ನೀವು ಹೊಸ ಕಾರು ತೆಗೆದುಕೊಳ್ಳಬೇಕೇ.. ಇವುಗಳಿಗೆ 10 ಲಕ್ಷಕ್ಕಿಂತ ಕಡಿಮೆ ಬೆಲೆ, 5-ಜನರು ಹೋಗಬಹುದು!

ಪ್ರತಿಯೊಬ್ಬರಿಗೂ ಜೀವನದಲ್ಲಿ ಹೊಸ ಕಾರು ಖರೀದಿಸಬೇಕೆಂಬ ಬಹುದೊಡ್ಡ ಆಸೆಯಾಗಿರುತ್ತದೆ. ಆದರೆ, ನೂತನ ಕಾರು ತಮ್ಮ ಬಜೆಟ್‌ಗೆ ಬರುತ್ತದೆಯೇ.. ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಹೊಂದಿರುತ್ತದೆಯೇ ಎಂಬ ಹಲವಾರು ಗೊಂದಲವಿರುತ್ತದೆ. ನಿಮ್ಮ ಮನೆಗೆ ಕಾರೊಂದನ್ನು ತರಲು ಆಲೋಚಿಸಿದ್ದೀರಾ. ಇಲ್ಲಿ ರೂ.10 ಲಕ್ಷದೊಳಗೆ ಖರೀದಿಗೆ ದೊರೆಯುವ ಜನಪ್ರಿಯ ಹ್ಯುಂಡೈ ವೆನ್ಯೂ, ಕಿಯಾ ಸೋನೆಟ್, ಮಹೀಂದ್ರಾ ಎಕ್ಸ್‌ಯುವಿ 3ಎಕ್ಸ್ಒ, ಟಾಟಾ ಕರ್ವ್ ಹಾಗೂ ಸಿಟ್ರನ್ ಬಸಾಲ್ಟ್ ಎಸ್‌ಯುವಿಗಳ ಬಗ್ಗೆ ಸಂಕ್ಷಿಪ್ತವಾಗಿ ತಿಳಿಸಿಕೊಟ್ಟಿದ್ದೇವೆ.

ಮೊದಲಿಗೆ ಹ್ಯುಂಡೈ ವೆನ್ಯೂ (Hyundai Venue) ಬಗ್ಗೆ ಮಾತನಾಡೋಣ. ಈ ಎಸ್‌ಯುವಿ ರೂ.7.94 ಲಕ್ಷದಿಂದ ರೂ.13.53 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. 1.2-ಲೀಟರ್ ಪೆಟ್ರೋಲ್, 1-ಲೀಟರ್ ಟರ್ಬೊ ಪೆಟ್ರೋಲ್ ಹಾಗೂ 1.5-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯನ್ನು ಹೊಂದಿದೆ. 24.2 ಕೆಎಂಪಿಎಲ್‌ವರೆಗೆ ಮೈಲೇಜ್ ಕೂಡ ನೀಡುತ್ತದೆ. ಇದರಲ್ಲಿ 5 ಮಂದಿ ಆರಾಮದಾಯಕವಾಗಿ ಪ್ರಯಾಣಿಸಬಹುದು.

Cars under Rs 10 lakh Hyundai Venue Kia Sonet Mahindra XUV 3XO Tata Curvv Citroen Basalt

ಈ ಹ್ಯುಂಡೈ ವೆನ್ಯೂ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ (8-ಇಂಚು), ಸೆಮಿ-ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ವೆಂಟಿಲೇಟೆಡ್ ಫ್ರಂಟ್ ಸೀಟ್, ಕನೆಕ್ಟ್, ವೈರ್‌ಲೆಸ್ ಫೋನ್ ಚಾರ್ಜಿಂಗ್ ಮತ್ತು ಸನ್‌ರೂಫ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಗಾಗಿ 6-ಏರ್‌ಬ್ಯಾಗ್‌ಗಳು ಮತ್ತು ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್) ಅನ್ನು ಹೊಂದಿದೆ.

ಕಿಯಾ ಸೋನೆಟ್ (Kia Sonet) ಎಸ್‌ಯುವಿ ಕುರಿತಂತೆ ಹೇಳುವುದಾದರೆ, ಇದು ರೂ.8 ರಿಂದ ರೂ.15.77 ಲಕ್ಷ (ಎಕ್ಸ್ ಶೋರೂಂ) ದರವನ್ನು ಹೊಂದಿದೆ. ಪೆಟ್ರೋಲ್ ಹಾಗೂ ಡಿಸೇಲ್ ಎಂಜಿನ್ ಆಯ್ಕೆಯನ್ನು ಒಳಗೊಂಡಿದ್ದು, 24.1 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಇನ್ಫೋಟೈನ್‌ಮೆಂಟ್ ಸಿಸ್ಟಮ್ (10.25-ಇಂಚು), 7-ಸ್ಪೀಕರ್ ಬೋಸ್ ಸೌಂಡ್ ಸಿಸ್ಟಮ್ ಒಳಗೊಂಡಂತೆ ಹತ್ತಾರು ವೈಶಿಷ್ಟ್ಯಗಳನ್ನು ಪಡೆದಿದೆ.

Cars under Rs 10 lakh Hyundai Venue Kia Sonet Mahindra XUV 3XO Tata Curvv Citroen Basalt

ಮಹೀಂದ್ರಾ ಎಕ್ಸ್‌ಯುವಿ 3ಎಕ್ಸ್ಒ (Mahindra XUV 3XO) ಸಹ ಜನಪ್ರಿಯ ಎಸ್‌ಯುವಿಯಾಗಿದ್ದು, ರೂ.7.79 ರಿಂದ ರೂ.15.49 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಸಿಗುತ್ತದೆ. 1.2-ಲೀಟರ್ ಟರ್ಬೊ ಪೆಟ್ರೋಲ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್‌ನ್ನು ಒಳಗೊಂಡಿದ್ದು, ಇದರಲ್ಲಿ 5 ಮಂದಿ ಸುಲಭವಾಗಿ ಓಡಾಟ ನಡೆಸಬಹುದು. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ (10.25-ಇಂಚು) ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಟಾಟಾ ಕರ್ವ್ ಕೂಪೆ ಎಸ್‌ಯುವಿ (Tata Curvv Coupe Suv) ಬಗ್ಗೆ ಮಾತನಾಡುವುದಾದರೆ, ಈ ಕಾರು ರೂ.9.99 - 17.69 ಲಕ್ಷ ಎಕ್ಸ್ ಶೋರೂಂ ದರವನ್ನು ಒಳಗೊಂಡಿದೆ. ಪೆಟ್ರೋಲ್ ಹಾಗೂ ಡೀಸೆಲ್ ಎಂಜಿನ್ ಆಯ್ಕೆಯನ್ನು ಪಡೆದಿದೆ. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ (12.3-ಇಂಚು) ಮತ್ತು ಮಲ್ಟಿ ಫಂಕ್ಷನ್ ಸ್ಟೀರಿಂಗ್ ವೀಲ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ.

Cars under Rs 10 lakh Hyundai Venue Kia Sonet Mahindra XUV 3XO Tata Curvv Citroen Basalt

ಸಿಟ್ರನ್ ಬಸಾಲ್ಟ್ ಕೂಪೆ ಎಸ್‌ಯುವಿ (Citroen Basalt Coupe Suv) ಕುರಿತಂತೆ ಹೇಳುವುದಾದರೆ, ಇದು ರೂ.7.99 ರಿಂದ ರೂ.13.83 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಗ್ರಾಹಕರಿಗೆ ಲಭ್ಯವಿದೆ. ಪೆಟ್ರೋಲ್ ಎಂಜಿನ್‌ನ್ನು ಹೊಂದಿದೆ. 18 ರಿಂದ 19.5 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಪಡೆದಿದೆ.

ಇನ್ನು, ಈ ಕಾರುಗಳು ಒಂದಕ್ಕಿಂತ ಒಂದು ಅದ್ಬುತವಾಗಿವೆ. ಬೆಲೆಯು ಕೂಡ ಕೈಗೆಟುಕುವಂತಿದ್ದು, ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಹೊಂದಿರುವುದರಿಂದ ನೂತನ ಕಾರುಗಳು ನಿಮ್ಮ ಕುಟುಂಬಕ್ಕೆ ಹೆಚ್ಚು ಸೂಕ್ತವಾಗಲಿವೆ. ದೀಪಾವಳಿ ಹಬ್ಬಕ್ಕೆ ಆಯ್ದ ಡೀಲರ್‌ಶಿಪ್‌ಗಳು ಸ್ವಲ್ಪ ರಿಯಾಯಿತಿ ಕೂಡ ಘೋಷಣೆ ಮಾಡಿರುತ್ತಾರೆ. ಇನ್ನೇಕೆ ತಡ ಆದಷ್ಟು ಬೇಗ ನಿಮಿಷ್ಟದ ಕಾರನ್ನು ಖರೀದಿಸಿರಿ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Sunday, October 20, 2024, 11:00 [IST]
English summary
Cars under rs 10 lakh hyundai venue kia sonet mahindra xuv 3xo tata curvv citroen basalt
Read more on auto news india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+