ಕಾತುರ ಹೆಚ್ಚಾಯ್ತು.. ಒಂದೇ ಸೂರಿನಡಿ ಎಲ್ಲ ವಾಹನಗಳನ್ನು ನೋಡಬಹುದು, ಈ ದಿನಾಂಕ ನೆನಪಿನಲ್ಲಿಡಿ!

ವಾಹನ ಪ್ರಿಯರಿಗಾಗಿ ಈ ವರ್ಷದ ಪ್ರಾರಂಭದಲ್ಲಿ ಅದ್ದೂರಿಯಾಗಿ ಆಯೋಜಿಸಿದ್ದ ಮೊದಲ ಆವೃತ್ತಿಯ ಭಾರತ್ ಮೊಬಿಲಿಟಿ ಎಕ್ಸ್‌ಪೋಗೆ ನಿರೀಕ್ಷೆಗೂ ಮೀರಿದ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಸದ್ಯ, ಈ ವಾಹನ ಪ್ರದರ್ಶನವನ್ನು ದೊಡ್ಡ ಪ್ರಮಾಣದಲ್ಲಿ ಏರ್ಪಡಿಸಲು ತೀರ್ಮಾನಿಸಲಾಗಿದ್ದು, 2025ರ ಜನವರಿಯಲ್ಲಿ ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್‌ಪೋ (Bharat Mobility Global Expo) ಆಯೋಜಿಸಲಾಗಿದೆ. ಇದರಡಿ 'ಆಟೋ ಎಕ್ಸ್‌ಪೋ' ಒಳಗೊಂಡಂತೆ ವಿವಿಧ ಪ್ರದರ್ಶನಗಳು ಕೂಡ ಜರುಗಲಿವೆ.

ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್‌ಪೋ - 2025 ವಾಹನ ಪ್ರದರ್ಶನವನ್ನು ಜನವರಿ 17 ರಿಂದ 22 ರವರೆಗೆ ನವದೆಹಲಿಯ ಭಾರತ ಮಂಟಪದಲ್ಲಿ ಅದ್ದೂರಿಯಾಗಿ ಏರ್ಪಡಿಸಲಾಗಿದೆ. ಸೊಸೈಟಿ ಆಫ್ ಇಂಡಿಯನ್ ಆಟೋಮೊಬೈಲ್ ಮ್ಯಾನುಫ್ಯಾಕ್ಚರರ್ಸ್ (SIAM) ಈ ವಾಹನ ಪ್ರದರ್ಶನದ ಸಂಪೂರ್ಣವಾದ ಜವಾಬ್ದಾರಿಯನ್ನು ಹೊತ್ತಿದೆ.

Bharat Mobility Global Expo - 2025 Date And Venue Details

ಈ ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್‌ಪೋದಲ್ಲಿ ಬೈಕ್, ಸ್ಕೂಟರ್, ಕಾರು ಮತ್ತು ಬಸ್ ತಯಾರಕರು ಸೇರಿದಂತೆ ಸರಿ ಸುಮಾರು 35 ಕಂಪನಿಗಳು ಭಾಗವಹಿಸಲಿವೆ ಎಂಬುದು ಬಹುತೇಕ ದೃಢಪಟ್ಟಿದೆ. ಇದು ದೇಶದ ವಾಹನೋದ್ಯಮದ ವ್ಯಾಪಕ ಬೆಳವಣಿಗೆ ಹೇಳಿ ಮಾಡಿಸಿದ ವೇದಿಕೆಯಾಗಲಿದೆ ಎಂದು ಬಣ್ಣಿಸಲಾಗುತ್ತಿದೆ.

ವಿಶೇಷವಾಗಿ ಟಾಟಾ ಮೋಟಾರ್ಸ್, ಮಾರುತಿ ಸುಜುಕಿ, ಮಹೀಂದ್ರಾ, ಟೊಯೊಟಾ ಕಿರ್ಲೋಸ್ಕರ್ ಮೋಟಾರ್, ಹ್ಯುಂಡೈ ಮೋಟಾರ್ ಇಂಡಿಯಾ ಹಾಗೂ ಕಿಯಾ ಮೋಟಾರ್ಸ್ ಒಳಗೊಂಡಂತೆ ಪ್ರಮುಖ ವಾಹನ ತಯಾರಕ ಕಂಪನಿಗಳು ಈ ಎಕ್ಸ್‌ಪೋದಲ್ಲಿ ಪಾಲ್ಗೊಳ್ಳುತ್ತಿರುವುದು ಖಚಿತವಾಗಿದೆ. ಈ ಕಂಪನಿಗಳು ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಹೊಂದಿರುವ ಹೊಸ ಕಾರುಗಳನ್ನು ಪ್ರದರ್ಶಿಸುವ ನಿರೀಕ್ಷೆಯಿದೆ.

ಈ ಆದ್ದೂರಿ ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್‌ಪೋದಲ್ಲಿ ಪ್ರಮುಖ ವಿದೇಶಿ ತಯಾರಕರಾದ ಬಿಎಂಡಬ್ಲ್ಯೂ, ಮರ್ಸಿಡಿಸ್, ಸ್ಕೋಡಾ ಹಾಗೂ ಪೋರ್ಷೆ ಕಂಪನಿಗಳು ಕೂಡ ಭಾಗವಹಿಸಲಿವೆ. ಜೊತೆಗೆ ಎಲೆಕ್ಟ್ರಿಕ್ ವಾಹನ ತಯಾರಕ ಕಂಪನಿಗಳಾದ ಎಥರ್ ಎನರ್ಜಿ, ಓಲಾ ಎಲೆಕ್ಟ್ರಿಕ್ ಹಾಗೂ ವಿನ್‌ಫಾಸ್ಟ್‌ ಸಹ ಪಾಲ್ಗೊಳ್ಳಲಿವೆ.

ಒಟ್ಟಾರೆ, ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್‌ಪೋದಲ್ಲಿ ಅತ್ಯಾಧುನಿಕವಾಗಿರುವ ವಿವಿಧ ಬೈಕ್, ಸ್ಕೂಟರ್ ಹಾಗೂ ಕಾರುಗಳು ಪ್ರದರ್ಶನಗೊಳ್ಳುವ ಸಾಧ್ಯತೆಯಿದೆ. ವಾಹನ ಪ್ರಿಯರು ಸಾಕಷ್ಟು ನಿರೀಕ್ಷೆಗಳನ್ನು ಇಟ್ಟುಕೊಂಡಿದ್ದು, ಈ ಎಕ್ಸ್‌ಪೋ ಖಂಡಿತವಾಗಿಯೂ ಉತ್ತಮ ಯಶಸ್ಸು ಕಾಣುವುದರಲ್ಲಿ ಎರಡು ಮಾತಿಲ್ಲ. ನಮ್ಮ ತಂಡದ ಪ್ರತಿನಿಧಿಗಳು ಎಕ್ಸ್‌ಪೋದಲ್ಲಿ ಭಾಗವಹಿಸಲಿದ್ದು, ಕ್ಷಣಕ್ಷಣದ ಮಾಹಿತಿಯನ್ನು ಒದಗಿಸಲಿದ್ದೇವೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Thursday, December 12, 2024, 23:48 [IST]
English summary
Bharat mobility global expo 2025 date and venue details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+