7 ಲಕ್ಷಕ್ಕಿಂತ ಕಮ್ಮಿ ದುಡ್ಡು ಇದ್ಯಾ.. ಹಾಗಾದ್ರೆ ಈ ಹೊಸ ಕಾರುಗಳು ತೆಗೆದುಕೊಳ್ಳಬಹುದು, ಬೈಕ್‌ನಂತೆ ಮೈಲೇಜ್!

ಪ್ರತಿಯೊಬ್ಬರಿಗೂ ಜೀವನದಲ್ಲಿ ಹೊಸ ಕಾರು ಖರೀದಿಸಬೇಕೆಂಬ ಆಸೆಯಿರುತ್ತದೆ. ಆದಾಗ್ಯೂ ತಮ್ಮ ಪುಟ್ಟ ಕುಟುಂಬಕ್ಕಾಗಿ ಹ್ಯಾಚ್‌ಬ್ಯಾಕ್, ಎಸ್‌ಯುವಿ ಅಥವಾ ಎಂಪಿವಿಗಳಲ್ಲಿ ಯಾವುದನ್ನು ತೆಗೆದುಕೊಂಡರೆ ಹೆಚ್ಚು ಉತ್ತಮ ಎಂಬ ಗೊಂದಲವಿರುತ್ತದೆ. ನಾವಿಲ್ಲಿ ರೂ.7 ಲಕ್ಷಕ್ಕಿಂತ ಕಡಿಮೆ ಬೆಲೆಯಲ್ಲಿ ಖರೀದಿಗೆ ಲಭ್ಯವಿರುವ ಜನಪ್ರಿಯ ಮಾರುತಿ ಸುಜುಕಿ ಆಲ್ಟೊ ಕೆ10, ರೆನಾಲ್ಟ್ ಕ್ವಿಡ್, ಟಾಟಾ ಟಿಯಾಗೊ ಹಾಗೂ ಹ್ಯುಂಡೈ ಗ್ರಾಂಡ್ ಐ10 ನಿಯೋಸ್ ಹ್ಯಾಚ್‌ಬ್ಯಾಕ್‌ಗಳ ಬಗ್ಗೆ ವಿವರಿಸಿದ್ದೇವೆ. ಇವುಗಳು ಸಾಕಷ್ಟು ಅತ್ಯಾಧುನಿಕ ವೈಶಿಷ್ಟ್ಯಗಳೊಂದಿಗೂ ಖರೀದಿಗೆ ಲಭ್ಯವಿವೆ.

ಮಾರುತಿ ಸುಜುಕಿ ಆಲ್ಟೊ ಕೆ10 (Maruti Suzuki Alto K10): ಇದು ಜನಪ್ರಿಯ ಹ್ಯಾಚ್‌ಬ್ಯಾಕ್ ಆಗಿದ್ದು, ರೂ.3.99 ಲಕ್ಷದಿಂದ ರೂ.5.96 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. 1-ಲೀಟರ್ ಪೆಟ್ರೋಲ್ ಹಾಗೂ ಸಿಎನ್‌ಜಿ ಎಂಜಿನ್ ಆಯ್ಕೆಯನ್ನು ಪಡೆದಿದ್ದು, ರೂಪಾಂತರಗಳಿಗೆ ಅನುಗುಣವಾಗಿ 5-ಸ್ವೀಡ್ ಮ್ಯಾನುವಲ್/ 5-ಸ್ವೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 24.39 ರಿಂದ 33.85 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ.

Best Hatchbacks In India Under 7 Lakh Maruti Suzuki Alto K10 Renault Kwid Tata Tiago Hyundai Grand i10 Nios

ಈ ಆಲ್ಟೊ ಕೆ10 ಕಾರಿನಲ್ಲಿ 4 ರಿಂದ 5 ಮಂದಿ ಸಂಚರಿಸಬಹುದು. 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಸೆಮಿ-ಡಿಜಿಟಲ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, ಆಪಲ್ ಕಾರ್ ಪ್ಲೇ, ಆಂಡ್ರಾಯ್ಡ್ ಆಟೋ, ಕೀಲೆಸ್ ಎಂಟ್ರಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆ ಒದಗಿಸಲು ಡುಯಲ್ ಫ್ರಂಟ್ ಏರ್‌ಬ್ಯಾಗ್ ಮತ್ತು ರಿವರ್ಸಿಂಗ್ ಕ್ಯಾಮೆರಾವನ್ನು ಹೊಂದಿದೆ.

ರೆನಾಲ್ಟ್ ಕ್ವಿಡ್ (Renault KWID): ಈ ಕಾರು ರೂ.4.70 ಲಕ್ಷದಿಂದ ರೂ.6.45 ಲಕ್ಷ ಎಕ್ಸ್ ಶೋರೂಂ ದರದಲ್ಲಿ ಖರೀದಿಗೆ ಸಿಗುತ್ತದೆ. 1-ಲೀಟರ್ ಪೆಟ್ರೋಲ್ ಎಂಜಿನ್ ಒಳಗೊಂಡಿದ್ದು, 5-ಸ್ಪೀಡ್ ಮ್ಯಾನುವಲ್/ 5-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಹೊಂದಿದೆ. 21.46 ರಿಂದ 22.3 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಇದರಲ್ಲಿ 5 ಮಂದಿ ಆರಾಮದಾಯಕವಾಗಿ ಪ್ರಯಾಣಿಸಬಹುದು.

Best Hatchbacks In India Under 7 Lakh Maruti Suzuki Alto K10 Renault Kwid Tata Tiago Hyundai Grand i10 Nios

ನೂತನ ರೆನಾಲ್ಟ್ ಕ್ವಿಡ್ ಕಾರು 8-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ, ಕೀ ಲೆಸ್ ಎಂಟ್ರಿ, ಮ್ಯಾನುವಲ್ ಎಸಿ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ. ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆ ಒದಗಿಸಲು ಡುಯಲ್ ಫ್ರಂಟ್ ಏರ್‌ಬ್ಯಾಗ್‌, ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್) ಮತ್ತು ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್) ಅನ್ನು ಹೊಂದಿದೆ.

ಟಾಟಾ ಟಿಯಾಗೊ (Tata Tiago): ಇದು ಸಹ ಪ್ರಮುಖ ಹ್ಯಾಚ್‌ಬ್ಯಾಕ್ ಆಗಿದೆ. ರೂ.5.65 ಲಕ್ಷದಿಂದ ರೂ.8.90 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. 1.2-ಲೀಟರ್ ಪೆಟ್ರೋಲ್ ಹಾಗೂ ಸಿಎನ್‌ಜಿ ಎಂಜಿನ್ ಪಡೆದಿದ್ದು, 5-ಸ್ಪೀಡ್ ಮ್ಯಾನುವಲ್ ಹಾಗೂ 5-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್ ಆಯ್ಕೆಯನ್ನು ಒಳಗೊಂಡಿದೆ. 20.01 ರಿಂದ 28.06 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ.

Best Hatchbacks In India Under 7 Lakh Maruti Suzuki Alto K10 Renault Kwid Tata Tiago Hyundai Grand i10 Nios

ಈ ಟಿಯಾಗೊ ಕಾರಿನಲ್ಲಿಯೂ 5 ಮಂದಿ ಓಡಾಟ ನಡೆಸಬಹುದು. ಮಿಡ್ನೈಟ್ ಪ್ಲಮ್, ಡೇಟೋನಾ ಗ್ರೇ, ಓಪಲ್ ವೈಟ್, ಅರಿಜೋನಾ ಬ್ಲೂ, ಟೊರ್ನಾಡೋ ಬ್ಲೂ ಸೇರಿದಂತೆ ವಿವಿಧ ಬಣ್ಣಗಳ ಆಯ್ಕೆಯನ್ನು ಹೊಂದಿದೆ. 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ, ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, 8-ಸ್ಪೀಕರ್ ಸೌಂಡ್ ಸಿಸ್ಟಮ್ ಒಳಗೊಂಡಂತೆ ಹತ್ತಾರು ವೈಶಿಷ್ಟ್ಯಗಳನ್ನು ಪಡೆದಿದೆ.

ಹ್ಯುಂಡೈ ಗ್ರಾಂಡ್ ಐ10 ನಿಯೋಸ್ (Hyundai Grand i10 Nios): ಈ ಕಾರು ರೂ.5.92 ಲಕ್ಷದಿಂದ ರೂ.8.56 ಲಕ್ಷ ಎಕ್ಸ್ ಶೋರೂಂ ದರದಲ್ಲಿ ದೊರೆಯುತ್ತದೆ. 1.2-ಲೀಟರ್ ಪೆಟ್ರೋಲ್ ಸಿಎನ್‌ಜಿ ಎಂಜಿನ್ ಒಳಗೊಂಡಿದ್ದು, 5-ಸ್ಪೀಡ್ ಮ್ಯಾನುವಲ್/ 5-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಹೊಂದಿದೆ. 16 ರಿಂದ 27 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ.

ಹೊಚ್ಚ ಹೊಸ ಹ್ಯುಂಡೈ ಗ್ರಾಂಡ್ ಐ10 ನಿಯೋಸ್ 8-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್, ವೈರ್‌ಲೆಸ್ ಫೋನ್ ಚಾರ್ಜರ್, ಪುಶ್-ಬಟನ್ ಎಂಜಿನ್ ಸ್ಟಾರ್ಟ್/ಸ್ಟಾಪ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಯ ದೃಷ್ಟಿಯಿಂದ 6 ಏರ್‌ಬ್ಯಾಗ್‌, ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಹಿಲ್ ಅಸಿಸ್ಟ್ ಕಂಟ್ರೋಲ್ ಅನ್ನು ಹೊಂದಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Saturday, August 24, 2024, 9:30 [IST]
English summary
Best hatchbacks in india under 7 lakh maruti alto k10 renault kwid tata tiago hyundai grand i10 nios
Read more on auto news india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+