360-ಡಿಗ್ರಿ ಕ್ಯಾಮೆರಾದೊಂದಿಗೆ ಸಿಗುವ ಜನಪ್ರಿಯ ಕಾರುಗಳಿವು: ರೂ.15 ಲಕ್ಷದೊಳಗೆ ಲಭ್ಯ
ಪ್ರತಿಯೊಬ್ಬರಿಗೂ ಜೀವನದಲ್ಲಿ ಹೊಸ ಕಾರು ಖರೀದಿಸಬೇಕೆಂಬ ದೊಡ್ಡ ಆಸೆಯಿರುತ್ತದೆ. ಇಲ್ಲಿ ರೂ.15 ಲಕ್ಷ ಬೆಲೆಯಲ್ಲಿ 360-ಡಿಗ್ರಿ ಕ್ಯಾಮೆರಾ ಸೇರಿದಂತೆ ಆಕರ್ಷಕ ವೈಶಿಷ್ಟ್ಯದೊಂದಿಗೆ ಸಿಗುವ ಟಾಟಾ ನೆಕ್ಸಾನ್, ಮಾರುತಿ ಸುಜುಕಿ ಫ್ರಾಂಕ್ಸ್, ಬಲೆನೊ ಹಾಗೂ ಕಿಯಾ ಸೋನೆಟ್ ಕಾರುಗಳ ಬಗ್ಗೆ ವಿವರಿಸಿದ್ದೇವೆ.
ಮೊದಲಿಗೆ 360-ಡಿಗ್ರಿ ಕ್ಯಾಮೆರಾದೊಂದಿಗೆ ದೇಶೀಯ ಮಾರುಕಟ್ಟೆಯಲ್ಲಿ ಖರೀದಿಗೆ ದೊರೆಯುವ ಟಾಟಾ ನೆಕ್ಸಾನ್ (Tata Nexon) ಫೇಸ್‌ಲಿಫ್ಟ್ ಎಸ್‌ಯುವಿ ಬಗ್ಗೆ ತಿಳಿಯೋಣ. ಇದು ರೂ.8.15 ಲಕ್ಷದಿಂದ ರೂ.15.60 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. ಪೆಟ್ರೋಲ್ ಹಾಗೂ ಡೀಸೆಲ್ ಎಂಜಿನ್ ಆಯ್ಕೆಯಲ್ಲಿ ಲಭ್ಯವಿದ್ದು, ರೂಪಾಂತರಗಳಿಗೆ ಅನುಗುಣವಾಗಿ 17.01 - 24.08 ಕೆಎಂಪಿಎಲ್ ಮೈಲೇಜ್ ನೀಡುತ್ತದೆ.

ಈ ನೆಕ್ಸಾನ್ ಕಾರು 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್, 10.25-ಇಂಚಿನ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಆಟೋ ಎಸಿ, ವೈರ್‌ಲೆಸ್ ಫೋನ್ ಚಾರ್ಜಿಂಗ್, ಕ್ರೂಸ್ ಕಂಟ್ರೋಲ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಗಾಗಿ 6 ಏರ್‌ಬ್ಯಾಗ್, ESP (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), TPMS (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಹಾಗೂ ಹಿಲ್ ಅಸಿಸ್ಟ್ ಅನ್ನು ಹೊಂದಿದೆ.
ಮಾರುತಿ ಸುಜುಕಿ ಬಲೆನೊ (Maruti Suzuki Baleno) ಹ್ಯಾಚ್‌ಬ್ಯಾಕ್ ಕೂಡ 360-ಡಿಗ್ರಿ ಕ್ಯಾಮೆರಾ (360-Degree Camera) ಆಯ್ಕೆಯಲ್ಲಿ ದೊರೆಯುತ್ತದೆ. ಈ ಕಾರು ರೂ.6.66 ಲಕ್ಷದಿಂದ ರೂ.9.88 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಪಡೆದಿದೆ. ಸಿಗ್ಮಾ, ಡೆಲ್ಟಾ, ಜಿಟಾ ಸೇರಿದಂತೆ ವಿವಿಧ ರೂಪಾಂತರ ಹಾಗೂ ಆಕರ್ಷಕ ಬಣ್ಣಗಳೊಂದಿಗೆ ಲಭ್ಯವಿದೆ.

ಈ ಬಲೆನೊ ಕಾರಿನಲ್ಲಿ 5 ಮಂದಿ ಪ್ರಯಾಣಿಸಬಹುದು. 1.2-ಲೀಟರ್ ಪೆಟ್ರೋಲ್ ಮತ್ತು ಸಿಎನ್‌ಜಿ ಎಂಜಿನ್ ಆಯ್ಕೆಯನ್ನು ಹೊಂದಿದ್ದು, ಪೆಟ್ರೋಲ್ ರೂಪಾಂತರಗಳು 22.35 ರಿಂದ 22.94 ಕೆಎಂಪಿಎಲ್, ಸಿಎನ್‌ಜಿ ರೂಪಾಂತರ 30.61 ಕೆಎಂ/ಕೆಜಿ ಮೈಲೇಜ್ ನೀಡುತ್ತದೆ. 9-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಪಲ್ ಕಾರ್ ಪ್ಲೇ, ಆಂಡ್ರಾಯ್ಡ್ ಆಟೋ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಯ ದೃಷ್ಟಿಯಿಂದ 6 ಏರ್‌ಬ್ಯಾಗ್ ಅನ್ನು ಪಡೆದಿದೆ.
ಮಾರುತಿ ಸುಜುಕಿ ಫ್ರಾಂಕ್ಸ್ (Maruti Suzuki Fronx) ಎಸ್‌ಯುವಿ ಸಹ 360-ಡಿಗ್ರಿ ಕ್ಯಾಮೆರಾದೊಂದಿಗೆ ಲಭ್ಯವಿದೆ. ಈ ಎಸ್‌ಯುವಿ ರೂ.7.51 ಲಕ್ಷದಿಂದ ರೂ.13.04 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. 1-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್, 1.2-ಲೀಟರ್ ಡುಯಲ್ಜೆಟ್ ಪೆಟ್ರೋಲ್ ಎಂಜಿನ್ ಮತ್ತು 1.2-ಲೀಟರ್ ಸಿಎನ್‌ಜಿ ಎಂಜಿನ್ ಆಯ್ಕೆಯಲ್ಲಿ ದೊರೆಯಲಿದ್ದು, 5-ಸ್ವೀಡ್ ಮ್ಯಾನುವಲ್/ 5-ಸ್ವೀಡ್ ಆಟೋಮೆಟಿಕ್/ 6-ಸ್ವೀಡ್ ಆಟೋಮೆಟಿಕ್ ಗೇರ್ ಬಾಕ್ಸ್ ಆಯ್ಕೆಯನ್ನು ಪಡೆದಿದೆ.

ಫ್ರಾಂಕ್ಸ್ ಕಾರಿನಲ್ಲಿಯೂ 5 ಮಂದಿ ಆರಾಮದಾಯಕವಾಗಿ ಹೋಗಬಹುದು. 9-ಇಂಚಿನ ಇನ್ಫೋಟೈನ್‌ಮೆಂಟ್ ಸಿಸ್ಟಮ್, ವೈರ್‌ಲೆಸ್ ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ, ಕ್ರೂಸ್ ಕಂಟ್ರೋಲ್ ಆಟೋ ಕ್ಲೇಮೇಟ್ ಕಂಟ್ರೋಲ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಗಾಗಿ 6-ಏರ್‌ಬ್ಯಾಗ್, ESP (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ಹಿಲ್ ಹೋಲ್ಡ್ ಅಸಿಸ್ಟ್ ಅನ್ನು ಒಳಗೊಂಡಿದೆ.
ಕಿಯಾ ಸೋನೆಟ್ (Kia Sonet) ಎಸ್‌ಯುವಿಯೂ 360-ಡಿಗ್ರಿ ಕ್ಯಾಮೆರಾದ ಆಯ್ಕೆಯಲ್ಲಿ ದೊರೆಯುತ್ತದೆ. ರೂ.7.79 ಲಕ್ಷದಿಂದ ರೂ.14.89 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಹೊಂದಿದೆ. ಹೆಚ್‌ಟಿಇ, ಹೆಚ್‌ಟಿಕೆ, ಹೆಚ್‌ಟಿಕೆ ಪ್ಲಸ್, ಹೆಚ್‌ಟಿಎಕ್ಸ್, ಹೆಚ್‌ಟಿಎಕ್ಸ್ ಪ್ಲಸ್ ಸೇರಿದಂತೆ ವಿವಿಧ ರೂಪಾಂತರ ಮತ್ತು ಆಕರ್ಷಕ ಬಣ್ಣಗಳೊಂದಿಗೆ ಲಭ್ಯವಿದೆ. ಜೊತೆಗೆ 5 ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದಿದೆ.

ಸೋನೆಟ್ ಕಾರು 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಡಿಸ್ಪ್ಲೇ, 10.25-ಇಂಚಿನ ಡಿಜಿಟಲ್ ಡ್ರೈವರ್ ಡಿಸ್ಪ್ಲೇ, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಕನೆಕ್ಟ್ ಕಾರ್ ಟೆಕ್, ವೆಂಟಿಲೇಟೆಡ್ ಫ್ರಂಟ್ ಸೀಟ್, ಸನ್‌ರೂಫ್, ವೈರ್‌ಲೆಸ್ ಫೋನ್ ಚಾರ್ಜರ್ ಒಳಗೊಂಡಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. 6 ಏರ್‌ಬ್ಯಾಗ್, ESC (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), TPMS (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಅನ್ನು ಒಳಗೊಂಡಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








