CNG Cars: ಬಜೆಟ್ ಬೆಲೆಗೆ ಸಿಗುವ ಟಾಟಾ, ಮಾರುತಿ ಸಿಎನ್‌ಜಿ ಕಾರುಗಳಿವು, ಬೈಕ್‌ಗೂ ಮೀರಿಸುವ ಮೈಲೇಜ್!
ದೇಶದಲ್ಲಿ ಪೆಟ್ರೋಲ್ ದರ ಗಗನಕ್ಕೇರಿದ್ದು, ಹೊಸ ಕಾರು ಖರೀದಿಸುವವರೂ ಸಿಎನ್‌ಜಿ ಅಥವಾ ಎಲೆಕ್ಟ್ರಿಕ್ ಮಾದರಿಗಳತ್ತ ಆಸಕ್ತಿ ತೋರಿಸುತ್ತಿದ್ದಾರೆ. ಪೆಟ್ರೋಲ್‌ಗೆ ಹೋಲಿಕೆ ಮಾಡಿದರೆ, ಇವೆರಡರ ನಿರ್ವಹಣಾ ವೆಚ್ಚ ತುಂಬಾ ಕಡಿಮೆ. ಇಲ್ಲಿ ನಿಮ್ಮ ಬಜೆಟ್ ಬೆಲೆಗೆ ಖರೀದಿಗೆ ದೊರೆಯುವ ಟಾಟಾ, ಮಾರುತಿ ಸುಜುಕಿ ಸಿಎನ್‌ಜಿ ಕಾರುಗಳ ಬಗ್ಗೆ ವಿವರಿಸಿದ್ದೇವೆ.
ಮೊದಲಿಗೆ ಮಾರುತಿ ಸುಜುಕಿ ಸೆಲರಿಯೊ (Maruti Suzuki Celerio) ಬಗ್ಗೆ ಮಾತನಾಡೋಣ. ಇದರ ಸಿಎನ್‌ಜಿ (CNG) ರೂಪಾಂತರ ವಿಎಕ್ಸ್ಐ ರೂ.6.74 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿಗೆ ದೊರೆಯುತ್ತದೆ. 1-ಲೀಟರ್, 3-ಸಿಲಿಂಡರ್ ಎಂಜಿನ್ ಹೊಂದಿದ್ದು, 57 ಪಿಎಸ್ ಗರಿಷ್ಠ ಪವರ್ (ಶಕ್ತಿ) ಮತ್ತು 82 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತದೆ. ಕೇವಲ 5-ಸ್ವೀಡ್ ಮ್ಯಾನುವಲ್ ಗೇರ್ ಬಾಕ್ಸ್ ಆಯ್ಕೆಯಲ್ಲಿ ಸಿಗುತ್ತದೆ.

ಮೈಲೇಜ್ ವಿಚಾರಕ್ಕೆ ಬರುವುದಾದರೆ, ಸೆಲರಿಯೊ ಪ್ರತಿ ಕೆಜಿಗೆ 35.6 ಕಿಲೋಮೀಟರ್ ಇಂಧನ ದಕ್ಷತೆ ಹೊಂದಿದೆ. 7-ಇಂಚಿನ ಟಚ್‌ಸ್ಕ್ರೀನ್, ಪುಶ್-ಬಟನ್ ಸ್ಟಾರ್ಟ್/ಸ್ಟಾಪ್, ಕೀಲೆಸ್ ಎಂಟ್ರಿ, ಮ್ಯಾನುವಲ್ ಎಸಿ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಯ ಸಲುವಾಗಿ ಡುಯಲ್ ಫ್ರಂಟ್ ಏರ್‌ಬ್ಯಾಗ್, ಹಿಲ್-ಹೋಲ್ಡ್ ಅಸಿಸ್ಟ್, ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್) ಮತ್ತು ರೇರ್ ಪಾರ್ಕಿಂಗ್ ಸೆನ್ಸರ್ಸ್ ಅನ್ನು ಹೊಂದಿದೆ.
ಮಾರುತಿ ಸುಜುಕಿ ವ್ಯಾಗನ್ಆರ್ (Maruti Suzuki Wagon R) ಕಾರಿನ ಸಿಎನ್‌ಜಿ ರೂಪಾಂತರ ಎಲ್ಎಕ್ಸ್ಐ ರೂ.6.45 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. ಇದು 998 ಸಿಸಿ ಎಂಜಿನ್ ಹೊಂದಿದ್ದು, 55.92 ಪಿಎಸ್ ಪವರ್ ಮತ್ತು 82 ಪೀಕ್ ಟಾರ್ಕ್ ಹೊರಹಾಕುತ್ತದೆ. ಪ್ರತಿ ಕೆಜಿಗೆ 34.05 ಕಿ.ಮೀ ಮೈಲೇಜ್ ನೀಡುತ್ತದೆ.

ಈ ವ್ಯಾಗನ್ಆರ್ ಕಾರಿನಲ್ಲಿ 5 ಮಂದಿ ಆರಾಮದಾಯಕವಾಗಿ ಪ್ರಯಾಣಿಸಬಹುದು. 7-ಇಂಚಿನ ಟಚ್‌ಸ್ಕ್ರೀನ್ ಡಿಸ್ಪ್ಲೇ, 4-ಸ್ಪೀಕರ್ ಮ್ಯೂಸಿಕ್ ಸಿಸ್ಟಮ್, ಸ್ಟೀರಿಂಗ್-ಮೌಂಟೆಡ್ ಆಡಿಯೋ, ಫೋನ್ ಕಂಟ್ರೋಲ್ ಒಳಗೊಂಡಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಯ ದೃಷ್ಟಿಯಿಂದ ಡುಯಲ್ ಫ್ರಂಟ್ ಏರ್‌ಬ್ಯಾಗ್, EBD (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ರೇರ್ ಪಾರ್ಕಿಂಗ್ ಸೇನಾರ್ಸ್ ಅನ್ನು ಪಡೆದಿದೆ.
ಮಾರುತಿ ಸುಜುಕಿ ಆಲ್ಟೊಕೆ10 (Maruti Suzuki Alto K10) ಕಾರಿನ ಸಿಎನ್‌ಜಿ ರೂಪಾಂತರವಾದ ವಿಎಕ್ಸ್ಐ ರೂ.5.96 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಒಳಗೊಂಡಿದೆ. 1-ಲೀಟರ್ ಎಂಜಿನ್ ಹೊಂದಿದ್ದು, 57 ಪಿಎಸ್ ಪವರ್, 82 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುಲು ಶಕ್ತವಾಗಿದ್ದು, 5-ಸ್ವೀಡ್ ಮ್ಯಾನುವಲ್ ಗೇರ್ ಬಾಕ್ಸ್ ಆಯ್ಕೆಯಲ್ಲಿ ಮಾತ್ರ ದೊರೆಯುತ್ತದೆ. ಪ್ರತಿ ಕೆಜಿಗೆ 33.85 ಕಿ.ಮೀ ಕ್ರಮಿಸುತ್ತದೆ.

ಟಾಟಾದ ಪ್ರಮುಖ ಮೈಕ್ರೋ ಎಸ್‌ಯುವಿಯಾಗಿರುವ ಪಂಚ್ (Punch) ಕೂಡ ಸಿಎನ್‌ಜಿ ರೂಪದಲ್ಲಿ ಖರೀದಿಗೆ ಲಭ್ಯವಿದೆ. ರೂ.7.10 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. ಇದರ 1.2-ಲೀಟರ್ ಎಂಜಿನ್, 73.5 ಪಿಎಸ್ ಪವರ್, 103 ಎನ್ಎಂ ಪೀಕ್ ಟಾರ್ಕ್ ಹೊರಹಾಕುತ್ತದೆ. 5-ಸ್ವೀಡ್ ಮ್ಯಾನುವಲ್ ಗೇರ್ ಬಾಕ್ಸ್ ಆಯ್ಕೆಯಲ್ಲಿ ಲಭ್ಯವಿದೆ.
ಪಂಚ್ ಸಿಎನ್‌ಜಿ ಮಾದರಿಯು 1 ಕೆಜಿ ಇಂಧನ ದಹಿಸಿ, 26.99 ಕಿಲೋಮೀಟರ್ ಮೈಲೇಜ್ ನೀಡುತ್ತದೆ. 7-ಇಂಚಿನ ಟಚ್‌ಸ್ಕ್ರೀನ್ ಡಿಸ್ಪ್ಲೇ, 7-ಇಂಚಿನ ಸೆಮಿ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಆಟೋಮೆಟಿಕ್ ಎಸಿ, ಕ್ರೂಸ್ ಕಂಟ್ರೋಲ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಯ ಸಲುವಾಗಿ ಏರ್‌ಬ್ಯಾಗ್, EBD (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), TPMS (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಅನ್ನು ಪಡೆದಿದೆ.
ಟಾಟಾ ಟಿಯಾಗೊ (Tata Tiago) ಸಿಎನ್‌ಜಿ ಕಾರು, ರೂ.8.25 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಸಿಗುತ್ತದೆ. ಇದು 1.2-ಲೀಟರ್ ಎಂಜಿನ್ ಹೊಂದಿದ್ದು, 73.5 ಪಿಎಸ್ ಗರಿಷ್ಠ ಪವರ್, 95 ಎನ್ಎಂ ಪೀಕ್ ಟಾರ್ಕ್ ಹೊರಹಾಕುತ್ತದೆ. 5-ಸ್ವೀಡ್ ಮ್ಯಾನುವಲ್/ 5-ಸ್ವೀಡ್ ಆಟೋಮೆಟಿಕ್ ಗೇರ್ ಬಾಕ್ಸ್ ಆಯ್ಕೆಯಲ್ಲಿ ದೊರೆಯುತ್ತದೆ. 26.49 ಕೆಎಂ/ಕೆಜಿ ಮೈಲೇಜ್ ನೀಡುತ್ತದೆ.


Click it and Unblock the Notifications








