6 ಲಕ್ಷ.. 27 Km ಮೈಲೇಜ್.. ನೀವು ಖರೀದಿಸಬಹುದಾದ ಅತ್ಯುತ್ತಮ ಸೆಡಾನ್‌ಗಳಿವು!

ಹೊಸ ಕಾರು ಖರೀದಿಸಬೇಕು ಎಂಬುದು ಹಲವರ ಬಹುದೊಡ್ಡ ಕನಸಾಗಿರುತ್ತದೆ. ಆದರೆ ಹ್ಯಾಚ್‌ಬ್ಯಾಕ್, ಸೆಡಾನ್, ಎಂಪಿವಿ ಹಾಗೂ ಎಸ್‌ಯುವಿಗಳಲ್ಲಿ ಯಾವುದು ತಮ್ಮ ಕುಟುಂಬಕ್ಕೆ ಹೆಚ್ಚು ಸೂಕ್ತವಾಗಬಲ್ಲವು ಎಂಬ ಗೊಂದಲದಲ್ಲಿ ಇರುತ್ತಾರೆ. ನೀವು ಹೊಸ ಕಾರನ್ನು ತೆಗೆದುಕೊಳ್ಳಲು ಪ್ಲ್ಯಾನ್ ಮಾಡಿದ್ದೀರಾ.. ಹಾಗಾದರೆ ಹ್ಯುಂಡೈ ಔರಾ, ಮಾರುತಿ ಸುಜುಕಿ ಸಿಯಾಜ್ ಹಾಗೂ ಟಾಟಾ ಟಿಯಾಗೊ ಸೆಡಾನ್‌ಗಳು ಉತ್ತಮ ಆಯ್ಕೆಯಾಗಲಿವೆ. ಬನ್ನಿ.. ಈ ಕಾರುಗಳ ವಿಶೇಷತೆ ಕುರಿತಂತೆ ಸಂಕ್ಷಿಪ್ತವಾಗಿ ತಿಳಿಯೋಣ.

ಮೊದಲಿಗೆ ಹ್ಯುಂಡೈ ಔರಾ (Hyundai Aura) ಸೆಡಾನ್ ಬಗ್ಗೆ ಮಾತನಾಡೋಣ. ಇದು ರೂ.6.49 ರಿಂದ ರೂ.9.05 ಲಕ್ಷ (ಎಕ್ಸ್ ಶೋರೂಂ) ಬೆಲೆಯಲ್ಲಿ ಖರೀದಿಗೆ ದೊರೆಯುತ್ತದೆ. 1.2-ಲೀಟರ್ ಪೆಟ್ರೋಲ್ & ಸಿಎನ್‌ಜಿ ಎಂಜಿನ್ ಆಯ್ಕೆಯನ್ನು ಒಳಗೊಂಡಿದ್ದು, 5-ಸ್ಪೀಡ್ ಮ್ಯಾನುವಲ್/ ಆಟೋಮೆಟಿಕ್ ಗೇರ್‌ಬಾಕ್ಸ್‌ ಆಯ್ಕೆಯನ್ನು ಹೊಂದಿದೆ.

Best Sedan In India Hyundai Aura Maruti Suzuki Ciaz Tata Tigor

ಈ ಹ್ಯುಂಡೈ ಔರಾ ಸೆಡಾನ್ 17 ರಿಂದ 28.4 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಇದರಲ್ಲಿ 5 ಮಂದಿ ಸುಲಭವಾಗಿ ಓಡಾಟ ನಡೆಸಬಹುದು. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ (8-ಇಂಚು), ಅನಲಾಗ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಗಾಗಿ 6-ಏರ್‌ಬ್ಯಾಗ್‌ಗಳು ಮತ್ತು ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಅನ್ನು ಪಡೆದಿದೆ.

ಮಾರುತಿ ಸುಜುಕಿ ಸಿಯಾಜ್ (Maruti Suzuki Ciaz) ಕೂಡ ಜನಪ್ರಿಯ ಸೆಡಾನ್ ಆಗಿದೆ. ರೂ.9.40 ರಿಂದ ರೂ.12.29 ಲಕ್ಷ ಎಕ್ಸ್ ಶೋರೂಂ ದರವನ್ನು ಹೊಂದಿದೆ. 1.5-ಲೀಟರ್ ಪೆಟ್ರೋಲ್ ಎಂಜಿನ್‌ನ್ನು ಒಳಗೊಂಡಿದ್ದು, 105 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 138 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. 5-ಸ್ಪೀಡ್ ಮ್ಯಾನುವಲ್/ 4-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ.

Best Sedan In India Hyundai Aura Maruti Suzuki Ciaz Tata Tigor

ನೂತನ ಸಿಯಾಜ್, 20.04 ರಿಂದ 20.65 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ (7-ಇಂಚು), ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಪುಶ್ ಬಟನ್ ಸ್ಟಾರ್ಟ್‌, ಕೀಲೆಸ್ ಎಂಟ್ರಿ, ಕ್ರೂಸ್ ಕಂಟ್ರೋಲ್ ಒಳಗೊಂಡಂತೆ ಹತ್ತಾರು ವೈಶಿಷ್ಟ್ಯಗಳನ್ನು ಪಡೆದಿದೆ. ಪ್ರಯಾಣಿಕರ ರಕ್ಷಣೆಗಾಗಿ ಡುಯಲ್ ಫ್ರಂಟ್ ಏರ್‌ಬ್ಯಾಗ್‌ನ್ನು ಹೊಂದಿದೆ.

ಟಾಟಾ ಟಿಗೂರ್ (Tata Tigor) ಸೆಡಾನ್ ಬಗ್ಗೆ ಹೇಳುವುದಾದರೆ, ಇದು ರೂ.6 ರಿಂದ ರೂ.9.40 ಲಕ್ಷ ಎಕ್ಸ್ ಶೋರೂಂ ದರವನ್ನು ಒಳಗೊಂಡಿದೆ. 1.2-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ & ಸಿಎನ್‌ಜಿ ಎಂಜಿನ್ ಆಯ್ಕೆಯನ್ನು ಹೊಂದಿದೆ. 5-ಸ್ಪೀಡ್ ಮ್ಯಾನುವಲ್ ಮತ್ತು ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಪಡೆದಿದೆ.

Best Sedan In India Hyundai Aura Maruti Suzuki Ciaz Tata Tigor

ಈ ಟಿಗೂರ್ ಕಾರು 19.28 ರಿಂದ 27 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಇದರಲ್ಲಿಯೂ 5 ಜನರು ಓಡಾಟ ನಡೆಸಬಹುದು. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಪುಶ್-ಬಟನ್ ಸ್ಟಾರ್ಟ್/ಸ್ಟಾಪ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಯ ದೃಷ್ಟಿಯಿಂದ ಡುಯಲ್ ಫ್ರಂಟ್ ಏರ್‌ಬ್ಯಾಗ್‌ಗಳು ಹಾಗೂ ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್) ಅನ್ನು ಒಳಗೊಂಡಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Wednesday, October 30, 2024, 21:32 [IST]
English summary
Best sedan in india hyundai aura maruti suzuki ciaz tata tigor low price good mileage
Read more on auto news india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+