ಕೈಗೆಟುಕುವ ಬೆಲೆಯ ಕುಟುಂಬದ ಕಾರುಗಳಿವು: ಆಕರ್ಷಕ ವೈಶಿಷ್ಟ್ಯ.. ಭರ್ಜರಿ ಮೈಲೇಜ್!
ಭಾರತದಲ್ಲಿ ಮಧ್ಯಮ ವರ್ಗದ ಜನರೇ ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುತ್ತಾರೆ. ಹಲವರಿಗೆ ನೂತನ ಕಾರು ಖರೀದಿಸುವಾಗ ತಮ್ಮ ಕುಟುಂಬಕ್ಕೆ ಯಾವುದು ಉತ್ತಮ ಆಯ್ಕೆಯಾಗಬಹುದು ಎಂಬ ಗೊಂದಲವಿರುತ್ತದೆ. ಇಲ್ಲಿ ಮಾರುತಿ ಸುಜುಕಿ ಹಾಗೂ ಟೊಯೊಟಾ ಕಂಪನಿಗಳ ಜನಪ್ರಿಯ ಎಂಪಿವಿ (ಮಲ್ಟಿ ಪರ್ಪಸ್ ವೆಹಿಕಲ್)ಗಳ ಕುರಿತು ವಿವರಿಸಿದ್ದೇವೆ.
ಮೊದಲಿಗೆ ಟೊಯೊಟಾ ರೂಮಿಯನ್ (Toyota Rumion) ಎಂಪಿವಿ ಬಗ್ಗೆ ಮಾತನಾಡೋಣ. ಇದು ರೂ.10.44 ಲಕ್ಷದಿಂದ ರೂ.13.73 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿಗೆ ದೊರೆಯುತ್ತದೆ. ಎಸ್, ಜಿ, ವಿ ರೂಪಾಂತರ ಮತ್ತು ಹಲವು ಆಕರ್ಷಕ ಬಣ್ಣಗಳ ಆಯ್ಕೆಯಲ್ಲಿ ಸಿಗಲಿದ್ದು, ಗರಿಷ್ಠ ಕಾಯುವಿಕೆ ಅವಧಿಯನ್ನು ಹೊಂದಿದೆ. ವಿನ್ಯಾಸದ ದೃಷ್ಟಿಯಿಂದಲೂ ಅತ್ಯಾಧುನಿಕವಾಗಿದ್ದು, 7 ಜನರು ಪ್ರಯಾಣಿಸಬಹುದು.

ರೂಮಿಯನ್ ಎಂಪಿವಿ ಪೆಟ್ರೋಲ್ ಮತ್ತು ಸಿಎನ್‌ಜಿ ಎಂಜಿನ್ ಆಯ್ಕೆಯಲ್ಲಿ ಸಿಗಲಿದ್ದು, ರೂಪಾಂತರಗಳ ಅನ್ವಯ 5-ಸ್ವೀಡ್ ಮ್ಯಾನುವಲ್/ 6-ಸ್ವೀಡ್ ಆಟೋಮೆಟಿಕ್ ಗೇರ್ ಬಾಕ್ಸ್ ನೊಂದಿಗೆ ಲಭ್ಯವಿದೆ ಮೈಲೇಜ್ ವಿಚಾರಕ್ಕೆ ಬರುವುದಾದರೆ, ಪೆಟ್ರೋಲ್ ಮಾದರಿಗಳು 20.11 ರಿಂದ 20.51 ಕೆಎಂಪಿಎಲ್, ಸಿಎನ್‌ಜಿ ಚಾಲಿತ ಆವೃತ್ತಿ 26.11 ಕೆಜಿ/ಕೆಎಂ ಮೈಲೇಜ್ ನೀಡುತ್ತದೆ.
ಈ ಟೊಯೊಟಾ ರೂಮಿಯನ್ ಕಾರು 7-ಇಂಚಿನ ಟಚ್‌ಸ್ಕ್ರೀನ್ ಸಿಸ್ಟಮ್, ಆಂಡ್ರಾಯ್ಡ್ ಆಟೋ ಮತ್ತು ಆಪಲ್ ಕಾರ್ ಪ್ಲೇ, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಕ್ರೂಸ್ ಕಂಟ್ರೋಲ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಯ ದೃಷ್ಟಿಯಿಂದ 4 ಏರ್‌ಬ್ಯಾಗ್, EBD (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ESC (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್) ಅನ್ನು ಹೊಂದಿದೆ.

ಮಾರುತಿ ಸುಜುಕಿ ಎರ್ಟಿಗಾ (Maruti Suzuki Ertiga) ಕೂಡ ಜನಪ್ರಿಯ ಎಂಪಿವಿಯಾಗಿದ್ದು, ರೂ.8.69 ಲಕ್ಷದಿಂದ ರೂ.13.03 ಲಕ್ಷ ಬೆಲೆಯನ್ನು ಪಡೆದಿದೆ. ಎಲ್ಎಕ್ಸ್ಐ, ವಿಎಕ್ಸ್ಐ ಸೇರಿದಂತೆ ಹಲವು ರೂಪಾಂತರಗಳ ಆಯ್ಕೆಯಲ್ಲಿ ಸಿಗುತ್ತದೆ. ಪರ್ಲ್ ಮೆಟಾಲಿಕ್ ಆಬರ್ನ್ ರೆಡ್, ಮೆಟಾಲಿಕ್ ಮ್ಯಾಗ್ಮಾ ಗ್ರೇ, ಪರ್ಲ್ ಬ್ಲ್ಯಾಕ್, ಪರ್ಲ್ ಆರ್ಕ್ಟಿಕ್ ವೈಟ್, ಡಿಗ್ನಿಟಿ ಬ್ರೌನ್ ಒಳಗೊಂಡಂತೆ ಆಕರ್ಷಕ ಬಣ್ಣಗಳೊಂದಿಗೂ ಲಭ್ಯವಿದೆ.
ಈ ಎರ್ಟಿಗಾ ಕಾರಿನಲ್ಲಿ 7 ಮಂದಿ ಆರಾಮದಾಯಕವಾಗಿ ಕುಳಿತುಕೊಂಡು ಪ್ರಯಾಣಿಸಬಹುದು. ಇದು ಪೆಟ್ರೋಲ್ ಹಾಗೂ ಸಿಎನ್‌ಜಿ ಎಂಜಿನ್ ಹೊಂದಿದ್ದು, ವಿವಿಧ ರೂಪಾಂತರಗಳಿಗೆ ತಕ್ಕಂತೆ 5-ಸ್ವೀಡ್ ಮ್ಯಾನುವಲ್ ಅಥವಾ 6-ಸ್ವೀಡ್ ಆಟೋಮೆಟಿಕ್ ಗೇರ್ ಬಾಕ್ಸ್ ಆಯ್ಕೆಯಲ್ಲಿ ಸಿಗುತ್ತದೆ. ಪೆಟ್ರೋಲ್ ರೂಪಾಂತರಗಳು 20.3 ರಿಂದ 20.51 ಕೆಎಂಪಿಎಲ್, ಸಿಎನ್‌ಜಿ ಮಾದರಿ 26.11 ಕೆಎಂ/ಕೆಜಿ ಮೈಲೇಜ್ ಕೊಡುತ್ತದೆ.

ಮಾರುತಿ ಸುಜುಕಿ ಎರ್ಟಿಗಾ ಎಂಪಿವಿ 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ, ಪ್ಯಾಡಲ್ ಶಿಫ್ಟರ್, ಕ್ರೂಸ್ ಕಂಟ್ರೋಲ್, ಆಟೋ ಹೆಡ್‌ಲೈಟ್, ಆಟೋ ಎಸಿ ಸೇರಿದಂತೆ ವಿವಿಧ ವೈಶಿಷ್ಟ್ರ್ಯಗಳನ್ನು ಹೊಂದಿದೆ. ಸುರಕ್ಷತೆಗಾಗಿ ಡುಯಲ್ ಏರ್ ಬ್ಯಾಗ್, EBD (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ರೇರ್ ಪಾರ್ಕಿಂಗ್ ಸೇನಾರ್ ಅನ್ನು ಒಳಗೊಂಡಿದೆ.
ಮಾರುತಿ ಸುಜುಕಿ ಎಕ್ಸ್ಎಲ್6 (Maruti Suzuki XL6) ಎಂಪಿವಿ ರೂ.11.61 ಲಕ್ಷದಿಂದ ರೂ.14.77 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ದೊರೆಯುತ್ತದೆ. ಈ ಕಾರು ಜಿಟಾ, ಅಲ್ಫಾ ಸೇರಿದಂತೆ ವಿವಿಧ ರೂಪಾಂತರ ಹಾಗೂ ಆಕರ್ಷಕ ಬಣ್ಣಗಳೊಂದಿಗೆ ಸಿಗುತ್ತದೆ. ಪೆಟ್ರೋಲ್ ಹಾಗೂ ಸಿಎನ್‌ಜಿ ಎಂಜಿನ್ ಆಯ್ಕೆಯನ್ನು ಒಳಗೊಂಡಿದ್ದು, ಪೆಟ್ರೋಲ್ ರೂಪಾಂತರಗಳು 20.27 ರಿಂದ 20.97 ಕೆಎಂಪಿಎಲ್, ಸಿಎನ್‌ಜಿ ಮಾದರಿ 26.32 ಕೆಎಂ/ಕೆಜಿ ಮೈಲೇಜ್ ನೀಡುತ್ತದೆ.
ಎಕ್ಸ್ಎಲ್6 ಕಾರು 7-ಇಂಚಿನ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪೇ, ಪ್ಯಾಡಲ್ ಶಿಫ್ಟರ್, ವೆಂಟಿಲೇಟೆಡ್ ಫ್ರಂಟ್ ಸೀಟ್ಸ್, 360 ಡಿಗ್ರಿ ಕ್ಯಾಮೆರಾ, ಕ್ರೂಸ್ ಕಂಟ್ರೋಲ್, ಆಟೋ ಎಸಿ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಯ ಸಲುವಾಗಿ TPMS (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಹಿಲ್ ಹೋಲ್ಡ್ ಅಸಿಸ್ಟ್ ಅನ್ನು ಪಡೆದಿದೆ.


Click it and Unblock the Notifications








