ಜನರು ಓಡಾಟ ನಡೆಸಬಹುದು. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಪ್ಯಾಡಲ್ ಶಿಫ್ಟರ್ಸ್, ಕ್ರೂಸ್ ಕಂಟ್ರೋಲ್, ಆಟೋ ಹೆಡ್‌ಲೈಟ್‌ಗಳು, ಆಟೋ ಎಸಿ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಯ ದೃಷ್ಟಿಯಿಂದ ಡುಯಲ್ ಫ್ರಂಟ್ ಏರ್‌ಬ್ಯಾಗ್‌, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್) ಅನ್ನು ಹೊಂದಿದೆ.

ಒಟ್ಟಾರೆಯಾಗಿ ಟೊಯೊಟಾ ರೂಮಿಯನ್, ರೆನಾಲ್ಟ್ ಟ್ರೈಬರ್ ಹಾಗೂ ಮಾರುತಿ ಸುಜುಕಿ ಎರ್ಟಿಗಾ ಎಂಪಿವಿಗಳು ಒಂದಕ್ಕಿಂತ ಒಂದು ಅದ್ಬುತವಾಗಿವೆ. 7 ಜನರು ಸಂಚರಿಸಲು ಸಾದ್ಯವಾಗುವುದರಿಂದ ನಿಮ್ಮ ಕುಟುಂಬದ ವಾಹನವಾಗಿ ಈ ಕಾರುಗಳನ್ನು ಸುಲಭವಾಗಿ ಆಯ್ಕೆ ಮಾಡಬಹುದು. ಅದರಲ್ಲೂ ರೂಮಿಯನ್ ಮತ್ತು ಎರ್ಟಿಗಾಗೆ ಭಾರಿ ಬೇಡಿಕೆಯಿರುವುದರಿಂದ ವಿತರಣೆ ಪಡೆಯಲು ಹಲವು ತಿಂಗಳು ಕಾಯಲೇಬೇಕು.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Sunday, October 27, 2024, 8:30 [IST]
English summary
Best family cars toyota rumion renault triber and maruti ertiga 7 seater low price
Read more on auto news india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+