30 ಕಿಲೋಮೀಟರ್‌ಗೂ ಹೆಚ್ಚಿನ ಮೈಲೇಜ್.. ರೂ.5.5 ಲಕ್ಷದೊಳಗೆ ಸಿಗುವ ಕಾರುಗಳಿವು
ದೇಶದಲ್ಲಿ ಮಧ್ಯಮ ವರ್ಗದ ಜನರೇ ಹೆಚ್ಚಿದ್ದು, ಜೀವನದಲ್ಲಿ ಹೊಸ ಕಾರು ಖರೀದಿಬೇಕೆಂಬುದು ಬಹುದೊಡ್ಡ ಆಸೆಯಾಗಿರುತ್ತದೆ. ನೀವು ರೂ.5 ಲಕ್ಷ ಆಸುಪಾಸಿನಲ್ಲಿ ಹೆಚ್ಚಿನ ಮೈಲೇಜ್ ನೀಡುವ ಕಾರುಗಳನ್ನು ಹುಡುಕುತ್ತಿದ್ದರೆ, ಮಾರುತಿ ಸುಜುಕಿ ಆಲ್ಟೊ ಕೆ10, ಎಸ್-ಪ್ರೆಸ್ಸೊ ಮತ್ತು ಸೆಲೆರಿಯೊ ಉತ್ತಮ ಆಯ್ಕೆಯಾಗಬಹುದು.
ಮೊದಲಿಗೆ ಮಾರುತಿ ಸುಜುಕಿ ಸೆಲೆರಿಯೊ (Maruti Suzuki Celerio) ಮಾತನಾಡೋಣ. ಈ ಕಾರು ರೂ.5.37 ಲಕ್ಷದಿಂದ ರೂ.7.14 ಲಕ್ಷ ಎಕ್ಸ್ ಶೋರೂ ಬೆಲೆಯನ್ನು ಹೊಂದಿದೆ. 1-ಲೀಟರ್ ಪೆಟ್ರೋಲ್ ಮತ್ತು ಸಿಎನ್‌ಜಿ ಎಂಜಿನ್ ಪಡೆದಿದ್ದು, 5-ಸ್ವೀಡ್ ಮ್ಯಾನುವಲ್/ 5-ಸ್ವೀಡ್ ಆಟೋಮೆಟಿಕ್ ಗೇರ್ ಬಾಕ್ಸ್ ಆಯ್ಕೆಯಲ್ಲಿ ಸಿಗುತ್ತದೆ. ಪೆಟ್ರೋಲ್ ರೂಪಾಂತರಗಳು 25.24 ರಿಂದ 26.68 ಕೆಎಂಪಿಎಲ್, ಸಿಎನ್‌ಜಿ ರೂಪಾಂತರ 34.43 ಕೆಎಂ/ಕೆಜಿ ಮೈಲೇಜ್ ನೀಡುತ್ತದೆ.

ಈ ಸೆಲೆರಿಯೊ ಕಾರಿನಲ್ಲಿ 5 ಮಂದಿ ಆರಾಮದಾಯಕವಾಗಿ ಪ್ರಯಾಣಿಸಬಹುದು. 7 - ಇಂಚಿನ ಟಚ್‌ಸ್ಕ್ರೀನ್, ಪುಶ್ - ಬಟನ್ ಸ್ಟಾರ್ಟ್/ಸ್ಟಾಪ್, ಕೀಲೆಸ್ ಎಂಟ್ರಿ, ಮ್ಯಾನುವಲ್ ಎಸಿ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಗಾಗಿ ಡುಯಲ್ ಫ್ರಂಟ್ ಏರ್‌ಬ್ಯಾಗ್, EBD (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಹಿಲ್-ಹೋಲ್ಡ್ ಅಸಿಸ್ಟ್, ರೇರ್ ಪಾರ್ಕಿಂಗ್ ಸೇನಾರ್ಸ್ ಅನ್ನು ಒಳಗೊಂಡಿದೆ.
ಮಾರುತಿ ಸುಜುಕಿ ಎಸ್-ಪ್ರೆಸ್ಸೊ (Maruti Suzuki S-Presso), ರೂ.4.26 ಲಕ್ಷದಿಂದ ರೂ.6.12 ಲಕ್ಷ ಎಕ್ಸ್ ಶೋರೂಂ ದರದಲ್ಲಿ ಖರೀದಿಗೆ ಲಭ್ಯವಿದೆ. ಈ ಕಾರು ಸಹ 1-ಲೀಟರ್ ಪೆಟ್ರೋಲ್ ಹಾಗೂ ಸಿಎನ್‌ಜಿ ಎಂಜಿನ್ ಆಯ್ಕೆಯನ್ನು ಹೊಂದಿದ್ದು, 5-ಸ್ವೀಡ್ ಮ್ಯಾನುವಲ್/ ಆಟೋಮೆಟಿಕ್ ಗೇರ್ ಬಾಕ್ಸ್ ಆಯ್ಕೆಯಲ್ಲಿ ದೊರೆಯುತ್ತದೆ. ಪೆಟ್ರೋಲ್ ರೂಪಾಂತರಗಳು 24.12 ರಿಂದ 25.30 ಕೆಎಂಪಿಎಲ್, ಸಿಎನ್‌ಜಿ ರೂಪಾಂತರ 32.73 ಕೆಎಂ/ಕೆಜಿ ಮೈಲೇಜ್ ಕೊಡುತ್ತದೆ.

ಎಸ್-ಪ್ರೆಸ್ಸೊ ಕಾರು, 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಪಲ್ ಕಾರ್ ಪ್ಲೇ, ಆಂಡ್ರಾಯ್ಡ್ ಆಟೋ, ಸೆಮಿ ಡಿಜಿಟಲ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, ಕೀಲೆಸ್ ಎಂಟ್ರಿ ಒಳಗೊಂಡಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಯ ದೃಷ್ಟಿಯಿಂದ ಡುಯಲ್ ಫ್ರಂಟ್ ಏರ್‌ಬ್ಯಾಗ್, ರೇರ್ ಪಾರ್ಕಿಂಗ್ ಸೇನಾರ್ಸ್, ಹಿಲ್ ಹೋಲ್ಡ್ ಅಸಿಸ್ಟ್, ESP (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ) ಅನ್ನು ಪಡೆದಿದೆ.
ಮಾರುತಿ ಸುಜುಕಿ ಆಲ್ಟೊ ಕೆ10 (Maruti Suzuki Alto K10), ರೂ.3.99 ಲಕ್ಷದಿಂದ ರೂ.5.96 ಲಕ್ಷ ಎಕ್ಸ್ ಶೋರೂಂ ಬೆಲೆಗೆ ಸಿಗುತ್ತದೆ. ಎಲ್ಎಕ್ಸ್ಐ, ವಿಎಕ್ಸ್ಐ ಸೇರಿದಂತೆ 4 ರೂಪಾಂತರ ಮತ್ತು ಮೆಟಾಲಿಕ್ ಸಿಜ್ಲಿಂಗ್ ರೆಡ್, ಮೆಟಾಲಿಕ್ ಸಿಲ್ಕಿ ಸಿಲ್ವರ್ ಒಳಗೊಂಡಂತೆ ಆಕರ್ಷಕ ಬಣ್ಣಗಳ ಆಯ್ಕೆಯಲ್ಲಿ ದೊರೆಯುತ್ತದೆ. ಈ ಕಾರು 1 - ಲೀಟರ್ ಡ್ಯುಯಲ್ಜೆಟ್ ಪೆಟ್ರೋಲ್, ಸಿಎನ್‌ಜಿ ಎಂಜಿನ್ ಪಡೆದಿದೆ.

ಆಲ್ಟೊ ಕೆ10, ಪೆಟ್ರೋಲ್ ರೂಪಾಂತರಗಳು 24.39 - 24.90 ಕೆಎಂಪಿಎಲ್ ಮತ್ತು ಸಿಎನ್‌ಜಿ ರೂಪಾಂತರಗಳು 33.85 ಕಿ.ಮೀ/ಕೆಜಿ ಮೈಲೇಜ್ ಕೊಡುತ್ತವೆ. 7 - ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಪಲ್ ಕಾರ್ ಪ್ಲೇ, ಆಂಡ್ರಾಯ್ಡ್ ಆಟೋ, ಕೀಲೆಸ್ ಎಂಟ್ರಿ, ಸೆಮಿ - ಡಿಜಿಟಲ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








