ದೇಶದಲ್ಲಿ ಸಿಗುವ ಅತ್ಯಂತ ಸುರಕ್ಷಿತ ಕಾರುಗಳಿವು.. ನೆಮ್ಮದಿಯಿಂದ ಪ್ರಯಾಣಿಸಬಹುದು!

ಇತ್ತೀಚಿನ ದಿನಗಳಲ್ಲಿ ಹೊಸ ಕಾರು ಖರೀದಿಸುವವರೂ ಸುರಕ್ಷತೆಗೆ ಹೆಚ್ಚು ಆದ್ಯತೆ ನೀಡುತ್ತಾರೆ. ದೇಶೀಯ ಮಾರುಕಟ್ಟೆಯಲ್ಲಿ ಖರೀದಿಗೆ ದೊರೆಯುವ ಕಾರುಗಳ ಗುಣಮಟ್ಟವನ್ನು ಪರೀಕ್ಷಿಸಲು, 2023ರ ಡಿಸೆಂಬರ್ 15ರಂದು 'ಭಾರತ್ ನ್ಯೂ ಕಾರ್ ಅಸೆಸ್ಮೆಂಟ್ ಪ್ರೋಗ್ರಾಂ' (ಭಾರತ್ ಎನ್‌ಸಿಎಪಿ - Bharat NCAP) ಜಾರಿಗೆ ಬಂದಿತ್ತು. ಈಗಾಗಲೇ, ವಿವಿಧ ಕಾರುಗಳನ್ನು ತಪಾಸಣೆ ನಡೆಸಿ, ಸ್ಟಾರ್ ರೇಟಿಂಗ್ ಕೂಡ ನೀಡಿದೆ. ಬನ್ನಿ.. ಭಾರತ್ ಎನ್‌ಸಿಎಪಿ ಪರೀಕ್ಷಿಸಿದ ಕಾರುಗಳು ಯಾವುವು.. ಅವುಗಳಲ್ಲಿ ಯಾವೆಲ್ಲ ರಕ್ಷಣಾತ್ಮಕ ವೈಶಿಷ್ಟ್ಯಗಳಿವೆ ಎಂಬುದರ ಕುರಿತಂತೆ ಸಂಕ್ಷಿಪ್ತವಾಗಿ ತಿಳಿಯೋಣ.

ಭಾರತ್ ಎನ್‌ಸಿಎಪಿ ಪರೀಕ್ಷೆಗೆ ಮೊದಲ ಬಾರಿಗೆ ಟಾಟಾ ಹ್ಯಾರಿಯರ್ (Tata Harrier) ಹಾಗೂ ಸಫಾರಿ (Safari) ಎಸ್‌ಯುವಿಗಳನ್ನು ಒಳಪಡಿಸಲಾಗಿತ್ತು. ಇವೆರೆಡು ಕಾರುಗಳು ವಯಸ್ಕರ ರಕ್ಷಣೆ ವಿಭಾಗದಲ್ಲಿ 32ಕ್ಕೆ 30.08 ಮತ್ತು ಮಕ್ಕಳ ರಕ್ಷಣೆ ವಿಭಾಗದಲ್ಲಿ 49ಕ್ಕೆ 44.54 ಅಂಕಗಳನ್ನು ಪಡೆದಿವೆ. ಈ ಮೂಲಕ 5-ಸ್ಟಾರ್ ಸೇಫ್ಟಿ ರೇಟಿಂಗ್‌ನ್ನು ಗಳಿಸಿವೆ.

Bharat Ncap Safest Cars In India Tata Safari Harrier Nexon Ev Punch Ev And Citroen Basalt

ಟಾಟಾ ಹ್ಯಾರಿಯರ್ ಸಫಾರಿ ಎಸ್‌ಯುವಿಗಳು, 7-ಏರ್‌ಬ್ಯಾಗ್‌, ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್‌), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಹಿಲ್ ಅಸಿಸ್ಟ್ ಮತ್ತು 360-ಡಿಗ್ರಿ ಕ್ಯಾಮೆರಾ ಸೇರಿದಂತೆ ವಿವಿಧ ಸುರಕ್ಷತಾ ವೈಶಿಷ್ಟ್ಯಗಳನ್ನು ಒಳಗೊಂಡಿವೆ. ಹ್ಯಾರಿಯರ್ ರೂ.14.99 ರಿಂದ ರೂ.25.89 ಲಕ್ಷ ಹಾಗೂ ರೂ.15.49 ರಿಂದ ರೂ.26.89 ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ.

ಭಾರತ್ ಎನ್‌ಸಿಎಪಿ ಪರೀಕ್ಷೆಯಲ್ಲಿ ಟಾಟಾ ಪಂಚ್ ಇವಿ (Tata Punch EV) ಕೂಡ 5-ಸ್ಟಾರ್ ರೇಟಿಂಗ್ ಗಳಿಸಿದೆ. ವಯಸ್ಕರ ರಕ್ಷಣೆ ವಿಭಾಗದಲ್ಲಿ 32ಕ್ಕೆ 31.46 ಹಾಗೂ ಮಕ್ಕಳ ರಕ್ಷಣೆ ವಿಭಾಗದಲ್ಲಿ 49ಕ್ಕೆ 45 ಅಂಕಗಳನ್ನು ಪಡೆದಿದೆ. ಪ್ರಯಾಣಿಕರ ರಕ್ಷಣೆಗಾಗಿ 6-ಏರ್‌ಬ್ಯಾಗ್‌ನ್ನು ಒಳಗೊಂಡಿದೆ. ಈ ಕಾರು, ರೂ.9.99 ರಿಂದ ರೂ.14.29 ಲಕ್ಷ ಎಕ್ಸ್ ಶೋರೂಂ ದರದಲ್ಲಿ ಲಭ್ಯವಿದೆ.

Bharat Ncap Safest Cars In India Tata Safari Harrier Nexon Ev Punch Ev And Citroen Basalt

ಟಾಟಾ ನೆಕ್ಸಾನ್ ಇವಿ (Tata Nexon EV) ಜನಪ್ರಿಯ ಎಲೆಕ್ಟ್ರಿಕ್ ಎಸ್‌ಯುವಿಯಾಗಿದ್ದು, ಸುರಕ್ಷತೆಗಾಗಿ 5-ಸ್ಟಾರ್ ರೇಟಿಂಗ್ ಪಡೆದಿದೆ. ಭಾರತ್ ಎನ್‌ಸಿಎಪಿ ಪರೀಕ್ಷೆಯ ವಯಸ್ಕರ ರಕ್ಷಣೆ ವಿಭಾಗದಲ್ಲಿ 32ಕ್ಕೆ 29.86 ಹಾಗೂ ಮಕ್ಕಳ ರಕ್ಷಣೆ ವಿಭಾಗದಲ್ಲಿ 49ಕ್ಕೆ 44.95 ಅಂಕಗಳನ್ನು ಗಳಿಸುವಲ್ಲಿ ಯಶಸ್ವಿಯಾಗಿದೆ.

ಈ ಟಾಟಾ ನೆಕ್ಸಾನ್ ಇವಿ ಸುರಕ್ಷತೆಯ ದೃಷ್ಟಿಯಿಂದ 6 ಏರ್‌ಬ್ಯಾಗ್‌, ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಆಲ್-ವೀಲ್ ಡಿಸ್ಕ್ ಬ್ರೇಕ್‌ಗಳು, ಹಿಲ್ ಹೋಲ್ಡ್, ಡಿಸೆಂಟ್ ಕಂಟ್ರೋಲ್ ಮತ್ತು 360-ಡಿಗ್ರಿ ಕ್ಯಾಮೆರಾಗಳನ್ನು ಒಳಗೊಂಡಿದೆ. ನೂತನ ನೆಕ್ಸಾನ್ ಇವಿ ರೂ.12.49 ಲಕ್ಷದಿಂದ ರೂ.17.19 ಲಕ್ಷ ಎಕ್ಸ್ ಶೋರೂಂ ದರದಲ್ಲಿ ಖರೀದಿಗೆ ಸಿಗುತ್ತದೆ.

Bharat Ncap Safest Cars In India Tata Safari Harrier Nexon Ev Punch Ev And Citroen Basalt

ಭಾರತ್ ಎನ್‌ಸಿಎಪಿ ಪರೀಕ್ಷೆಯಲ್ಲಿ ಸಿಟ್ರನ್ ಬಸಾಲ್ಟ್ (Citroen Basalt) ಎಸ್‌ಯುವಿಯೂ 4-ಸ್ಟಾರ್ ಸೇಫ್ಟಿ ರೇಟಿಂಗ್‌ನ್ನು ಗಳಿಸಿದೆ. ವಯಸ್ಕರ ರಕ್ಷಣೆ ವಿಭಾಗದಲ್ಲಿ 32ಕ್ಕೆ 26.19 ಮತ್ತು ಮಕ್ಕಳ ರಕ್ಷಣೆ ವಿಭಾಗದಲ್ಲಿ 49ಕ್ಕೆ 35.90 ಅಂಕಗಳನ್ನು ಪಡೆದಿದೆ. ಪ್ರಯಾಣಿಕರ ರಕ್ಷಣೆಗಾಗಿ 6-ಏರ್‌ಬ್ಯಾಗ್‌ನ್ನು ಒಳಗೊಂಡಿದೆ. ಈ ಕಾರು, ರೂ.7.99 ರಿಂದ 13.83 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Tuesday, October 15, 2024, 17:20 [IST]
English summary
Bharat ncap safest cars in india tata safari harrier nexon ev punch ev and citroen basalt
Read more on auto news india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+