Renault: ಸಾಮಾನ್ಯ ಜನರು ಈ ರೆನಾಲ್ಟ್ ಕಾರನ್ನು ಖರೀದಿಸಬಹುದು.. 4 ಲಕ್ಷ ಬೆಲೆ, 22 ಕಿ.ಮೀ ಮೈಲೇಜ್
ಭಾರತದಲ್ಲಿ ಮಧ್ಯಮ ವರ್ಗದ ಜನರೇ ಹೆಚ್ಚಿನ ಸಂಖ್ಯೆಯಲ್ಲಿ ಇದ್ದು, ಅವರಿಗೆ ಜೀವನದಲ್ಲಿ ಹೊಸ ಕಾರು ಖರೀದಿಸಬೇಕೆಂಬುದು ಬಹುದೊಡ್ಡ ಆಸೆಯಾಗಿರುತ್ತದೆ. ಆದರೆ, ಹಣ ಹೊಂದಿಸಲು ಸಾಧ್ಯವಾಗದೇ ಎಷ್ಟೋ ಜನರ ಕನಸು ಈಡೇರುವುದಿಲ್ಲ. ಭರ್ಜರಿ ವೈಶಿಷ್ಟ್ಯಗಳನ್ನು ಪಡೆದಿರುವ ರೆನಾಲ್ಟ್ (Renault) ಕಂಪನಿಯ ಕ್ವಿಡ್ (Kwid) ಅತ್ಯಂತ ಕೈಗೆಟುಕುವ ಬೆಲೆಯಲ್ಲಿ ಸಿಗುತ್ತದೆ.
ಸದ್ಯ ದೇಶೀಯ ಮಾರುಕಟ್ಟೆಯಲ್ಲಿ ಖರೀದಿಗೆ ದೊರೆಯುವ ರೆನಾಲ್ಟ್ ಕ್ವಿಡ್ (Renault Kwid) ಕಾರು, ರೂ.4.70 ಲಕ್ಷದಿಂದ ರೂ.6.33 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. ಆರ್‌ಎಕ್ಸ್‌ಇ, ಆರ್‌ಎಕ್ಸ್‌ಎಲ್ (ಒ), ಆರ್‌ಎಕ್ಸ್‌ಟಿ ಸೇರಿದಂತೆ 4 ರೂಪಾಂತರ, ಐಸ್ ಕೂಲ್ ವೈಟ್, ಮೂನ್ ಲೈಟ್ ಸಿಲ್ವರ್ ಒಳಗೊಂಡಂತೆ 5 - ಮೊನೊಟೋನ್, 5 - ಡುಯಲ್ ಟೋನ್ ಬಣ್ಣಗಳ ಆಯ್ಕೆಯಲ್ಲಿ ದೊರೆಯುತ್ತದೆ.

ರೆನಾಲ್ಟ್ ಕ್ವಿಡ್ ಕಾರಿನ ಪವರ್ ಟ್ರೈನ್ ಬಗ್ಗೆ ಹೇಳುವುದಾದರೆ, ಇದು 1 - ಲೀಟರ್ ಪೆಟ್ರೋಲ್ ಎಂಜಿನ್ ಹೊಂದಿದ್ದು, 68 PS ಗರಿಷ್ಠ ಪವರ್, 91 Nm ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಪಡೆದಿದೆ. 5 - ಸ್ವೀಡ್ ಮ್ಯಾನುವಲ್/ 5 - ಸ್ವೀಡ್ ಆಟೋಮೆಟಿಕ್ ಗೇರ್ ಬಾಕ್ಸ್ ಆಯ್ಕೆಯಲ್ಲಿ ಲಭ್ಯವಿದೆ.
ಮೈಲೇಜ್ ವಿಚಾರವಾಗಿ ಹೇಳುವುದಾದರೆ, ಈ ಕಾರು 21.46 - 22.3 kmpl ಇಂಧನ ದಕ್ಷತೆಯನ್ನು ಒಳಗೊಂಡಿದೆ. ವಿನ್ಯಾಸದ ದೃಷ್ಟಿಯಿಂದಲೂ ಅತ್ಯುತ್ತಮವಾಗಿದ್ದು, 4 ಮಂದಿ ಈ ಕಾರಿನಲ್ಲಿ ಆರಾಮದಾಯವಾಗಿ ಪ್ರಯಾಣಿಸಬಹುದು. ರೆನಾಲ್ಟ್ ಕ್ವಿಡ್, 8 - ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ, ಕೀಲೆಸ್ ಎಂಟ್ರಿ, ಮ್ಯಾನುವಲ್ ಎಸಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ.
ಸುರಕ್ಷತೆಯ ವಿಚಾರದಲ್ಲೂ ಈ ಕಾರು ಅತ್ಯಾಧುನಿಕವಾಗಿದ್ದು, ಡುಯಲ್ ಫ್ರಂಟ್ ಏರ್‌ಬ್ಯಾಗ್, EBD (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ರೇರ್ ಪಾರ್ಕಿಂಗ್ ಸೇನಾರ್ಸ್, ESP (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), HSA (ಹಿಲ್ ಸ್ಟಾರ್ಟ್ ಅಸಿಸ್ಟ್), TCS (ಟ್ರಾಕ್ಷನ್ ಕಂಟ್ರೋಲ್ ಸಿಸ್ಟಮ್), TPMS (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಸೇರಿದಂತೆ ವಿವಿಧ ಸೇಫ್ಟಿ ಫೀಚರ್ಸ್ ಒಳಗೊಂಡಿದೆ.
ರೆನಾಲ್ಟ್ ಟ್ರೈಬರ್ (Renault Triber) ಕಾರಿನ ಬಗ್ಗೆ ಹೇಳುವುದಾದರೆ, ಇದು ರೂ.6 - ರೂ.8.97 ಲಕ್ಷ ಎಕ್ಸ್ ಶೋರೂಂ ದರದಲ್ಲಿ ದೊರೆಯುತ್ತದೆ. ಈ ಕಾರು, 1 - ಲೀಟರ್ ನ್ಯಾಚುರಲ್ ಆಸ್ಪಿರೇಟೆಡ್ 3 - ಸಿಲಿಂಡರ್ ಪೆಟ್ರೋಲ್ ಎಂಜಿನ್ ಹೊಂದಿದ್ದು, 72 PS ಪವರ್, 96 Nm ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 5 - ಸ್ವೀಡ್ ಮ್ಯಾನುವಲ್/ ಆಟೋಮೆಟಿಕ್ ಗೇರ್ ಬಾಕ್ಸ್ ಆಯ್ಕೆಯಲ್ಲಿ ಸಿಗುತ್ತದೆ.
ಈ ಕಾರಿನಲ್ಲಿ 7 ಜನ ಪ್ರಯಾಣಿಸಬಹುದಾಗಿದ್ದು, 18.2 - 20 kmpl ಮೈಲೇಜ್ ಕೊಡುತ್ತದೆ. 8 - ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ, 7 - ಇಂಚಿನ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಯ ಸಲುವಾಗಿ 4 ಏರ್‌ಬ್ಯಾಗ್, ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ESP (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ)ಯನ್ನು ಹೊಂದಿದೆ.
ರೆನಾಲ್ಟ್ ಕಿಗರ್ (Renault Kiger) ಬಗ್ಗೆ ಮಾತನಾಡುವುದಾದರೆ, ಈ ಕಾರು ರೂ.6 ಲಕ್ಷದಿಂದ ರೂ.11.23 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಲಭ್ಯವಿದೆ. 1 - ಲೀಟರ್ ನ್ಯಾಚುರಲ್ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್, 1 - ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ ಹೊಂದಿದ್ದು, 18.24 - 20.5 kmpl ಮೈಲೇಜ್ ಕೊಡುತ್ತದೆ. 8 - ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಒಳಗೊಂಡಂತೆ ವಿವಿಧ ಫೀಚರ್ಸ್ ಪಡೆದಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








