BYD Seal: ಚೀನಾ ಮಾಲೀಕತ್ವದ 'ಬಿವೈಡಿ ಸೀಲ್' ಎಲೆಕ್ಟ್ರಿಕ್ ಕಾರಿನ ವಿಡಿಯೋ ರಿವ್ಯೂ

ಚೀನಾದ ಪ್ರಮುಖ ಎಲೆಕ್ಟ್ರಿಕ್ ವಾಹನ ತಯಾರಕ ಕಂಪನಿಯಾಗಿರುವ ಬಿವೈಡಿ (BYD), ದೇಶೀಯ ಮಾರುಕಟ್ಟೆಯಲ್ಲಿ ನೂತನ ಸೀಲ್ ಎಲೆಕ್ಟ್ರಿಕ್ ಸೆಡಾನ್‌ನ್ನು ಈಚೆಗೆ ಬಿಡುಗಡೆಗೊಳಿಸಿತ್ತು. ನಮ್ಮ 'ಡ್ರೈವ್‌ಸ್ಪಾರ್ಕ್' ತಂಡದ ಪ್ರತಿನಿಧಿಗೆ ನವದೆಹಲಿಯಲ್ಲಿ ಈ ಕಾರನ್ನು ಟೆಸ್ಟ್ ಡ್ರೈವ್ ನಡೆಸಲು ಅವಕಾಶ ಲಭ್ಯವಾಯಿತು. ಅದರ ಸಂಪೂರ್ಣವಾದ ವಿಡಿಯೋ ರಿವ್ಯೂ ಇಲ್ಲಿದೆ.

ಬಿವೈಡಿ ಸೀಲ್ ಅತ್ಯಾಧುನಿಕ ವಿನ್ಯಾಸವನ್ನು ಹೊಂದಿದ್ದು, ಮುಂಭಾಗ ಉತ್ತಮ ಗುಣಮಟ್ಟದ ಸ್ಪ್ಲಿಟ್ ಲೈಟಿಂಗ್ ಸೆಟಪ್, ಹೆಡ್‌ಲೈಟ್‌ಗಳು ಮತ್ತು ಆಕರ್ಷಕ ಎಲ್‌ಇಡಿ ಡಿಆರ್‌ಎಲ್‌ಗಳನ್ನೂ ಹೊಂದಿದೆ. ಫ್ಲಶ್ ಡೋರ್ ಹ್ಯಾಂಡಲ್‌ಗಳನ್ನು ತನ್ನದಾಗಿಸಿಕೊಂಡಿದ್ದು, ಹಿಂಭಾಗ ಅತ್ಯುತ್ತಮ ಟೈಲ್‌ಲೈಟ್ ಅನ್ನು ಹೊಂದಿದೆ. ಜೊತೆಗೆ 19-ಇಂಚಿನ ಏರೋ ವೀಲ್ ಗಳನ್ನು ಪಡೆದಿದೆ.

ಈ ಕಾರಿನಲ್ಲಿ 5 ಮಂದಿ ಆರಾಮದಾಯಕವಾಗಿ ಕುಳಿತುಕೊಂಡು ಪ್ರಯಾಣಿಸಬಹುದು. 15.6-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸ್ಕ್ರೀನ್, ವೈರ್‌ಲೆಸ್ ಆಂಡ್ರಾಯ್ಡ್ ಆಟೋ, 10.25-ಇಂಚಿನ ಡ್ರೈವರ್ ಡಿಸ್ಪ್ಲೇ, ಹೆಡ್ಸ್-ಅಪ್ ಡಿಸ್ಪ್ಲೇ, 360 ಡಿಗ್ರಿ ಕ್ಯಾಮೆರಾ, ಪ್ರೀಮಿಯಂ ಆಡಿಯೋ ಸಿಸ್ಟಮ್, 2 ವೈರ್‌ಲೆಸ್ ಫೋನ್ ಚಾರ್ಜಿಂಗ್ ಪ್ಯಾಡ್‌, ಮಲ್ಟಿ ಯುಎಸ್‌‍ಬಿ ಎ & ಸಿ ಪೋರ್ಟ್‌ ಒಳಗೊಂಡಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ.

ಬಿವೈಡಿ ಸೀಲ್ (BYD Seal) ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆಯನ್ನು ಒದಗಿಸುತ್ತದೆ. ಈ ಕಾರು, ಯುರೋ ಎನ್‌ಸಿಎಪಿ (Euro NCAP) ಕ್ರ್ಯಾಶ್ ಟೆಸ್ಟ್ ನಲ್ಲಿ 5 ಸ್ಟಾರ್ ಸೇಫ್ಟಿ ರೇಟಿಂಗ್ ಪಡೆದಿದೆ. ವಯಸ್ಕ ಹಾಗೂ ಮಕ್ಕಳ ರಕ್ಷಣೆ ವಿಭಾಗದಲ್ಲಿ ಶೇಕಡ 89%ಗೆ 86% ಅಂಕಗಳನ್ನು ಗಳಿಸಿದೆ. 9 ಏರ್‌ಬ್ಯಾಗ್‌, ADAS (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಸೇರಿದಂತೆ ಹಲವು ಸುರಕ್ಷತಾ ವೈಶಿಷ್ಟ್ಯಗಳನ್ನು ಒಳಗೊಂಡಿದೆ.

BYD Seal

ಭಾರತದ ಮಾರುಕಟ್ಟೆಯಲ್ಲಿ ಈ ಬಿವೈಡಿ ಸೀಲ್ ಸೆಡಾನ್, ಮೂರು ರೂಪಾಂತರಗಳ ಆಯ್ಕೆಯಲ್ಲಿ ಖರೀದಿದಾರರಿಗೆ ಲಭ್ಯವಿದೆ. ಡೈನಾಮಿಕ್ ರೂ.41 ಲಕ್ಷ, ಪ್ರೀಮಿಯಂ ರೂ.45.5 ಲಕ್ಷ ಹಾಗೂ ಪರ್ಫಾರ್ಮೆನ್ಸ್ ರೂ.53 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಪಡೆದಿದೆ. ಡೈನಾಮಿಕ್ & ಪ್ರೀಮಿಯಂ ಮಾದರಿಗಳು ಸಿಂಗಲ್ ಮೋಟಾರ್ ಹಾಗೂ ಪರ್ಫಾರ್ಮೆನ್ಸ್ ಆವೃತ್ತಿಯು ಟೂ ಎಲೆಕ್ಟ್ರಿಕ್ ಮೋಟಾರ್ ಅನ್ನು ಪಡೆದಿದೆ.

ಬಿವೈಡಿ ಸೀಲ್ ಆರಂಭಿಕ ರೂಪಾಂತರವಾಗಿರುವ 'ಡೈನಾಮಿಕ್' 61.44 ಕೆಡಬ್ಲ್ಯೂಹೆಚ್ ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಹೊಂದಿದ್ದು, ಸಂಪೂರ್ಣ ಚಾರ್ಜ್ ನಲ್ಲಿ 510 ಕಿಲೋಮಿಟರ್ ರೇಂಜ್ (ಮೈಲೇಜ್) ನೀಡುತ್ತದೆ. ಪ್ರೀಮಿಯಂ ಮಾದರಿ, 82.56 ಕೆಡಬ್ಲ್ಯೂಹೆಚ್ ಬ್ಯಾಟರಿಯನ್ನು ಪಡೆದಿದ್ದು, ಭರ್ತಿ ಚಾರ್ಜ್ ನಲ್ಲಿ 650 ಕಿ.ಮೀ ಕ್ರಮಿಸುತ್ತದೆ. ಪರ್ಫಾರ್ಮೆನ್ಸ್ ಆವೃತ್ತಿಯು ಸಹ 82.56 ಕೆಡಬ್ಲ್ಯೂಹೆಚ್ ಬ್ಯಾಟರಿ ಪ್ಯಾಕ್ ಅನ್ನು ಒಳಗೊಂಡಿದ್ದು, ಭರ್ತಿ ಚಾರ್ಜ್ ನಲ್ಲಿ 580 ಕಿ.ಮೀ ಓಡುತ್ತದೆ.

ಡ್ರೈವ್‌ಸ್ಪಾರ್ಕ್ ಕನ್ನಡ ತಂಡ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ಒದಗಿಸುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ ಗಳನ್ನು ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Monday, April 22, 2024, 10:31 [IST]
English summary
Byd seal car video review full details
Read more on ಬಿವೈಡಿ byd
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+