ನೀವು ಮನೆಗೆ ಹೊಸ ಕಾರು ತರಬಹುದು.. 5 ಲಕ್ಷದೊಳಗೆ ಸಿಗುವ ಜನಪ್ರಿಯ ಕಾರುಗಳಿವು, ಮೈಲೇಜ್‌ನಲ್ಲೂ ಕಮ್ಮಿಯಿಲ್ಲ!

ಪ್ರತಿಯೊಬ್ಬರಿಗೂ ಜೀವನದಲ್ಲಿ ಹೊಸ ಕಾರು ಖರೀಸಬೇಕೆಂಬ ದೊಡ್ಡ ಆಸೆಯಿರುತ್ತದೆ. ಆದರೆ, ಬಹುತೇಕರಿಗೆ ಈ ಕನಸು ಈಡೇರಿಸಿಕೊಳ್ಳಲು ಸಾಧ್ಯವಾಗುವುದಿಲ್ಲ. ಇಲ್ಲಿ 5 ಲಕ್ಷದೊಳಗೆ ಸಿಗುವ ಜನಪ್ರಿಯ ಮಾರುತಿ ಸುಜುಕಿ ಆಲ್ಟೊ ಕೆ10, ರೆನಾಲ್ಟ್ ಕ್ವಿಡ್, ಮಾರುತಿ ಸುಜುಕಿ ಎಸ್-ಪ್ರೆಸ್ಸೊ ಬಗ್ಗೆ ವಿವರಿಸಿದ್ದೇವೆ. ಇವು ಬೆಲೆಗೆ ತಕ್ಕಂತೆ ಅತ್ಯಾಧುನಿಕ ವೈಶಿಷ್ಟ್ಯವನ್ನು ಹೊಂದಿವೆ.

ಮೊದಲಿಗೆ ಮಾರುತಿ ಸುಜುಕಿ ಆಲ್ಟೊ ಕೆ10 (Maruti Suzuki Alto K10) ಕಾರಿನ ಬಗ್ಗೆ ಮಾತನಾಡೋಣ. ಇದು ಕಂಪನಿಯ ಆರಂಭಿಕ ಮಾದರಿಯಾಗಿದ್ದು, ರೂ.3.99 ಲಕ್ಷದಿಂದ ರೂ.5.96 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಲಭ್ಯವಿದೆ. ಈ ಕಾರು 1-ಲೀಟರ್ ಡ್ಯುಯಲ್ಜೆಟ್ ಪೆಟ್ರೋಲ್ ಮತ್ತು ಸಿಎನ್‌ಜಿ ಎಂಜಿನ್ ಆಯ್ಕೆಯನ್ನು ಪಡೆದಿದ್ದು, ರೂಪಾಂತರಗಳಿಗೆ ಅನುಗುಣವಾಗಿ 5-ಸ್ವೀಡ್ ಮ್ಯಾನುವಲ್/ 5-ಸ್ವೀಡ್ ಆಟೋಮೆಟಿಕ್ ಗೇರ್ ಬಾಕ್ಸ್ ಆಯ್ಕೆಯಲ್ಲಿ ಸಿಗುತ್ತದೆ.

Cars Under 5 Lakhs In India: Maruti Suzuki Alto K10, S-Presso, Renault Kwid

ಈ ಆಲ್ಟೊ ಕೆ10 ಕಾರಿನ ಇಂಧನ ದಕ್ಷತೆ ಬಗ್ಗೆ ಹೇಳುವುದಾದರೆ, ಪೆಟ್ರೋಲ್ ರೂಪಾಂತರಗಳು 24.39 ಕೆಎಂಪಿಎಲ್- 24.90 ಕೆಎಂಪಿಎಲ್ ಮತ್ತು ಸಿಎನ್‌ಜಿ ರೂಪಾಂತರಗಳು 33.85 ಕಿ.ಮೀ/ಕೆಜಿ ಮೈಲೇಜ್ ಕೊಡುತ್ತವೆ. 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಪಲ್ ಕಾರ್ ಪ್ಲೇ, ಆಂಡ್ರಾಯ್ಡ್ ಆಟೋ, ಕೀಲೆಸ್ ಎಂಟ್ರಿ, ಸೆಮಿ-ಡಿಜಿಟಲ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ.

ಮಾರುತಿ ಸುಜುಕಿ ಎಸ್-ಪ್ರೆಸ್ಸೊ (Maruti Suzuki S-Presso), ರೂ.4.26 ಲಕ್ಷದಿಂದ ರೂ.6.12 ಲಕ್ಷ ಎಕ್ಸ್ ಶೋರೂಂ ದರದಲ್ಲಿ ಖರೀದಿಗೆ ಸಿಗುತ್ತದೆ. ಎಲ್ಎಕ್ಸ್ಐ, ವಿಎಕ್ಸ್ಐ, ವಿಎಕ್ಸ್ಐ ಪ್ಲಸ್ ಸೇರಿದಂತೆ 4 ರೂಪಾಂತರ ಆಯ್ಕೆಯಲ್ಲಿ ಲಭ್ಯವಿದೆ. ಪೆಟ್ರೋಲ್ ಮತ್ತು ಸಿಎನ್‌ಜಿ ಪವರ್ ಟ್ರೇನ್ ನೊಂದಿಗೆ ದೊರೆಯುವ ಈ ಕಾರಿನಲ್ಲಿ 4 ಮಂದಿ ಆರಾಮದಾಯಕವಾಗಿ ಕುಳಿತುಕೊಂಡು ಪ್ರಯಾಣಿಸಬಹುದು.

Cars Under 5 Lakhs In India: Maruti Suzuki Alto K10, S-Presso, Renault Kwid

ಈ ಎಸ್-ಪ್ರೆಸ್ಸೊ ಕಾರು ಸಹ ಯಾವ ಬೈಕ್‌ಗೂ ಕಮ್ಮಿಯಿಲ್ಲದಂತೆ ಮೈಲೇಜ್ ನೀಡುತ್ತದೆ. 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಸೆಮಿ ಡಿಜಿಟಲ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್ ಹಾಗೂ ಕೀಲೆಸ್ ಎಂಟ್ರಿಯಂತಹ ಅತ್ಯಾಧುನಿಕ ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಯ ಸಲುವಾಗಿ ಡುಯಲ್ ಫ್ರಂಟ್ ಏರ್‌ಬ್ಯಾಗ್‌, EBD (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ರೇರ್ ಪಾರ್ಕಿಂಗ್ ಸೇನಾರ್ಸ್, ಹಿಲ್ ಹೋಲ್ಡ್ ಅಸಿಸ್ಟ್ ಅನ್ನು ಹೊಂದಿದೆ.

ರೆನಾಲ್ಟ್ ಕ್ವಿಡ್ (Renault KWID) ಕುರಿತು ಮಾತನಾಡೋಣ. ಈ ಕಾರು, ರೂ.4.70 ಲಕ್ಷದಿಂದ ರೂ.6.45 ಲಕ್ಷ ಎಕ್ಸ್ ಶೋರೂಂ ದರದಲ್ಲಿ ಗ್ರಾಹಕರಿಗೆ ಲಭ್ಯವಿದೆ. ಇದು ಐಸ್ ಕೂಲ್ ವೈಟ್, ಮೂನ್ ಲೈಟ್ ಸಿಲ್ವರ್ ಒಳಗೊಂಡಂತೆ 5-ಮೊನೊಟೋನ್, 5-ಡುಯಲ್ ಟೋನ್ ಬಣ್ಣಗಳೊಂದಿಗೆ ಸಿಗುತ್ತದೆ. ಜೊತೆಗೆ 1-ಲೀಟರ್ ಪೆಟ್ರೋಲ್ ಎಂಜಿನ್ ಹೊಂದಿದ್ದು, 5-ಸ್ವೀಡ್ ಮ್ಯಾನುವಲ್/ 5-ಸ್ವೀಡ್ ಆಟೋಮೆಟಿಕ್ ಗೇರ್ ಬಾಕ್ಸ್ ಆಯ್ಕೆಯೊಂದಿಗೆ ದೊರೆಯುತ್ತದೆ.

Cars Under 5 Lakhs In India: Maruti Suzuki Alto K10, S-Presso, Renault Kwid

ಕ್ವಿಡ್ ಮೈಲೇಜ್ ವಿಚಾರವಾಗಿ ಹೇಳುವುದಾದರೆ, ಇದು ಪ್ರತಿ ಲೀ.ಗೆ 21.46 ರಿಂದ 22.3 ಕಿ.ಮೀ ಮೈಲೇಜ್ ಕೊಡುತ್ತದೆ. 8-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ ಒಳಗೊಂಡಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಯ ಸಲುವಾಗಿ ಡುಯಲ್ ಫ್ರಂಟ್ ಏರ್‌ಬ್ಯಾಗ್‌, HSA (ಹಿಲ್ ಸ್ಟಾರ್ಟ್ ಅಸಿಸ್ಟ್), TCS (ಟ್ರಾಕ್ಷನ್ ಕಂಟ್ರೋಲ್ ಸಿಸ್ಟಮ್), TPMS (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಅನ್ನು ಒಳಗೊಂಡಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Thursday, February 1, 2024, 17:34 [IST]
English summary
Cars under 5 lakhs in india maruti suzuki alto k10 s presso renault kwid
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+