Citroen: ಸಿಟ್ರನ್‌ನಿಂದ 1.75 ಲಕ್ಷವರೆಗೆ ರಿಯಾಯಿತಿ ಘೋಷಣೆ.. ಹೊಸ ಕಾರಿನ ಬೆಲೆ 6 ಲಕ್ಷದಿಂದ ಶುರು!

ಫ್ರಾನ್ಸ್ ಮೂಲದ ಸಿಟ್ರನ್‌ (Citroen), ಜನಪ್ರಿಯ ಕಾರು ತಯಾರಕ ಕಂಪನಿಯಾಗಿದೆ. ದೇಶೀಯ ಮಾರುಕಟ್ಟೆಯಲ್ಲಿ ಕಂಪನಿ ಮಾರಾಟಗೊಳಿಸುವ ಕಾರುಗಳು ನಿಧಾನವಾಗಿ ಜನಪ್ರಿಯತೆ ಗಳಿಸಿವೆ. ಸದ್ಯ, ಈ ಡಿಸೆಂಬರ್‌ನಲ್ಲಿ ಮಾರಾಟ ಪ್ರಮಾಣವನ್ನು ಹೆಚ್ಚಿಸಲು ಸಿಟ್ರನ್‌ ಭಾರೀ ರಿಯಾಯಿತಿಯನ್ನು ಘೋಷಣೆ ಮಾಡಿದ್ದು, ಅಧಿಕೃತ ವೆಬ್‌ಸೈಟ್‌ನಲ್ಲಿಯೂ ಮಾಹಿತಿ ಹಂಚಿಕೊಂಡಿದೆ. ಬನ್ನಿ.. ಯಾವ ಕಾರು ಎಷ್ಟು ಹಣಕಾಸಿನ ಪ್ರಯೋಜನ ಹೊಂದಿದೆ ಎಂಬುದನ್ನು ಸಂಕ್ಷಿಪ್ತವಾಗಿ ತಿಳಿಯೋಣ.

ಮೊದಲಿಗೆ ಜನಪ್ರಿಯ ಸಿಟ್ರನ್‌ ಸಿ3 (Citroen C3) ಹ್ಯಾಚ್‌ಬ್ಯಾಕ್ ಹೊಂದಿರುವ ರಿಯಾಯಿತಿ ಬಗ್ಗೆ ಮಾತನಾಡೋಣ. ಈ ಕಾರು, ರೂ.1 ಲಕ್ಷವರೆಗೆ ಹಣಕಾಸಿನ ಪ್ರಯೋಜನವನ್ನು ಹೊಂದಿದೆ. ಕನಿಷ್ಠ ರೂ.6.16 ಲಕ್ಷ ಮತ್ತು ಗರಿಷ್ಠ ರೂ.10.15 ಲಕ್ಷ ಎಕ್ಸ್ ಶೋರೂಂ ದರದಲ್ಲೂ ಖರೀದಿಗೆ ಲಭ್ಯವಿದೆ. 1.2-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಮತ್ತು 1.2-ಲೀಟರ್ ಟರ್ಬೊಚಾರ್ಜ್ಡ್ ಪೆಟ್ರೋಲ್ ಆಯ್ಕೆಯನ್ನು ಒಳಗೊಂಡಿದೆ.

Citroen Cars Have Upto Rs 1 75 Lakh Discount In December 2024 C3 eC3 Basalt Aircross

ಈ ಸಿಟ್ರನ್‌ ಸಿ3 ಕಾರು, 19.3 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಇದರಲ್ಲಿ 5 ಜನರು ಓಡಾಟ ನಡೆಸಬಹುದು. ಸ್ಟೀಲ್ ಗ್ರೇ, ಝೆಸ್ಟಿ ಆರೆಂಜ್, ಪ್ಲಾಟಿನಂ ಗ್ರೇ, ಪೋಲಾರ್ ವೈಟ್ ಒಳಗೊಂಡಂತೆ ಹಲವು ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ. 10.2-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ ಮತ್ತು ಆಟೋ ಎಸಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಪ್ರಯಾಣಿಕರ ರಕ್ಷಣೆಗಾಗಿ ಡುಯಲ್ ಫ್ರಂಟ್ ಏರ್‌ಬ್ಯಾಗ್‌ಗಳನ್ನು ಪಡೆದಿದೆ.

ಹೊಸ ಸಿಟ್ರನ್‌ ಇಸಿ3 (Citroen eC3) ಎಲೆಕ್ಟ್ರಿಕ್ ಹ್ಯಾಚ್‌ಬ್ಯಾಕ್ ಕೂಡ ಉತ್ತಮ ರಿಯಾಯಿತಿ ಹೊಂದಿದೆ. ಈ ಕಾರಿಗೆ ರೂ.80,000 ವರೆಗೆ ಹಣಕಾಸಿನ ಪ್ರಯೋಜನಗಳು ಲಭ್ಯವಿದೆ. ಇದು ಕೈಗೆಟುಕುವ ಬೆಲೆಯಲ್ಲಿ ಸಿಗಲಿದ್ದು, ರೂ.12.76 ಲಕ್ಷದಿಂದ ರೂ.13.41 ಲಕ್ಷ ಎಕ್ಸ್ ಶೋರೂಂ ದರವನ್ನು ಹೊಂದಿದೆ.

Citroen Cars Have Upto Rs 1 75 Lakh Discount In December 2024 C3 eC3 Basalt Aircross

ನೂತನ ಸಿಟ್ರನ್‌ ಇಸಿ3 ಎಲೆಕ್ಟ್ರಿಕ್ ಕಾರು 29.2 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್ ಪಡೆದಿದೆ. ಸಂಪೂರ್ಣ ಚಾರ್ಜ್‌ನಲ್ಲಿ 320 ಕಿಲೋಮೀಟರ್ ಓಡುತ್ತದೆ. 10.2-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಸೆಮಿ-ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಮ್ಯಾನುವಲ್ ಎಸಿ ಹಾಗೂ ಕೀಲೆಸ್ ಎಂಟ್ರಿ ಒಳಗೊಂಡಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ. ಈ ಕಾರಿನಲ್ಲಿಯೂ 5 ಮಂದಿ ಪ್ರಯಾಣಿಸಬಹುದು.

ಸಿಟ್ರನ್ ಬಸಾಲ್ಟ್ (Citroen Basalt) ಪ್ರಮುಖ ಕೂಪೆ ಎಸ್‌ಯುವಿಯಾಗಿದೆ. ಈ ಡಿಸೆಂಬರ್‌ನಲ್ಲಿ ಭಾರೀ ರಿಯಾಯಿತಿಯನ್ನು ಹೊಂದಿದೆ. ರೂ.80,000 ವರೆಗೆ ಹಣಕಾಸಿನ ಪ್ರಯೋಜನಗಳನ್ನು ಒಳಗೊಂಡಿದೆ. ರೂ.7.99 ಲಕ್ಷದಿಂದ ರೂ.13.95 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿಯೂ ಗ್ರಾಹಕರಿಗೆ ಲಭ್ಯವಾಗಲಿದೆ. 1.2-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಮತ್ತು 1.2-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಪಡೆದಿದೆ.

Citroen Cars Have Upto Rs 1 75 Lakh Discount In December 2024 C3 eC3 Basalt Aircross

ಹೊಸ ಬಸಾಲ್ಟ್ ಎಸ್‌ಯುವಿ 18 ರಿಂದ 19.5 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಈ ಕಾರಿನಲ್ಲಿ 5 ಮಂದಿ ಓಡಾಟ ನಡೆಸಬಹುದು. 10.2-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 7-ಇಂಚಿನ ಡಿಜಿಟಲ್ ಡ್ರೈವರ್ಸ್ ಡಿಸ್‌ಪ್ಲೇ ಮತ್ತು ವೈರ್‌ಲೆಸ್ ಫೋನ್ ಚಾರ್ಜರ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಗಾಗಿ 6 ಏರ್‌ಬ್ಯಾಗ್‌ಗಳನ್ನು ಹೊಂದಿದೆ.

ಸಿಟ್ರನ್ ಏರ್‌ಕ್ರಾಸ್ (Citroen Aircross) ಎಸ್‌ಯುವಿ ಬೃಹತ್ ರಿಯಾಯಿತಿ ಪಡೆದಿದೆ. ಬರೋಬ್ಬರಿ ರೂ.1.75 ಲಕ್ಷ ಹಣಕಾಸಿನ ಪ್ರಯೋಜನವನ್ನು ಹೊಂದಿದೆ. ಈ ಕಾರು, ರೂ.8.49 ಲಕ್ಷದಿಂದ ರೂ.14.55 ಲಕ್ಷ ಎಕ್ಸ್ ಶೋರೂಂ ದರವನ್ನು ಒಳಗೊಂಡಿದೆ. ಇದು 1.2-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಹಾಗೂ 1.2-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್‌ನ್ನು ಪಡೆದಿದೆ.

ಈ ಏರ್‌ಕ್ರಾಸ್ ಎಸ್‌ಯುವಿ 18 ರಿಂದ 19 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. 5/ 7 ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದಿದೆ. 10.2-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, 7-ಇಂಚಿನ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ ಮತ್ತು ಸ್ಟೀರಿಂಗ್-ಮೌಂಟೆಡ್ ಆಡಿಯೋ ಕಂಟ್ರೋಲ್‌ಗಳನ್ನು ಒಳಗೊಂಡಿದೆ. 6 ಏರ್‌ಬ್ಯಾಗ್‌ಗಳನ್ನು ಒಳಗೊಂಡಿದೆ.

More from DriveSpark

Article Published On: Thursday, December 19, 2024, 22:36 [IST]
English summary
Citroen cars have upto rs 1 75 lakh discount in december 2024 c3 ec3 basalt aircross
Read more on citroen india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+