ಭಾವಿ ಪತಿಗೆ ಮಹೀಂದ್ರಾ ಕಾರು ಗಿಫ್ಟ್ ನೀಡಿದ ನಟಿ ಶೋಭಾ ಶೆಟ್ಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ..!

ಕನ್ನಡದ ಅಗ್ನಿಸಾಕ್ಷಿ ಹಾಗೂ ರುಕ್ಕು ಧಾರಾವಾಹಿಗಳಲ್ಲಿ ಅಭಿನಯಿಸಿದ್ದ ನಟಿ ಶೋಭಾ ಶೆಟ್ಟಿ ಅವರನ್ನು ಆಂಧ್ರ, ತೆಲಂಗಾಣ ವೀಕ್ಷಕರು ಮೆಚ್ಚಿದ್ದಾರೆ. ಕಳೆದ ವರ್ಷ ಪ್ರಸಾರವಾಗಿದ್ದ ತೆಲುಗಿನ ಬಿಗ್‌ಬಾಸ್ ಸೀಸನ್ 7ರ ಮೂಲಕವೂ ಹೆಚ್ಚು ಜನಮನ್ನಣೆ ಗಳಿಸಿದ್ದರು. ಅದಕ್ಕೂ ಮೊದಲು 'ಕಾರ್ತಿಕ ದೀಪಂ' ಧಾರಾವಾಹಿಯಲ್ಲಿ ಶೋಭಾ ಶೆಟ್ಟಿ ಖಳನಾಯಕಿ ಪಾತ್ರದಲ್ಲಿ ನಟಿಸಿದ್ದರು. ಒಂದೂವರೆ ತಿಂಗಳ ಹಿಂದೆ, ನಟ ಯಶವಂತ್ ಜೊತೆಯಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಇವರಿಬ್ಬರು ಕಾರ್ತಿಕ ದೀಪಂ ಸೀರಿಯಲ್‌ನಲ್ಲಿ ಒಟ್ಟಿಗೆ ಬಣ್ಣ ಹಚ್ಚಿದ್ದರು.

ಶೋಭಾ ಶೆಟ್ಟಿ ಹಾಗೂ ಯಶವಂತ್ ಆರಂಭದಲ್ಲಿ ಉತ್ತಮ ಸ್ನೇಹಿತರಾಗಿದ್ದರು. ಆ ಬಳಿಕ ಪ್ರೀತಿಯಲ್ಲಿ ಬಿದ್ದಿದ್ದರು. ಶೋಭಾ ಶೆಟ್ಟಿ ಬಿಗ್‌ಬಾಸ್ ಶೋನಲ್ಲಿ ತಮ್ಮ ಲವ್ ಸ್ಟೋರಿ ರಿವೀಲ್ ಮಾಡಿದ್ದರು. ಈಚೆಗೆ ಹೈದರಾಬಾದ್‌ನಲ್ಲಿ ಹೊಸ ಮನೆಯ ಗೃಹ ಪ್ರವೇಶವನ್ನು ಮಾಡಿದ್ದರು. ನಿನ್ನೆಯಷ್ಟೇ ಶೋಭಾ ಶೆಟ್ಟಿ ತಮ್ಮ ಭಾವಿ ಪತಿ ಯಶವಂತ್‌ಗೆ ಹುಟ್ಟುಹಬ್ಬದ ಪ್ರಯುಕ್ತ ದುಬಾರಿ ಬೆಲೆಯ ಮಹೀಂದ್ರಾ ಎಕ್ಸ್‌ಯುವಿ700 ಕಾರನ್ನು ಉಡೊಗೊರೆಯಾಗಿ ನೀಡಿದ್ದಾರೆ. ಆ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.

Bigg Boss Fame Kannada amp amp Telugu Actress Shobha Shetty Gifts Mahindra Xuv700 Car For Future Husband

ಆದಾಗ್ಯೂ ನಟಿ ಶೋಭಾ ಶೆಟ್ಟಿ ಮಹೀಂದ್ರಾ ಎಕ್ಸ್‌ಯುವಿ700 (Mahindra XUV700) ಕಾರಿನ ಯಾವ ರೂಪಾಂತರ (ವೇರಿಯೆಂಟ್)ವನ್ನು ಗಿಫ್ಟ್ ಕೊಟ್ಟಿದ್ದಾರೆ ಎಂಬುದರ ಬಗ್ಗೆ ಹೆಚ್ಚಿನ ವಿವರಗಳು ಲಭ್ಯವಾಗಿಲ್ಲ. ದೇಶೀಯವಾಗಿ ಖರೀದಿಗೆ ಸಿಗುವ ಈ ಎಸ್‌ಯುವಿಯು ರೂ.13.99 ಲಕ್ಷದಿಂದ ರೂ.26.99 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. ಎಂಎಕ್ಸ್, ಎಎಕ್ಸ್, ಎಎಕ್ಸ್3, ಎಎಕ್ಸ್5 ಸೇರಿದಂತೆ ಹಲವು ರೂಪಾಂತರಗಳ ಆಯ್ಕೆಯಲ್ಲಿಯೂ ಸಿಗುತ್ತದೆ.

ಹೊಸ ಮಹೀಂದ್ರಾ ಎಕ್ಸ್‌ಯುವಿ700 ಕಾರು 2 ಪವರ್‌ಟ್ರೇನ್‌ ಆಯ್ಕೆಯನ್ನು ಹೊಂದಿದೆ. ಇದರ 2-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ 200 ಪಿಎಸ್ ಗರಿಷ್ಠ ಶಕ್ತಿ (ಪವರ್) ಹಾಗೂ 380 ಎನ್ಎಂ ಪೀಕ್ ಟಾರ್ಕ್ ಹೊರಹಾಕುವ ಸಾಮರ್ಥ್ಯವನ್ನು ಪಡೆದಿದೆ. 2.2-ಲೀಟರ್ ಡೀಸೆಲ್ ಎಂಜಿನ್ 185 ಪಿಎಸ್ ಪವರ್ ಹಾಗೂ 450 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತದೆ.

Bigg Boss Fame Kannada amp amp Telugu Actress Shobha Shetty Gifts Mahindra Xuv700 Car For Future Husband

ಈ ಎಸ್‍ಯುವಿಯು ರೂಪಾಂತರಗಳಿಗೆ ಅನುಗುಣವಾಗಿ 6-ಸ್ಪೀಡ್ ಮ್ಯಾನುವಲ್/ 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನೊಂದಿಗೆ ದೊರೆಯುತ್ತದೆ. AWD (ಆಲ್ ವೀಲ್ ಡ್ರೈವ್) ಹಾಗೂ FWD (ಫ್ರಂಟ್ ವೀಲ್ ಡ್ರೈವ್) ತಂತ್ರಜ್ಞಾನವನ್ನು ಪಡೆದಿದ್ದು, 17 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. 5, 6 ಮತ್ತು 7 ಆಸನ ಆಯ್ಕೆ ವ್ಯವಸ್ಥೆಯನ್ನು ಒಳಗೊಂಡಿದೆ.

ಮಹೀಂದ್ರಾ ಎಕ್ಸ್‌ಯುವಿ700 ಎವರೆಸ್ಟ್ ವೈಟ್, ಮಿಡ್ನೈಟ್ ಬ್ಲಾಕ್, ನಪೋಲಿ ಬ್ಲಾಕ್ ಒಳಗೊಡಂತೆ ವಿವಿಧ ಬಣ್ಣಗಳನ್ನು ಹೊಂದಿದೆ. 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 10.25-ಇಂಚಿನ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, 6-ವೇ ಪವರ್ ಡ್ರೈವರ್ ಸೀಟ್, 12-ಸ್ಪೀಕರ್‌ ಆಡಿಯೊ ಸಿಸ್ಟಮ್, ಸನ್‌ರೂಫ್, ಡುಯಲ್-ಝೋನ್ ಕ್ಲೇಮೇಟ್ ಕಂಟ್ರೋಲ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ.

ಈ ಕಾರು ಸುರಕ್ಷತೆಗೂ ಹೆಸರುವಾಸಿಯಾಗಿದೆ. 7 ಏರ್‌ಬ್ಯಾಗ್‌, ESP (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), TPMS (ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ADAS (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) 360-ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ. ಎಕ್ಸ್‌ಯುವಿ700ಗೆ ಹ್ಯುಂಡೈ ಅಲ್ಕಾಜರ್, ಎಂಜಿ ಹೆಕ್ಟರ್ ಪ್ಲಸ್, ಟಾಟಾ ಸಫಾರಿ, ಟಾಟಾ ಹ್ಯಾರಿಯರ್ ಹಾಗೂ ಹ್ಯುಂಡೈ ಕ್ರೆಟಾ ಎಸ್‍ಯುವಿಗಳು ಪ್ರಬಲ ಪ್ರತಿಸ್ಪರ್ಧಿಯಾಗಿವೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Sunday, June 23, 2024, 8:00 [IST]
English summary
Bigg boss fame kannada telugu actress shobha shetty gifts mahindra xuv700 car for future husband
Read more on offbeat india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+