Best SUVs: ಭಾರೀ ಮೈಲೇಜ್.. ರೂ.6 ಲಕ್ಷ ಆರಂಭಿಕ ಬೆಲೆಗೆ ಸಿಗುವ ಜನಪ್ರಿಯ ಕಂಪನಿಯ ಎಸ್‌ಯುವಿಗಳು, ಭರ್ಜರಿ ವೈಶಿಷ್ಟ್ಯಗಳು

ಪ್ರತಿಯೊಬ್ಬರಿಗೂ ಜೀವನದಲ್ಲಿ ಹೊಸ ಕಾರು ಖರೀದಿಸಬೇಕೆಂಬುದು ದೊಡ್ಡ ಆಸೆಯಾಗಿರುತ್ತದೆ. ಯಾವ ಕಾರು ಕೈಗೆಟುಕುವ ಬೆಲೆಯಲ್ಲಿ ಲಭ್ಯವಿದೆ, ಮೈಲೇಜ್ ಎಷ್ಟು, ಭರ್ಜರಿ ವೈಶಿಷ್ಟ್ಯಗಳನ್ನು ಹೊಂದಿದೆಯೇ ಎಂಬ ಹಲವು ಗೊಂದಲವಿರುತ್ತದೆ. ಇಲ್ಲಿ ರೂ.6 ಲಕ್ಷ ಆರಂಭಿಕ ಬೆಲೆಯಲ್ಲಿ ಕೊಂಡುಕೊಳ್ಳಬಹುದಾದ ಪ್ರಮುಖ ಕಂಪನಿಗಳ ಎಸ್‌ಯುವಿ (SUVs)ಗಳ ಬಗ್ಗೆ ತಿಳಿಸಿಕೊಟ್ಟಿದ್ದೇವೆ.

ಮೊದಲಿಗೆ ಟಾಟಾ ಪಂಚ್ (Tata Punch) ಕಾರಿನ ಬಗ್ಗೆ ಮಾತನಾಡೋಣ. ಇದು ರೂ.6.13 ಲಕ್ಷದಿಂದ ರೂ.10.20 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ದೊರೆಯುತ್ತದೆ. ಪ್ಯೂರ್, ಅಡ್ವೆಂಚರ್ ಸೇರಿದಂತೆ 4 ಆಕರ್ಷಕ ರೂಪಾಂತರ, ಟೊರ್ನಾಡೊ ಬ್ಲೂ, ಕ್ಯಾಲಿಪ್ಸೊ ರೆಡ್, ಅಟಾಮಿಕ್ ಆರೆಂಜ್, ಟ್ರಾಪಿಕಲ್ ಮಿಸ್ಟ್, ಡೇಟೋನಾ ಗ್ರೇ, ಆರ್ಕಸ್ ವೈಟ್ ಒಳಗೊಂಡಂತೆ 7 ಬಣ್ಣಗಳೊಂದಿಗೆ ಲಭ್ಯವಿದೆ.

Best SUVs In India: 6 Lakh Starting Price, Good Mileage Tata Punch, Hyundai Exter, Renault Kiger

ಈ ಟಾಟಾ ಪಂಚ್ ಕಾರು, 1.2-ಲೀಟರ್ ಪೆಟ್ರೋಲ್ ಮತ್ತು ಸಿಎನ್‌ಜಿ ಎಂಜಿನ್ ಆಯ್ಕೆಯನ್ನು ಹೊಂದಿದ್ದು, ರೂಪಾಂತರಗಳಿಗೆ ಅನುಗುಣವಾಗಿ 5-ಸ್ವೀಡ್ ಮ್ಯಾನುವಲ್ ಮತ್ತು ಆಟೋಮೆಟಿಕ್ ಗೇರ್ ಬಾಕ್ಸ್ ನೊಂದಿಗೆ ಸಿಗುತ್ತದೆ. ಪೆಟ್ರೋಲ್ ರೂಪಾಂತರಗಳು 18.8 ಕೆಎಂಪಿಎಲ್ - 20.09 ಕೆಎಂಪಿಎಲ್, ಸಿಎನ್‌ಜಿ ರೂಪಾಂತರ 26.99 ಕೆಎಂ/ಕೆಜಿ ಮೈಲೇಜ್ ನೀಡುತ್ತದೆ.

ಟಾಟಾ ಪಂಚ್, 7-ಇಂಚಿನ ಟಚ್‌ಸ್ಕ್ರೀನ್ ಡಿಸ್ಪ್ಲೇ, 7-ಇಂಚಿನ ಸೆಮಿ-ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಆಟೋ ಎಸಿ, ಕ್ರೂಸ್ ಕಂಟ್ರೋಲ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಗಾಗಿ ಡುಯಲ್ ಏರ್‌ಬ್ಯಾಗ್, EBD (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), TPMS (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ರೇರ್ ಡಿಫಾಗರ್ಸ್, ರೇರ್ ಪಾರ್ಕಿಂಗ್ ಸೇನಾರ್ಸ್, ರೇರ್ ವ್ಯೂ ಕ್ಯಾಮೆರಾವನ್ನು ಪಡೆದಿದೆ.

Best SUVs In India: 6 Lakh Starting Price, Good Mileage Tata Punch, Hyundai Exter, Renault Kiger

ಹ್ಯುಂಡೈ ಎಕ್ಸ್‌ಟರ್‌ (Hyundai Exter) ಎಸ್‌ಯುವಿ, ರೂ.6.13 ಲಕ್ಷದಿಂದ ರೂ.10.28 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಗ್ರಾಹಕರಿಗೆ ದೊರೆಯುತ್ತದೆ. ಇಎಕ್ಸ್, ಎಸ್, ಎಸ್ಎಕ್ಸ್, ಎಸ್ಎಕ್ಸ್ (ಒ) ಒಳಗೊಂಡಂತೆ 5 ರೂಪಾಂತರಗಳು (Variants) ಮತ್ತು ರೇಂಜರ್ ಖಾಕಿ, ಸ್ಟಾರಿ ನೈಟ್ ಸೇರಿದಂತೆ 2-ಡುಯಲ್ ಟೋನ್, 5-ಮೊನೊಟೋನ್ ಬಣ್ಣಗಳೊಂದಿಗೆ ಸಿಗುತ್ತದೆ.

ಈ ಎಕ್ಸ್‌ಟರ್‌ ಎಸ್‌ಯುವಿ 1.2-ಲೀಟರ್ ಪೆಟ್ರೋಲ್ ಮತ್ತು ಸಿಎನ್‌ಜಿ ಎಂಜಿನ್ ಆಯ್ಕೆಯನ್ನು ಪಡೆದಿದ್ದು, 5-ಸ್ವೀಡ್ ಮ್ಯಾನುವಲ್, 5-ಸ್ವೀಡ್ ಆಟೋಮೆಟಿಕ್ ಗೇರ್ ಬಾಕ್ಸ್ ನೊಂದಿಗೆ ದೊರೆಯುತ್ತದೆ. ಜೊತೆಗೆ 2WD (ಟೂ ವೀಲ್ ಡ್ರೈವ್) ತಂತ್ರಜ್ಞಾನವನ್ನು ಹೊಂದಿದೆ. ಪೆಟ್ರೋಲ್ ರೂಪಾಂತರಗಳು 19.2 ಕೆಎಂಪಿಎಲ್ ರಿಂದ 19.4 ಕೆಎಂಪಿಎಲ್ ಸಿಎನ್‌ಜಿ ರೂಪಾಂತರಗಳು 27.1 ಕೆಎಂ/ಕೆಜಿ ಮೈಲೇಜ್ ಕೊಡುತ್ತವೆ.

Best SUVs In India: 6 Lakh Starting Price, Good Mileage Tata Punch, Hyundai Exter, Renault Kiger

ಹ್ಯುಂಡೈ ಎಕ್ಸ್‌ಟರ್‌ ಕಾರು, 8-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಸೆಮಿ-ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಕ್ರೂಸ್ ಕಂಟ್ರೋಲ್, ವೈರ್‌ಲೆಸ್ ಫೋನ್ ಚಾರ್ಜಿಂಗ್, ಆಟೋ ಎಸಿ, ಸಿಂಗಲ್-ಪೇನ್ ಸನ್‌ರೂಫ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಗಾಗಿ 6 ಏರ್‌ಬ್ಯಾಗ್‌, EBD (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್) ಅನ್ನು ಪಡೆದಿದೆ.

ರೆನಾಲ್ಟ್ ಕಿಗರ್ (Renault Kiger) ಕಾರು, ರೂ.6 ಲಕ್ಷದಿಂದ ರೂ.11.23 ಲಕ್ಷ ಎಕ್ಸ್ ಶೋರೂಂ ದರದಲ್ಲಿ ಸಿಗುತ್ತದೆ. 1-ಲೀಟರ್ ನ್ಯಾಚುರಲ್ ಆಸ್ಪಿರೇಟೆಡ್ ಪೆಟ್ರೋಲ್ ಹಾಗೂ 1-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ ಹೊಂದಿದ್ದು, 5-ಸ್ವೀಡ್ ಮ್ಯಾನುವಲ್, 5-ಸ್ವೀಡ್ ಆಟೋಮೆಟಿಕ್ ಹಾಗೂ ಸಿವಿಟಿ ಗೇರ್ ಬಾಕ್ಸ್ ಆಯ್ಕೆಯಲ್ಲಿ ಲಭ್ಯವಿದೆ. 8-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Thursday, February 15, 2024, 18:29 [IST]
English summary
Best suvs in india 6 lakh starting price good mileage tata punch hyundai exter renault kiger
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+