ಕಡೆಗೂ ಐಷಾರಾಮಿ ಬಿಎಂಡಬ್ಲ್ಯೂ 5 ಸೀರೀಸ್ ಕಾರು ಮಾರುಕಟ್ಟೆಗೆ ಬಂದಿದೆ.. ಹೇಗಿದೆ ಗೊತ್ತಾ?
ಜರ್ಮನಿ ಮೂಲದ ಬಿಎಂಡಬ್ಲ್ಯೂ (BMW) ಪ್ರಮುಖ ವಾಹನ ತಯಾರಕ ಸಂಸ್ಥೆಯಾಗಿ ಗುರುತಿಸಿಕೊಂಡಿದೆ. ದೇಶೀಯ ಮಾರುಕಟ್ಟೆಯಲ್ಲಿ ನವೀನ ವಿನ್ಯಾಸ ಮತ್ತು ಆಕರ್ಷಕ ವೈಶಿಷ್ಟ್ಯ ಹೊಂದಿರುವ ಹಲವು ಐಷಾರಾಮಿ ಕಾರುಗಳನ್ನು ಮಾರಾಟ ಮಾಡುತ್ತಿದೆ. ಉದ್ಯಮಿಗಳು, ಸೆಲೆಬ್ರಿಟಿಗಳು ಹಾಗೂ ದೊಡ್ಡ - ದೊಡ್ಡ ಕ್ರೀಡಾ ತಾರೆಯರು ಕೂಡ ಇಷ್ಟಪಟ್ಟು ತೆಗೆದುಕೊಳ್ಳುತ್ತಿದ್ದಾರೆ. ಬುಧವಾರ ಬಿಎಂಡಬ್ಲ್ಯೂ ಇಂಡಿಯಾ ಎಂಟನೇ ತಲೆಮಾರಿನ '5 ಸೀರೀಸ್' ಸೆಡಾನ್‌ನ್ನು ಬಿಡುಗಡೆ ಮಾಡಿದೆ. ಇಲ್ಲಿ ಈ ಕಾರಿನ ಪ್ರಮುಖ ವಿಶೇಷತೆಗಳ ಬಗ್ಗೆ ಸಂಪೂರ್ಣವಾಗಿ ತಿಳಿಸಿಕೊಟ್ಟಿದ್ದೇವೆ.
ಬೆಲೆ & ರೂಪಾಂತರ: ಹೊಚ್ಚ ಹೊಸ ಬಿಎಂಡಬ್ಲ್ಯೂ 5 ಸೀರೀಸ್ (BMW 5 Series) ಲಾಂಗ್ ವೀಲ್‌ಬೇಸ್ ಸೆಡಾನ್ ಆಗಿದೆ. 530ಎಲ್ಐ ಎಂ ಸ್ಪೋರ್ಟ್ ಎಂಬ ಏಕೈಕ ರೂಪಾಂತರ (ವೇರಿಯೆಂಟ್) ಆಯ್ಕೆಯಲ್ಲಿ ಖರೀದಿಗೆ ಲಭ್ಯವಿದೆ. ರೂ.72.9 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ.

ವಿನ್ಯಾಸ: ಈ ಕಾರು ಹೊರಭಾಗದಲ್ಲಿ ಅತ್ಯಾಧುನಿಕ ವಿನ್ಯಾಸವನ್ನು ಪಡೆದಿದೆ. ದೊಡ್ಡದಾದ ಸಿಗ್ನೇಚರ್ ಕಿಡ್ನಿ ಗ್ರಿಲ್, ಇಳಿಜಾರದ ರೂಫ್, 18-ಇಂಚಿನ ಡುಯಲ್ ಟೋನ್ ಅಲಾಯ್ ವೀಲ್‌ಗಳು, ಎಲ್ಇಡಿ ಹೆಡ್‌ಲೈಟ್‌ಗಳು, ಎಲ್ಇಡಿ ಟೈಲ್ ಲೈಟ್‌ಗಳು ಹಾಗೂ ಸ್ಪೋರ್ಟಿ ಬಂಪರ್‌ಗಳನ್ನು ಒಳಗೊಂಡಿದೆ. ಇದರಲ್ಲಿ 5 ಮಂದಿ ಆರಾಮದಾಯಕವಾಗಿ ಪ್ರಯಾಣಿಸಬಹುದು.
ಕಾರ್ಯಕ್ಷಮತೆ: ಬಿಎಂಡಬ್ಲ್ಯೂ 5 ಸೀರೀಸ್ ಲಾಂಗ್ ವೀಲ್‌ಬೇಸ್ ಸೆಡಾನ್ 2.0-ಲೀಟರ್ ಪೆಟ್ರೋಲ್ ಎಂಜಿನ್‌ನ್ನು ಪಡೆದಿದೆ. 256 ಬಿಹೆಚ್‌ಪಿ ಗರಿಷ್ಠ ಶಕ್ತಿ (ಪವರ್) ಹಾಗೂ 400 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 8-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಹೊಂದಿದೆ. ಟಾಪ್ ಸ್ಪೀಡ್ 250 ಕೆಎಂಪಿಹೆಚ್ ಇದ್ದು, 6.5 ಸೆಕೆಂಡುಗಳಲ್ಲಿ 0-100 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ.
ಸುತ್ತಳತೆ & ಬಣ್ಣಗಳು: ಈ ಕಾರು 5,175 ಎಂಎಂ ಉದ್ದ, 1,900 ಎಂಎಂ ಅಗಲ ಹಾಗೂ 1,520 ಎಂಎಂ ಎತ್ತರ ಹೊಂದಿದೆ. ಇದರ ವೀಲ್‌ಬೇಸ್ ಬರೋಬ್ಬರಿ 3,105 ಎಂಎಂ ಇದ್ದು, ಕಾರ್ಬೊನಿಕ್ ಬ್ಲಾಕ್, ಮಿನರಲ್ ವೈಟ್ ಮತ್ತು ಫೈಟೋನಿಕ್ ಬ್ಲೂ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಗ್ರಾಹಕರಿಗೆ ಖರೀದಿಗೆ ದೊರೆಯುತ್ತದೆ.
ವೈಶಿಷ್ಟ್ಯಗಳು: ಬಿಎಂಡಬ್ಲ್ಯೂ 5 ಸೀರೀಸ್ ಲಾಂಗ್ ವೀಲ್‌ಬೇಸ್ ಸೆಡಾನ್ ಹಲವು ಅತ್ಯಾಧುನಿಕ ವೈಶಿಷ್ಟ್ಯಗಳನ್ನು ಪಡೆದಿದೆ. 14.9-ಇಂಚಿನ ಇನ್ಫೋಟೈನ್‌ಮೆಂಟ್ ಸಿಸ್ಟಮ್, 12.3-ಇಂಚಿನ ಡಿಜಿಟಲ್ ಡ್ರೈವರ್ ಡಿಸ್ಪ್ಲೇ, ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ, 4-ಝೋನ್ ಕ್ಲೈಮೇಟ್ ಕಂಟ್ರೋಲ್, 18-ಸ್ಪೀಕರ್ ಬೋವರ್ಸ್ ಹಾಗೂ ವಿಲ್ಕಿನ್ಸ್ ಸರೌಂಡ್ ಸೌಂಡ್ ರೀತಿಯ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.
ಸುರಕ್ಷತಾ ವೈಶಿಷ್ಟ್ಯಗಳು: ಈ ಕಾರು ಅತ್ಯುತ್ತಮ ರಕ್ಷಣಾತ್ಮಕ ವೈಶಿಷ್ಟ್ಯಗಳನ್ನು ಹೊಂದಿದೆ. 8 ಏರ್‌ಬ್ಯಾಗ್‌ಗಳು, ಡಿಎಸ್‌ಸಿ (ಡೈನಾಮಿಕ್ ಸ್ಟೆಬಿಲಿಟಿ ಕಂಟ್ರೋಲ್), ಸಿಬಿಸಿ (ಕಾರ್ನರಿಂಗ್ ಬ್ರೇಕ್ ಕಂಟ್ರೋಲ್), ಆಟೋ ಹೋಲ್ಡ್, ಎಲೆಕ್ಟ್ರಿಕ್ ಪಾರ್ಕಿಂಗ್ ಬ್ರೇಕ್ ಅನ್ನು ಹೊಂದಿದೆ. ಬಿಎಂಡಬ್ಲ್ಯೂ 5 ಸೀರೀಸ್ ಸೆಡಾನ್‌ಗೆ ಮರ್ಸಿಡಿಸ್-ಬೆಂಜ್ ಇ-ಕ್ಲಾಸ್, ಆಡಿ ಎ6 ಮತ್ತು ವೋಲ್ವೋ ಎಸ್90 ಕಾರುಗಳು ಪ್ರಬಲ ಪ್ರತಿಸ್ಪರ್ಧಿಯಾಗಿವೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








