BMW 5 Series: ಐಷಾರಾಮಿ ಬಿಎಂಡಬ್ಲ್ಯೂ 5 ಸೀರೀಸ್ ಕಾರು ಬಿಡುಗಡೆ.. ಬೆಲೆ ಎಷ್ಟು, ವಿಶೇಷತೆಗಳೇನು?

ಜರ್ಮನಿ ಮೂಲದ ಬಿಎಂಡಬ್ಲ್ಯೂ (BMW) ಪ್ರಖ್ಯಾತ ವಾಹನ ತಯಾರಕ ಸಂಸ್ಥೆಯಾಗಿ ಖ್ಯಾತಿಗಳಿಸಿದೆ. ದೇಶೀಯ ಮಾರುಕಟ್ಟೆಯಲ್ಲಿ ಅತ್ಯಾಧುನಿಕ ವಿನ್ಯಾಸ ಹಾಗೂ ವೈಶಿಷ್ಟ್ಯ ಹೊಂದಿರುವ ವಿವಿಧ ಐಷಾರಾಮಿ ಕಾರುಗಳನ್ನು ಮಾರಾಟಗೊಳಿಸುತ್ತಿದೆ. ಸೆಲೆಬ್ರಿಟಿಗಳು, ಉದ್ಯಮಿಗಳು ಮತ್ತು ಪ್ರಮುಖ ಕ್ರೀಡಾ ತಾರೆಯರು ಸಹ ಇಷ್ಟಪಟ್ಟು ಕೊಂಡುಕೊಳ್ಳುತ್ತಿದ್ದಾರೆ. ಇಂದು ಬಿಎಂಡಬ್ಲ್ಯೂ ಇಂಡಿಯಾ ಎಂಟನೇ ತಲೆಮಾರಿನ (Eighth Generation) '5 ಸೀರೀಸ್' ಕಾರನ್ನು ಬಿಡುಗಡೆ ಮಾಡಿದೆ. ಬನ್ನಿ.. ಆ ಬಗ್ಗೆ ಹೆಚ್ಚಿನ ವಿವರಗಳನ್ನು ತಿಳಿಯೋಣ.

ನೂತನ ಬಿಎಂಡಬ್ಲ್ಯೂ 5 ಸೀರೀಸ್, ಲಾಂಗ್ ವೀಲ್‌ಬೇಸ್ (Long Wheelbase - LWB) ಸೆಡಾನ್ ಆಗಿದೆ. 530ಎಲ್ಐ ಎಂ ಸ್ಪೋರ್ಟ್ (530Li M Sport) ಎಂಬ ಏಕೈಕ ರೂಪಾಂತರ (Variant) ಆಯ್ಕೆಯಲ್ಲಿ ಮಾರುಕಟ್ಟೆಗೆ ಬಂದಿದೆ. ರೂ.72.9 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿಗೆ ಲಭ್ಯವಿದೆ.

BMW 5 Series Lwb Launched in india rs 72 lakh price details

ಹೊಸ ಬಿಎಂಡಬ್ಲ್ಯೂ 5 ಸೀರೀಸ್ ಸೆಡಾನ್ ಹೊರಭಾಗದಲ್ಲಿ ಆಕರ್ಷಕ ವಿನ್ಯಾಸ (Disign)ವನ್ನು ಪಡೆದಿದೆ. ದೊಡ್ಡದಾದ ಸಿಗ್ನೇಚರ್ ಕಿಡ್ನಿ ಗ್ರಿಲ್‌, ಇಳಿಜಾರದ ರೂಫ್, 18-ಇಂಚಿನ ಡುಯಲ್ ಟೋನ್ ಅಲಾಯ್ ವೀಲ್‌ಗಳು, ಎಲ್ಇಡಿ ಹೆಡ್‌ಲೈಟ್‌ಗಳು, ಎಲ್ಇಡಿ ಟೈಲ್ ಲೈಟ್‌ಗಳು, ಸ್ಪೋರ್ಟಿ ಬಂಪರ್‌ಗಳನ್ನು ಹೊಂದಿದೆ. ಕಾರ್ಬೊನಿಕ್ ಬ್ಲಾಕ್, ಮಿನರಲ್ ವೈಟ್ ಮತ್ತು ಫೈಟೋನಿಕ್ ಬ್ಲೂ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ.

ಈ ಕಾರು 48ವಿ ಮೈಲ್ಡ್-ಹೈಬ್ರಿಡ್ ತಂತ್ರಜ್ಞಾನದೊಂದಿಗೆ 2.0-ಲೀಟರ್ ಪೆಟ್ರೋಲ್ ಎಂಜಿನ್‌ನ್ನು ಹೊಂದಿದೆ. 256 ಬಿಹೆಚ್‌ಪಿ ಗರಿಷ್ಠ ಶಕ್ತಿ (ಪವರ್) ಮತ್ತು 400 ಎನ್ಎಂ ಪೀಕ್ ಟಾರ್ಕ್ ಹೊರಹಾಕುತ್ತದೆ. ಜೊತೆಗೆ 8-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. ಕೇವಲ 6.5 ಸೆಕೆಂಡುಗಳಲ್ಲಿ 0-100 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ. 250 ಕೆಎಂಪಿಹೆಚ್ ಟಾಪ್ ಸ್ಪೀಡ್ ಕೂಡ ಇದೆ. ಮುಂಬರುವ ದಿನಗಳಲ್ಲಿ ಡೀಸೆಲ್ ಚಾಲಿತ ರೂಪಾಂತರವು ಬಿಡುಗಡೆಯಾಗುವ ನಿರೀಕ್ಷೆಯಿದೆ.

BMW 5 Series Lwb Launched in india rs 72 lakh price details

ನೂತನ ಬಿಎಂಡಬ್ಲ್ಯೂ 5 ಸೀರೀಸ್ ಅತಿ ಉದ್ದವಿರುವ ಕಾರಾಗಿದೆ. 5,175 ಎಂಎಂ ಉದ್ದ, 1,900 ಎಂಎಂ ಅಗಲ ಹಾಗೂ 1,520 ಎಂಎಂ ಎತ್ತರ ಹೊಂದಿದೆ. ಇದರ ವೀಲ್‌ಬೇಸ್ 3,105 ಎಂಎಂ ವ್ಯಾಪಿಸಿದೆ. ಈ ಕಾರಿನಲ್ಲಿ 5 ಮಂದಿ ಆರಾಮದಾಯಕವಾಗಿ ಕುಳಿತುಕೊಂಡು ದೂರದ ಊರುಗಳಿಗೆ ಪ್ರಯಾಣಿಸಬಹುದು.

ಬಿಎಂಡಬ್ಲ್ಯೂ 5 ಸೀರೀಸ್ ಹತ್ತಾರು ಅತ್ಯಾಧುನಿಕ ವೈಶಿಷ್ಟ್ಯಗಳನ್ನು ಒಳಗೊಂಡಿದೆ. 14.9-ಇಂಚಿನ ಇನ್ಫೋಟೈನ್‌ಮೆಂಟ್ ಸಿಸ್ಟಮ್, 12.3-ಇಂಚಿನ ಡಿಜಿಟಲ್ ಡ್ರೈವರ್ ಡಿಸ್ಪ್ಲೇ, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ ಪ್ಲೇ, 4-ಝೋನ್ ಕ್ಲೈಮೇಟ್ ಕಂಟ್ರೋಲ್, ಹೆಡ್ಸ್-ಅಪ್ ಡಿಸ್ಪ್ಲೇ, 18-ಸ್ಪೀಕರ್ ಬೋವರ್ಸ್ & ವಿಲ್ಕಿನ್ಸ್ ಸರೌಂಡ್ ಸೌಂಡ್‌ನಂತಹ ಹಲವು ವೈಶಿಷ್ಟ್ಯಗಳಿವೆ.

BMW 5 Series Lwb Launched in india rs 72 lakh price details

ಈ ಕಾರು ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆ ಒದಗಿಸುತ್ತದೆ. 8 ಏರ್‌ಬ್ಯಾಗ್‌ಗಳು, ಡಿಎಸ್‌ಸಿ (ಡೈನಾಮಿಕ್ ಸ್ಟೆಬಿಲಿಟಿ ಕಂಟ್ರೋಲ್), ಸಿಬಿಸಿ (ಕಾರ್ನರಿಂಗ್ ಬ್ರೇಕ್ ಕಂಟ್ರೋಲ್), ಆಟೋ ಹೋಲ್ಡ್‌, ಎಲೆಕ್ಟ್ರಿಕ್ ಪಾರ್ಕಿಂಗ್ ಬ್ರೇಕ್, ಸೈಡ್-ಇಂಪ್ಯಾಕ್ಟ್ ಪ್ರೊಟೆಕ್ಷನ್, ಕ್ರ್ಯಾಶ್ ಸೆನ್ಸಾರ್‌, ಎಲೆಕ್ಟ್ರಾನಿಕ್ ವೆಹಿಕಲ್ ಇಮೊಬಿಲೈಸರ್ ಮತ್ತು ಚೈಲ್ಡ್ ಸೀಟ್ ಮೌಂಟಿಂಗ್ ಅನ್ನು ಹೊಂದಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Wednesday, July 24, 2024, 15:30 [IST]
English summary
Bmw 5 series lwb launched in india rs 72 lakh price details
Read more on bmw india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+