ಈ ಕಾರುಗಳನ್ನು ಎದುರಿಸುತ್ತಾ ಮ್ಯಾಗ್ನೈಟ್‌ ಫೇಸ್‌ಲಿಫ್ಟ್‌: ಟಾಟಾ ಕಡೆಯಿಂದ ಭರ್ಜರಿ ಕಾಂಪಿಟೇಷನ್‌

ಜಪಾನ್ ಮೂಲದ ಜನಪ್ರಿಯ ವಾಹನ ತಯಾರಕ ಕಂಪನಿಯಾದ ನಿಸ್ಸಾನ್ (Nissan) ದೇಶೀಯ ಮಾರುಕಟ್ಟೆಯಲ್ಲಿ 2020ರಲ್ಲಿ ಮ್ಯಾಗ್ನೈಟ್ ಕಾರನ್ನು ಬಿಡುಗಡೆ ಮಾಡಿದೆ. ಸಾಕಷ್ಟು ಫೀಚರ್‌ಗಳಿಂದ ಬಂದಿರುವ ಈ ಕಾರಿನ ಆರಂಭಿಕ ಬೆಲೆ ಮಾತ್ರ ಯಾವುದೇ ರೀತಿಯಲ್ಲೂ ಬದಲಾಗಿಲ್ಲ ಎಂಬುದು ಪ್ರಮುಖವಾದ ವಿಷಯ. ಇಂದಿನ ಈ ಲೇಖನದಲ್ಲಿ ನಾವು ನಿಸ್ಸಾನ್‌ ಮ್ಯಾಗ್ನೈಟ್ ಫೇಸ್‌ಲಿಫ್ಟ್‌ ಬದಲು ಖರೀದಿ ಮಾಡಬಹುದಾದ ಇತರ ಕಾರುಗಳು ಯಾವುದಿದೆ ಎಂಬುದನ್ನು ನೋಡೋಣ ಬನ್ನಿ.

ಟಾಟಾ ನೆಕ್ಸಾನ್‌: ನೆಕ್ಸಾನ್ ಮೂರು ಎಂಜಿನ್ ಆಯ್ಕೆಯಲ್ಲಿ ಗ್ರಾಹಕರಿಗೆ ದೊರೆಯುತ್ತದೆ. 1.2 - ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್, 118.2 bhp ಗರಿಷ್ಠ ಪವರ್ ಹಾಗೂ 170 Nm ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 5 ಅಥವಾ 6 ಸ್ವೀಡ್ ಮ್ಯಾನುವಲ್, 6 ಸ್ವೀಡ್ ಅಥವಾ 7 ಸ್ವೀಡ್ ಡುಯಲ್ ಕ್ಲಚ್ ಆಟೋಮೆಟಿಕ್ ಗೇರ್ ಬಾಕ್ಸ್ ಆಯ್ಕೆಯಲ್ಲಿ ಸಿಗುತ್ತದೆ.

Cars To Consider In Nissan Magnite Facelift Top Variant Budget

1.5 ಲೀಟರ್ ಟರ್ಬೊ ಡೀಸೆಲ್ ಎಂಜಿನ್ ಹೊಂದಿರುವ ಕಾರು, 113.3 bhp ಪವರ್ ಮತ್ತು 260 Nm ಪೀಕ್ ಟಾರ್ಕ್ ಹೊರಹಾಕುವ ಸಾಮರ್ಥ್ಯ ಒಳಗೊಂಡಿದೆ. 6 ಸ್ಪೀಡ್ ಮ್ಯಾನುವಲ್ ಅಥವಾ 6 ಸ್ಪೀಡ್ ಆಟೋಮೆಟಿಕ್ ಗೇರ್ ಬಾಕ್ಸ್ ನೊಂದಿಗೆ ದೊರೆಯುತ್ತದೆ. ಈ ಮೂಲಕ ಅತ್ಯಂತ ಪವರ್ ಫುಲ್ ಆಗಿದೆ. ಇತ್ತೀಚೆಗೆ ಇದರ ಸಿಎನ್‌ಜಿ ಆವೃತ್ತಿ ಸಹ ಬಿಡುಗಡೆಯಾಗಿತ್ತು.

ಮಾರುತಿ ಸುಜುಕಿ ಬ್ರೆಝಾ: ಮಾರುತಿ ಸುಜುಕಿ ಬ್ರೆಝಾ ಬಗ್ಗೆ ನೋಡುವುದಾದರೆ, ಭಾರತೀಯ ಕಾರು ಮಾರುಕಟ್ಟೆಯಲ್ಲಿ ಅತೀ ಹೆಚ್ಚು ಮಾರಾಟವಾದ ಎಸ್‌ಯುವಿಗಳಲ್ಲಿ ಮಾರುತಿ ಸುಜುಕಿ ಬ್ರೆಝಾ (Maruti Brezza) ಸಹ ಒಂದು. ಈ ಕಾರು ಭಾರತದಲ್ಲಿ ಒಂದು ಮಿಲಿಯನ್‌ಗೂ ಅಧಿಕ ಸಂಖ್ಯೆಯಲ್ಲಿ ಮಾರಾಟವಾಗಿದೆ. ಸದ್ಯ, ಭಾರತದ ಮಾರುಕಟ್ಟೆಯಲ್ಲಿ ಖರೀದಿಗೆ ಸಿಗುವ ಮಾರುತಿ ಸುಜುಕಿ ಬ್ರೆಝಾ (Maruti Suzuki Brezza), ರೂ.8.29 ಲಕ್ಷದಿಂದ ರೂ.14.14 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ.

Cars To Consider In Nissan Magnite Facelift Top Variant Budget

ಈ ಕಾರು ಎರಡು ಪವರ್ ಟ್ರೇನ್ ಆಯ್ಕೆಯಲ್ಲಿ ಸಿಗುತ್ತದೆ. ಇದರ 1.5-ಲೀಟರ್ ಪೆಟ್ರೋಲ್ ಎಂಜಿನ್, 103 ಪಿಎಸ್ ಗರಿಷ್ಠ ಪವರ್ (ಶಕ್ತಿ) ಮತ್ತು 137 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. 5-ಸ್ವೀಡ್ ಮ್ಯಾನುವಲ್ ಅಥವಾ 6-ಸ್ವೀಡ್ ಆಟೋಮೆಟಿಕ್ ಗೇರ್ ಬಾಕ್ಸ್ ಆಯ್ಕೆಯಲ್ಲಿ ಖರೀದಿಗೆ ಲಭ್ಯವಿದೆ.

ಸಿಎನ್‌ಜಿ ಚಾಲಿತ ಕಾರು ಸಹ ಇದೇ ಎಂಜಿನ್ ಆಯ್ಕೆಯನ್ನು ಪಡೆದಿದೆ. ಆದರೆ, 88 ಪಿಎಸ್ ಪವರ್ ಹಾಗೂ 121.5 ಎನ್ಎಂ ಪೀಕ್ ಟಾರ್ಕ್ ಹೊರಹಾಕಲಷ್ಟೇ ಶಕ್ತವಾಗಿದೆ. ಜೊತೆಗೆ 5-ಸ್ವೀಡ್ ಮ್ಯಾನುವಲ್ ಗೇರ್ ಬಾಕ್ಸ್ ನೊಂದಿಗೂ ಸಿಗುತ್ತದೆ. ಪೆಟ್ರೋಲ್ ರೂಪಾಂತರಗಳು 17.38 ರಿಂದ 19.89 ಕೆಎಂಪಿಎಲ್, ಸಿಎನ್‌ಜಿ ಮಾದರಿಗಳು 25.51 ಕೆಎಂ/ಕೆಜಿ ವರೆಗೆ ಮೈಲೇಜ್ ಕೊಡುತ್ತವೆ.

ಕಿಯಾ ಸಾನೆಟ್‌: ಮೊದಲಿಗೆ ಕಿಯಾ ಸೋನೆಟ್‌ ಕಾರಿನ ಎಕ್ಸ್‌ ಶೋರೂಮ್‌ ಬೆಲೆ ನೋಡುವುದಾದರೆ ಸುಮಾರು 7,99,000 ರೂಪಾಯಿಗಳು. ಇದಕ್ಕೆ ಕರ್ನಾಟಕದ ಆರ್‌ಟಿಒ ಟ್ಯಾಕ್ಸ್‌ ನೋಡುವುದಾದರೆ ಅದು ಸುಮಾರು 1,24,165 ಲಕ್ಷ ರೂಪಾಯಿಗಳಷ್ಟು ಬರುತ್ತದೆ. ಈ ಕಾರಿನ ಇನ್ಸ್ಯುರೆನ್ಸ್‌ ಸುಮಾರು 39,087 ರೂಗಳು. ಇವೆಲ್ಲಾ ಸೇರಿ ಬೆಂಗಳೂರಿನಲ್ಲಿ ಕಿಯಾ ಸೋನೆಟ್‌‌ ಸುಮಾರು 9,65,414 ರೂಗಳಷ್ಟಾಗುತ್ತದೆ. (Nissan Magnite Facelift)

ಕಿಯಾ ಸೋನೆಟ್ (Kia Sonet) ಪ್ರೀಮಿಯಂ ಕಾಂಪ್ಯಾಕ್ಟ್ ಎಸ್‌ಯುವಿಯಾಗಿದ್ದು, ಬಿಡುಗಡೆಯಾಗಿ 4 ವರ್ಷ (44 ತಿಂಗಳು) ಕಳೆಯುವ ಮೊದಲೇ 400,000 ಯುನಿಟ್ ಕಾರುಗಳು ಮಾರಾಟಗೊಂಡಿವೆ. ಅದರಲ್ಲಿ ಭಾರತದ ಮಾರುಕಟ್ಟೆಯಲ್ಲಿ 317,754 ಯುನಿಟ್ ಎಸ್‌ಯುವಿಗಳನ್ನು ಮಾರಲಾಗಿದೆ. ಇನ್ನುಳಿದ 85,814 ಯುನಿಟ್ ಕಾರುಗಳನ್ನು ವಿದೇಶಕ್ಕೆ ರಫ್ತು ಮಾಡಲಾಗಿದೆ. ಆಂಧ್ರಪ್ರದೇಶದಲ್ಲಿ ಕಿಯಾ ತನ್ನ ಉತ್ಪಾದನಾ ಘಟಕವನ್ನು ಹೊಂದಿದೆ.

ಸದ್ಯ ದೇಶೀಯ ಮಾರುಕಟ್ಟೆಯಲ್ಲಿ ಖರೀದಿಗೆ ದೊರೆಯುವ ಕಿಯಾ ಸೋನೆಟ್ ಎಸ್‌ಯುವಿ, ರೂ.7.99 ಲಕ್ಷದಿಂದ ರೂ.15.75 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. ಎಕ್ಸ್‌ಟಿಇ, ಎಕ್ಸ್‌ಟಿಇ (ಒ), ಎಕ್ಸ್‌ಟಿಕೆ, ಎಕ್ಸ್‌ಟಿಕೆ (ಒ) ಎಕ್ಸ್‌ಟಿಕೆ ಪ್ಲಸ್ ಸೇರಿದಂತೆ ವಿವಿಧ ರೂಪಾಂತರ (ವೇರಿಯೆಂಟ್) ಹಾಗೂ ಪ್ಯೂಟರ್ ಆಲಿವ್, ಗ್ಲೇಸಿಯರ್ ವೈಟ್ ಪರ್ಲ್, ಕ್ಲಿಯರ್ ವೈಟ್ ಒಳಗೊಂಡಂತೆ ಆಕರ್ಷಕ ಬಣ್ಣಗಳೊಂದಿಗೂ ದೊರೆಯುತ್ತದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Monday, October 7, 2024, 15:59 [IST]
English summary
Cars to consider in nissan magnite facelift top variant budget
Read more on auto news india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+