ಟಾಟಾ ಎದುರಿಗೆ ಮಂಕಾಯ್ತು: ಈ ಜನಪ್ರಿಯ ಕಾರಿನ ಮಾರಾಟ ಕುಸಿತ.. ಮತ್ತೆ ಕಂಪನಿಗೆ ಕಾಮಧೇನು ಆಗುತ್ತಾ?

ಸಿಟ್ರನ್ (Citroen) ಪ್ರಮುಖ ಕಾರು ತಯಾರಕ ಕಂಪನಿಯಾಗಿದೆ. ದೇಶೀಯ ಮಾರುಕಟ್ಟೆಯಲ್ಲಿ ಆಗಸ್ಟ್‌ ತಿಂಗಳಲ್ಲಿ 'ಟಾಟಾ ಕರ್ವ್' ಕೂಪೆ ಎಸ್‌ಯುವಿ ಎದುರಾಳಿಯಾಗಿ 'ಬಸಾಲ್ಟ್' ಎಸ್‌ಯುವಿಯನ್ನು ಬಿಡುಗಡೆಗೊಳಿಸಿತ್ತು. ಈ ಕಾರು ಆರಂಭದಲ್ಲಿ ಉತ್ತಮ ಸಂಖ್ಯೆಯಲ್ಲಿ ಮಾರಾಟವಾಗಿತ್ತು. ಆದರೆ, ನಂತರದ ದಿನಗಳಲ್ಲಿ ಮಾರಾಟ ಪ್ರಮಾಣ ನಿಧಾನವಾಗಿ ಇಳಿಮುಖವಾಗುತ್ತಿದೆ. ಈ ನವೆಂಬರ್‌ನಲ್ಲಿ ಬಸಾಲ್ಟ್ ಎಸ್‌ಯುವಿ ಹೆಚ್ಚಿನ ಸಂಖ್ಯೆಯಲ್ಲಿ ಮಾರಾಟಗೊಂಡಿರುವ ನಿರೀಕ್ಷೆಯಿದ್ದು, ಮತ್ತೆ ಸಿಟ್ರನ್ ಕಂಪನಿಗೆ ಕಾಮಧೇನು ಆಗಬಹುದು ಎನ್ನಲಾಗಿದೆ.

ದಸರಾ ಹಾಗೂ ದೀಪಾವಳಿ ಹಬ್ಬಗಳು ಇದ್ದರೂ ಕಳೆದ ತಿಂಗಳು (ಅಕ್ಟೋಬರ್ - 2024) 221 ಯುನಿಟ್ ಸಿಟ್ರನ್ ಬಸಾಲ್ಟ್ (Citroen Basalt) ಕೂಪೆ ಎಸ್‌ಯುವಿಗಳನ್ನು ಮಾತ್ರ ಮಾರಾಟ ಮಾಡಲಾಗಿದೆ. ಸೆಪ್ಟೆಂಬರ್‌ನಲ್ಲಿ ಮಾರಲ್ಪಟ್ಟ 341 ಯುನಿಟ್‌ಗಳಿಗೆ ಹೋಲಿಕೆ ಮಾಡಿದರೆ ತಿಂಗಳಿಗೆ ತಿಂಗಳಿಗೆ (MoM) ಶೇಕಡ -35.19% ಕುಸಿತವಾಗಿದೆ. ಆಗಸ್ಟ್‌ನಲ್ಲಿ ಗರಿಷ್ಠ ಸಂಖ್ಯೆಯಲ್ಲಿ ಬರೋಬ್ಬರಿ 579 ಯುನಿಟ್ ಬಸಾಲ್ಟ್ ಕಾರುಗಳನ್ನು ಮಾರಾಟ ಮಾಡಲಾಗಿತ್ತು.

Citroen Basalt Coupe Sales Decreased Day By Day Details

ಸದ್ಯ ದೇಶೀಯ ಗ್ರಾಹಕರ ಖರೀದಿಗೆ ಲಭ್ಯವಿರುವ ಹೊಚ್ಚ ಹೊಸ ಸಿಟ್ರನ್ ಬಸಾಲ್ಟ್ ಕಾರು, ರೂ.7.99 ಲಕ್ಷದಿಂದ ರೂ.13.95 ಲಕ್ಷ ಎಕ್ಸ್ ಶೋರೂಂ ದರವನ್ನು ಹೊಂದಿದೆ. ಈ ಎಸ್‌ಯುವಿ ಬಸಾಲ್ಟ್ 1.2ಪಿ ಯು, ಬಸಾಲ್ಟ್ ಪ್ಲಸ್, ಬಸಾಲ್ಟ್ ಟರ್ಬೊ ಪ್ಲಸ್ ಮತ್ತು ಬಸಾಲ್ಟ್ ಟರ್ಬೊ ಎಟಿ ಪ್ಲಸ್ ಸೇರಿದಂತೆ ವಿವಿಧ ರೂಪಾಂತರಗಳ (ವೇರಿಯೆಂಟ್) ಆಯ್ಕೆಯನ್ನು ಪಡೆದಿದೆ.

ಈ ಕಾರು 2 ಪವರ್‌ಟ್ರೇನ್ ಆಯ್ಕೆಯನ್ನು ಹೊಂದಿದೆ. ಇದರ 1.2-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್ 82 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 115 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. ಮತ್ತೊಂದು 1.2-ಲೀಟರ್ ಪೆಟ್ರೋಲ್ ಎಂಜಿನ್ 110 ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 205 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ.

Citroen Basalt Coupe Sales Decreased Day By Day Details

ನೂತನ ಎಸ್‌ಯುವಿ 5-ಸ್ಪೀಡ್/ 6-ಸ್ಪೀಡ್ ಮ್ಯಾನುವಲ್ ಹಾಗೂ 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ ಆಯ್ಕೆಯನ್ನು ಒಳಗೊಂಡಿದೆ. 18 ರಿಂದ 19.5 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಪೋಲಾರ್ ವೈಟ್, ಸ್ಟೀಲ್ ಗ್ರೇ, ಪ್ಲಾಟಿನಂ ಗ್ರೇ, ಕಾಸ್ಮೊ ಬ್ಲೂ ಸೇರಿದಂತೆ ಹಲವು ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ.

ಹೊಸ ಸಿಟ್ರನ್ ಬಸಾಲ್ಟ್ ಎಸ್‌ಯುವಿ ಹೊರಭಾಗದಲ್ಲಿ ಆಕರ್ಷಕವಾದ ವಿನ್ಯಾಸವನ್ನು ಒಳಗೊಂಡಿದೆ. ಇದರಲ್ಲಿ 5 ಜನರು ಸುಲಭವಾಗಿ ದೂರ ಊರುಗಳಿಗೆ ಓಡಾಟ ನಡೆಸಬಹುದು. ವಾರಾಂತ್ಯ ಹಾಗೂ ರಜಾದಿನಗಳಲ್ಲಿ ಪ್ರವಾಸಕ್ಕೆ ಹೋಗುವಾಗ ಹೆಚ್ಚಿನ ಲಗೇಜ್ ಸಾಗಿಸಲು 470 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಹೊಂದಿದೆ.

Citroen Basalt Coupe Sales Decreased Day By Day Details

ಈ ಕಾರು ಹತ್ತಾರು ನವೀನ ವೈಶಿಷ್ಟ್ಯಗಳನ್ನು ಹೊಂದಿದೆ. ಪ್ರಮುಖವಾಗಿ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ (10.2-ಇಂಚು), ಡಿಜಿಟಲ್ ಡ್ರೈವರ್ಸ್ ಡಿಸ್ಪ್ಲೇ (7-ಇಂಚು), ವೈರ್‌ಲೆಸ್ ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ವೈರ್‌ಲೆಸ್ ಫೋನ್ ಚಾರ್ಜರ್, ಪುಶ್ ಬಟನ್ ಸ್ಟಾರ್ಟ್, ಸ್ಟೀರಿಂಗ್ ಮೌಂಟೆಡ್ ಆಡಿಯೋ ಕಂಟ್ರೋಲ್ ಮತ್ತು ಪವರ್ ವಿಂಡೋದಂತಹ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ.

ಸಿಟ್ರನ್ ಬಸಾಲ್ಟ್ ಕೂಪೆ ಎಸ್‌ಯುವಿ ಸುರಕ್ಷತೆಗೆ ಹೆಸರುವಾಸಿಯಾಗಿದೆ. ಪ್ರಯಾಣಿಕರ ರಕ್ಷಣೆಗಾಗಿ 6-ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್) ಮತ್ತು ರೇರ್ ಪಾರ್ಕಿಂಗ್ ಸೆನ್ಸರ್ಸ್ ಸೇರಿದಂತೆ ವಿವಿಧ ಸುರಕ್ಷತಾ ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Saturday, November 30, 2024, 9:00 [IST]
English summary
Citroen basalt coupe sales decreased day by day details
Read more on citroen india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+