ಇನ್ನೋವಾಗೆ ಪ್ರತಿಸ್ಪರ್ಧಿ: ಚೀನಾ ಕಂಪನಿಯ 7-ಸೀಟರ್ ಫ್ಯಾಮಿಲಿ ಕಾರು ಈ ದಿನ ಅದ್ದೂರಿಯಾಗಿ ಬಿಡುಗಡೆ.. ಬೆಲೆ ಎಷ್ಟು?
ಜಾಗತಿಕವಾಗಿ ಎಲಾನ್ ಮಸ್ಕ್ ಮಾಲೀಕತ್ವದ ಟೆಸ್ಲಾ (Tesla) ಕಂಪನಿ ಕಾರುಗಳಿಗೆ ಚೀನಾ ಮೂಲದ ಬಿವೈಡಿ (BYD) ಮಾರಾಟಗೊಳಿಸುವ ಎಲೆಕ್ಟ್ರಿಕ್ ಕಾರುಗಳು ಪ್ರಬಲವಾದ ಸ್ಪರ್ಧೆಯೊಡ್ಡುತ್ತಿವೆ. ಭಾರತದ ವಾಹನ ಮಾರುಕಟ್ಟೆಯಲ್ಲಿಯೂ ಬಿವೈಡಿ ಕಂಪನಿ ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಪಡೆದುಕೊಂಡಿರುವ ವಿವಿಧ ಕಾರುಗಳನ್ನು ಮಾರಾಟ ಮಾಡುತ್ತಿದೆ. ಸದ್ಯ, ಟೊಯೊಟಾ ಇನ್ನೋವಾ ಹೈಕ್ರಾಸ್ ಮತ್ತು ಕ್ರಿಸ್ಟಾ ಎಂಪಿವಿಗಳಿಗೆ ಎದುರಾಳಿಯಾಗಿ ಹೊಚ್ಚ ಹೊಸ ಎಲೆಕ್ಟ್ರಿಕ್ ಫ್ಯಾಮಿಲಿ ಕಾರನ್ನು ಪರಿಚಯಿಸಲು ತಯಾರಿ ನಡೆಸುತ್ತಿದೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.
ಬಿವೈಡಿ ಇಂಡಿಯಾ (BYD India) ನೂತನ ಇಮ್ಯಾಕ್ಸ್ 7 (eMAX 7) ಎಂಪಿವಿ ಬಿಡುಗಡೆಗೊಳಿಸಲು ಅಧಿಕೃತವಾಗಿ ದಿನಾಂಕ ನಿಗದಿಪಡಿಸಿದೆ. ಈ ಕಾರು ಅಕ್ಟೋಬರ್ 8ರಂದು ಮಾರಾಟಕ್ಕೆ ಬರಲಿದೆ. ದೇಶೀಯ ಮಾರುಕಟ್ಟೆಯಲ್ಲಿ ಹೊಸ ಎಂಪಿವಿಯನ್ನು ಕಂಪನಿಯು ಇ6 (e6) ಫ್ಯಾಮಿಲಿ ಕಾರಿನ ಜಾಗಕ್ಕೆ ತರುತ್ತಿದ್ದು, ಗ್ರಾಹಕರು ಕೂಡ ದೊಡ್ಡಮಟ್ಟದಲ್ಲಿ ನಿರೀಕ್ಷೆಗಳನ್ನು ಇಟ್ಟುಕೊಂಡಿದ್ದಾರೆ.

ಬಿವೈಡಿ ಇಮ್ಯಾಕ್ಸ್ 7 (BYD eMAX 7) ಎಂಪಿವಿ ಹೊರಭಾಗದಲ್ಲಿ ಅತ್ಯಾಧುನಿಕವಾಗಿರುವ ವಿನ್ಯಾಸ (ಡಿಸೈನ್) ಹೊಂದಿರಲಿದೆ. ಅದು ಅಂತರರಾಷ್ಟ್ರೀಯವಾಗಿ ಮಾರಾಟವಾಗುತ್ತಿರುವ ಎಂ6 (M6) ಕಾರಿಗೆ ಬಹುತೇಕ ಹೋಲಿಕೆಯಾಗಲಿದೆ ಎನ್ನಲಾಗಿದೆ. ಈ ಇಮ್ಯಾಕ್ಸ್ 7 ಎಂಪಿವಿ ಉತ್ತಮವಾಗಿರುವ ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಮುಂಭಾಗ (ಫ್ರಂಟ್) ಮರುವಿನ್ಯಾಸಗೊಳಿಸಲಾದ ಬಂಪರ್, ಹಿಂಭಾಗ (ರೇರ್) ಎಲ್ಇಡಿ ಲೈಟ್ ಬಾರ್‌ಗೆ ಕನೆಕ್ಟ್ ಆಗಿರುವ ಎಲ್ಇಡಿ ಟೈಲ್‌ಲೈಟ್‌ಗಳನ್ನು ಒಳಗೊಂಡಿರುವ ಸಾಧ್ಯತೆಯಿದೆ.
ಮುಂಬರಲಿರುವ ಬಿವೈಡಿ ಇಮ್ಯಾಕ್ಸ್ 7 ಎಂಪಿವಿ ಒಳಭಾಗದಲ್ಲಿಯೂ ವಿನೂತನವಾದ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಹೊಂದಿರಲಿದ್ದು, 6 ಅಥವಾ 7 ಆಸನ ಆಯ್ಕೆ ವ್ಯವಸ್ಥೆಯಲ್ಲಿ ಖರೀದಿಗೆ ದೊರೆಯುವ ನಿರೀಕ್ಷೆಯಿದೆ. ಈ ಕಾರು, ದೊಡ್ಡದಾಗಿರುವ ಸೆಂಟ್ರಲ್ ಟಚ್‌ಸ್ಕ್ರೀನ್ ಸಿಸ್ಟಮ್, 3-ಸ್ಪೋಕ್ ಸ್ಟೀರಿಂಗ್ ವೀಲ್ ಮತ್ತು ಪನೋರಮಿಕ್ ಸನ್‌ರೂಫ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿರಬಹುದು ಎಂದು ತಿಳಿದುಬಂದಿದೆ.

ಬಿವೈಡಿ ಇಮ್ಯಾಕ್ಸ್ 7 ಎಂಪಿವಿ ಶಕ್ತಿಯುತವಾಗಿರುವ 71.8 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಪಡೆದಿರಲಿದೆ. ಇದರಲ್ಲಿರುವ ಎಲೆಕ್ಟ್ರಿಕ್ ಮೋಟಾರ್ 201 ಬಿಹೆಚ್‍ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 310 ಎನ್ಎಂ (ನ್ಯೂಟನ್ ಮೀಟರ್) ಟಾರ್ಕ್ ಉತ್ಪಾದಿಸಬಹುದು ಎಂದು ಅಂದಾಜಿಸಲಾಗಿದೆ.
ಈ ಹೊಸ ಎಲೆಕ್ಟ್ರಿಕ್ ಕಾರು ಸಂಪೂರ್ಣ ಚಾರ್ಜ್‌ನಲ್ಲಿ 530 ಕಿಲೋಮೀಟರ್‌ವರೆಗೆ ರೇಂಜ್ (ಮೈಲೇಜ್) ಕೊಡಬಹುದು ಎಂದು ಹೇಳಲಾಗಿದೆ. ಇದು ಎಂಪಿವಿಯಾಗಿರುವುದರಿಂದ ಸ್ವಲ್ಪ ಹೆಚ್ಚಿನ ಬೆಲೆಯಲ್ಲಿ ಹೊಂದಿರಬಹುದು ಎನ್ನಲಾಗಿದ್ದು, ರೂ.25 ಲಕ್ಷದಿಂದ ರೂ.33 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿಗೆ ದೊರೆಯುವ ನಿರೀಕ್ಷೆಯಿದೆ.

ದೇಶೀಯ ಮಾರುಕಟ್ಟೆಯಲ್ಲಿ ಬಿವೈಡಿ ಕಂಪನಿಯು ಸೀಲ್ ಹಾಗೂ ಆಟ್ಟೋ 3 ಹೆಸರಿನ ಎಲೆಕ್ಟ್ರಿಕ್ ಕಾರುಗಳನ್ನು ಮಾರಾಟ ಮಾಡುತ್ತಿದೆ. ಬಿವೈಡಿ ಸೀಲ್ ಸೆಡಾನ್ ರೂ.41 ಲಕ್ಷದಿಂದ ರೂ.53 ಲಕ್ಷ (ಎಕ್ಸ್ ಶೋರೂಂ) ದರವನ್ನು ಹೊಂದಿದೆ. ಭರ್ತಿ ಚಾರ್ಜ್‌ನಲ್ಲಿ 510 ರಿಂದ 650 ಕಿಲೋಮೀಟರ್‌ವರೆಗೆ ಓಡುತ್ತದೆ. ಬಿವೈಡಿ ಆಟ್ಟೋ 3 ಎಸ್‌ಯುವಿ ರೂ.24.99 ಲಕ್ಷದಿಂದ ರೂ.33.99 ಲಕ್ಷ ಬೆಲೆಯನ್ನು ಪಡೆದಿದೆ. ಪೂರ್ತಿ ಚಾರ್ಜ್‌ನಲ್ಲಿ 468 ರಿಂದ 521 ಕಿಲೋಮೀಟರ್‌ವರೆಗೆ ಕ್ರಮಿಸುತ್ತದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








