Citroen: ಟಾಟಾ ಕರ್ವ್ ಪ್ರತಿಸ್ಪರ್ಧಿ.. ಸಿಟ್ರನ್ ಬಸಾಲ್ಟ್ ಆಗಸ್ಟ್ 2ರಂದು ಅನಾವರಣ, ಬೆಲೆ ಎಷ್ಟು.. ವಿಶೇಷತೆಗಳೇನು?

ಫ್ರೆಂಚ್ ಮೂಲದ ಸಿಟ್ರನ್ (Citroen) ಪ್ರಖ್ಯಾತ ಕಾರು ತಯಾರಕ ಸಂಸ್ಥೆಯಾಗಿ ಮನೆ ಮಾತಾಗಿದೆ. ದೇಶೀಯ ಮಾರುಕಟ್ಟೆಯಲ್ಲಿ ಆಕರ್ಷಕ ವಿನ್ಯಾಸ ಮತ್ತು ವೈಶಿಷ್ಟ್ಯ ಪಡೆದಿರುವ ವಿವಿಧ ಕಾರುಗಳನ್ನು ಮಾರಾಟ ಮಾಡುತ್ತಿದೆ. ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿಸುತ್ತಿದ್ದಾರೆ. ಸದ್ಯ ಕೆಲವೇ ದಿನಗಳಲ್ಲಿ ಬಿಡುಗಡೆಯಾಗಲಿರುವ ಟಾಟಾ ಕರ್ವ್ (Tata Curvv) ಕೂಪೆ ಎಸ್‌ಯುವಿಗೆ ಪ್ರತಿಸ್ಪರ್ಧಿಯಾಗಿ, ಬಸಾಲ್ಟ್ (Basalt) ಕಾರನ್ನು ಪರಿಚಯಿಸಲು ಸಾಕಷ್ಟು ತಯಾರಿ ಮಾಡಿಕೊಳ್ಳುತ್ತಿದೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.

ಸಿಟ್ರನ್ ಇಂಡಿಯಾ, ಸಿ3 ಏರ್‌ಕ್ರಾಸ್ (C3 Aircross) ಆಧಾರಿತ ಹೊಚ್ಚ ಹೊಸ ಕೂಪೆ ಎಸ್‌ಯುವಿ 'ಬಸಾಲ್ಟ್'ನ್ನು ಆಗಸ್ಟ್ 2ರಂದು ಅನಾವರಣಗೊಳಿಸಲಿದೆ. ಆ ಬಳಿಕ ಮುಂಬರುವ ವಾರಗಳಲ್ಲಿ ನೂತನ ಕಾರಿನ ಬೆಲೆಯನ್ನು ಘೋಷಿಸುವ ನಿರೀಕ್ಷೆಯಿದೆ. ಈ ಬಸಾಲ್ಟ್ ಎಸ್‌ಯುವಿ ರೂ.11 ರಿಂದ ರೂ.12 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿಗೆ ದೊರೆಯಲಿದೆ ಎಂದು ಅಂದಾಜಿಸಲಾಗಿದೆ.

Citroen Basalt Car Unveiled On 2 August Details

ಸಿಟ್ರನ್ ಬಸಾಲ್ಟ್ (Citroen Basalt) ಕೂಪೆ ಎಸ್‌ಯುವಿ ವಿನ್ಯಾಸ (ಡಿಸೈನ್), ಬಹುತೇಕ 'ಸಿ3 ಏರ್‌ಕ್ರಾಸ್‌' ಕಾರಿಗೆ ಹೋಲಿಕೆಯಾಗುತ್ತದೆ. ಈ ಬಸಾಲ್ಟ್ ಎಸ್‌ಯುವಿ ಆಕರ್ಷಕವಾದ ಸಿಟ್ರನ್ ಲೋಗೋ, ನವೀನವಾದ ಗ್ರಿಲ್‌, ಡುಯಲ್-ಟೋನ್ ಬಂಪರ್, ಫ್ಲಿಪ್-ಸ್ಟೈಲ್ ಡೋರ್ ಹ್ಯಾಂಡಲ್‌ಗಳು, ಎಲ್‌ಇಡಿ ಟೈಲ್‌ಲ್ಯಾಂಪ್‌ಗಳು ಮತ್ತು ಸ್ಕ್ವೇರ್ಡ್-ಆಫ್ ವೀಲ್ ಆರ್ಚ್‌ಗಳನ್ನು ಒಳಗೊಂಡಿರುವ ನೀರಿಕ್ಷೆಯಿದೆ.

ಈ ಕಾರು 5 ಆಸನದೊಂದಿಗೂ ಲಭ್ಯವಾಗಲಿದೆ. 10.2-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಆಪಲ್ ಕಾರ್‌ಪ್ಲೇ, ಆಂಡ್ರಾಯ್ಡ್ ಆಟೋ, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ವೈರ್‌ಲೆಸ್ ಚಾರ್ಜಿಂಗ್, ಕೀಲೆಸ್ ಎಂಟ್ರಿ, ಕ್ರೂಸ್ ಕಂಟ್ರೋಲ್ ಹಾಗೂ ಎಲೆಕ್ಟ್ರಿಕಲ್ ಫೋಲ್ಡಿಂಗ್ ವಿಂಗ್ ಮಿರರ್‌ನಂತಹ ಹಲವು ವೈಶಿಷ್ಟ್ಯಗಳಿರುವ ಸಾಧ್ಯತೆಯಿದೆ.

Citroen Basalt Car Unveiled On 2 August Details

ಸಿಟ್ರನ್ ಬಸಾಲ್ಟ್ ಕೂಪೆ ಎಸ್‌ಯುವಿ 1.2-ಟರ್ಬೊ ಪೆಟ್ರೋಲ್ ಎಂಜಿನ್‌ನ್ನು ತನ್ನದಾಗಿಸಿಕೊಂಡಿರಲಿದ್ದು, 110 ಪಿಎಸ್ ಗರಿಷ್ಠ ಶಕ್ತಿ (ಪವರ್) ಹಾಗೂ 205 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಒಳಗೊಂಡಿರಲಿದೆ. 6-ಸ್ಪೀಡ್ ಮ್ಯಾನುವಲ್/ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಕೂಡ ಪಡೆದಿರಲಿದೆ. ಜೊತೆಗೆ ಫ್ರಂಟ್ ವೀಲ್ ಡ್ರೈವ್ (ಮುಂಭಾಗ ಚಕ್ರ ಚಾಲನೆ) ತಂತ್ರಜ್ಞಾನವನ್ನು ಹೊಂದಿರಲಿದೆ ಎಂದು ಹೇಳಲಾಗಿದೆ.

ಈ ಸಿಟ್ರನ್ ಬಸಾಲ್ಟ್ ಕೂಪೆ ಎಸ್‌ಯುವಿಗೆ ಪ್ರಬಲವಾಗಿ ಸ್ಪರ್ಧೆಯೊಡ್ಡಲಿದೆ ಎನ್ನಲಾದ ಟಾಟಾ ಕರ್ವ್ (Tata Curvv) ಕಾರನ್ನು ಇಂದು (ಜುಲೈ 19) ಅನಾವರಣ ಮಾಡಲಾಗುತ್ತಿದೆ. ಆದಾಗ್ಯೂ ನೂತನ ಕಾರನ್ನು ಅಧಿಕೃತವಾಗಿ ಆಗಸ್ಟ್ 7ರಂದು ಬಿಡುಗಡೆಗೊಳಿಸಲಾಗುತ್ತದೆ. ಕರ್ವ್ ಸಹ ಕೂಪೆ ಎಸ್‌ಯುವಿಯಾಗಿದೆ. ಮೊದಲಿಗೆ ಎಲೆಕ್ಟ್ರಿಕ್, ಆ ನಂತರ ಇಂಧನ (ಪೆಟ್ರೋಲ್/ಡೀಸೆಲ್) ಚಾಲಿತ ರೂಪದಲ್ಲಿ ಮಾರುಕಟ್ಟೆಗೆ ಬರುವ ನಿರೀಕ್ಷೆಯಿದೆ.

Citroen Basalt Car Unveiled On 2 August Details

ಟಾಟಾ ಕರ್ವ್ ಎಲೆಕ್ಟ್ರಿಕ್ ಕಾರು 55 ಕೆಡಬ್ಲ್ಯೂಹೆಚ್ ಬ್ಯಾಟರಿಯನ್ನು ಒಳಗೊಂಡಿರಲಿದ್ದು, ಭರ್ತಿ ಚಾರ್ಜ್‌ನಲ್ಲಿ 550 ಕಿಲೋಮೀಟರ್ ಕ್ರಮಿಸುತ್ತದೆ ಎಂದು ಹೇಳಲಾಗಿದೆ. ಇಂಧನ ಚಾಲಿತ ಮಾದರಿಯು 1.2-ಲೀಟರ್ ಪೆಟ್ರೋಲ್ ಹಾಗೂ 1.5-ಲೀಟರ್ ಟರ್ಬೊ ಡೀಸೆಲ್ ಎಂಜಿನ್‌ನ್ನು ಪಡೆದಿರಲಿದ್ದು, 6-ಸ್ವೀಡ್ ಮ್ಯಾನುವಲ್ ಅಥವಾ ಡಿಸಿಟಿ (ಡುಯಲ್ ಕ್ಲಚ್ ಟ್ರಾಸ್ಮಿಷನ್) ಗೇರ್‌ಬಾಕ್ಸ್‌ನೊಂದಿಗೆ ಸಿಗುವ ಸಾಧ್ಯತೆಯಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Friday, July 19, 2024, 9:31 [IST]
English summary
Citroen basalt car unveiled on 2 august details
Read more on citroen india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+