ಎಲೆಕ್ಟ್ರಿಕ್ ವಾಹನಗಳ ಅಬ್ಬರ: ಮಹೀಂದ್ರಾದ ಈ ಡೀಸೆಲ್ ಕಾರುಗಳಿಗೆ ಭಾರೀ ಬೇಡಿಕೆ, ಯಾವುವು ಗೊತ್ತಾ?

ದೇಶದ ಪ್ರಮುಖ ವಾಹನ ತಯಾರಕ ಸಂಸ್ಥೆಯಾಗಿ ಮಹೀಂದ್ರಾ (Mahindra) ಗುರುತಿಸಿಕೊಂಡಿದೆ. ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯವನ್ನು ಹೊಂದಿರುವ ಹಲವು ಎಸ್‌ಯುವಿಗಳನ್ನು ಮಾರುತ್ತಿದೆ. ಇತ್ತೀಚೆಗೆ ಜೂನ್ ತಿಂಗಳ (2024) ಮಾರಾಟ ಹಾಗೂ ರಫ್ತು ಅಂಕಿಅಂಶಗಳನ್ನು ಪ್ರಕಟಿಸಿದ್ದು, ಒಟ್ಟು 40,010 ಯುನಿಟ್ ಕಾರುಗಳನ್ನು ಮಾರಾಟ ಮಾಡಿದೆ. ವಿಶೇಷವಾಗಿ ಸ್ಕಾರ್ಪಿಯೋ, ಎಕ್ಸ್‌ಯುವಿ700 ಹಾಗೂ ಥಾರ್‌ನ ಡೀಸೆಲ್ ರೂಪಾಂತರ (ವೇರಿಯೆಂಟ್)ಗಳು ದೊಡ್ಡ ಸಂಖ್ಯೆಯಲ್ಲಿ ಮಾರಾಟವಾಗಿವೆ. ಆ ಬಗ್ಗೆ ಸಂಪೂರ್ಣವಾದ ಮಾಹಿತಿ ಇಲ್ಲಿದೆ.

ಮೊದಲಿಗೆ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಇಷ್ಟಪಟ್ಟು ಖರೀದಿಸುವ ಮಹೀಂದ್ರಾ ಸ್ಕಾರ್ಪಿಯೋ (Mahindra Scorpio) ಎಸ್‌ಯುವಿ ಕುರಿತಂತೆ ಮಾತನಾಡೋಣ. ಈ ಕಾರು 'ಎನ್' ಹಾಗೂ 'ಕ್ಲಾಸಿಕ್' ಎಂಬ ರೂಪಾಂತರಗಳ ಆಯ್ಕೆಯಲ್ಲಿ ಸಿಗುತ್ತದೆ. ಜೂನ್‌ನಲ್ಲಿ ಬರೋಬ್ಬರಿ 12,307 ಯುನಿಟ್ ಸ್ಕಾರ್ಪಿಯೋ ಎಸ್‌ಯುವಿಗಳು ಮಾರಾಟವಾಗಿವೆ. ಅದರಲ್ಲಿ ಡೀಸೆಲ್‌ನ 11,255 ಹಾಗೂ ಪೆಟ್ರೋಲ್‌ನ 1,052 ಯುನಿಟ್ ಮಾದರಿಗಳನ್ನು ಕಂಪನಿಯು ಮಾರಿದೆ.

Diesel Variant Is The Best Choice For Buyers Mahindra Scorpio XUV700 Thar Huge Sales

ಮಹೀಂದ್ರಾ ಸ್ಕಾರ್ಪಿಯೋ ಎನ್ ಕಾರು ರೂ.13.85 ಲಕ್ಷದಿಂದ ರೂ.24.54 ಲಕ್ಷ (ಎಕ್ಸ್ ಶೋರೂಂ) ದರವನ್ನು ಪಡೆದಿದೆ. 2.0-ಲೀಟರ್ ಟರ್ಬೋ ಪೆಟ್ರೋಲ್ ಹಾಗೂ 2.2-ಲೀಟರ್ ಡೀಸೆಲ್ ಎಂಜಿನ್ ಹೊಂದಿದ್ದು, 6-ಸ್ಪೀಡ್ ಮ್ಯಾನುವಲ್/ 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 8-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳಿವೆ.

ಮಹೀಂದ್ರಾ ಸ್ಕಾರ್ಪಿಯೋ ಕ್ಲಾಸಿಕ್ ಎಸ್‌ಯುವಿ ರೂ.13.62 ಲಕ್ಷದಿಂದ ರೂ.17.42 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಪಡೆದಿದೆ. 2.2-ಲೀಟರ್ ಡೀಸೆಲ್ ಎಂಜಿನ್ ಪಡೆದಿದ್ದು, 132 ಪಿಎಸ್ ಗರಿಷ್ಠ ಶಕ್ತಿ (ಪವರ್) ಹಾಗೂ 300 ಎನ್ಎಂ ಪೀಕ್ ಟಾರ್ಕ್ ಹೊರಹಾಕುತ್ತದೆ. 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 16 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ.

Diesel Variant Is The Best Choice For Buyers Mahindra Scorpio XUV700 Thar Huge Sales

ಕುಟುಂಬದ ಕಾರೆಂದು ಮಹೀಂದ್ರಾ ಎಕ್ಸ್‌ಯುವಿ700 (Mahindra XUV700) ಹೆಸರುವಾಸಿಯಾಗಿದೆ. ಒಟ್ಟು 5,928 ಯುನಿಟ್ ಮಾರಾಟ ಮಾಡಲಾಗಿದ್ದು, ಈ ಅಂಕಿಸಂಖ್ಯೆಯಲ್ಲಿ ಡೀಸೆಲ್‌ ಚಾಲಿತ 4,537 ಮತ್ತು ಪೆಟ್ರೋಲ್‌ನ 1,391 ಯುನಿಟ್‌ಗಳು ಸೇರಿವೆ. ನೂತನ ಎಕ್ಸ್‌ಯುವಿ700 ರೂ.13.99 ಲಕ್ಷದಿಂದ ರೂ.26.99 ಲಕ್ಷ ಎಕ್ಸ್ ಶೋರೂಂ ದರದಲ್ಲಿ ಖರೀದಿಗೆ ಸಿಗುತ್ತದೆ.

ಈ ಮಹೀಂದ್ರಾ ಎಕ್ಸ್‌ಯುವಿ700 ಎಸ್‌ಯುವಿ, 2-ಲೀಟರ್ ಟರ್ಬೊ ಪೆಟ್ರೋಲ್ ಹಾಗೂ 2.2-ಲೀಟರ್ ಡೀಸೆಲ್ ಎಂಜಿನ್ ಹೊಂದಿದ್ದು, ರೂಪಾಂತರಗಳಿಗೆ ಅನುಗುಣವಾಗಿ 6-ಸ್ಪೀಡ್ ಮ್ಯಾನುವಲ್/ 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನೊಂದಿಗೆ ಸಿಗುತ್ತದೆ. 17 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಒಳಗೊಂಡಂತೆ ಹತ್ತಾರು ವೈಶಿಷ್ಟ್ಯಗಳನ್ನು ಪಡೆದಿದೆ.

Diesel Variant Is The Best Choice For Buyers Mahindra Scorpio XUV700 Thar Huge Sales

ಮಹೀಂದ್ರಾ ಥಾರ್ (Mahindra Thar) ಜನಪ್ರಿಯ ಆಫ್-ರೋಡ್ ಎಸ್‌ಯುವಿಯಾಗಿದ್ದು, ಬರೋಬ್ಬರಿ 5,376 ಯುನಿಟ್ ಮಾರಾಟ ಮಾಡಲಾಗಿದೆ. ಡೀಸೆಲ್‌ನ 4,957 ಹಾಗೂ ಪೆಟ್ರೋಲ್‌ನ 419 ಯುನಿಟ್‌ಗಳು ಸೇರ್ಪಡೆಯಾಗಿವೆ. ಹೊಸ ಥಾರ್ ರೂ.11.35 ಲಕ್ಷದಿಂದ ರೂ.17.60 ಲಕ್ಷ (ಎಕ್ಸ್ ಶೋರೂಂ) ಬೆಲೆಯನ್ನು ಹೊಂದಿದೆ. 2-ಲೀಟರ್ ಟರ್ಬೊ ಪೆಟ್ರೋಲ್, 2.2-ಲೀಟರ್ ಡೀಸೆಲ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್‌ನ್ನು ಪಡೆದಿದೆ.

ಈ ಥಾರ್ 13 ರಿಂದ 15.2 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಇದರಲ್ಲಿ 4 ಜನರು ಪ್ರಯಾಣಿಸಬಹುದಾಗಿದ್ದು, ಎವರೆಸ್ಟ್ ವೈಟ್, ಡೆಸರ್ಟ್ ಫ್ಯೂರಿ, ರೆಡ್ ರೇಜ್ ಒಳಗೊಂಡಂತೆ ವಿವಿಧ ಬಣ್ಣಗಳ ಆಯ್ಕೆಯಲ್ಲಿ ಕೂಡ ಸಿಗುತ್ತದೆ. 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಕ್ರೂಸ್ ಕಂಟ್ರೋಲ್, ಮ್ಯಾನುವಲ್ ಎಸಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಗಾಗಿ ಡುಯಲ್ ಫ್ರಂಟ್ ಏರ್‌ಬ್ಯಾಗ್‌ನ್ನು ಒಳಗೊಂಡಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Friday, July 12, 2024, 13:43 [IST]
English summary
Diesel variant is the best choice for buyers mahindra scorpio xuv700 thar huge sales
Read more on mahindra india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+