ನಿಮ್ಮ ಬಳಿ 7 ಲಕ್ಷ ರೂಪಾಯಿ ಇದ್ದರೆ ಸಾಕು.. ಕನಸಿನ ಕಾರನ್ನು ಮನೆ ತರಬಹುದು!
ಭಾರತದಲ್ಲಿ ವಿಭಕ್ತ ಕುಟುಂಬಗಳ ಸಂಖ್ಯೆ ದೊಡ್ಡದಿದ್ದು, 3 ಅಥವಾ 4 ಮಂದಿ ಸದಸ್ಯರಿರುತ್ತಾರೆ. ಅಂತಹ ಫ್ಯಾಮಿಲಿಗಳು ತಮ್ಮ ಬಜೆಟ್ ಬೆಲೆಗೆ ಉತ್ತಮವಾದ ಕಾರನ್ನು ಖರೀದಿಸಲು ಹುಡುಕಾಟವನ್ನು ನಡೆಸುತ್ತಿರುತ್ತಾರೆ. ಇಲ್ಲಿ ಸರಿ ಸುಮಾರು ರೂ.7 ಲಕ್ಷ ಆಸುಪಾಸಿನಲ್ಲಿ ಖರೀದಿಗೆ ದೊರೆಯುವ ಜನಪ್ರಿಯ ಕಂಪನಿಯ ಕಾರುಗಳ ಬಗ್ಗೆ ವಿವರಿಸಿದ್ದೇವೆ.
ಮೊದಲಿಗೆ ಟಾಟಾ ಮೋಟಾರ್ಸ್ (Tata Motors) ಮಾರಾಟಗೊಳಿಸುವ ಟಿಯಾಗೊ (Tiago) ಹ್ಯಾಚ್‌ಬ್ಯಾಕ್ ಬಗ್ಗೆ ಮಾತನಾಡೋಣ. ಈ ಕಾರು ರೂ.5.65 ಲಕ್ಷದಿಂದ ರೂ.8.90 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. 1.2-ಲೀಟರ್ ಪೆಟ್ರೋಲ್ ಹಾಗೂ ಸಿಎನ್‌ಜಿ ಎಂಜಿನ್ ಆಯ್ಕೆಯಲ್ಲಿ ದೊರೆಯಲಿದ್ದು, ರೂಪಾಂತರಗಳಿಗೆ ಅನುಗುಣವಾಗಿ 5-ಸ್ಪೀಡ್ ಮ್ಯಾನುವಲ್/ 5-ಸ್ಪೀಡ್ ಆಟೋಮೆಟಿಕ್ ಗೇರ್ ಬಾಕ್ಸ್ ಅನ್ನು ಪಡೆದಿದೆ.

ಟಾಟಾ ಟಿಯಾಗೊ ಕಾರಿನ ಪೆಟ್ರೋಲ್ ರೂಪಾಂತರಗಳು 19.43 ರಿಂದ 20.01 ಕೆಎಂಪಿಎಲ್ ಹಾಗೂ ಸಿಎನ್‌ಜಿ ಮಾದರಿಗಳು 26.49 ರಿಂದ 28.06 ಕೆಎಂ/ಕೆಜಿ ಮೈಲೇಜ್ ಕೊಡುತ್ತವೆ. 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, 8-ಸ್ಪೀಕರ್ ಸೌಂಡ್ ಸಿಸ್ಟಮ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಗಾಗಿ ಡುಯಲ್ ಫ್ರಂಟ್ ಏರ್‌ಬ್ಯಾಗ್, ರೇರ್ ಪಾರ್ಕಿಂಗ್ ಸೆನ್ಸರ್ಸ್ ಅನ್ನು ಹೊಂದಿದೆ.
ಹುಂಡೈ ಎಕ್ಸ್‌ಟರ್ (Hyundai Exter) ಎಸ್‌ಯುವಿ, ರೂ.6.13 ಲಕ್ಷದಿಂದ ರೂ.10.28 ಎಕ್ಸ್ ಶೋರೂಂ ಬೆಲೆಯಲ್ಲಿ ದೊರೆಯುತ್ತದೆ. ಈ ಕಾರು 1.2-ಲೀಟರ್ ಪೆಟ್ರೋಲ್ ಮತ್ತು ಸಿಎನ್‌ಜಿ ಎಂಜಿನ್ ಆಯ್ಕೆಯನ್ನು ಪಡೆದಿದೆ. 5-ಸ್ಪೀಡ್ ಮ್ಯಾನುವಲ್/ 5-ಸ್ಪೀಡ್ ಆಟೋಮೆಟಿಕ್ ಅನ್ನು ಒಳಗೊಂಡಿದ್ದು, 5 ಮಂದಿ ಆರಾಮದಾಯಕವಾಗಿ ಕುಳಿತುಕೊಂಡು ಪ್ರಯಾಣಿಸಬಹುದು.

ಈ ಹುಂಡೈ ಎಕ್ಸ್‌ಟರ್ ಕಾರಿನ ಪೆಟ್ರೋಲ್ ರೂಪಾಂತರಗಳು 19.2 ರಿಂದ 19.4 ಕೆಎಂಪಿಎಲ್, ಸಿಎನ್‌ಜಿ ಮಾದರಿಗಳು 27.1 ಕೆಎಂ/ಕೆಜಿ ಮೈಲೇಜ್ ನೀಡುತ್ತವೆ. 8-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಸೆಮಿ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಕ್ರೂಸ್ ಕಂಟ್ರೋಲ್, ವೈರ್‌ಲೆಸ್ ಫೋನ್ ಚಾರ್ಜಿಂಗ್, ಸನ್‌ರೂಫ್ ಒಳಗೊಂಡಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಯ ದೃಷ್ಟಿಯಿಂದ 6 ಏರ್‌ಬ್ಯಾಗ್, TPMS (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಅನ್ನು ಪಡೆದಿದೆ.
ಮಾರುತಿ ಸುಜುಕಿ ಸ್ವಿಫ್ಟ್ (Maruti Suzuki Swift) ಕಾರು ರೂ.5.99 ಲಕ್ಷದಿಂದ ರೂ.9.03 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಪಡೆದಿದೆ. ಈ ಕಾರು ಸಹ 1.2-ಲೀಟರ್ ಪೆಟ್ರೋಲ್/ ಸಿಎನ್‌ಜಿ ಎಂಜಿನ್ ಅನ್ನು ಹೊಂದಿದ್ದು, ರೂಪಾಂತರಗಳಿಗೆ ಅನುಗುಣವಾಗಿ 5-ಸ್ಪೀಡ್ ಮ್ಯಾನುವಲ್/ 5-ಸ್ಪೀಡ್ ಆಟೋಮೆಟಿಕ್ ಗೇರ್ ಬಾಕ್ಸ್ ಆಯ್ಕೆಯನ್ನು ಒಳಗೊಂಡಿದೆ. ಪೆಟ್ರೋಲ್ ರೂಪಾಂತರಗಳು 22.38 ರಿಂದ 22.56 ಕೆಎಂಪಿಎಲ್, ಸಿಎನ್‌ಜಿ ಆವೃತ್ತಿಗಳು 30.90 ಕೆಎಂ/ಕೆಜಿ ಮೈಲೇಜ್ ಕೊಡುತ್ತವೆ.

ಈ ಸ್ವಿಫ್ಟ್ ಹ್ಯಾಚ್‌ಬ್ಯಾಕ್‌ನಲ್ಲಿಯು 5 ಮಂದಿ ಆರಾಮದಾಯಕವಾಗಿ ಪ್ರಯಾಣಿಸಬಹುದು. 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಕ್ರೂಸ್ ಕಂಟ್ರೋಲ್ & ಆಟೋ ಎಸಿ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಗಾಗಿ ಡುಯಲ್ ಫ್ರಂಟ್ ಏರ್‌ಬ್ಯಾಗ್, ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಹಿಲ್-ಹೋಲ್ಡ್ ಕಂಟ್ರೋಲ್, ESC (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್) ಮತ್ತು ರೇರ್ ಪಾರ್ಕಿಂಗ್ ಸೆನ್ಸರ್ಸ್ ಅನ್ನು ಪಡೆದಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ತಂಡ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ಒದಗಿಸುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್ ಗಳನ್ನು ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








