ರೂ.5 ಲಕ್ಷದೊಳಗೆ ಸಿಗುವ ಕಾರುಗಳಿವು.. ಉತ್ತಮ ಮೈಲೇಜ್, ಭರ್ಜರಿ ವೈಶಿಷ್ಟ್ಯಗಳು

ಪ್ರತಿಯೊಬ್ಬರಿಗೂ ಜೀವನದಲ್ಲಿ ಹೊಸ ಕಾರು ಖರೀದಿಸಬೇಕೆಂಬುದು ದೊಡ್ಡ ಆಸೆಯಾಗಿರುತ್ತದೆ. ದೇಶದಲ್ಲಿ ಮಧ್ಯಮ ವರ್ಗದ ಜನರೇ ಹೆಚ್ಚಿದ್ದು, ಅವರಿಗೆ ನೂತನ ಕಾರು ಕೊಂಡುಕೊಳ್ಳುವಷ್ಟು ಹಣ ಹೊಂದಿಸಲು ಸಾಧ್ಯವಾಗುವುದಿಲ್ಲ. ಇಲ್ಲಿ ರೂ.5 ಲಕ್ಷದೊಳಗೆ ಸಿಗುವ ರೆನಾಲ್ಟ್, ಮಾರುತಿ ಸುಜುಕಿ ಕಾರುಗಳ ಬಗ್ಗೆ ವಿವರಿಸಿದ್ದೇವೆ.

ಮೊದಲಿಗೆ ಮಾರುತಿ ಸುಜುಕಿ ಆಲ್ಟೊಕೆ10 (Maruti Suzuki Alto K10) ಕಾರಿನ ಬಗ್ಗೆ ಹೇಳುವುದಾದರೆ, ಇದು ರೂ.3.99 ಲಕ್ಷದಿಂದ ರೂ.5.96 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ದೊರೆಯುತ್ತದೆ. ಈ ಕಾರು 1-ಲೀಟರ್ ಡುಯಲ್ಜೆಟ್ ಪೆಟ್ರೋಲ್ ಎಂಜಿನ್ ಅನ್ನು ಹೊಂದಿದ್ದು, 5-ಸ್ವೀಡ್ ಮ್ಯಾನುವಲ್/ 5-ಸ್ವೀಡ್ ಆಟೋಮೆಟಿಕ್ ಗೇರ್ ಬಾಕ್ಸ್ ಆಯ್ಕೆಯೊಂದಿಗೆ ದೊರೆಯುತ್ತದೆ.

Cars Under Rs 5 Lakhs In India: Maruti Suzuki Alto K10, S-Presso, Eeco, Renault Kwid

ಆಲ್ಟೊಕೆ10 ಕಾರಿನ ಪೆಟ್ರೋಲ್ ರೂಪಾಂತರಗಳು 24.39 ಕೆಎಂಪಿಎಲ್ ರಿಂದ 24.90 ಕೆಎಂಪಿಎಲ್, ಸಿಎನ್‌ಜಿ ರೂಪಾಂತರಗಳು 33.40 ಕೆಎಂ/ಕೆಜಿ ರಿಂದ 33.85 ಕೆಎಂ/ಕೆಜಿ ಮೈಲೇಜ್ ಕೊಡುತ್ತವೆ. 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಪಲ್ ಕಾರ್ ಪ್ಲೇ, ಆಂಡ್ರಾಯ್ಡ್ ಆಟೋ, ಕೀಲೆಸ್ ಎಂಟ್ರಿ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಗಾಗಿ ಫ್ರಂಟ್ ಏರ್‌ಬ್ಯಾಗ್‌ ಅನ್ನು ಪಡೆದಿದೆ.

ಮಾರುತಿ ಸುಜುಕಿ ಎಸ್-ಪ್ರೆಸ್ಸೊ (Maruti Suzuki S-Presso), ರೂ.4.26 ಲಕ್ಷದಿಂದ ರೂ.6.12 ಲಕ್ಷ ಎಕ್ಸ್ ಶೋರೂಂ ದರವನ್ನು ಪಡೆದಿದೆ. ವಿಎಕ್ಸ್ಐ, ವಿಎಕ್ಸ್ಐ ಪ್ಲಸ್ ಸೇರಿದಂತೆ ಆಕರ್ಷಕ ಬಣ್ಣಗಳೊಂದಿಗೆ ಸಿಗುತ್ತದೆ. ಈ ಕಾರು, 1-ಲೀಟರ್ ಪೆಟ್ರೋಲ್ ಮತ್ತು ಸಿಎನ್‌ಜಿ ಎಂಜಿನ್ ಆಯ್ಕೆಯನ್ನು ಹೊಂದಿದ್ದು, ಪೆಟ್ರೋಲ್ ರೂಪಾಂತರಗಳು 24.12 - 25.3 ಕೆಎಂಪಿಎಲ್, ಸಿಎನ್‌ಜಿ ರೂಪಾಂತರ 32.73 ಕೆಎಂ/ಕೆಜಿ ಮೈಲೇಜ್ ನೀಡುತ್ತದೆ.

Cars Under Rs 5 Lakhs In India: Maruti Suzuki Alto K10, S-Presso, Eeco, Renault Kwid

ಈ ಎಸ್-ಪ್ರೆಸ್ಸೊ ಕಾರು, 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಸೆಮಿ-ಡಿಜಿಟಲ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, ಆಪಲ್ ಕಾರ್ ಪ್ಲೇ, ಆಂಡ್ರಾಯ್ಡ್ ಆಟೋ ಒಳಗೊಂಡಂತೆ ಹತ್ತಾರು ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆ ದೃಷ್ಟಿಯಿಂದ ಡುಯಲ್ ಫ್ರಂಟ್ ಏರ್‌ಬ್ಯಾಗ್‌, ರೇರ್ ಪಾರ್ಕಿಂಗ್ ಸೆನ್ಸರ್ಸ್, ಹಿಲ್ ಹೋಲ್ಡ್ ಅಸಿಸ್ಟ್, ESP (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ) ಅನ್ನು ಹೊಂದಿದೆ.

ಮಾರುತಿ ಸುಜುಕಿ ಇಕೋ ವ್ಯಾನ್, ರೂ.5.27 ಲಕ್ಷದಿಂದ ರೂ.6.58 ಲಕ್ಷ ಎಕ್ಸ್ ಶೋರೂಂ ದರದಲ್ಲಿ ಖರೀದಿಗೆ ಲಭ್ಯವಿದೆ. 1.2-ಲೀಟರ್ ಪೆಟ್ರೋಲ್ ಮತ್ತು ಸಿಎನ್‌ಜಿ ಎಂಜಿನ್ ಆಯ್ಕೆಯನ್ನು ಹೊಂದಿದ್ದು, ಈ ಕಾರಿನಲ್ಲಿ 7 ಮಂದಿ ಆರಾಮದಾಯಕವಾಗಿ ಪ್ರಯಾಣಿಸಬಹುದು. ಸೆಮಿ-ಡಿಜಿಟಲ್ ಸ್ಪೀಡೋಮೀಟರ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಗಾಗಿ ಡುಯಲ್ ಫ್ರಂಟ್ ಏರ್ ಬ್ಯಾಗ್ ಪಡೆದಿದೆ.

Cars Under Rs 5 Lakhs In India: Maruti Suzuki Alto K10, S-Presso, Eeco, Renault Kwid

ರೆನಾಲ್ಟ್ ಕ್ವಿಡ್ (Renault KWID), ರೂ.Rs.4.70 ಲಕ್ಷದಿಂದ ರೂ.6.45 ಲಕ್ಷ ಎಕ್ಸ್ ಶೋರೂಂ ದರದಲ್ಲಿ ಸಿಗುತ್ತದೆ. 1-ಲೀಟರ್ ಪೆಟ್ರೋಲ್ ಎಂಜಿನ್ ಹೊಂದಿದ್ದು, 5-ಸ್ವೀಡ್ ಮ್ಯಾನುವಲ್/ 5-ಸ್ವೀಡ್ ಆಟೋಮೆಟಿಕ್ ಗೇರ್ ಬಾಕ್ಸ್ ಪಡೆದಿದೆ. 21.46 - 22.3 ಕೆಎಂಪಿಎಲ್ ನೀಡುತ್ತದೆ. 8-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Sunday, February 18, 2024, 12:00 [IST]
English summary
Cars under rs 5 lakhs india maruti suzuki alto k10 s presso eeco renault kwid
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+