Citroen: ಸಿಟ್ರನ್ ಸಿ3 ಕಾರನ್ನು ಮನೆಗೆ ತರಬೇಕೇ.. ಆನ್ ರೋಡ್ ಬೆಲೆ ಎಷ್ಟು, ಇಎಂಐ ಏನು?
ಫ್ರೆಂಚ್ ಮೂಲದ ಸಿಟ್ರನ್ (Citroen) ಜನಪ್ರಿಯ ಕಾರು ತಯಾರಕ ಸಂಸ್ಥೆಯಾಗಿ ಗುರುತಿಸಿಕೊಂಡಿದೆ. ದೇಶೀಯ ಮಾರುಕಟ್ಟೆಯಲ್ಲಿ ನವೀನ ವಿನ್ಯಾಸ ಹಾಗೂ ಆಕರ್ಷಕ ವೈಶಿಷ್ಟ್ಯವನ್ನು ಹೊಂದಿರುವ ಹ್ಯಾಚ್‌ಬ್ಯಾಕ್ ಹಾಗೂ ಎಸ್‌ಯುವಿಗಳನ್ನು ಮಾರಾಟ ಮಾಡುತ್ತಿದೆ. ಇವುಗಳನ್ನು ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿಸುತ್ತಿದ್ದಾರೆ. ಸದ್ಯ ಸಿಟ್ರನ್ ಸಿ3 (Citroen C3) ಕಾರಿಗೂ ಉತ್ತಮ ಬೇಡಿಕೆಯಿದೆ. ಇಲ್ಲಿ ನೂತನ ಹ್ಯಾಚ್‌ಬ್ಯಾಕ್‌ನ ಆನ್ ರೋಡ್ ಬೆಲೆ (On Road Price) ಹಾಗೂ ಇಎಂಐ (EMI) ಆಯ್ಕೆಯ ಬಗ್ಗೆ ಸಂಪೂರ್ಣವಾಗಿ ವಿವರಿಸಿದ್ದೇವೆ.
ಹೊಸ 'ಸಿಟ್ರನ್ ಸಿ3' ಕಾರು ಪೆಟ್ರೋಲ್ ಎಂಜಿನ್ ಆಯ್ಕೆಯಲ್ಲಿ ಮಾತ್ರ ಖರೀದಿಗೆ ದೊರೆಯುತ್ತದೆ. ಬೆಂಗಳೂರಿನಲ್ಲಿ ಇದರ ಬೇಸ್ ವೇರಿಯೆಂಟ್ (ಆರಂಭಿಕ ರೂಪಾಂತರ) ಆಗಿರುವ 'ಲೈವ್' ರೂ.7.47 ಲಕ್ಷ, 'ಫೀಲ್' ರೂ.8.79 ಲಕ್ಷ, 'ಫೀಲ್ ಡಿಟಿ' ರೂ.8.97 ಲಕ್ಷ, 'ಶೈನ್' ರೂ.9.42 ಲಕ್ಷ ಹಾಗೂ ಟಾಪ್ ಎಂಡ್ ವೇರಿಯೆಂಟ್ (ಗರಿಷ್ಠ ಶ್ರೇಣಿ ಆವೃತ್ತಿ) ಎಂದು ಹೆಸರಿಸಲಾಗಿರುವ 'ಶೈನ್ ಡುಯಲ್ ಟೋನ್ ಟರ್ಬೊ' ರೂ.10.85 ಲಕ್ಷ ಆನ್ ರೋಡ್ ದರವನ್ನು ಹೊಂದಿದೆ.

ನೀವು ಈ ಹ್ಯಾಚ್‌ಬ್ಯಾಕ್‌ನ ಆರಂಭಿಕ ರೂಪಾಂತರವನ್ನು ರೂ.1 ಲಕ್ಷ ಡೌನ್ ಪೇಮೆಂಟ್ (Down Payment) ಪಾವತಿಸಿ, ಕೊಂಡುಕೊಂಡರೆ, ಶೇಕಡ 9.8% ಬಡ್ಡಿ ದರದಲ್ಲಿ ಐದು ವರ್ಷದ ಅವಧಿಗೆ ಮಾಸಿಕ ರೂ.13,686 ಇಎಂಐ ಕಟ್ಟಬೇಕು. ನೂತನ 'ಸಿಟ್ರನ್ ಸಿ3' ಕಾರು ಆಕರ್ಷಕವಾದ ವಿನ್ಯಾಸವನ್ನು ಹೊಂದಿದ್ದು, ಸ್ಟೀಲ್ ಗ್ರೇ, ಝೆಸ್ಟಿ ಆರೆಂಜ್, ಪ್ಲಾಟಿನಂ ಗ್ರೇ, ಪೋಲಾರ್ ವೈಟ್ ಸೇರಿದಂತೆ ವಿವಿಧ ಆಕರ್ಷಕ ಬಣ್ಣಗಳೊಂದಿಗೂ ಸಿಗುತ್ತದೆ.
ನೂತನ ಹ್ಯಾಚ್‌ಬ್ಯಾಕ್ 2 ಪೆಟ್ರೋಲ್ ಪವರ್‌ಟ್ರೇನ್‌ಗಳನ್ನು ಹೊಂದಿದೆ. 1.2-ಲೀಟರ್ ನ್ಯಾಚುರಲ್ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್, 82 ಪಿಎಸ್ ಗರಿಷ್ಠ ಶಕ್ತಿ (ಪವರ್) ಮತ್ತು 115 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತದೆ. ಮತ್ತೊಂದು 1.2-ಲೀಟರ್ ಟರ್ಬೊಚಾರ್ಜ್ಡ್ ಪೆಟ್ರೋಲ್ ಎಂಜಿನ್, 110 ಪಿಎಸ್ ಪವರ್ ಹಾಗೂ 190 ಎನ್ಎಂ ಪೀಕ್ ಟಾರ್ಕ್ ಹೊರಹಾಕುತ್ತದೆ.

ಈ ಕಾರು ರೂಪಾಂತರಗಳಿಗೆ ಅನುಗುಣವಾಗಿ 5-ಸ್ಪೀಡ್ ಮ್ಯಾನುವಲ್ ಹಾಗೂ 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನ್ನು ಪಡೆದಿದ್ದು, 19.3 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಇದರಲ್ಲಿ 5 ಮಂದಿ ಆರಾಮದಾಯಕವಾಗಿ ದೂರದ ಊರುಗಳಿಗೆ ಪ್ರಯಾಣಿಸಬಹುದು. ಪ್ರವಾಸದ ಸಂದರ್ಭದಲ್ಲಿ ಹೆಚ್ಚಿನ ಲಗೇಜ್ ಸಾಗಿಲು ಸಾಧ್ಯವಾಗುವಂತೆ 315 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್ ಅನ್ನು ಹೊಂದಿದೆ.
ಸಿಟ್ರನ್ ಸಿ3 ಹ್ಯಾಚ್‌ಬ್ಯಾಕ್ 10.2-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ, ಸೆಮಿ-ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಗಾಗಿ ಡುಯಲ್ ಫ್ರಂಟ್ ಏರ್‌ಬ್ಯಾಗ್, ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ESP (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ) ಹಾಗೂ TPMS (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಅನ್ನು ಪಡೆದಿದೆ.

ಈ ಕಾರಿಗೆ ಮಾರುತಿ ಸುಜುಕಿ ವ್ಯಾಗನ್ ಆರ್, ಸೆಲೆರಿಯೊ, ಟಾಟಾ ಟಿಯಾಗೊ, ನಿಸ್ಸಾನ್ ಮ್ಯಾಗ್ನೈಟ್, ರೆನಾಲ್ಟ್ ಕಿಗರ್, ಟಾಟಾ ಪಂಚ್ ಹಾಗೂ ಹ್ಯುಂಡೈ ಎಕ್ಸ್‌ಟರ್‌ಗಳು ದೊಡ್ಡ ಎದುರಾಳಿಯಾಗಿವೆ. ನಿಮ್ಮ ಗಮನಕ್ಕೆ.. ಸಿಟ್ರನ್ ಸಿ3 ಹ್ಯಾಚ್‌ಬ್ಯಾಕ್ ಆನ್-ರೋಡ್ ಬೆಲೆ ಹಾಗೂ ಸಾಲದ ಆಯ್ಕೆಗಳು ರಾಜ್ಯದಿಂದ ರಾಜ್ಯಕ್ಕೆ ಡೀಲರ್‌ಶಿಪ್‌ಗಳಿಗೆ ಅನುಗುಣವಾಗಿ ಬೇರೆಯಿರಲಿದ್ದು, ಹೆಚ್ಚಿನ ಮಾಹಿತಿಗೆ ಸಮೀಪದ ಶೋರೂಂಗೆ ಭೇಟಿ ನೀಡಿರಿ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








