ಜಗ್ಗಪ್ಪ-ಸುಷ್ಮಿತಾ ಜೋಡಿ ಮನೆಗೆ ತಂದಿರುವ ಹ್ಯುಂಡೈ ಕ್ರೆಟಾ ಕಾರಿನ ವಿಶೇಷತೆಗಳೇನು ಗೊತ್ತಾ?

ಮಜಾಭಾರತ ಮತ್ತು ಗಿಚ್ಚಿ ಗಿಲಿಗಿಲಿ ಕಾಮಿಡಿ ಶೋ ಮೂಲಕ ಜಗಪ್ಪ ಹಾಗೂ ಸುಶ್ಮಿತಾ ಜೋಡಿ ಖ್ಯಾತಿ ಗಳಿಸಿದೆ. ಜೀ ಕನ್ನಡದಲ್ಲಿ ಪ್ರಸಾರವಾಗಿದ್ದ ಭರ್ಜರಿ ಬ್ಯಾಚುಲರ್ಸ್‌ ಕಾರ್ಯಕ್ರಮದಲ್ಲಿ ಇವರಿಬ್ಬರೂ ತಮ್ಮ ಪ್ರೀತಿಯನ್ನು ರಿವೀಲ್ ಮಾಡಿದ್ದರು. ಕಳೆದ ನವೆಂಬರ್‌ನಲ್ಲಿ ದಾಂಪತ್ಯ ಜೀವನಕ್ಕೂ ಕಾಲಿಟ್ಟಿದ್ದರು. ಇತ್ತೀಚೆಗೆ ಜಗಪ್ಪ - ಸುಶ್ಮಿತಾ ದಂಪತಿ ದುಬಾರಿ ಬೆಲೆಯ ನೂತನ ಹ್ಯುಂಡೈ ಕ್ರೆಟಾ ಎಸ್‌ಯುವಿಯನ್ನು ಖರೀದಿಸಿದ್ದಾರೆ. ಬನ್ನಿ.. ಈ ಕಾರಿನ ಬೆಲೆ, ಕಾರ್ಯಕ್ಷಮತೆ ಹಾಗೂ ವೈಶಿಷ್ಟ್ಯಗಳ ಕುರಿತಂತೆ ಸಂಪೂರ್ಣವಾದ ವಿವರವನ್ನು ತಿಳಿಯೋಣ.

ಬೆಲೆ ಹಾಗೂ ರೂಪಾಂತರಗಳು: ದೇಶೀಯ ಮಾರುಕಟ್ಟೆಯಲ್ಲಿ ಹೊಚ್ಚ ಹೊಸ ಹ್ಯುಂಡೈ ಕ್ರೆಟಾ (Hyundai Creta) ಕಾರು ಅತ್ಯಂತ ಕೈಗೆಟುಕುವ ಬೆಲೆಯಲ್ಲಿ ಖರೀದಿಗೆ ಸಿಗುತ್ತದೆ. ರೂ.11 ಲಕ್ಷದಿಂದ ರೂ. 20.15 ಲಕ್ಷ (ಎಕ್ಸ್ ಶೋರೂಂ) ದರವನ್ನು ಪಡೆದಿದೆ. ಇ, ಇಎಕ್ಸ್, ಎಸ್, ಎಸ್(ಒ), ಎಸ್ಎಕ್ಸ್ ಟೆಕ್ ಒಳಗೊಂಡಂತೆ 7 ರೂಪಾಂತರ (ವೇರಿಯೆಂಟ್)ಗಳೊಂದಿಗೂ ದೊರೆಯುತ್ತದೆ.

Comedy Actor Jagappa Sushmitha Couple Recently Buy Hyundai Creta SUV Top Things About This Car

ಆಸನ & ಬಣ್ಣಗಳು: ಈ ಕಾರು ಹೊರಭಾಗದಲ್ಲಿ ಆಕರ್ಷಕವಾದ ವಿನ್ಯಾಸ (ಡಿಸೈನ್)ವನ್ನು ಪಡೆದಿದೆ. ಅಟ್ಲಾಸ್ ವೈಟ್, ಅಬಿಸ್ ಬ್ಲಾಕ್, ಟೈಟಾನ್ ಗ್ರೇ, ರೇಂಜರ್ ಖಾಕಿ ಒಳಗೊಂಡಂತೆ ಹಲವು ಆಕರ್ಷಕ ಬಣ್ಣಗಳೊಂದಿಗೂ ಲಭ್ಯವಿದೆ. ಈ ಕಾರಿನಲ್ಲಿ 5 ಮಂದಿ ಆರಾಮದಾಯಕವಾಗಿ ದೂರದ ಊರುಗಳಿಗೆ ಪ್ರಯಾಣಿಸಬಹುದು. ಪ್ರವಾಸ ವೇಳೆಯಲ್ಲಿ ಹೆಚ್ಚಿನ ಲಗೇಜ್ ಸಾಗಿಸಲು 433 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್ ಅನ್ನು ಹೊಂದಿದೆ.

ಕಾರ್ಯಕ್ಷಮತೆ: ಹ್ಯುಂಡೈ ಕ್ರೆಟಾ ಎಸ್‌ಯುವಿ 1.5-ಲೀಟರ್ ನ್ಯಾಚುರಲ್ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್ 115 ಪಿಎಸ್ ಗರಿಷ್ಠ ಶಕ್ತಿ (ಪವರ್) ಮತ್ತು 144 ಎನ್ಎಂ ಪೀಕ್ ಟಾರ್ಕ್ ಹೊರಹಾಕುವ ಸಾಮರ್ಥ್ಯವನ್ನು ಹೊಂದಿದೆ. 1.5-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ 160 ಪಿಎಸ್ ಪವರ್ ಹಾಗೂ 253 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತದೆ.

Comedy Actor Jagappa Sushmitha Couple Recently Buy Hyundai Creta SUV Top Things About This Car

ಮತ್ತೊಂದು 1.5-ಲೀಟರ್ ಡೀಸೆಲ್ ಎಂಜಿನ್ 116 ಪಿಎಸ್ ಗರಿಷ್ಠ ಶಕ್ತಿ ಮತ್ತು 250 ಎನ್ಎಂ ಪೀಕ್ ಟಾರ್ಕ್ ಹೊರಹಾಕುತ್ತದೆ. ರೂಪಾಂತರಗಳಿಗೆ ಅನುಗುಣವಾಗಿ 6-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಆಟೋಮೆಟಿಕ್, ಸಿವಿಟಿ ಹಾಗೂ 7-ಸ್ಪೀಡ್ ಡಿಸಿಟಿ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 17.4 ಕೆಎಂಪಿಎಲ್‌ ರಿಂದ 21.8 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ.

ವೈಶಿಷ್ಟ್ಯಗಳು: ಈ ಕಾರು ಯುವ ಗ್ರಾಹಕರನ್ನು ಸೆಳೆಯುವ ಹತ್ತಾರು ಅತ್ಯಾಧುನಿಕ ವೈಶಿಷ್ಟ್ಯಗಳನ್ನು ಒಳಗೊಂಡಿದೆ. 10.25-ಇಂಚಿನ ಡುಯಲ್ ಡಿಸ್ಪ್ಲೇ (ಇನ್ಫೋಟೈನ್‌ಮೆಂಟ್ ಸಿಸ್ಟಮ್‌ & ಇನ್ಸ್ಟ್ರುಮೆಂಟ್ ಕ್ಲಸ್ಟರ್) ಡುಯಲ್ ಝೋನ್ ಎಸಿ, 8-ಸ್ಪೀಕರ್ ಬೋಸ್ ಸೌಂಡ್ ಸಿಸ್ಟಮ್, ಸನ್‌ರೂಫ್, ವೈರ್‌ಲೆಸ್ ಫೋನ್ ಚಾರ್ಜಿಂಗ್, ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳನ್ನು ಹೊಂದಿದೆ.

Comedy Actor Jagappa Sushmitha Couple Recently Buy Hyundai Creta SUV Top Things About This Car

ಸುರಕ್ಷತಾ ವೈಶಿಷ್ಟ್ಯಗಳು: ಹ್ಯುಂಡೈ ಕ್ರೆಟಾ ಎಸ್‌ಯುವಿಯು ಗರಿಷ್ಠ ರಕ್ಷಣಾತ್ಮಕ ವೈಶಿಷ್ಟ್ಯಗಳನ್ನು ಒಳಗೊಂಡಿದೆ. 6 ಏರ್‌ಬ್ಯಾಗ್‌, ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), EBD (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ADAS (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), VSC (ವೆಹಿಕಲ್ ಸ್ಟೆಬಿಲಿಟಿ ಕಂಟ್ರೋಲ್), TPMS (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಹಾಗೂ ಹಿಲ್ ಸ್ಟಾರ್ಟ್ ಅಸಿಸ್ಟ್‌ಗಳನ್ನು ಪಡೆದಿದೆ

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Sunday, July 7, 2024, 14:00 [IST]
English summary
Comedy actor jagappa sushmitha couple recently buy hyundai creta suv top things about this car
Read more on offbeat india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+