7-ಸೀಟರ್.. ಚೀನಾ ಮಾಲೀಕತ್ವದ ಈ ಹೊಸ ಕಾರು ಶೋರೂಂಗೆ ಬಂದೇಬಿಡ್ತು.. ಗಾಬರಿ ಹುಟ್ಟಿಸುವ ಸಂಖ್ಯೆಯಲ್ಲಿ ಬುಕ್ಕಿಂಗ್!
ಚೀನಾದಲ್ಲಿ ಪ್ರಧಾನ ಕಚೇರಿ ಹೊಂದಿರುವ ಬಿವೈಡಿ (BYD) ಪ್ರಮುಖ ವಾಹನ ತಯಾರಕ ಕಂಪನಿಯಾಗಿದೆ. ದೇಶೀಯ ಮಾರುಕಟ್ಟೆಯಲ್ಲಿ ಸೀಲ್ (Seal) ಮತ್ತು ಆಟ್ಟೋ 3 (Atto 3) ಸೇರಿದಂತೆ ವಿವಿಧ ಕಾರುಗಳನ್ನು ಮಾರಾಟ ಮಾಡುತ್ತಿದೆ. ಇತ್ತೀಚೆಗೆ ಟೊಯೊಟಾ ಇನ್ನೋವಾ ಎಂಪಿವಿಗೆ ಪ್ರಬಲ ಸ್ಪರ್ಧೆಯೊಡ್ಡಲು ನೂತನ 'ಇಮ್ಯಾಕ್ಸ್ 7' ಎಲೆಕ್ಟ್ರಿಕ್ ಎಂಪಿವಿಯನ್ನು ಅದ್ದೂರಿಯಾಗಿ ಬಿಡುಗಡೆ ಮಾಡಿತ್ತು. ಈ ಕಾರು ಆಕರ್ಷಕ ವಿನ್ಯಾಸ ಹಾಗೂ ಹತ್ತಾರು ವೈಶಿಷ್ಟ್ಯಗಳನ್ನು ಪಡೆದುಕೊಂಡಿದ್ದು, ಸ್ಪರ್ಧಾತ್ಮಕ ಬೆಲೆಯಲ್ಲಿಯೂ ಖರೀದಿಗೆ ಲಭ್ಯವಿದೆ.
ಅಕ್ಟೋಬರ್ 8 ರಂದು ಮಾರಾಟಕ್ಕೆ ಬಂದ ನೂತನ ಬಿವೈಡಿ ಇಮ್ಯಾಕ್ಸ್ (BYD eMAX 7) ಎಂಪಿವಿ ದುಬಾರಿ ಬೆಲೆ ಹೊಂದಿದ್ದರೂ ಹೆಚ್ಚಿನ ಸಂಖ್ಯೆಯ ಗ್ರಾಹಕರ ಮನ ಸೆಳೆಯುವಲ್ಲಿ ಯಶಸ್ವಿಯಾಗಿದೆ. ಅದಕ್ಕೆ ಪುಷ್ಟಿ ನೀಡುವಂತೆ ಬರೊಬ್ಬರಿ 1000 ಬುಕ್ಕಿಂಗ್‌ನ್ನು ಪಡೆದುಕೊಂಡಿದೆ. ಸದ್ಯ, ದೇಶಾದ್ಯಂತ ವಿವಿಧ ಡೀಲರ್‌ಶಿಪ್‌ಗಳಿಗೆ ಈ ಹೊಸ ಎಲೆಕ್ಟ್ರಿಕ್ ಎಂಪಿವಿಯನ್ನು ಕಂಪನಿಯು ತಲುಪಿಸುವುದಕ್ಕೆ ಶುರು ಮಾಡಿದೆ ಎಂದು ವರದಿಯಾಗಿದೆ. ಶೀಘ್ರದಲ್ಲಿಯೇ ವಿತರಣೆ ಆರಂಭವಾಗುವ ನಿರೀಕ್ಷೆಯಿದೆ.

ದೇಶೀಯ ಮಾರುಕಟ್ಟೆಯಲ್ಲಿ ಖರೀದಿಗೆ ದೊರೆಯುವ 'ಬಿವೈಡಿ ಇಮ್ಯಾಕ್ಸ್' ಎಂಪಿವಿ ರೂ.26.90 ರಿಂದ ರೂ.29.90 ಲಕ್ಷ ಎಕ್ಸ್ ಶೋರೂಂ ದರವನ್ನು ಹೊಂದಿದೆ. ಪ್ರೀಮಿಯಂ ಹಾಗೂ ಸುಪೀರಿಯರ್ ಎಂಬ 2 ಆಕರ್ಷಕ ರೂಪಾಂತರಗಳನ್ನು ಪಡೆದಿದೆ. ಕಾಸ್ಮಾಸ್ ಬ್ಲೂ, ಕ್ರಿಸ್ಟಲ್ ವೈಟ್ ಮತ್ತು ಹಾರ್ಬರ್ ಗ್ರೇ ಸೇರಿದಂತೆ ವಿವಿಧ ಬಣ್ಣಗಳೊಂದಿಗೂ ಸಿಗುತ್ತದೆ.
ಈ ಎಲೆಕ್ಟ್ರಿಕ್ ಎಂಪಿವಿ 2 ಬ್ಯಾಟರಿ ಪ್ಯಾಕ್ ಆಯ್ಕೆಯಲ್ಲಿ ಲಭ್ಟವಿದೆ. 55.4 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿಯನ್ನು ಪಡೆದಿರುವ ರೂಪಾಂತರ, ಸಂಪೂರ್ಣ ಚಾರ್ಜ್‌ನಲ್ಲಿ 420 ಕಿಲೋಮೀಟರ್ ರೇಂಜ್ (ಮೈಲೇಜ್) ನೀಡುತ್ತದೆ. ಇದರಲ್ಲಿ ಬಳಕೆ ಮಾಡಿರುವ ಎಲೆಕ್ಟ್ರಿಕ್ ಮೋಟಾರ್, 163 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 310 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ.

ಬೃಹತ್ ಗಾತ್ರದ 71.8 ಕೆಡಬ್ಲ್ಯೂಹೆಚ್ ಬ್ಯಾಟರಿ ಪ್ಯಾಕ್ ಹೊಂದಿರುವ ರೂಪಾಂತರ, ಭರ್ತಿ ಚಾರ್ಜ್‌ನಲ್ಲಿ 530 ಕಿಲೋಮೀಟರ್ ಓಡುತ್ತದೆ. ಇದರೊಳಗಿರುವ ಶಕ್ತಿಯುತ ಎಲೆಕ್ಟ್ರಿಕ್ ಮೋಟಾರ್, 204 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 310 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ.
ಬಿವೈಡಿ ಇಮ್ಯಾಕ್ಸ್ ಎಂಪಿವಿ ಹತ್ತಾರು ಅತ್ಯಾಧುನಿಕ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಫ್ಲೋಟಿಂಗ್ ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್ (12.8-ಇಂಚು), ಡಿಜಿಟಲ್ ಡ್ರೈವರ್ ಡಿಸ್ಪ್ಲೇ (5-ಇಂಚು), ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳು, ಆಟೋ ಎಸಿ, ವೈರ್‌ಲೆಸ್ ಫೋನ್ ಚಾರ್ಜರ್, 6-ಸ್ಪೀಕರ್ ಸೌಂಡ್ ಸಿಸ್ಟಮ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ.

ಹೊಚ್ಚ ಹೊಸ ಬಿವೈಡಿ ಇಮ್ಯಾಕ್ಸ್ ಎಲೆಕ್ಟ್ರಿಕ್ ಎಂಪಿವಿಯಾಗಿರುವುದರಿಂದ ತುಂಬು ಕುಟುಂಬ ಆರಾಮದಾಯಕವಾಗಿ ದೂರದ ಊರುಗಳಿಗೆ ಪ್ರಯಾಣಿಯಬಹುದು. ಅದಕ್ಕೆ ಅನುಗುಣವಾಗಿ ಈ ಕಾರು 6 ಅಥವಾ 7 ಆಸನ (ಸೀಟ್) ಆಯ್ಕೆ ವ್ಯವಸ್ಥೆಯಲ್ಲಿಯೂ ಖರೀದಿಗೆ ಲಭ್ಯವಿದೆ. ಪ್ರವಾಸದ ವೇಳೆಯಲ್ಲಿ ಹೆಚ್ಚಿನ ಲಗೇಜ್ ಸಾಗಿಸಲು 180 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ.
ಈ ನೂತನ ಎಂಪಿವಿ ಸುರಕ್ಷತೆಗೂ ಹೆಸರುವಾಸಿಯಾಗಿದೆ. ಪ್ರಯಾಣಿಕರ ರಕ್ಷಣೆಗಾಗಿ 6-ಏರ್‌ಬ್ಯಾಗ್‌ಗಳು, ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಲೆವೆಲ್-2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಪಡೆದಿದೆ. ಈ ಕಾರಿಗೆ ಟೊಯೊಟಾ ಇನ್ನೋವಾ ಪ್ರಬಲವಾದ ಪ್ರತಿಸ್ಪರ್ಧಿಯಾಗಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








