ಬಜೆಟ್ ಬೆಲೆಗೆ ಒಳ್ಳೆ ಕಾರ್ ಬೇಕಾ? ಲಕ್ಷುರಿ ಫೀಚರ್ಸ್, ಗರಿಷ್ಠ ಸುರಕ್ಷೆತೆ & ಭರ್ಜರಿ ಮೈಲೇಜ್
ಜನಪ್ರಿಯ ವಾಹನ ತಯಾರಕ ಸಂಸ್ಥೆಯಾದ ಫ್ರೆಂಚ್ ಮೂಲದ ಸಿಟ್ರನ್ (Citroen) ಭಾರತೀಯ ಮಾರುಕಟ್ಟೆಯಲ್ಲಿ ತನ್ನ ಸಿಟ್ರನ್ ಬಸಾಲ್ಟ್ (Citroen Basalt) ಎಸ್‌ಯುವಿ ಕೂಪೆ ಮಾದರಿಯನ್ನು ಬಿಡುಗಡೆಗೊಳಿಸಿದೆ. ಈ ಹೊಸ ಸಿಟ್ರನ್ ಬಸಾಲ್ಟ್ ಎಸ್‌ಯುವಿ ಕೂಪೆ ರೂ.7.99 ಲಕ್ಷದ ವಿಶೇಷ ಪರಿಚಯಾತ್ಮಕ ಆರಂಭಿಕ ಬೆಲೆಯಲ್ಲಿ ಬಿಡುಗಡೆಗೊಳಿಸಿತು. ಇದೀಗ ಈ ಸಿಟ್ರನ್ ಬಸಾಲ್ಟ್ ಮಾದರಿಯ ಬೆಲೆಯು ಎಕ್ಸ್ ಶೋರೂಂ ಪ್ರಕಾರ ರೂ.7.99 ಲಕ್ಷದಿಂದ ರೂ.13.83 ಲಕ್ಷವರೆಗೆ ಇದೆ. ಹೊಸ ಸಿಟ್ರನ್ ಬಸಾಲ್ಟ್ ಭಾರತೀಯ ಮಾರುಕಟ್ಟೆಗೆ ಕಂಪನಿಯ ಪೋರ್ಟ್‌ಫೋಲಿಯೊದಿಂದ 5ನೇ ಕಾರ್ ಆಗಿದೆ.
ವಿನ್ಯಾಸ: ಹೊಸ ಸಿಟ್ರನ್ ಬಸಾಲ್ಟ್ ತುಂಬಾ ಆಸಕ್ತಿದಾಯಕ ವಿನ್ಯಾಸವನ್ನು ಹೊಂದಿದೆ. ಈ ಎಸ್‍ಯುವಿ ಕೂಪೆ ಬಾಡಿ ಸ್ಟೈಲ್ ಅನ್ನು ಹೊಂದಿದೆ. ಈ ಹೊಸ ಮಾದರಿಯ ಮುಂಭಾಗದಲ್ಲಿ ಲ್ಇಡಿ ಡಿಆರ್ಎಲ್ಗಳು ಮತ್ತು ಎಲ್ಇಡಿ ಹೆಡ್ ಲೈಟ್ ಸೆಟಪ್ ಅನ್ನು ಪಡೆಯುತ್ತದೆ. ಇದರ ಹೊರತಾಗಿ ನೀವು ಪಿಯಾನೋ ಬ್ಲ್ಯಾಕ್ ಫಿನಿಶಿಂಗ್ ಮತ್ತು ಸ್ವಲ್ಪ ಪ್ರಮಾಣದ ಕ್ರೋಮ್ ಅನ್ನು ಹೊಂದಿದೆ. ಈ ಹೊಸ ಕಾರಿನಲ್ಲಿ ಪಾಂಗ್ ಲೈಟ್ ಹ್ಯಾಲೊಜೆನ್ ಯುನಿಟ್ ಆಗಿದೆ.

ಈ ಸಿಟ್ರನ್ ಬಸಾಲ್ಟ್ ಬದಿಯಲ್ಲಿ 16-ಇಂಚಿನ ಡೈಮಂಡ್-ಕಟ್ ಅಲಾಯ್ ವ್ಹೀಲ್ ಗಳು ಮತ್ತು ಸುತ್ತಲೂ ಬಾಡಿ ಕ್ಲಾಡಿಂಗ್ ಅನ್ನು ಪಡೆಯುತ್ತದೆ. ಸೈಡ್ ಮಿರರ್‌ಗಳು ಗ್ಲಾಸ್ ಬ್ಲ್ಯಾಕ್ ಫಿನಿಶಿಂಗ್ ಅನ್ನು ಹೊಂದಿದೆ. ಇನ್ನು ಈ ಮಾದರಿಯಲ್ಲಿ ಸ್ಲೋಪಿಂಗ್ ರೂಫ್‌ಲೈನ್ ಮತ್ತು ಸುತ್ತುವ 3D ಟೈಲ್‌ಲೈಟ್‌ಗಳನ್ನು ನೋಡಬಹುದು. ಇನ್ನು ಈ ಸಿಟ್ರನ್ ಬಸಾಲ್ಟ್ ಕಾರಿನ ಹಿಂಭಾಗದಲ್ಲಿ, ನೀವು ಶಾರ್ಕ್‌ಫಿನ್ ಆಂಟೆನಾ ಮತ್ತು ಡಿಫೊಗರ್‌ಗಳನ್ನು ಪಡೆಯುತ್ತದೆ.
ಫೀಚರ್ಸ್: ಬಸಾಲ್ಟ್ ಒಳಭಾಗದಲ್ಲಿ, ಟ್ರಿಪಲ್-ಟೋನ್ ಡ್ಯಾಶ್‌ಬೋರ್ಡ್ ಅನ್ನು ಪಡೆಯುತ್ತದೆ. ವೈರ್‌ಲೆಸ್ Apple CarPlay ಮತ್ತು Android Auto ಕನೆಕ್ಟಿವಿಟಿ ಹೊಂದಿರುವ 10.25 ಟಚ್‌ಸ್ಕ್ರೀನ್ ಅನ್ನು ಹೊಂದಿದೆ ಮತ್ತು 15W ವೈರ್‌ಲೆಸ್ ಚಾರ್ಜರ್ ಅನ್ನು ಸಹ ಪಡೆಯುತ್ತದೆ. ಈ ಕಾರಿನ 7-ಇಂಚಿನ TFT ಡಿಸ್ ಪ್ಲೇಯನ್ನು ಪಡೆಯುತ್ತದೆ. ಈ ಡಿಸ್‌ಪ್ಲೇಯು 3 ವಿಭಿನ್ನ ಥೀಮ್‌ಗಳನ್ನು ಹೊಂದಿದೆ ಮತ್ತು ಚಾಲಕನ ಅಗತ್ಯಕ್ಕೆ ಅನುಗುಣವಾಗಿ ಕಸ್ಟಮೈಸ್ ಮಾಡಬಹುದು.

ಎರಡೂ ಬದಿಗಳಲ್ಲಿ ಸ್ಟೀರಿಂಗ್-ಮೌಂಟೆಡ್ ಕಂಟ್ರೋಲ್ ಗಳೊಂದಿಗೆ ಫ್ಲಾಟ್-ಬಾಟಮ್ ಸ್ಟೀರಿಂಗ್ ವ್ಹೀಲ್ ಅನ್ನು ಪಡೆಯುತ್ತದೆ. ಈ ಕಾರಿನ ಮುಂಭಾಗ ಮತ್ತು ಹಿಂಭಾಗದ ಎರಡೂ ಸೀಟುಗಳು ಅತ್ಯಂತ ಆರಾಮದಾಯಕವಾಗಿದೆ. ಹೊಸ ವಿಷಯವೆಂದರೆ ಹಿಂಬದಿಯ ಸೀಟಿನಲ್ಲಿ 3 ಹಂತದ ಹೊಂದಾಣಿಕೆಗಳನ್ನು ಹೊಂದಿರುವುದರಿಂದ ಉತ್ತಮ ಥೈ ಸಂಪೂರ್ಟ್ ಇದೆ. ಇದರಿಂದ ದೀರ್ಘಕಾಲ ಪ್ರಯಾಣಿಸಲು ಕಷ್ಟವಾಗುವುದಿಲ್ಲ. ಈ ಸಿಟ್ರನ್ ಬಸಾಲ್ಟ್ ಕಾರಿನ ಹಿಂಭಾಗದಲ್ಲಿ AC ವೆಂಟ್‌ಗಳು ಮತ್ತು 2 ಚಾರ್ಜಿಂಗ್ ಸಾಕೆಟ್‌ಗಳಿವೆ.
ಎಂಜಿನ್: ಸಿಟ್ರನ್ ಬಸಾಲ್ಟ್ ಮಾದರಿಯಲ್ಲಿ 2 ಎಂಜಿನ್ ಆಯ್ಕೆಗಳನ್ನು ಹೊಂದಿದೆ. ಇದರಲ್ಲಿ ಒಂದು 1.2 ನ್ಯಾಚುರಲ್ ಆಸ್ಪಿರೇಟೆಡ್ ಎಂಜಿನ್ ಆಗಿದ್ದು, ಇದು 82 bhp ಮತ್ತು 115 Nm ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಇನ್ನು , 1.2 ಟರ್ಬೊ ಪೆಟ್ರೋಲ್ 3-ಸಿಲಿಂಡರ್ ಎಂಜಿನ್ 109 bhp ಪವರ್ ಅನ್ನು ಉತ್ಪಾದಿಸುತ್ತದೆ. ಇದು ಮ್ಯಾನುವಲ್ 190Nm ಮತ್ತು ಆಟೋಮ್ಯಾಟಿಕ್ 205Nm ಟಾರ್ಕ್ ಅನ್ನು ಉತ್ಪಾದಿಸುತ್ತದೆ.

ಇನ್ನು ಸಿಟ್ರನ್ ಬಸಾಲ್ಟ್ ಮಾದರಿಯಲ್ಲಿ 2 ಎಂಜಿನ್ ಆಯ್ಕೆಗಳನ್ನು ಹೊಂದಿದೆ. ಇದರಲ್ಲಿ ಒಂದು 1.2 ನ್ಯಾಚುರಲ್ ಆಸ್ಪಿರೇಟೆಡ್ ಎಂಜಿನ್ ಆಗಿದ್ದು, ಇದು 82 bhp ಮತ್ತು 115 Nm ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಇನ್ನು , 1.2 ಟರ್ಬೊ ಪೆಟ್ರೋಲ್ 3-ಸಿಲಿಂಡರ್ ಎಂಜಿನ್ 109 bhp ಪವರ್ ಅನ್ನು ಉತ್ಪಾದಿಸುತ್ತದೆ. ಇದು ಮ್ಯಾನುವಲ್ 190 Nm ಮತ್ತು ಆಟೋಮ್ಯಾಟಿಕ್ 205 Nm ಟಾರ್ಕ್ ಅನ್ನು ಉತ್ಪಾದಿಸುತ್ತದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications