ನಷ್ಟದ ಹಾದಿಯಲ್ಲಿದ್ದ ಕಂಪನಿಗೆ ಲಾಭಕ್ಕೆ ಮರಳಲು ಕಾರಣವಾಯ್ತು ಈ ಕಾರು.. 6 ಲಕ್ಷ, 19 Km ಮೈಲೇಜ್!

ಫ್ರಾನ್ಸ್ ಮೂಲದ ಸಿಟ್ರನ್ (Citroen) ಜನಪ್ರಿಯ ವಾಹನ ತಯಾರಕ ಕಂಪನಿಯಾಗಿ ಗುರುತಿಸಿಕೊಂಡಿದೆ. ಭಾರತದ ಮಾರುಕಟ್ಟೆಯಲ್ಲಿ ವಿವಿಧ ಕಾರುಗಳನ್ನು ಮಾರಾಟ ಮಾಡುತ್ತಿದೆ. ಆದರೆ, ವಿದೇಶಿ ಕಂಪನಿಗಳಾದ ಹ್ಯುಂಡೈ, ಮಾರುತಿ ಸುಜುಕಿ, ಕಿಯಾ, ಟೊಯೊಟಾ, ಹೋಂಡಾದಂತೆ ಹೆಚ್ಚು ಖ್ಯಾತಿಗಳಿಸಲು ಸಾಧ್ಯವಾಗಿಲ್ಲ. ಇದೀಗ ಕಂಪನಿಯ ಕಾರುಗಳ ಮಾರಾಟ ನಿಧಾನವಾಗಿ ಚೇತರಿಸಿಕೊಳ್ಳುತ್ತಿದ್ದು, ನಷ್ಟದಿಂದ ಲಾಭದ ಹಾದಿಗೆ ಮರಳುತ್ತಿದೆ. ಅದಕ್ಕೆ ಹೊಚ್ಚ ಹೊಸ ಬಸಾಲ್ಟ್ (Basalt) ಕೂಪೆ ಎಸ್‌ಯುವಿ ಮತ್ತು ಸಿ3 (C3) ಹ್ಯಾಚ್‌ಬ್ಯಾಕ್‌ಗಳು ಪ್ರಮುಖ ಕಾರಣವಾಗಿವೆ. ಈ ಆಗಸ್ಟ್‌ನಲ್ಲಿ 'ಸಿಟ್ರನ್ ಸಿ3' ಕಾರಿನ ಮಾರಾಟ ಹೇಗಿದೆ ಎಂಬುದರ ಕುರಿತಂತೆ ಸಂಪೂರ್ಣವಾದ ವಿವರ ಇಲ್ಲಿದೆ.

ಕಳೆದ ತಿಂಗಳು (ಆಗಸ್ಟ್ 2024) ಸಿಟ್ರನ್ ಕಂಪನಿಯು 507 ಯುನಿಟ್‌ 'ಸಿ3' ಕಾರುಗಳನ್ನು ಮಾರಾಟಗೊಳಿಸಿದೆ. 2023ರ ಆಗಸ್ಟ್‌ನಲ್ಲಿ ಮಾರಾಟ ಮಾಡಿದ 250 ಯುನಿಟ್‌ಗೆ ಹೋಲಿಸಿದರೆ ವರ್ಷದಿಂದ ವರ್ಷಕ್ಕೆ (YoY) ಶೇಕಡ 102% ಬೆಳವಣಿಗೆಯಾಗಿದೆ. ಮುಂಬರುವ ದಿನಗಳಲ್ಲಿ ಈ ಹ್ಯಾಚ್‌ಬ್ಯಾಕ್‌ ಮಾರಾಟ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ನಿರೀಕ್ಷೆಯಿದೆ.

Citroen C3 Car August 2024 Sales Report 102 Percent Growth Details

ದೇಶೀಯ ಮಾರುಕಟ್ಟೆಯಲ್ಲಿ ಸಿಟ್ರನ್ ಕಂಪನಿಯ ಒಟ್ಟಾರೆ ಕಾರುಗಳ ಮಾರಾಟ ಪ್ರಮಾಣವು 4 ಪಟ್ಟು ಹೆಚ್ಚಳಗೊಂಡಿದೆ. ಈ ಆಗಸ್ಟ್‌ನಲ್ಲಿ ಬರೋಬ್ಬರಿ 1,275 ಯುನಿಟ್‌ ಕಾರುಗಳನ್ನು ಮಾರಾಟಗೊಳಿಸಲಾಗಿದೆ. 2023ರ ಇದೇ ಅವಧಿಯಲ್ಲಿ ಮಾರಾಟ ಮಾಡಿದ 576 ಯುನಿಟ್‌ಗೆ ಹೋಲಿಕೆ ಮಾಡಿದರೆ ಶೇಕಡ 121% ಅಧಿವೃದ್ದಿ ಸಾಧಿಸಲಾಗಿದೆ. ಇದರಲ್ಲಿ ಸಿ3 ಹ್ಯಾಚ್‌ಬ್ಯಾಕ್‌ನಂತೆ ಬಸಾಲ್ಟ್ ಎಸ್‌ಯುವಿಯ ಪಾಲು ದೊಡ್ಡದಿದ್ದು, 579 ಯುನಿಟ್ ಮಾರಾಟವಾಗಿವೆ.

ನೂತನ ಸಿಟ್ರನ್ ಸಿ3 (Citroen C3) ಹ್ಯಾಚ್‌ಬ್ಯಾಕ್‌ ಅತ್ಯಂತ ಕೈಗೆಟುಕುವ ಬೆಲೆಯಲ್ಲಿ ಖರೀದಿಗೆ ದೊರೆಯುತ್ತದೆ. ರೂ.6.16 ಲಕ್ಷದಿಂದ ರೂ.9.30 ಲಕ್ಷ ಎಕ್ಸ್ ಶೋರೂಂ ದರವನ್ನು ಹೊಂದಿದೆ. ಲೈವ್, ಫೀಲ್ ಹಾಗೂ ಶೈನ್ ಎಂಬ ರೂಪಾಂತರಗಳನ್ನು (ವೇರಿಯೆಂಟ್) ಪಡೆದಿದೆ. ಸ್ಟೀಲ್ ಗ್ರೇ, ಝೆಸ್ಟಿ ಆರೆಂಜ್, ಪ್ಲಾಟಿನಂ ಗ್ರೇ, ಪೋಲಾರ್ ವೈಟ್ ಸೇರಿದಂತೆ ಹಲವು ಬಣ್ಣಗಳೊಂದಿಗೂ ಸಿಗುತ್ತದೆ.

ಈ ಸಿಟ್ರನ್ ಸಿ3 ಕಾರು ಎರಡು ಶಕ್ತಿಯುತ ಪವರ್‌ಟ್ರೇನ್‌ನ್ನು ಹೊಂದಿದೆ. 1.2-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್ 82 ಪಿಎಸ್ ಗರಿಷ್ಠ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 115 ಎನ್ಎಂ (ನ್ಯೂಟನ್ ಮೀಟರ್) ಟಾರ್ಕ್ ಉತ್ಪಾದಿಸುತ್ತದೆ. 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನ್ನು ಹೊಂದಿದೆ.

ಮತ್ತೊಂದು 1.2-ಲೀಟರ್ ಟರ್ಬೊಚಾರ್ಜ್ಡ್ ಪೆಟ್ರೋಲ್ ಎಂಜಿನ್ 110 ಪಿಎಸ್ ಗರಿಷ್ಠ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 205 ಎನ್ಎಂ (ನ್ಯೂಟನ್ ಮೀಟರ್) ಟಾರ್ಕ್ ಹೊರಹಾಕುವ ಸಾಮರ್ಥ್ಯ ಹೊಂದಿದೆ. 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 19.3 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ.

ಹೊಸ ಸಿಟ್ರನ್ ಸಿ3 ಹ್ಯಾಚ್‌ಬ್ಯಾಕ್‌ನಲ್ಲಿ 5 ಮಂದಿ ಆರಾಮದಾಯಕವಾಗಿ ಪ್ರಯಾಣಿಸಬಹುದು. 10.2-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 7-ಇಂಚಿನ ಫುಲ್ ಡಿಜಿಟಲ್ ಡ್ರೈವರ್ ಡಿಸ್ಪ್ಲೇ, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಆಟೋ ಎಸಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಯ ದೃಷ್ಟಿಯಿಂದ ಡುಯಲ್ ಫ್ರಂಟ್ ಏರ್‌ಬ್ಯಾಗ್‌ನ್ನು ಹೊಂದಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Friday, September 13, 2024, 16:56 [IST]
English summary
Citroen c3 car august 2024 sales report 102 percent growth details
Read more on citroen india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+