BYD: ನಾಳೆ ಚೀನಾದ ಮಾಲೀಕತ್ವದ ಬಿವೈಡಿ ಎಲೆಕ್ಟ್ರಿಕ್ ಕಾರು ಬಿಡುಗಡೆ.. ವಿಶೇಷತೆಗಳೇನು?

ಚೀನಾ ಮಾಲೀಕತ್ವದ ಬಿವೈಡಿ (BYD), ನೂತನ ಸೀಲ್‌ (Seal) ಎಲೆಕ್ಟ್ರಿಕ್ ಕಾರನ್ನು ನಾಳೆ (ಮಾ.5) ದೇಶೀಯ ಮಾರುಕಟ್ಟೆಯಲ್ಲಿ ಅದ್ದೂರಿಯಾಗಿ ಬಿಡುಗಡೆ ಮಾಡಲಿದೆ. ಈಗಾಗಲೇ, ಈ ಕಾರಿಗಾಗಿ ಬುಕ್ಕಿಂಗ್ ಪಡೆಯುವುದನ್ನು ಕಂಪನಿ ಶುರು ಮಾಡಿದ್ದು, ಗ್ರಾಹಕರು ಕೂಡ ಸಾಕಷ್ಟು ನಿರೀಕ್ಷೆಗಳನ್ನು ಇಟ್ಟುಕೊಂಡಿದ್ದಾರೆ.

ಈ ಸೀಲ್‌ ಕಾರನ್ನು ಕಳೆದ ವರ್ಷದ ಜನವರಿಯಲ್ಲಿ ನವದೆಹಲಿಯಲ್ಲಿ ನಡೆದ ಆಟೋ ಎಕ್ಸ್‌ಪೋದಲ್ಲಿ ಮೊದಲ ಬಾರಿಗೆ ಪ್ರದರ್ಶಿಸಲಾಯಿತ್ತು. ಸದ್ಯ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಮಾರಾಟಗೊಳ್ಳುವ ಬಿವೈಡಿ ಸೀಲ್ ಕಾರು, 61.4 ಕೆಡಬ್ಲ್ಯೂಹೆಚ್ (kWh) ಹಾಗೂ 82.5 ಕೆಡಬ್ಲ್ಯೂಹೆಚ್ (kWh) ಬ್ಯಾಟರಿ ಪ್ಯಾಕ್ ಆಯ್ಕೆಯಲ್ಲಿ ಸಿಗಲಿದ್ದು, ಸಂಪೂರ್ಣ ಚಾರ್ಜ್ ನಲ್ಲಿ 460 ಕಿ.ಮೀ ರಿಂದ 570 ಕಿ.ಮೀ ರೇಂಜ್ (ಮೈಲೇಜ್) ಕೊಡುತ್ತದೆ.

BYD Seal Electric Car Launched In India Tomorrow What Is The Expectations

ನೂತನ ಬಿವೈಡಿ ಸೀಲ್‌ ಎಲೆಕ್ಟ್ರಿಕ್ ಕಾರು, ಕೇವಲ 3.8 ಸೆಕೆಂಡುಗಳಲ್ಲಿ 0-100 ಕೆಎಂಪಿಎಚ್ ವೇಗವನ್ನು ಹೊಂದಿದಲಿದೆ. 15.6-ಇಂಚಿನ ಇನ್ಫೋಟೈನ್‌ಮೆಂಟ್ ಸಿಸ್ಟಮ್, 10.25-ಇಂಚಿನ ಡಿಜಿಟಲ್ ಡ್ರೈವರ್ ಡಿಸ್ಪ್ಲೇ, ಫೋನ್ ಕನೆಕ್ಟಿವಿಟಿ, ವೈರ್‌ಲೆಸ್ ಚಾರ್ಜಿಂಗ್, ಡುಯಲ್ ಜೋನ್ ಕ್ಲೇಮೇಟ್ ಕಂಟ್ರೋಲ್, ವೆಂಟಿಲೇಟೆಡ್, ಸನ್‌ರೂಫ್‌ ಮತ್ತು ಹೊಂದಾಣಿಕೆ ಮಾಡಬಹುದಾದ ಮುಂಭಾಗದ ಆಸನಗಳು (Adjustable Front Seats) ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ.

ಸುರಕ್ಷತೆಯ ವಿಚಾರದಲ್ಲಿಯೂ ಬಿವೈಡಿ ಸೀಲ್ (BYD Seal) ಎಲೆಕ್ಟ್ರಿಕ್ ಕಾರು ಅತ್ಯಾಧುನಿಕವಾಗಿದ್ದು, ಕಳೆದ ಅಕ್ಟೋಬರ್‌ ತಿಂಗಳಲ್ಲಿ ನಡೆದ ಯುರೋ ಎನ್‌ಸಿಎಪಿ (Euro NCAP) ಪರೀಕ್ಷೆಯಲ್ಲಿ 5 ಸ್ಟಾರ್ ಸೇಫ್ಟಿ ರೇಟಿಂಗ್ ಪಡೆದಿದೆ. ವಯಸ್ಕ (Adult) ಮತ್ತು ಮಕ್ಕಳ (Child) ರಕ್ಷಣೆ ವಿಭಾಗದಲ್ಲಿ ಶೇಕಡ 89%ಗೆ 86% ಅಂಕಗಳನ್ನು ಗಳಿಸಿದೆ. ಮಲ್ಟಿ ಏರ್‌ಬ್ಯಾಗ್‌, ADAS (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) 360 - ಡಿಗ್ರಿ ಕ್ಯಾಮೆರಾದಂತಹ ಹತ್ತಾರು ಸುರಕ್ಷತಾ ವೈಶಿಷ್ಟ್ಯಗಳನ್ನು ಪಡೆದಿದೆ.

BYD Seal Electric Car Launched In India Tomorrow What Is The Expectations

ಈ ಕಾರು ರೂ.60 ಲಕ್ಷ ಆಸುಪಾಸಿನಲ್ಲಿ ಗ್ರಾಹಕರಿಗೆ ಖರೀದಿಗೆ ದೊರೆಯಬಹುದು ಎಂದು ಅಂದಾಜಿಸಲಾಗಿದೆ. ಡಿಸಿ ಫಾಸ್ಟ್ ಸೇರಿದಂತೆ ವಿವಿಧ ಚಾರ್ಜಿಂಗ್ ಆಯ್ಕೆಯಲ್ಲಿ ಸಿಗಬಹುದು. ಈ ಕಾರಿಗೆ ದೇಶೀಯ ಮಾರುಕಟ್ಟೆಯಲ್ಲಿ ದೊಡ್ಡಮಟ್ಟದಲ್ಲಿ ಎದುರಾಳಿಗಳಿವೆ. ಮುಖ್ಯವಾಗಿ ಬಿಎಂಡಬ್ಲ್ಯೂ ಐ4, ಹ್ಯುಂಡೈ ಅಯೋನಿಕ್ 5, ವೋಲ್ವೋ ಸಿ.40 ರೀಚಾರ್ಜ್‌ ಹಾಗೂ ಕಿಯಾ ಇವಿ6ನೊಂದಿಗೆ ಸ್ಪರ್ಧಿಸಬೇಕಾಗಿದೆ.

ಭಾರತದ ಮಾರುಕಟ್ಟೆಯಲ್ಲಿ ಬಿವೈಡಿ ಮಾರಾಟಗೊಳಿಸುವ ಇತರೆ ಕಾರುಗಳ ಬಗ್ಗೆ ಮಾತನಾಡುವುದಾದರೆ, ಆಟ್ಟೋ 3 (Atto 3) ಎಲೆಕ್ಟ್ರಿಕ್ ಕಾರು, ರೂ.33.99 ಲಕ್ಷದಿಂದ ರೂ.34.49 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಲಭ್ಯವಿದೆ. ಇದರಲ್ಲಿ 60.48 ಕೆಡಬ್ಲ್ಯೂಹೆಚ್ (kWh) ಸಾಮರ್ಥ್ಯದ ಬ್ಯಾಟರಿ ಪ್ಯಾಕ್ ಬಳಕೆ ಮಾಡಲಾಗಿದ್ದು, ಭರ್ತಿ ಚಾರ್ಜ್ ನಲ್ಲಿ 521 ಕಿ.ಮೀ ಕ್ರಮಿಸುತ್ತದೆ.

ಬಿವೈಡಿ ಇ6 (BYD E6) ಎಲೆಕ್ಟ್ರಿಕ್ ಎಂಪಿವಿ ರೂ.29.15 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಗ್ರಾಹಕರಿಗೆ ಸಿಗುತ್ತದೆ. 71.7 ಕೆಡಬ್ಲ್ಯೂಹೆಚ್ (kWh) ಬ್ಯಾಟರಿ ಪ್ಯಾಕ್ ಹೊಂದಿದ್ದು, ಪೂರ್ತಿ ಚಾರ್ಜ್ ನಲ್ಲಿ 520 ಕಿ.ಮೀ ರೇಂಜ್ ಕೊಡುತ್ತದೆ. 10-ಇಂಚಿನ ಟಚ್‌ಸ್ಕ್ರೀನ್ ಡಿಸ್ಪ್ಲೇ, ಆಟೋ ಎಸಿಯಂತಹ ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಗಾಗಿ 4 ಏರ್‌ಬ್ಯಾಗ್‌, ESP (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ) ಅನ್ನು ಒಳಗೊಂಡಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Monday, March 4, 2024, 18:36 [IST]
English summary
Byd seal electric car launched in india tomorrow what expectations
Read more on ಬಿವೈಡಿ byd
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+