Toyota: ಹೊಸ ವರ್ಷದ ಆರಂಭದಲ್ಲೇ ಶಾಕ್.. ಫ್ಯಾಮಿಲಿ ಕಾರು ಟೊಯೊಟಾ ಇನ್ನೋವಾ ಹೈಕ್ರಾಸ್ ಬೆಲೆ ಏರಿಕೆ?

ಜನಪ್ರಿಯ ಕಾರು ತಯಾರಕ ಕಂಪನಿ ಟೊಯೊಟಾ ಕಿರ್ಲೋಸ್ಕರ್ (Toyota Kirloskar) ವರ್ಷಾರಂಭದಲ್ಲೇ ಆಘಾತ ನೀಡಿದ್ದು, ಆಯ್ದ ಕಾರುಗಳ ಬೆಲೆ ಹೆಚ್ಚಿಸಿದೆ ಎಂದು ವಿವಿಧ ಮಾಧ್ಯಮಗಳು ವರದಿ ಮಾಡಿವೆ. ಅರ್ಬನ್ ಕ್ರೂಸರ್ ಹೈರೈಡರ್, ಇನ್ನೋವಾ ಕ್ರಿಸ್ಟಾ ಮತ್ತು ಇನ್ನೋವಾ ಹೈಕ್ರಾಸ್ ಸೇರಿದಂತೆ ಹಲವು ಮಾದರಿಗಳ ದರ ಅಧಿಗೊಂಡಿದೆ ಎಂದು ತಿಳಿದುಬಂದಿದೆ.

ಟೊಯೊಟಾ ಇನ್ನೋವಾ ಹೈಕ್ರಾಸ್ (Toyota Innova Hycross) ಎಂಪಿವಿಯ ಆರಂಭಿಕ ಆವೃತ್ತಿ ಜಿಎಕ್ಸ್ (GX) ಬೆಲೆ ರೂ.10,000 ಏರಿಕೆಯಾಗಿದ್ದು, ಉಳಿದಂತೆ ಎಲ್ಲ ರೂಪಾಂತರಗಳ ದರ ರೂ.42,000 ವರೆಗೆ ಹೆಚ್ಚಳವಾಗಿದೆ ಎನ್ನಲಾಗಿದೆ. ಅದೇ ರೀತಿಯಲ್ಲಿ ಜಿಎಕ್ಸ್ (GX) ಲಿಮಿಟೆಡ್ ಎಡಿಷನ್ (Limited Edition) ಅನ್ನುಮಾರಾಟದಿಂದ ಸ್ಥಗಿತಗೊಳಿಸಿದೆ ಎಂಬ ವಿವರಗಳು ಲಭ್ಯವಾಗಿದೆ. ಆದರೆ ಖಚಿತತೆ ಇಲ್ಲ.

Toyota: ಹೊಸ ವರ್ಷದ ಆರಂಭದಲ್ಲೇ ಶಾಕ್.. ಫ್ಯಾಮಿಲಿ ಕಾರು ಟೊಯೊಟಾ ಇನ್ನೋವಾ ಹೈಕ್ರಾಸ್ ಬೆಲೆ ಏರಿಕೆ?

ಟೊಯೊಟಾ ಇನ್ನೋವಾ ಹೈಕ್ರಾಸ್ ಬೆಲೆ ಹೆಚ್ಚಳವಾಗಿದೆ ಎಂದು ವರದಿಯಾಗಿರುವುದರಿಂದ ರೂಪಾಂತರಗಳಿಗೆ ಅನುಗುಣವಾಗಿ ರೂ.19.77 ದಿಂದ ರೂ.30.68 ಲಕ್ಷ ಎಕ್ಸ್ ಶೋರೂಂ ದರವಾಗಲಿದೆ ಎಂದು ಹೇಳಲಾಗಿದೆ. ಟೊಯೊಟಾ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ 1 ಡಿಸೆಂಬರ್ 2023ಕ್ಕೆ ಅನ್ವಯವಾಗುವಂತೆ ಇನ್ನೋವಾ ಹೈಕ್ರಾಸ್ ಕಾಯುವಿಕೆ ಅವಧಿ ಬಗ್ಗೆ ವಿವರವನ್ನು ಪ್ರಕಟಿಸಿತ್ತು. ಪೆಟ್ರೋಲ್ ರೂಪಾಂತರಗಳು 5 - 6 ತಿಂಗಳು, ಹೈಬ್ರಿಡ್ ರೂಪಾಂತರಗಳು 14 - 15 ತಿಂಗಳೊಳಗೆ ವಿತರಣೆಯಾಗಲಿವೆ.

ಈ ಟೊಯೊಟಾ ಇನ್ನೋವಾ ಹೈಕ್ರಾಸ್ ಎಂಪಿವಿ, 7, 8 ಆಸನ ಆಯ್ಕೆಯೊಂದಿಗೆ ಜಿ, ಜಿಎಕ್ಸ್, ವಿಕ್ಸ್ ಸೇರಿದಂತೆ 5 ರೂಪಾಂತರ ಹಾಗೂ ಗ್ಲಾಸ್ ಫ್ಲೇಕ್, ಸೂಪರ್ ವೈಟ್, ಪ್ಲಾಟಿನಂ ವೈಟ್ ಪರ್ಲ್, ಸಿಲ್ವರ್ ಮೆಟಾಲಿಕ್ ಒಳಗೊಂಡಂತೆ 7 ಬಣ್ಣಗಳ ಆಯ್ಕೆಯಲ್ಲಿ ಗ್ರಾಹಕರಿಗೆ ಲಭ್ಯವಿದೆ. ಹೊರಭಾಗದ ವಿನ್ಯಾಸ ನೋಡುಗರ ಕಣ್ಮನ ಸೆಳೆಯುತ್ತದೆ.

Toyota: ಹೊಸ ವರ್ಷದ ಆರಂಭದಲ್ಲೇ ಶಾಕ್.. ಫ್ಯಾಮಿಲಿ ಕಾರು ಟೊಯೊಟಾ ಇನ್ನೋವಾ ಹೈಕ್ರಾಸ್ ಬೆಲೆ ಏರಿಕೆ?

ಟೊಯೊಟಾ ಇನ್ನೋವಾ ಹೈಕ್ರಾಸ್, 2.0 - ಲೀಟರ್, 4 ಸಿಲಿಂಡರ್ ನ್ಯಾಚುರಲ್ ಆಸ್ಪಿರೇಟೆಡ್ ಪೆಟ್ರೋಲ್ ಹಾಗೂ 2.0 - ಲೀಟರ್, 4 ಸಿಲಿಂಡರ್ ಹೈಬ್ರಿಡ್ ಪೆಟ್ರೋಲ್ ಎಂಜಿನ್ ಹೊಂದಿದೆ. ಜೊತೆಗೆ ಅದಕ್ಕೆ ಅನುಗುಣವಾಗಿ ಪವರ್ ಹಾಗೂ ಪೀಕ್ ಟಾರ್ಕ್ ಉತ್ಪಾದಿಸಲಿದ್ದು, ಸಿವಿಟಿ ಗೇರ್ ಬಾಕ್ಸ್ ಆಯ್ಕೆಯನ್ನು ಪಡೆದಿದೆ. ಹೈಬ್ರಿಡ್ ರೂಪಾಂತರ 21 kmpl ಮೈಲೇಜ್ ನೀಡುತ್ತದೆ.

ಈ ಎಂಪಿವಿ ಸಾಕಷ್ಟು ಅತ್ಯಾಧುನಿಕ ವೈಶಿಷ್ಟ್ಯಗಳನ್ನು ಹೊಂದಿದೆ. ಪ್ರಮುಖವಾಗಿ 10 - ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಡಿಸ್ಪ್ಲೇ, 7 - ಇಂಚಿನ ಡಿಜಿಟಲ್ ಡ್ರೈವರ್ಸ್ ಡಿಸ್ಪ್ಲೇ, ಡುಯಲ್ - ಝೋನ್ ಕ್ಲೈಮೇಟ್ ಕಂಟ್ರೋಲ್, ವೆಂಟಿಲೇಟೆಡ್ ಫ್ರಂಟ್ ಸೀಟ್ಸ್, ಸನ್‌ರೂಫ್, ವೈರ್‌ಲೆಸ್ ಫೋನ್ ಚಾರ್ಜಿಂಗ್ ಹಾಗೂ ಕನೆಕ್ಟ್ದ್ ಕಾರ್ ಟೆಕ್ ಅನ್ನು ಒಳಗೊಂಡಿದೆ.

ಸುರಕ್ಷತೆಯ ದೃಷ್ಟಿಯಿಂದ ಕೂಡ ಟೊಯೊಟಾ ಇನ್ನೋವಾ ಹೈಕ್ರಾಸ್ ಎಂಪಿವಿ ಅತ್ಯುತ್ತಮವಾಗಿದ್ದು, 6 ಏರ್‌ಬ್ಯಾಗ್‌, EBD (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್) ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), VSC (ವೆಹಿಕಲ್ ಸ್ಟೆಬಿಲಿಟಿ ಕಂಟ್ರೋಲ್), TPMS (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), 360 ಡಿಗ್ರಿ ಕ್ಯಾಮೆರಾ, ಫ್ರಂಟ್ & ರೇರ್ ಪಾರ್ಕಿಂಗ್ ಸೇನಾರ್ಸ್, ADAS (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಅನ್ನು ಹೊಂದಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Tuesday, January 2, 2024, 17:51 [IST]
English summary
Family car toyota innova hycross price hike sources
Read more on ಟೊಯೊಟಾ toyota
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+