Family cars: ಟೊಯೊಟಾ, ಮಾರುತಿ ಸುಜುಕಿಯ ಫ್ಯಾಮಿಲಿ ಕಾರುಗಳಿವು.. 8 ಲಕ್ಷ ಆರಂಭಿಕ ಬೆಲೆ, 26 ಕಿ.ಮೀ ಮೈಲೇಜ್

ಹೊಸ ಕಾರು ಖರೀದಿಸುವ ಬಹುತೇಕರು ಫ್ಯಾಮಿಲಿ ಕಾರುಗಳನ್ನು (Family cars) ಇಷ್ಟಪಡುತ್ತಾರೆ. ಆದರೆ, ಇವು ಕೊಂಚ ಬೆಲೆ ಹೆಚ್ಚಿರುವುದರಿಂದ ಕೊಂಡುಕೊಳ್ಳಲು ಮನಸ್ಸು ಮಾಡುವುದಿಲ್ಲ. ಇಲ್ಲಿ ಅತ್ಯಂತ ಕಡಿಮೆ ಬೆಲೆಗೆ ಸಿಗುವ ಟೊಯೊಟಾ ರೂಮಿಯನ್ ಮತ್ತು ಮಾರುತಿ ಸುಜುಕಿ ಎರ್ಟಿಗಾ ಕುರಿತು ವಿವರಿಸಿದ್ದೇವೆ.

ಮೊದಲಿಗೆ ಟೊಯೊಟಾ ರೂಮಿಯನ್ (Toyota Rumion) ಎಂಪಿವಿ ಬಗ್ಗೆ ಮಾತನಾಡೋಣ. ಈ ಕಾರು ಗ್ರಾಹಕರಿಗೆ ಕೈಗೆಟುಕುವ ಬೆಲೆಯಲ್ಲಿ ಸಿಗಲಿದ್ದು, ರೂ.10.29 ಲಕ್ಷದಿಂದ ರೂ.13.68 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಪಡೆದಿದೆ. ಎಸ್, ಜಿ, ವಿ ರೂಪಾಂತರ, ಐಕಾನಿಕ್ ಗ್ರೇ, ಸ್ಪಂಕಿ ಬ್ಲೂ, ಕೆಫೆ ವೈಟ್ ಮತ್ತು ಎಂಟೈಸಿಂಗ್ ಸಿಲ್ವರ್ ಸೇರಿದಂತೆ ವಿವಿಧ ಆಕರ್ಷಕ ಬಣ್ಣಗಳ ಆಯ್ಕೆಯಲ್ಲಿ ದೊರೆಯುತ್ತದೆ.

Family Cars: Toyota Rumion And Maruti Suzuki Ertiga, Affordable Price, Good Mileage

ಟೊಯೊಟಾ ರೂಮಿಯನ್ 2 ಪವರ್‌ಟ್ರೈನ್‌ನೊಂದಿಗೆ ಲಭ್ಯವಿದೆ. ಅವುಗಳೆಂದರೆ 1.5-ಲೀಟರ್ ಪೆಟ್ರೋಲ್, ಸಿಎನ್‌ಜಿ ಎಂಜಿನ್. ಜೊತೆಗೆ 5-ಸ್ವೀಡ್ ಮ್ಯಾನುವಲ್/ 6-ಸ್ವೀಡ್ ಆಟೋಮೆಟಿಕ್ ಗೇರ್ ಬಾಕ್ಸ್ ಆಯ್ಕೆಯಲ್ಲಿಯೂ ಸಿಗುತ್ತದೆ. ಪೆಟ್ರೋಲ್ ರೂಪಾಂತರಗಳು 20.51 km/l ಮತ್ತು ಸಿಎನ್‌ಜಿ ರೂಪಾಂತರ 26.11 km/kg ಮೈಲೇಜ್ ನೀಡುತ್ತದೆ. ಅದೇ ರೀತಿಯಲ್ಲಿ ಕಾಯುವಿಕೆ ಅವಧಿಯೂ ಹೆಚ್ಚಿದೆ.

ಈ ಟೊಯೊಟಾ ರೂಮಿಯನ್ ಎಂಪಿವಿಯಲ್ಲಿ 7 ಮಂದಿ ಆರಾಮದಾಯವಾಗಿ ಪ್ರಯಾಣಿಸಬಹುದು. 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಯ ದೃಷ್ಟಿಯಿಂದ 4 ಏರ್‌ಬ್ಯಾಗ್‌, EBD (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್) ಅನ್ನು ಪಡೆದಿದೆ.

Family Cars: Toyota Rumion And Maruti Suzuki Ertiga, Affordable Price, Good Mileage

ಮತ್ತೊಂದು ಮಾರುತಿ ಸುಜುಕಿ ಎರ್ಟಿಗಾ (Maruti suzuki Ertiga) ಎಂಪಿವಿ ಬಗ್ಗೆ ಹೇಳುವುದಾದರೆ, ಇದು ರೂ.8.64 ಲಕ್ಷದಿಂದ ರೂ.13.08 ಲಕ್ಷ ಎಕ್ಸ್ ಶೋರೂಂ ದರದಲ್ಲಿ ಖರೀದಿಗೆ ದೊರೆಯುತ್ತದೆ. ಎಲ್ಎಕ್ಸ್ಐ, ವಿಎಕ್ಸ್ಐ, ಝಡ್ಎಕ್ಸ್ಐ ಒಳಗೊಂಡಂತೆ 4 ರೂಪಾಂತರ, ಪರ್ಲ್ ಮೆಟಾಲಿಕ್ ಆಬರ್ನ್ ರೆಡ್, ಮೆಟಾಲಿಕ್ ಮ್ಯಾಗ್ಮಾ ಗ್ರೇ ಮತ್ತು ಪರ್ಲ್ ಮಿಡ್ನೈಟ್ ಬ್ಲಾಕ್ ಸೇರಿದಂತೆ 7-ಮೊನೊಟೋನ್ ಬಣ್ಣಗಳೊಂದಿಗೆ ಲಭ್ಯವಿದೆ.

ಈ ಕಾರಿನಲ್ಲಿ 7 ಜನರು ಹೋಗಬಹುದು. ವಿನ್ಯಾಸದ ವಿಚಾರದಲ್ಲೂ ಅತ್ಯುತ್ತಮವಾಗಿದ್ದು, ಗರಿಷ್ಠ ಕಾಯುವಿಕೆ ಅವಧಿಯನ್ನು ಪಡೆದಿದೆ. ಮಾರುತಿ ಸುಜುಕಿ ಎರ್ಟಿಗಾ (Maruti suzuki Ertiga) ಎಂಪಿವಿ ಸಹ 1.5-ಲೀಟರ್ ಪೆಟ್ರೋಲ್, ಸಿಎನ್‌ಜಿ ಎಂಜಿನ್ ಆಯ್ಕೆಯನ್ನು ಹೊಂದಿದ್ದು, 5-ಸ್ವೀಡ್ ಮ್ಯಾನುವಲ್/ 6-ಸ್ವೀಡ್ ಆಟೋಮೆಟಿಕ್ ಗೇರ್ ಬಾಕ್ಸ್ ನೊಂದಿಗೆ ಲಭ್ಯವಿದೆ.

Family Cars: Toyota Rumion And Maruti Suzuki Ertiga, Affordable Price, Good Mileage

ಈ ಕಾರಿನ ಮೈಲೇಜ್ ವಿಚಾರವಾಗಿ ಮಾತನಾಡುವುದಾದರೆ, ಪೆಟ್ರೋಲ್ ರೂಪಾಂತರಗಳು 20.3 kmpl - 20.51 kmpl, ಸಿಎನ್‌ಜಿ ರೂಪಾಂತರಗಳು 26.11 km/kg ಇಂಧನ ದಕ್ಷತೆಯನ್ನು ಹೊಂದಿವೆ. 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ವೈರ್‌ಲೆಸ್ ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ, ಪ್ಯಾಡಲ್ ಶಿಫ್ಟರ್‌, ಕ್ರೂಸ್ ಕಂಟ್ರೋಲ್, ಟಿಬಿಟಿ ನ್ಯಾವಿಗೇಶನ್, ಆಟೋ ಎಸಿ ಸೇರಿದಂತೆ ಹಲವು ಫೀಚರ್ಸ್ ಪಡೆದಿದೆ.

ಸುರಕ್ಷತೆಯ ದೃಷ್ಟಿಯಿಂದಲೂ ಮಾರುತಿ ಸುಜುಕಿ ಎರ್ಟಿಗಾ ಅತ್ಯುತ್ತಮವಾಗಿದ್ದು, ಡುಯಲ್ ಏರ್‌ಬ್ಯಾಗ್‌, EBD (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ರೇರ್ ಪಾರ್ಕಿಂಗ್ ಸೆನ್ಸರ್ಸ್, ISOFIX ಚೈಲ್ಡ್ ಸೀಟ್ ಆಂಕಾರೇಜ್ಸ್, ESP (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ಹಿಲ್ - ಹೋಲ್ಡ್ ಅಸಿಸ್ಟ್ ಅನ್ನು ಹೊಂದಿದೆ. ಈ ಕಾರಿಗೆ ಮಹೀಂದ್ರಾ ಮರಾಜೊ ದೊಡ್ಡ ಎದುರಾಳಿಯಾಗಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Monday, January 22, 2024, 15:42 [IST]
English summary
Family cars toyota rumion and maruti suzuki ertiga affordable price good mileage
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+