ಕಡಿಮೆ ಬೆಲೆಗೆ ಲಕ್ಷುರಿ ಫೀಚರ್ಸ್, ಟಾಟಾಗೆ ಟಾಂಗ್: ಈ ಕಾರಿನ ಬೆಲೆ ಕೇಳಿ ಧೋನಿ ಶಾಕ್!

ಜನಪ್ರಿಯ ವಾಹನ ತಯಾರಕ ಸಂಸ್ಥೆಯಾದ ಫ್ರೆಂಚ್ ಮೂಲದ ಸಿಟ್ರನ್ (Citroen) ತನ್ನ ಸಿಟ್ರನ್ ಬಸಾಲ್ಟ್ ಎಂಬ ಮೊದಲ ಕೂಪೆ ಎಸ್‌ಯುವಿಯನ್ನು ಈಗಾಗಲೇ ಅನಾವರಣಗೊಳಿಸಲಾಗಿದೆ. ಈ ಹೊಸ ಹೊಸ ಸಿಟ್ರನ್ ಬಸಾಲ್ಟ್ (Citroen Basalt) ಎಸ್‌ಯುವಿಯು ನಾಳೆ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿದೆ. ವಿಶೇಷವೆಂದರೆ ಟಾಟಾ ಮೋಟಾರ್ಸ್ ಕಂಪನಿಯು ಕರ್ವ್ ಐಸಿಯು ಎಸ್‍ಯುವಿ ಕೂಪ್ ಮಾದರಿಯನ್ನು ಬಿಡುಗಡೆಗೊಳಿಸಲು ಸಜ್ಜಾಗಿದೆ. ಇದೇ ವೇಳೆ ಸಿಟ್ರನ್ ಎದುರಾಳಿಯಾಗಿ ತನ್ನ ಹೊಸ ಕೂಪೆ ಎಸ್‌ಯುವಿಯನ್ನು ತರುತ್ತಿದೆ. ಈ ಎರಡೂ ಮಾದರಿಗಳು ಭಾರತೀಯ ಮಾರುಕಟ್ಟೆಗಳಲ್ಲಿ ಪರಸ್ಪರ ಸ್ಪರ್ಧಿಸಲಿದೆ.

ಭಾರತೀಯ ಮಾರುಕಟ್ಟೆಯಲ್ಲಿ ಎಸ್‌ಯುವಿ ಕೂಪ್‌ಗಳಿವೆ ಆದರೆ ಅವು ಐಷಾರಾಮಿ ತಯಾರಕರಿಂದ ಬಂದಿರುವುದರಿಂದ ಸಾಕಷ್ಟು ದುಬಾರಿಯಾಗಿದೆ. ಆದರೆ ಬಸಾಲ್ಟ್ ಮತ್ತು ಕರ್ವ್ ಮಾದರಿಗಳು ಭಾರತದಲ್ಲಿ ಕೈಗೆಟುಕುವ ಎಸ್‍ಯುವಿ ಕೂಪ್‌ಗಳಾಗಿವೆ. ಸಿಟ್ರನ್ ಬ್ರಾಂಡ್ ಅಂಬಾಸಿಡರ್ ಎಂಎಸ್ ಧೋನಿ ಅವರೊಂದಿಗೆ ಟೀಸರ್ ವೀಡಿಯೊವನ್ನು ಬಿಡುಗಡೆ ಮಾಡಿದೆ. ಟೀಸರ್ ವೀಡಿಯೊ ಬಸಾಲ್ಟ್ ಅತ್ಯಂತ ಸ್ಪರ್ಧಾತ್ಮಕವಾಗಿ ಬೆಲೆಯಿರುತ್ತದೆ ಎಂಬ ಸೂಚನೆ ನೀಡಿದೆ.

Citroen Basalt Coupe SUV

ಎಷ್ಟರಮಟ್ಟಿಗೆ ಎಂದರೆ ಎಂಎಸ್ ಧೋನಿ ಕೂಡ ಬಸಾಲ್ಟ್ ಮೇಲಿನ ಬೆಲೆಯೊಂದಿಗೆ ಬೆರಗಾಗಿರುವುದು ಟೀಸರ್ ವಿಡಿಯೋದಲ್ಲಿ ತೋರಿಸಿದ್ದಾರೆ. ಈ ಸಿಟ್ರನ್ ಬಸಾಲ್ಟ್ ಅತ್ಯಾಧುನಿಕ ವಿನ್ಯಾಸ (ಡಿಸೈನ್) ಹೊಂದಿದೆ. ಬಹುತೇಕ ಸಿ3 ಏರ್‌ಕ್ರಾಸ್‌ (C3 Aircross) ಎಸ್‌ಯುವಿಗೆ ಹೋಲುತ್ತದೆ. ಈ ಹೊಸ ಎಸ್‍ಯುವಿಯಲ್ಲಿ ನವೀನ ಶೈಲಿಯ ಗ್ರಿಲ್, ಸ್ಪ್ಲಿಟ್ ಹೆಡ್‌ಲೈಟ್ ಸೆಟಪ್, ವಿ-ಆಕಾರದ ಸ್ಪ್ಲಿಟ್ ಎಲ್ಇಡಿ ಡಿಆರ್‌ಎಲ್‌ಗಳನ್ನು ಪಡೆದಿದೆ.

ಈ ಸಿಟ್ರನ್ ಬಸಾಲ್ಟ್ ಕಾರಿನ ಒಳಭಾಗದ ವಿನ್ಯಾಸ ಕೂಡ ಸಾಕಷ್ಟು ಅತ್ಯಾಧುನಿಕವಾಗಿದೆ. ಇದರಲ್ಲಿ 5 ಮಂದಿ ಆರಾಮದಾಯಕವಾಗಿ ಪ್ರಯಾಣಿಸಬಹುದು. ವಾರಾಂತ್ಯ ಹಾಗೂ ರಜಾದಿನದಲ್ಲಿ ಹೆಚ್ಚಿನ ಲಗೇಜ್ ಸಾಗಿಸಲು 470 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಪಡೆದಿದೆ. ಪೋಲಾರ್ ವೈಟ್, ಸ್ಟೀಲ್ ಗ್ರೇ, ಪ್ಲಾಟಿನಂ ಗ್ರೇ, ಕಾಸ್ಮೊ ಬ್ಲೂ ಸೇರಿದಂತೆ 5-ಮೊನೊಟೋನ್ ಮತ್ತು 2-ಡುಯಲ್ ಟೋನ್ ಬಣ್ಣಗಳೊಂದಿಗೆ ದೊರೆಯುತ್ತದೆ.

Citroen Basalt Coupe SUV

ಸಿಟ್ರನ್ ಬಸಾಲ್ಟ್ ಸಾಕಷ್ಟು ಅತ್ಯುತ್ತಮ ವೈಶಿಷ್ಟ್ಯಗಳನ್ನು ಒಳಗೊಂಡಿದೆ. 10.2-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 7-ಇಂಚಿನ ಡಿಜಿಟಲ್ ಡ್ರೈವರ್ಸ್ ಡಿಸ್ಪ್ಲೇ, ವೈರ್‌ಲೆಸ್ ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ, ವೈರ್‌ಲೆಸ್ ಫೋನ್ ಚಾರ್ಜರ್, ಪುಶ್ ಬಟನ್ ಸ್ಟಾರ್ಟ್, ಸ್ಟೀರಿಂಗ್ ಮೌಂಟೆಡ್ ಆಡಿಯೋ ಕಂಟ್ರೋಲ್ಸ್ ಮತ್ತು ಪವರ್ ವಿಂಡೋಗಳನ್ನು ಹೊಂದಿದೆ.

ಇನ್ನು ಡ್ಯುಯಲ್-ಟೋನ್ ಅಲಾಯ್ ವೀಲ್‌ಗಳನ್ನು ಹೊಂದಿದೆ. ಈ ಸಿಟ್ರನ್ ಬಸಾಲ್ಟ್ ಎರಡು ಪವರ್‌ಟ್ರೇನ್ ಆಯ್ಕೆಗಳೊಂದಿಗೆ ದೊರೆಯುತ್ತದೆ. ಇದರ 1.2-ಲೀಟರ್ ನ್ಯಾಚುರಲ್ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್ 82 ಹೆಚ್‌ಪಿ ಗರಿಷ್ಠ ಪವರ್ ಹಾಗೂ 115 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತದೆ. ಜೊತೆಗೆ 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಆಯ್ಕೆಯನ್ನು ಮಾತ್ರ ಪಡೆದಿದೆ. ಈ ಎಂಜಿನ್ 18 ಕಿ.ಮೀ ಮೈಲೇಜ್ ಅನ್ನು ನೀಡುತ್ತದೆ.

ಇನ್ನು 1.2-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ 110 ಹೆಚ್‌ಪಿ ಗರಿಷ್ಠ ಶಕ್ತಿ ಹೊರಹಾಕುತ್ತದೆ. ಆದಾಗ್ಯೂ 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಹೊಂದಿರುವ ರೂಪಾಂತರ (ವೇರಿಯೆಂಟ್) 190 ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯ ಹೊಂದಿದೆ. ಇದು 19.5 ಕಿ.ಮೀ ಮೈಲೇಜ್ ಅನ್ನು ನೀಡುತ್ತದೆ. ಇನ್ನು 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್ ಪಡೆದಿರುವ ರೂಪಾಂತರ 205 ಪೀಕ್ ಟಾರ್ಕ್ ಉತ್ಪಾದಿಸುತ್ತದೆ. ಇದು 18.7 ಕಿ.ಮೀ ಮೈಲೇಜ್ ಅನ್ನು ನೀಡುತ್ತದೆ.

ಈ ಸಿಟ್ರನ್ ಬಸಾಲ್ಟ್ ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆ ಒದಗಿಸುತ್ತದೆ. ಅದಕ್ಕಾಗಿ 6 ಏರ್‌ಬ್ಯಾಗ್‌, ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್) ಹಾಗೂ ರೇರ್ ಪಾರ್ಕಿಂಗ್ ಸೆನ್ಸರ್ಸ್ ಸೇರಿದಂತೆ ವಿವಿಧ ಸುರಕ್ಷತಾ ವೈಶಿಷ್ಟ್ಯಗಳನ್ನು ಪಡೆದುಕೊಂಡಿವೆ.

More from DriveSpark

Article Published On: Thursday, August 8, 2024, 16:14 [IST]
English summary
Citroen basalt coupe suv launch tomorrow details
Read more on citroen india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+