Citroen: ಹೊಸ ಸಿಟ್ರನ್ ಬಸಾಲ್ಟ್ ಕಾರಿನ ಸಂಪೂರ್ಣ ಬೆಲೆ ಘೋಷಣೆ.. 8 ಲಕ್ಷಕ್ಕೆ ಸಿಗುತ್ತೆ, 20 Km ಮೈಲೇಜ್.. 5 ಸೀಟರ್!

ಫ್ರೆಂಚ್ ಮೂಲದ ಸಿಟ್ರನ್ (Citroen) ಪ್ರಮುಖ ಕಾರು ತಯಾರಕ ಸಂಸ್ಥೆಯಾಗಿ ಗುರುತಿಸಿಕೊಂಡಿದೆ. ದೇಶೀಯ ಮಾರುಕಟ್ಟೆಯಲ್ಲಿ ಅತ್ಯಾಧುನಿಕ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಪಡೆದಿರುವ ಸಿ3, ಇಸಿ3, ಸಿ3 ಏರ್‌ಕ್ರಾಸ್ ಮತ್ತು ಸಿ5 ಏರ್‌ಕ್ರಾಸ್ ಕಾರುಗಳನ್ನು ಮಾರಾಟ ಮಾಡುತ್ತಿದೆ. ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿಸುತ್ತಿದ್ದಾರೆ. ಇತ್ತೀಚೆಗೆ ಸಿಟ್ರನ್ ಕಂಪನಿಯು ಹೊಚ್ಚ ಹೊಸ ಬಸಾಲ್ಟ್ (Basalt) ಕೂಪೆ ಎಸ್‌ಯುವಿಯನ್ನು ಅದ್ದೂರಿಯಾಗಿ ಬಿಡುಗಡೆ ಮಾಡಿತ್ತು. ಸದ್ಯ ಈ ಕಾರಿನ ದರವನ್ನು ಘೋಷಣೆ ಮಾಡಲಾಗಿದ್ದು, ಇದು ಅತ್ಯಂತ ಕೈಗೆಟುಕುವ ಬೆಲೆಯ ಎಸ್‌ಯುವಿಯಾಗಿ ಹೊರಹೊಮ್ಮಿದೆ. ಸೆಪ್ಟೆಂಬರ್ ಮೊದಲ ವಾರದಲ್ಲಿ ವಿತರಣೆಗಳು ಶುರುವಾಗಲಿದೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.

ಸಿಟ್ರನ್ ಬಸಾಲ್ಟ್ ಕಾರು ರೂಪಾಂತರಗಳಿಗೆ (ವೇರಿಯೆಂಟ್) ಅನುಗುಣವಾಗಿ ವಿಭಿನ್ನವಾದ ಎಕ್ಸ್ ಶೋರೂಂ ದರವನ್ನು ಪಡೆದಿದೆ. ಬಸಾಲ್ಟ್ 1.2ಪಿ ಯು ರೂ.7.99 ಲಕ್ಷ, ಬಸಾಲ್ಟ್ ಪ್ಲಸ್ ರೂ.9.99 ಲಕ್ಷ, ಬಸಾಲ್ಟ್ ಟರ್ಬೊ ಪ್ಲಸ್ ರೂ.11.49 ಲಕ್ಷ, ಬಸಾಲ್ಟ್ ಟರ್ಬೊ ಎಟಿ ಪ್ಲಸ್ ರೂ.12.79, ಬಸಾಲ್ಟ್ ಟರ್ಬೊ ಮ್ಯಾಕ್ಸ್ ರೂ.12.28 ಲಕ್ಷ ಮತ್ತು ಬಸಾಲ್ಟ್ ಟರ್ಬೊ ಎಟಿ ಮ್ಯಾಕ್ಸ್ ರೂ.13.62 ಲಕ್ಷ ಬೆಲೆಯನ್ನು ಹೊಂದಿದೆ.

Citroen Basalt Coupe Suv Variant Wise Price Announced Very Affordable Details

ಟಾಟಾ ಕರ್ವ್ (Tata Curvv) ಕೂಪೆ ಎಸ್‌ಯುವಿಗೆ ಪ್ರತಿಸ್ಪರ್ಧಿಯಾಗಿರುವ ಸಿಟ್ರನ್ ಬಸಾಲ್ಟ್ (Citroen Basalt) ಕಾರು ಹೊರಭಾಗದಲ್ಲಿ ಆಕರ್ಷಕವಾದ ವಿನ್ಯಾಸ (ಡಿಸೈನ್) ಒಳಗೊಂಡಿದೆ. ಬಹುತೇಕ ಸಿ3 ಏರ್‌ಕ್ರಾಸ್‌ ಎಸ್‌ಯುವಿಗೆ ಹೋಲಿಕೆಯಾಗುತ್ತದೆ. ಹೊಸದಾಗಿರುವ ಗ್ರಿಲ್, ಸ್ಪ್ಲಿಟ್ ಹೆಡ್‌ಲೈಟ್ ಸೆಟಪ್, ವಿ-ಆಕಾರದ ಸ್ಪ್ಲಿಟ್ ಎಲ್ಇಡಿ ಡಿಆರ್‌ಎಲ್‌ಗಳನ್ನು ಹೊಂದಿದೆ. ರೂಫ್‌ಲೈನ್ ಇಳಿಜಾರಾಗಿದೆ. ಅತ್ಯಾಧುನಿಕ ಟೈಲ್‌ಲೈಟ್‌ಗಳು ಮತ್ತು ಡುಯಲ್-ಟೋನ್ ಅಲಾಯ್ ವೀಲ್‌ಗಳನ್ನು ಪಡೆದಿದೆ.

ಸಿಟ್ರನ್ ಬಸಾಲ್ಟ್ ಎರಡು ಪವರ್‌ಟ್ರೇನ್‌ ಆಯ್ಕೆಯಲ್ಲಿ ದೊರೆಯುತ್ತದೆ. 1.2-ಲೀಟರ್ ನ್ಯಾಚುರಲ್ ಆಸ್ಪಿರೇಟೆಡ್ ಪೆಟ್ರೋಲ್ ಹಾಗೂ 1.2-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್‌ನ್ನು ಹೊಂದಿದೆ. ಜೊತೆಗೆ 5-ಸ್ಪೀಡ್/6-ಸ್ಪೀಡ್ ಮ್ಯಾನುವಲ್ ಟ್ರಾನ್ಸ್‌ಮಿಷನ್‌ (ಎಂಟಿ) ಹಾಗೂ 6-ಸ್ಪೀಡ್ ಆಟೋಮೆಟಿಕ್ ಟ್ರಾನ್ಸ್‌ಮಿಷನ್‌ (ಎಟಿ) ಆಯ್ಕೆಯಲ್ಲಿಯೂ ಲಭ್ಯವಿದ್ದು, 18 ರಿಂದ 19.5 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ.

Citroen Basalt Coupe Suv Variant Wise Price Announced Very Affordable Details

ಈ ಕಾರು ಪೋಲಾರ್ ವೈಟ್, ಸ್ಟೀಲ್ ಗ್ರೇ, ಪ್ಲಾಟಿನಂ ಗ್ರೇ, ಕಾಸ್ಮೊ ಬ್ಲೂ ಸೇರಿದಂತೆ 5-ಮೊನೊಟೋನ್ ಹಾಗೂ 2-ಡುಯಲ್ ಟೋನ್ ಬಣ್ಣಗಳೊಂದಿಗೂ ಲಭ್ಯವಿದೆ. ಇದರಲ್ಲಿ 5 ಮಂದಿ ಆರಾಮದಾಯಕವಾಗಿ ಕುಳಿತುಕೊಂಡು ದೂರದ ಊರುಗಳಿಗೆ ಪ್ರಯಾಣಿಸಬಹುದು. ಪ್ರವಾಸದ ವೇಳೆಯಲ್ಲಿ ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ 470 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ.

ಸಿಟ್ರನ್ ಬಸಾಲ್ಟ್ ಎಸ್‌ಯುವಿಯ ಒಳಭಾಗದ ವಿನ್ಯಾಸವು ಅತ್ಯುತ್ತಮವಾಗಿದೆ. 10.2-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 7-ಇಂಚಿನ ಡಿಜಿಟಲ್ ಡ್ರೈವರ್ಸ್ ಡಿಸ್ಪ್ಲೇ, ವೈರ್‌ಲೆಸ್ ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ, ವೈರ್‌ಲೆಸ್ ಫೋನ್ ಚಾರ್ಜರ್, ಪುಶ್ ಬಟನ್ ಸ್ಟಾರ್ಟ್, ಸ್ಟೀರಿಂಗ್ ಮೌಂಟೆಡ್ ಆಡಿಯೋ ಕಂಟ್ರೋಲ್ಸ್ ಹಾಗೂ ಪವರ್ ವಿಂಡೋ ಒಳಗೊಂಡಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ.

Citroen Basalt Coupe Suv Variant Wise Price Announced Very Affordable Details

ನೂತನ ಸಿಟ್ರನ್ ಬಸಾಲ್ಟ್ (Citroen Basalt) ಕಾರು ಸುರಕ್ಷತೆಗೂ ಹೆಸರುವಾಸಿಯಾಗಿದೆ. 6 ಏರ್‌ಬ್ಯಾಗ್‌, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್) ಹಾಗೂ ರೇರ್ ಪಾರ್ಕಿಂಗ್ ಸೆನ್ಸರ್ಸ್ ಸೇರಿದಂತೆ ಹಲವು ರಕ್ಷಣಾತ್ಮಕ ವೈಶಿಷ್ಟ್ಯಗಳನ್ನು ಪಡೆದಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Saturday, August 17, 2024, 19:52 [IST]
English summary
Citroen basalt coupe suv variant wise price announced very affordable details
Read more on citroen india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+