ಬಿಗ್‌ಬಾಸ್ ಬೆಡಗಿ ನಮೃತಾ ಗೌಡ ಬಳಿ ಕೋಟಿ ಕೋಟಿ ದುಡ್ಡಿದ್ದರೂ, ಈ ಪುಟ್ಟ ಕಾರನ್ನು ಖರೀದಿಸಲು ಕಾರಣವೇನು?

ಬಿಗ್‌ಬಾಸ್‌ ಖ್ಯಾತಿಯ ನಮೃತಾ ಗೌಡ ಯಾರಿಗೆ ತಾನೇ ಗೊತ್ತಿಲ್ಲ ಹೇಳಿ. ತಮ್ಮ ಆಕರ್ಷಕ ಮೈಮಾಟ ಮತ್ತು ಮನೋಜ್ಞ ಅಭಿನಯದಿಂದ ಕನ್ನಡಿಗರ ಮಧ್ಯೆ ಸಾಕಷ್ಟು ಹೆಸರು ವಾಸಿಯಾಗಿರುವ ನಮೃತಾ, ಸಾಮಾಜಿಕ ಜಾಲತಾಣಗಳಲ್ಲಿ ಸದಾ ಆ್ಯಕ್ಟೀವ್ ಆಗಿರುತ್ತಾರೆ. ಅದೇ ರೀತಿ ನಮೃತಾ ಅವರಿಗೆ ಕಾರು ಕ್ರೇಜ್‌ ಸಹ ಇದೆ. ಆಗಾಗ ಅವರು ತಮ್ಮ ನೆಚ್ಚಿನ ಎಂಜಿ ಕಾಮೆಟ್‌ ಎಲೆಕ್ಟ್ರಿಕ್‌ ಜೊತೆ ಬೆಂಗಳೂರಿನ ಹಲವೆಡೆ ಕಾಣ ಸಿಗುತ್ತಾರೆ. ನಮೃತಾ ಬಳಿಯಿರುವ ಕಾರುಗಳಲ್ಲಿ ಇದು ಅವರ ಹಾಟ್‌ ಫೇವರೀಟ್ ಕಾರು ಎಂದರೆ ತಪ್ಪಾಗಲಾರದು.

ನಮೃತಾ ಗೌಡ (Biggboss Namrata Gowda) ಅವರ ಬಳಿ ಪತ್ರಕರ್ತರೊಬ್ಬರು ಯಾಕೆ ಎಂಜಿ ಕಾಮೆಟ್‌ ಅನ್ನು ಖರೀದಿ ಮಾಡಿದ್ದೋರಿ ಎಂದು ಪತ್ರಕರ್ತರೊಬ್ಬರು ಕೇಳಿದಾಗ, ಈ ಕಾರು ಪುಟ್ಟದಾಗಿದ್ದು, ಬೆಂಗಳೂರಿನ ಟ್ರಾಫಿಕ್‌ನಲ್ಲಿ ಇದು ಓಡಿಸಲು ಸಾಕಷ್ಟು ಸಹಕಾರಿಯಾಗಿದೆ ಎಂದು ಹೇಳಿದ್ದರು. ಇಂದು ನಾವು ಈ ಕಾರಿನ ಪ್ರಮುಖ ವಿಷಯಗಳೇನು ಎಂಬುದನ್ನು ನೋಡೋಣ.

Biggboss Namrata Gowda s MG Comet EV Top Things You Need To Know

ವಿನ್ಯಾಸ: ಎಂಜಿ ಕಾಮೆಟ್ ಎಲೆಕ್ಟ್ರಿಕ್ ಕಾರು ಪೂರ್ಣ-ಅಗಲ LED ಲೈಟ್ ಬಾರ್‌ನಂತಹ ಆಸಕ್ತಿದಾಯವಾದ ಬಾಕ್ಸ್ ವಿನ್ಯಾಸ ಭಾಷೆಯನ್ನು ಹೊಂದಿದೆ, ಜೊತೆಗೆ, ಎರಡೂ ವಿಂಗ್ ಮೀರರ್ಸ್ ಕ್ರೋಮ್ ಮತ್ತು ಪಿಯಾನೋ ಬ್ಲ್ಯಾಕ್ ಪಟ್ಟಿ ಇದೆ. ಇನ್ನು ಈ ಕಾಮೆಟ್ ಎಲೆಕ್ಟ್ರಿಕ್ ಕಾರಿನ ಚಾರ್ಜರ್ ಅನ್ನು ಲೈಟ್ ಬಾರ್ ಅಡಿಯಲ್ಲಿ ಮುಂಭಾಗದಲ್ಲಿ ಇರಿಸಲಾಗುತ್ತದೆ ಮತ್ತು ಅದರ ಫ್ಲಾಪ್ ಪ್ರಕಾಶಿತ MG ಲೋಗೋವನ್ನು ಹೊಂದಿದೆ.

ಫೀಚರ್ಸ್: ಈ ಹೊಸ ಎಂಜಿ ಕಾಮೆಟ್ ಎಲೆಕ್ಟ್ರಿಕ್ ಕಾರಿನಲ್ಲಿ ಒಳಭಾಗದಲ್ಲಿ, ಎರಡು 10.25-ಇಂಚಿನ ಸ್ಕ್ರೀನ್‌ಗಳಿಂದ ಹೈಲೈಟ್ ಮಾಡಲಾದ ಬಿಳಿ ಮತ್ತು ಬೂದು ಬಣ್ಣದ ಒಳಾಂಗಣವನ್ನು ಹೊಂದಿದೆ.ಇನ್ನು ಒಂದು ಇನ್ಫೋಟೈನ್‌ಮೆಂಟ್ ಸಿಸ್ಟಮ್‌ಗಾಗಿ ಮತ್ತು ಇನ್ನೊಂದು ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್‌ಗಾಗಿ. ಮುಂಭಾಗದ ಪ್ರಯಾಣಿಕರ ಸೀಟ್ ಒನ್-ಟಚ್ ಟಂಬಲ್ ಮತ್ತು ಫೋಲ್ಡ್ ಫೀಚರ್ಸ್ ಅನ್ನು ಹೊಂದಿದೆ.

ಈ ಕಾರಿನ ಹಿಂದಿನ ಸೀಟುಗಳು 50:50 ಸ್ಪ್ಲಿಟ್ ಅನ್ನು ಪಡೆಯುತ್ತವೆ. ಕಾಮೆಟ್ ರೋಟರಿ ಡ್ರೈವ್ ಸೆಲೆಕ್ಟರ್ ಅನ್ನು ಸಹ ಹೊಂದಿದೆ. ಇನ್ನು ಈ ಕಾರಿನಲ್ಲಿ ವೈರ್‌ಲೆಸ್ ಆಂಡ್ರಾಯ್ಡ್ ಆಟೋ ಮತ್ತು ಆಪಲ್ ಕಾರ್‌ಪ್ಲೇ ಮತ್ತು ಮ್ಯಾನುಯಲ್ ಎಸಿ ಕಂಟ್ರೋಲ್ ಹೊಂದಿವೆ. ಇದರೊಂದಿಗೆ ಕೀಲೆಸ್ ಎಂಟ್ರಿ, ಸ್ಟೀರಿಂಗ್-ಮೌಂಟೆಡ್ ಕಂಟ್ರೋಲ್‌ಗಳು, ಮೂರು ಯುಎಸ್‌ಬಿ ಪೋರ್ಟ್‌ಗಳು ಮತ್ತು 55 ಕ್ಕೂ ಹೆಚ್ಚು ಕನೆಕ್ಟಿವಿಟಿಗಳನ್ನು ಪಡೆಯುತ್ತದೆ.

ಸುರಕ್ಷತೆ: ಎಂಜಿ ಕಾಮೆಟ್ ಎಲೆಕ್ಟ್ರಿಕ್ ಕಾರಿನಲ್ಲಿ ಸುರಕ್ಷತೆ ಫೀಚರ್ಸ್ ಗಳಿಗೆ ಹೆಚ್ಚು ಪ್ರಾಮುಖ್ಯಯತೆಯನ್ನು ನೀಡಲಾಗಿದೆ. ಈ ಕಾರಿನಲ್ಲಿ ಸುರಕ್ಷತೆಗಾಗಿ, ABS, EBD, ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್ (TPMS), ರಿವರ್ಸ್ ಕ್ಯಾಮೆರಾ ಮತ್ತು ಸೆನ್ಸರ್‌ಗಳು ಮತ್ತು ಡ್ಯುಯಲ್ ಫ್ರಂಟ್ ಏರ್‌ಬ್ಯಾಗ್‌ಗಳು ಸೇರಿವೆ.3-ಪಾಯಿಂಟ್ ಸೀಟ್‌ಬೆಲ್ಟ್‌ಗಳು ಮತ್ತು ISOFIX ಆಂಕರ್ ಪಾಯಿಂಟ್‌ಗಳು ಮಕ್ಕಳ ಸೀಟ್ ಗಳಿಗೆ ಅದರ ಸುರಕ್ಷತೆಯ ಆರ್ಸೆನಲ್‌ನ ಭಾಗವಾಗಿದೆ.

Biggboss Namrata Gowda s MG Comet EV Top Things You Need To Know

ಬ್ಯಾಟರಿ ಪ್ಯಾಕ್‌: ಈ ಎಂಜಿ ಕಾಮೆಟ್ ಎಲೆಕ್ಟ್ರಿಕ್ ಕಾರು 17.3kWh ಲಿಥಿಯಂ-ಐಯಾನ್ ಬ್ಯಾಟರಿ ಪ್ಯಾಕ್‌ನಿಂದ ಚಾಲಿತವಾಗಿದೆ, ಇದು ARAI- ಸ್ಟ್ಯಾಂಡರ್ಡ್ ಆಗಿ 230 ಕಿ.ಮೀ ರೇಂಜ್ ಅನ್ನು ನೀಡುತ್ತದೆ, ಕಾಮೆಟ್ ಇವಿ ಕೇವಲ AC ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ ಮತ್ತು 3.3kW ಚಾರ್ಜಿಂಗ್ ಕೇಬಲ್‌ನೊಂದಿಗೆ ಬ್ಯಾಟರಿ ಪ್ಯಾಕ್ ಅನ್ನು ಚಾರ್ಜ್ ಮಾಡಲು 7 ಗಂಟೆಗಳನ್ನು ತೆಗೆದುಕೊಳ್ಳುತ್ತದೆ.

ಇನ್ನು ಚಾರ್ಜಿಂಗ್ ಕೇಬಲ್‌ನೊಂದಿಗೆ 10-80% ಚಾರ್ಜ್ 5 ಗಂಟೆಗಳನ್ನು ಸಮಯವನ್ನು ತೆಗೆದುಕೊಳ್ಳುತ್ತದೆ. ಈ ಬ್ಯಾಟರಿ ಪ್ಯಾಕ್ 41.4bhp ಮತ್ತು 110Nm ಪೀಕ್ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಈ ಎಲೆಕ್ಟ್ರಿಕ್ ಕಾರು ಸಿಂಗಲ್ ಎಲೆಕ್ಟಿಕ್ ಮೋಟರ್‌ಗೆ ಪವರ್ ಕಳುಹಿಸುತ್ತದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Wednesday, July 3, 2024, 10:36 [IST]
English summary
Biggboss namrata gowda owned mg comet ev top things you need to know
Read more on celebrity car india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+