ಹೊಸ ಕಾರನ್ನು ಮನೆಗೆ ತರಬೇಕೇ.. ಈ ಹ್ಯಾಚ್‌ಬ್ಯಾಕ್‌ಗಳು ತುಂಬಾನೇ ಬೆಸ್ಟ್, 3.99 ಲಕ್ಷ ಆರಂಭಿಕ ಬೆಲೆ.. 5-ಸೀಟರ್!

ಪ್ರತಿಯೊಬ್ಬರಿಗೂ ಜೀವನ ಹೊಸ ಕಾರು ಖರೀದಿಸಬೇಕು ಎಂಬ ಬಹುದೊಡ್ಡ ಆಸೆಯಿರುತ್ತದೆ. ಆದರೆ, ತಮ್ಮ ಕುಟುಂಬದ ಕೆಟ್ಟ ಆರ್ಥಿಕ ಪರಿಸ್ಥಿತಿಯಿಂದ ಈ ಕನಸು ನನಸಾಗುವುದಿಲ್ಲ. ನಿಮ್ಮ ಬಳಿ ಹೆಚ್ಚು ಹಣ ಇಲ್ಲದಿದ್ದರೂ ಕೆಲವೊಂದು ಜನಪ್ರಿಯ ಹ್ಯಾಚ್‌ಬ್ಯಾಕ್‌ಗಳನ್ನು ಸುಲಭವಾಗಿ ಮನೆಗೆ ತರಬಹುದು. ನಾವಿಲ್ಲಿ, ಅಗ್ಗದ ದರಕ್ಕೆ ಲಭ್ಯವಿರುವ ಮಾರುತಿ ಸುಜುಕಿ ಆಲ್ಟೊ ಕೆ10, ರೆನಾಲ್ಟ್ ಕ್ವಿಡ್, ಟಾಟಾ ಟಿಯಾಗೊ, ಹ್ಯುಂಡೈ ಐ20, ಮಾರುತಿ ಸುಜುಕಿ ಸ್ವಿಫ್ಟ್, ಮಾರುತಿ ಸುಜುಕಿ ವ್ಯಾಗನ್ಆರ್ ಮತ್ತು ಮಾರುತಿ ಸುಜುಕಿ ಬಲೆನೊ ಕಾರುಗಳ ಬಗ್ಗೆ ಸಂಕ್ಷಿಪ್ತವಾಗಿ ವಿವರಿಸಿದ್ದೇವೆ.

ಮಾರುತಿ ಸುಜುಕಿ ಆಲ್ಟೊ ಕೆ10 (Maruti Suzuki Alto K10): ಇದು ಕಡಿಮೆ ಬೆಲೆಯಲ್ಲಿ ದೊರೆಯುವ ಜನಪ್ರಿಯ ಹ್ಯಾಚ್‌ಬ್ಯಾಕ್‌ ಆಗಿದ್ದು, ರೂ.3.99 ಲಕ್ಷದಿಂದ ರೂ.5.96 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. 1-ಲೀಟರ್ ಪೆಟ್ರೋಲ್/ ಸಿಎನ್‌ಜಿ ಎಂಜಿನ್ ಆಯ್ಕೆಯನ್ನು ಪಡೆದಿದ್ದು, 24.39 ರಿಂದ 33.85 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ.

Best Hatchbacks In India 5 Seater Low price Alto KWID Tiago i20 Swift WagonR Baleno

ರೆನಾಲ್ಟ್ ಕ್ವಿಡ್: (Renault KWID): ಈ ಕಾರು ರೂ.4.70 ಲಕ್ಷದಿಂದ ರೂ.6.45 ಲಕ್ಷ (ಎಕ್ಸ್ ಶೋರೂಂ) ದರವನ್ನು ಒಳಗೊಂಡಿದೆ. 1-ಲೀಟರ್ ಪೆಟ್ರೋಲ್ ಹೊಂದಿದ್ದು, 21.46 ರಿಂದ 22.3 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. 8-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಮತ್ತು ಡುಯಲ್ ಫ್ರಂಟ್ ಏರ್‌ಬ್ಯಾಗ್‌ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಕೂಡ ಪಡೆದಿದೆ.

ಟಾಟಾ ಟಿಯಾಗೊ (Tata Tiago): ಇದೊಂದು ಸುರಕ್ಷಿತ ಹ್ಯಾಚ್‌ಬ್ಯಾಕ್‌ ಎಂದೇ ಹೆಸರುವಾಗಿದ್ದು, ರೂ.5 ಲಕ್ಷದಿಂದ ರೂ.8.75 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿಗೆ ಸಿಗುತ್ತದೆ. 1.2-ಲೀಟರ್ ಪೆಟ್ರೋಲ್ ಹಾಗೂ ಸಿಎನ್‌ಜಿ ಎಂಜಿನ್ ಆಯ್ಕೆಯನ್ನು ಒಳಗೊಂಡಿದ್ದು, 20.01 ರಿಂದ 28.06 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ.

Best Hatchbacks In India 5 Seater Low price Alto KWID Tiago i20 Swift WagonR Baleno

ಹ್ಯುಂಡೈ ಐ20 (Hyundai i20): ಇದು ಸಹ ಪ್ರಮುಖ ಹ್ಯಾಚ್‌ಬ್ಯಾಕ್‌ ಆಗಿದೆ. ರೂ.7.04 ಲಕ್ಷದಿಂದ ರೂ.11.21 ಲಕ್ಷ (ಎಕ್ಸ್ ಶೋರೂಂ) ದರವನ್ನು ಪಡೆದಿದೆ. 1.2-ಲೀಟರ್ ಪೆಟ್ರೋಲ್ ಎಂಜಿನ್ ಹೊಂದಿದ್ದು, 16 ರಿಂದ 20 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಹಾಗೂ ಸೆಮಿ-ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಮಾರುತಿ ಸುಜುಕಿ ಸ್ವಿಫ್ಟ್ (Maruti Suzuki Swift): ಈ ಕಾರು ರೂ.6.49 ಲಕ್ಷದಿಂದ ರೂ.9.59 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. ಇದು ಪೆಟ್ರೋಲ್ ಮತ್ತು ಸಿಎನ್‌ಜಿ ಎಂಜಿನ್‌ನೊಂದಿಗೂ ಸಿಗುತ್ತದೆ. 24.8 ರಿಂದ 32.85 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. 9-ಇಂಚಿನ ಇನ್ಫೋಟೈನ್‌ಮೆಂಟ್ ಸ್ಕ್ರೀನ್‌, ಆಟೋ ಕ್ಲೇಮೇಟ್ ಕಂಟ್ರೋಲ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ.

Best Hatchbacks In India 5 Seater Low price Alto KWID Tiago i20 Swift WagonR Baleno

ಮಾರುತಿ ಸುಜುಕಿ ವ್ಯಾಗನ್ಆರ್ (Maruti Suzuki WagonR): ಇದನ್ನು ಹೆಚ್ಚಿನ ಸಂಖ್ಯೆಯಲ್ಲಿ ವೈದ್ಯರು ಹಾಗೂ ಎಂಜಿನಿಯರ್‌ಗಳು ಇಷ್ಟಪಟ್ಟು ತೆಗೆದುಕೊಳ್ಳುತ್ತಾರೆ. ರೂ.5.54 ಲಕ್ಷದಿಂದ ರೂ.7.32 ಲಕ್ಷ (ಎಕ್ಸ್ ಶೋರೂಂ) ದರವನ್ನು ಪಡೆದಿದೆ. ಪೆಟ್ರೋಲ್ ಹಾಗೂ ಸಿಎನ್‌ಜಿ ಎಂಜಿನ್ ಒಳಗೊಂಡಿದ್ದು, 23.56 ರಿಂದ 34.05 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ.

ಮಾರುತಿ ಸುಜುಕಿ ಬಲೆನೊ (Maruti Suzuki Baleno): ಇದು ಪ್ರೀಮಿಯಂ ಹ್ಯಾಚ್‌ಬ್ಯಾಕ್‌ ಆಗಿದ್ದು, ರೂ.6.66 ರಿಂದ ರೂ.9.83 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. 1.2-ಲೀಟರ್ ಪೆಟ್ರೋಲ್ ಮತ್ತು ಸಿಎನ್‌ಜಿ ಎಂಜಿನ್ ಆಯ್ಕೆಯನ್ನು ಪಡೆದಿದೆ. 22.35 ರಿಂದ 30.61 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. 9-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Friday, September 27, 2024, 23:59 [IST]
English summary
Best hatchbacks in india 5 seater low price alto kwid tiago i20 swift wagonr baleno
Read more on auto news india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+