ಹೊಸ ಕಾರು ತೆಗೆದುಕೊಳ್ಳಬೇಕೇ.. ರೂ.8 ಲಕ್ಷಕ್ಕಿಂತ ಕಡಿಮೆ ಬೆಲೆಗೆ ಈ ಎಸ್‌ಯುವಿಗಳು ಸಿಗುತ್ತವೆ, ಸೂಪರ್ ಮೈಲೇಜ್!
ಭಾರತದಲ್ಲಿ ಮಧ್ಯಮ ವರ್ಗದ ಜನರು ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುತ್ತಿದ್ದು, ಹೊಸ ಕಾರು ಖರೀದಿಸಬೇಕೆಂಬುದು ಹಲವರ ಕನಸು. ಆದರೂ ಬಹುತೇಕರ ಬಳಿ ನೂತನ ಕಾರು ಖರೀದಿಸುವಷ್ಟು ಹಣವಿರುವುದಿಲ್ಲ. ಜೊತೆಗೆ ಹ್ಯಾಚ್‌ಬ್ಯಾಕ್ ಅಥವಾ ಎಸ್‌ಯುವಿಗಳಲ್ಲಿ ಯಾವುದನ್ನು ಕೊಂಡುಕೊಳ್ಳಬೇಕು ಎಂಬ ಬಗ್ಗೆಯೂ ಗೊಂದಲದಲ್ಲಿರುತ್ತಾರೆ. ನಿಮ್ಮ ಹತ್ತಿರ ರೂ.8 ಲಕ್ಷಕ್ಕಿಂತ ಕಡಿಮೆ ಹಣವಿದ್ದರೂ ಈ ಜನಪ್ರಿಯ ಟಾಟಾ ಪಂಚ್, ಮಾರುತಿ ಸುಜುಕಿ ಫ್ರಾಂಕ್ಸ್, ಹ್ಯುಂಡೈ ಎಕ್ಸ್‌ಟರ್, ನಿಸ್ಸಾನ್ ಮ್ಯಾಗ್ನೈಟ್, ಕಿಯಾ ಸೋನೆಟ್, ಮಹೀಂದ್ರಾ ಎಕ್ಸ್‌ಯುವಿ 3ಎಕ್ಸ್ಒ, ನಿಸ್ಸಾನ್ ಮ್ಯಾಗ್ನೈಟ್, ಕಿಯಾ ಸೋನೆಟ್ ಹಾಗೂ ರೆನಾಲ್ಟ್ ಕಿಗರ್ ಎಸ್‌ಯುವಿಗಳನ್ನು ಮನೆಗೆ ತರಬಹುದು. ಈ ಕಾರುಗಳಲ್ಲಿ 5 ಮಂದಿಯೂ ಆರಾಮದಾಯಕವಾಗಿ ಪ್ರಯಾಣಿಸಬಹುದು.
ಟಾಟಾ ಪಂಚ್ (Tata Punch): ಇದು ಪ್ರಮುಖ ಎಸ್‌ಯುವಿಯಾಗಿದ್ದು, ರೂ.6.13 ಲಕ್ಷದಿಂದ ರೂ.10.20 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿಗೆ ದೊರೆಯುತ್ತದೆ. 1.2-ಲೀಟರ್, 3-ಸಿಲಿಂಡರ್ ಪೆಟ್ರೋಲ್ ಹಾಗೂ ಸಿಎನ್‌ಜಿ ಪಡೆದಿದ್ದು, 17.08 ರಿಂದ 26.99 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. 7-ಇಂಚಿನ ಟಚ್ ಸ್ಕ್ರೀನ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಮಾರುತಿ ಸುಜುಕಿ ಫ್ರಾಂಕ್ಸ್ (Maruti Suzuki Fronx): ಈ ಎಸ್‌ಯುವಿ ರೂ.7.51 ಲಕ್ಷದಿಂದ ರೂ.13.04 ಲಕ್ಷ (ಎಕ್ಸ್ ಶೋರೂಂ) ದರವನ್ನು ಹೊಂದಿದೆ. ಪೆಟ್ರೋಲ್ ಮತ್ತು ಸಿಎನ್‌ಜಿ ಆಯ್ಕೆಯನ್ನು ಪಡೆದಿದ್ದು, 20.1 ರಿಂದ 28.51 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. 9-ಇಂಚಿನ ಇನ್ಫೋಟೈನ್‌ಮೆಂಟ್ ಸಿಸ್ಟಮ್, ವೈರ್‌ಲೆಸ್ ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ ಒಳಗೊಂಡಂತೆ ಹಲವು ವೈಶಿಷ್ಟ್ಯಗಳಿವೆ.
ಹ್ಯುಂಡೈ ಎಕ್ಸ್‌ಟರ್ (Hyundai Exter): ಇದೊಂದು ಜನಪ್ರಿಯ ಮೈಕ್ರೋ ಎಸ್‌ಯುವಿ ಆಗಿದೆ. ರೂ.6.13 ಲಕ್ಷದಿಂದ ರೂ.10.43 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಪಡೆದಿದೆ. ಪೆಟ್ರೋಲ್ ಹಾಗೂ ಸಿಎನ್‌ಜಿ ಎಂಜಿನ್‌ನ್ನು ಒಳಗೊಂಡಿದ್ದು, 19.2 ರಿಂದ 27.1 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. 8-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ವೈರ್‌ಲೆಸ್ ಫೋನ್ ಚಾರ್ಜಿಂಗ್ ಮತ್ತು 6 ಏರ್‌ಬ್ಯಾಗ್‌ನಂತಹ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ.

ಮಹೀಂದ್ರಾ ಎಕ್ಸ್‌ಯುವಿ 3ಎಕ್ಸ್ಒ (Mahindra XUV 3XO): ಇದು ರೂ.7.49 ಲಕ್ಷದಿಂದ ರೂ.15.49 ಲಕ್ಷ (ಎಕ್ಸ್ ಶೋರೂಂ) ದರದಲ್ಲಿ ಲಭ್ಯವಿದೆ. 1.2-ಲೀಟರ್ ಪೆಟ್ರೋಲ್, 1.2-ಲೀಟರ್ ಟಿಜಿಡಿಐ ಟರ್ಬೊ ಪೆಟ್ರೋಲ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್‌ನ್ನು ಪಡೆದಿದೆ. 17.96 ರಿಂದ 21.2 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಇನ್ಫೋಟೈನ್‌ಮೆಂಟ್ ಸಿಸ್ಟಮ್ & ಇನ್ಸ್ಟ್ರುಮೆಂಟ್ ಕ್ಲಸ್ಟರ್‌ಗಾಗಿ 10.25-ಇಂಚಿನ ಡುಯಲ್ ಡಿಸ್ಪ್ಲೇಗಳು ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.
ನಿಸ್ಸಾನ್ ಮ್ಯಾಗ್ನೈಟ್ (Nissan Magnite): ಈ ಎಸ್‌ಯುವಿ ರೂ.6 ಲಕ್ಷದಿಂದ ರೂ.11.27 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. 1-ಲೀಟರ್ ನ್ಯಾಚುರಲ್ ಆಸ್ಪಿರೇಟೆಡ್ ಪೆಟ್ರೋಲ್ ಮತ್ತು 1-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಪಡೆದಿದೆ. 17.40 ರಿಂದ 19.70 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. 8-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡುಯಲ್ ಫ್ರಂಟ್ ಏರ್‌ಬ್ಯಾಗ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ.

ಕಿಯಾ ಸೋನೆಟ್ (Kia Sonet): ಇದು ಸಹ ಜನಪ್ರಿಯ ಎಸ್‌ಯುವಿಯಾಗಿದ್ದು, ರೂ.8 ಲಕ್ಷದಿಂದ ರೂ.15.77 ಲಕ್ಷ ಎಕ್ಸ್ ಶೋರೂಂ ದರದಲ್ಲಿ ಗ್ರಾಹಕರಿಗೆ ಸಿಗುತ್ತದೆ. ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್‌ನ್ನು ಒಳಗೊಂಡಿದೆ. 18.6 ರಿಂದ 22.3 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳಿವೆ.
ರೆನಾಲ್ಟ್ ಕಿಗರ್ (Renault Kiger): ಈ ಎಸ್‌ಯುವಿ ರೂ.6 ಲಕ್ಷದಿಂದ ರೂ.11.23 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. 1-ಲೀಟರ್ ನ್ಯಾಚುರಲ್ ಆಸ್ಪಿರೇಟೆಡ್ ಮತ್ತು 1-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ ಪಡೆದಿದೆ. 18.24 - 20.5 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. 8-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 7-ಇಂಚಿನ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇನಂತಹ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications